The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಹಿಂದೂ ಪುರಾಣದ ಒಂದು ಪಾತ್ರವಾದ ದಮಯಂತಿ ವಿದರ್ಭ ರಾಜ್ಯದ ರಾಜಕುಮಾರಿಯಾಗಿದ್ದಳು, ಮತ್ತು ಇವಳು ನಿಷಾದ ರಾಜ್ಯದ ರಾಜ ನಳನನ್ನು ಮದುವೆಯಾಗಿದ್ದಳು, ಮತ್ತು ಇವರ ಕಥೆಯು ಮಹಾಭಾರತದಲ್ಲಿ ಹೇಳಲಾಗಿದೆ. ಅವಳು ಎಷ್ಟು ಸುಂದರಿ ಮತ್ತು ಮೋಹಕಳಾಗಿದ್ದಳೆಂದರೆ ದೇವತೆಗಳು ಕೂಡ ಅವಳನ್ನು ಮೆಚ್ಚಿದ್ದರು. ಅವಳು ನಳನನ್ನು ಕೇವಲ ಒಂದು ಸುವರ್ಣ ಹಂಸದಿಂದ ಅವನ ಸದ್ಗುಣಗಳು ಹಾಗು ಸಾಧನೆಗಳನ್ನು ಕೇಳಿ ಪ್ರೀತಿಸಿದಳು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಕರ್ಕೋಟಕ ಎಂಟು ಮಂದಿ ಸರ್ಪರಾಜರಲ್ಲಿ ಒಬ್ಬ. ದಕ್ಷಬ್ರಹ್ಮನ ಮಗಳಾದ ಕದ್ರು ಹಾಗೂ ಕಶ್ಯಪರ ಮಗ. ನಿಷಧ ದೇಶಾಧಿಪತಿ ನಳ ಚಕ್ರವರ್ತಿ ಪುಷ್ಕರನೊಡನೆ ಜೂಜಾಡಿ ರಾಜ್ಯಭ್ರಷ್ಟನಾಗಿ ಕಾಡು ಸೇರಿ ತನ್ನ ಪತ್ನಿ ದಮಯಂತಿಯನ್ನು ಅಗಲಿ ಹೋಗುತ್ತಿದ್ದಾಗ ನಾರದರ ಶಾಪದಿಂದ ದಾವಾಗ್ನಿಯಲ್ಲಿ ಬಿದ್ದು ಸುಟ್ಟು ಹೋಗುತ್ತಿದ್ದ ಕರ್ಕೋಟಕ ನಳನನ್ನು ಕಂಡು ತನ್ನನ್ನು ದಾವಾಗ್ನಿಯಿಂದ ತಪ್ಪಿಸಿದರೆ ಪ್ರತ್ಯುಪಕಾರ ಮಾಡುವುದಾಗಿ ತಿಳಿಸಲು ನಳ ಮರುಕಗೊಂಡು ಕರ್ಕೋಟಕನನ್ನು ಜ್ವಾಲೆಯಿಂದ ಹೊರಕ್ಕೆ ತೆಗೆದ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗಾಜು ನಿರಾಕಾರ ಪದಾರ್ಥಗಳಲ್ಲಿ (ಅಥವಾ ಅರೆಸ್ಫಟಿಕ ವಸ್ತುಗಳೊಳಗೆ ನಿರಾಕಾರ ವಲಯಗಳಲ್ಲಿ) ಗಟ್ಟಿ ಹಾಗು ತುಲನಾತ್ಮಕವಾಗಿ ಸುಲಭವಾಗಿ ಒಡೆಯುವ ಸ್ಥಿತಿಯಿಂದ ಕರಗಿದ ಅಥವಾ ರಬ್ಬರ್ನಂಥ ಸ್ಥಿತಿಗೆ ನಿವರ್ತಿಸಬಲ್ಲ ಪರಿವರ್ತನೆಯಾದ ಗಾಜು ಪರಿವರ್ತನೆಯನ್ನು ಪ್ರಕಟಪಡಿಸುವ ಒಂದು ನಿರಾಕಾರ (ಅಸ್ಫಟಿಕರೂಪದ) ಘನ ಪದಾರ್ಥ. ಗಾಜುಗಳು ವಿಶಿಷ್ಟವಾಗಿ ಭಿದುರವಾಗಿರುತ್ತವೆ ಮತ್ತು ಅವು ನೋಟದಲ್ಲಿ ಪಾರದರ್ಶಕವಾಗಿರಬಹುದು. ಶೇಕಡ ೭೫ ಸಿಲಿಕಾನ್ ಡೈಆಕ್ಸೈಡ್, ಸೋಡಿಯಮ್ ಆಕ್ಸೈಡ್, ಸುಣ್ಣ, ಮತ್ತು ಹಲವು ಸಣ್ಣ ಸಂಯೋಜನೀಯಗಳಿಂದ ಕೂಡಿದ ಸೋಡಾ-ಲೈಮ್ ಗಾಜು ಕಿಟಕಿಗಳು ಮತ್ತು ಕುಡಿಯುವ ಪಾತ್ರೆಗಳಲ್ಲಿ ಶತಮಾನಗಳಿಂದ ಬಳಸಲಾದ ಅತ್ಯಂತ ಪರಿಚಿತ ಪ್ರಕಾರದ ಗಾಜು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ OLY (ಜನನ 24 ನವೆಂಬರ್ 1982) ಒಬ್ಬ ಭಾರತೀಯ ಹವ್ಯಾಸಿ ಬಾಕ್ಸರ್, ರಾಜಕಾರಣಿ ಮತ್ತು ಹಾಲಿ ಸಂಸತ್ತಿನ ಸದಸ್ಯ, ರಾಜ್ಯಸಭೆ. ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಗೆದ್ದ ಏಕೈಕ ಮಹಿಳೆ, ಮೊದಲ ಏಳು ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಪ್ರತಿಯೊಂದರಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಮತ್ತು ಎಂಟು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ಗೆದ್ದ ಏಕೈಕ ಬಾಕ್ಸರ್ (ಪುರುಷ ಅಥವಾ ಮಹಿಳೆ). ಮ್ಯಾಗ್ನಿಫಿಸೆಂಟ್ ಮೇರಿ ಎಂಬ ಅಡ್ಡಹೆಸರು ಹೊಂದಿರುವ ಅವರು 2012 ರ ಬೇಸಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಾಕ್ಸರ್, ಫ್ಲೈವೇಟ್ (51 ಕೆಜಿ) ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ದೆಹಲಿಯ ಸುಲ್ತಾನರು ದೆಹಲಿಯಲ್ಲಿದ್ದ ಮುಸಲ್ಮಾನ ಸುಲ್ತಾನರು, ಇದು ಭಾರತೀಯ ಉಪಖಂಡದ ದೊಡ್ಡ ಭಾಗಗಳನ್ನು 320 ವರ್ಷಗಳವರೆಗೆ (1206-1526) ವಿಸ್ತರಿಸಿತು. ಐದು ರಾಜವಂಶಗಳಾದ ದೆಹಲಿ ಸುಲ್ತಾನರ ಅನುಕ್ರಮವಾಗಿ: ಗುಲಾಮ (ಮಾಮ್ಲುಕ್) ಸಾಮ್ರಾಜ್ಯ (1206-90), ಖಲ್ಜಿ ಸಾಮ್ರಾಜ್ಯ (1290-1320), ತುಘಲಕ್ ರಾಜವಂಶ (1320-1414), ಸಯ್ಯಿದ್ ಸಾಮ್ರಾಜ್ಯ (1414- 51), ಮತ್ತು ಲೋದಿ ಸಾಮ್ರಾಜ್ಯ (1451-1526).ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು 1236 ರಿಂದ 1240 ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿಕ್ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ .
ಭಾರತದ ಸ್ವಾತಂತ್ರ್ಯ ಪೂರ್ವ ಕಾಲದಲ್ಲಿ ಹೈದರಾಬಾದ್ ನ ನಿಜಾಮರ ಕಾಲದಲ್ಲಿ ಹೈದರಾಬಾದ್ ಪ್ರಾಂತ್ಯದಲ್ಲಿದ್ದ ಅಜಂತಾ ಈಗ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿದೆ. ಇಲ್ಲಿಯ ಬೌಧ್ಧ ಚೈತ್ಯಗಳಿಗೆ ಮತ್ತು ಇಲ್ಲಿನ ಗೋಡೆಗಳಲ್ಲಿನ ಭಿತ್ತಿಚಿತ್ರಗಳಿಗಾಗಿ ಇದು ಅತ್ಯಂತ ಪ್ರಸಿಧ್ಧಿಯಾಗಿದೆ. ಇದು ಮಲೆಸೀಮೆ, ಚಂದರ್, ಶತಮಾಲ, ವಿಂಧ್ಯಾದ್ರಿ, ಸಹ್ಯಾದ್ರಿ ಎಂದು ಕರೆಯಲ್ಪಡುವ ಪಶ್ಚಿಮಘಟ್ಟಗಳ ಬೆಟ್ಟಗಳು ಸುತ್ತಲೂ ಇವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ನೃತ್ಯವು ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪ್ರಾಚೀನ ಕಲೆಯಾಗಿದೆ.ಭಾರತದಲ್ಲಿನ ನೃತ್ಯಗಳನ್ನು ಮುಖ್ಯವಾಗಿ ಶಾಸ್ತ್ರೀಯ ಹಾಗು ಜನಪದ ನೃತ್ಯಗಳೆಂದು ವಿಂಗಡಿಸಲಾಗಿದೆ.ಭಾರತದ ವಿವಿಧ ಭಾಗಗಳಲ್ಲಿ ಹುಟ್ಟಿಕೊಂಡಿರುವ ಸ್ಥಳೀಯ ಸಂಪ್ರದಾಯಗಳಿಗೆ ಹಾಗು ಅಲ್ಲಿನ ಸಂಸ್ಕೃತಿಗೆ ಅನುಗುಣವಾಗಿ ವಿವಿಧ ರೀತಿಯ ನೃತ್ಯಗಳು ಅಭಿವೃದ್ಧಿಗೊಂಡಿವೆ.ಭಾರತದಲ್ಲಿನ ಸಂಗೀತ ನಾಟ್ಯ ಅಕಾಡೆಮಿಯು ಎಂಟು ಸಾಂಪ್ರದಾಯಿಕ ನೃತ್ಯಗಳನ್ನು ಭಾರತೀಯ ಶಾಸ್ತ್ರೀಯ ನೃತ್ಯಗಳಾಗಿ ಗುರುತಿಸಿದೆ.ಶಾಸ್ತ್ರೀಯ ನೃತ್ಯಗಳು ಐತಿಹಾಸಿಕವಾಗಿ ಶಾಲೆ ಅಥವಾ ಗುರು-ಶಿಷ್ಯ ಪರಂಪರೆಯನ್ನು ಒಳಗೊಂಡಿವೆ ಮತ್ತು ಶಾಸ್ತ್ರೀಯ ಪಠ್ಯಗಳು, ದೈಹಿಕ ವ್ಯಾಯಾಮಗಳು ಮತ್ತು ನೃತ್ಯದ ಸಂಗ್ರಹವನ್ನು ಆಧಾರವಾಗಿರುವ ನಾಟಕ ಅಥವಾ ಸಂಯೋಜನೆ, ಗಾಯಕರು ವ್ಯವಸ್ಥಿತವಾಗಿ ಮಾಡಲು ವ್ಯಾಪಕ ತರಬೇತಿಯ ಅಗತ್ಯವಿರುತ್ತದೆ. ಜಾನಪದ ನೃತ್ಯವು ಕೆಲವು ಮೌಖಿಕ ಸಂಪ್ರದಾಯಗಳಲ್ಲಿ ಒಂದಾಗಿದೆ.ಜಾನಪದ ನೃತ್ಯಗಳಲ್ಲಿ ಹಲವಾರು ಶೈಲಿಗಳಿವೆ.ಅವು ಆಯಾ ರಾಜ್ಯ,ಜನಾಂಗ ಅಥವಾ ಭೌಗೋಳಿಕ ಪ್ರದೇಶಗಳ ಸಂಪ್ರದಾಯಕ್ಕೆ ಅನುಗುಣವಾಗಿ ಬದಲಾಗುತ್ತವೆ.ನಾಟ್ಯಶಾಸ್ತ್ರವನ್ನು ಬರೆದವರು ಭರತಮುನಿ.ಅವು ಒಂದು ತಲೆಮಾರಿನಿಂದ ಮುಂದಿನ ಪೀಳಿಗೆಗೆ ಬಾಯಿ ಮಾತು ಮತ್ತು ಪ್ರಾಸಂಗಿಕ ಜಂಟಿ ಅಭ್ಯಾಸದ ಮೂಲಕ ಸಾಗುತ್ತವೆ.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕರ್ನಾಟಕ ಮಿಲ್ಕ್ ಫೆಡರೇಶನ್, ಕೆಎಂಎಫ್) ಸಹಕಾರಿ ತತ್ವಗಳ ಮೇಲೆ ಕಾರ್ಯನಿರ್ವಹಿಸುವ ಹಾಲು ಉತ್ಪಾದಕರ ಸಂಘದ ಒಕ್ಕೂಟವಾಗಿದೆ. ನಂದಿನಿ ಬ್ರಾಂಡ್ ಮೂಲಕ ಸಂಸ್ಕರಿಸಿದ ಹಾಲು, ಮೊಸರು, ಪೇಡಾ, ಪನ್ನೀರ್, ಮೈಸೂರ್ ಪಾಕ್, ಬರ್ಫಿ, ಸುವಾಸಿತ ಹಾಲು, ಐಸ್ ಕ್ರೀಮ್,ಹಾಲಿನ ಪುಡಿ ಮತ್ತು ಹಾಲಿನ ಮುಂತಾದ ಉತ್ಪನ್ನಗಳನ್ನು ಮಾರಾಟ ಮಾಡುತ್ತದೆ. ಭಾರತದಲ್ಲಿ ಡೈರಿ ಸಹಕಾರ ಸಂಘಗಳಲ್ಲಿ ಇದು ಎರಡನೇ ದೊಡ್ಡ ಡೈರಿ ಸಹಕಾರಿಯಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಹಮನಿ ಸುಲ್ತಾನರು (ಬಹಮನಿದ್ ಸಾಮ್ರಾಜ್ಯ ಅಥವಾ ಬಹ್ಮನಿ ಸಾಮ್ರಾಜ್ಯ) ದಕ್ಷಿಣ ಭಾರತದ ಡೆಕ್ಕನ್ ಮುಸ್ಲಿಂ ರಾಜ್ಯವಾಗಿತ್ತು, ಮಧ್ಯಯುಗದ ಪ್ರಮುಖ ರಾಜಧಾನಿಗಳಲ್ಲಿ ಒಂದಾಗಿತ್ತು . ಬಹಮನಿದ್ ಸುಲ್ತಾನರು ದಕ್ಷಿಣ ಭಾರತದ ಮೊದಲ ಸ್ವತಂತ್ರ ಮುಸ್ಲಿಂ ಸಾಮ್ರಾಜ್ಯವಾಗಿತ್ತು. ಕರ್ನಾಟಕ ಮತ್ತು ಆಂಧ್ರಪ್ರದೇಶದ ಇಗ (ಈಗ ತೆಲಂಗಾಣದ ಭಾಗಗಳು) ಹಲವು ಭಾಗಗಳಲ್ಲಿ, ಹೆಚ್ಚು ಕಡಿಮೆ ಎರಡು ಶತಮಾನಗಳ ಕಾಲ ರಾಜ್ಯಭಾರ ಮಾಡಿದ ಬಹಮನಿ ರಾಜವಂಶವು, ಕರ್ನಾಟಕದ ಇತಿಹಾಸದಲ್ಲಿ ಮುಖ್ಯವಾದ ಪಾತ್ರವನ್ನು ವಹಿಸಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಅಮುಲ್ ಎಂದರೆ (ಸಂಸ್ಕೃತದಲ್ಲಿ "ಬೆಲೆಕಟ್ಟಲಾಗದ್ದು") ಸಂಸ್ಕೃತದ "ಅಮೂಲ್ಯ"(ಅರ್ಥ ಬೆಲೆಬಾಳುವ)ಪದದಿಂದ ಹುಟ್ಟಿದ ವ್ಯಾಪಾರ ಮುದ್ರೆ "ಅಮುಲ್" ಹೆಸರನ್ನು ಆನಂದ್ನ ಗುಣಮಟ್ಟ ನಿಯಂತ್ರಣ ತಜ್ಞರೊಬ್ಬರು ಸಲಹೆ ಮಾಡಿದರು. ೧೯೪೬ರಲ್ಲಿ ರಚನೆಯಾದ ಇದು ಭಾರತದ ಡೈರಿ ಸಹಕಾರ ಸಂಸ್ಥೆಯಾಗಿದೆ. ಇದು ಬ್ರಾಂಡ್(ವ್ಯಾಪಾರ ಮುದ್ರೆ)ನ ಹೆಸರಾಗಿದ್ದು,ಮುಖ್ಯ ಸಹಕಾರ ಸಂಸ್ಥೆಯಾದ ಗುಜರಾತ್ ಸಹಕಾರ ಹಾಲು ಮಾರಾಟ ಒಕ್ಕೂಟ ನಿರ್ವಹಿಸುತ್ತದೆ(GCMMF).ಫ಼ಇದರಲ್ಲಿ ಇಂದು ಭಾರತದ ಗುಜರಾತ್ನ ೨.೮ದಶಲಕ್ಷ ಹಾಲು ಉತ್ಪಾದಕರು ಜಂಟಿ ಮಾಲೀಕತ್ವ ಹೊಂದಿದ್ದಾರೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.