The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೈಸೂರಿನ ಹುಲಿ ಮದಕರಿ ನಾಯಕ , ಭಾರತ ದೇಶದಲ್ಲಿದ್ದ ಹಲವು ಸಂಸ್ಥಾನಗಳಲ್ಲಿ ಒಂದಾದ ಚಿತ್ರದುರ್ಗದ ಕೊನೆಯ ಆರಸನಾಗಿದ್ದ. ಹೈದರ್ ಅಲಿಯ ಮೈಸೂರಿನ ಸೇನೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ನಾಯಕನನ್ನು ಮಾತುಕತೆಗೆಂದು ರಾಜಿಸಂಧಾನವೆಂದು ಕರೆಸಿ ಮೋಸದಿಂದ ಹೈದರ್ ಅಲಿ ಬಂಧಿಸಿ ಶ್ರೀರಂಗಪಟ್ಟಣದ ಸೆರೆಮನೆಯಲ್ಲಿಟ್ಟು ಮತಾಂತರವಾದರೆ ರಾಜ್ಯವನ್ನು ವಾಪಸ್ಸು ನೀಡಿ ಬಿಡುಗಡೆ ಮಾಡುವುದಾಗಿ ಹೇಳಲು ಮದಕರಿ ಜೀವ ನೀಡುತ್ತಾನೆ ಹೊರತು ಧರ್ಮದ್ರೋಹ ಮಾಡುವುದಿಲ್ಲ ಎಂದು ಕೆಚ್ಚೆದೆಯಿಂದ ಹೇಳುತ್ತಾನೆ. ನಂತರ ಹೈದರ್ ಅಲಿಯ ಪುತ್ರ ಟಿಪ್ಪುಸುಲ್ತಾನ್ ಮೈಸೂರಿನ ಮತ್ತು ಚಿತ್ರದುರ್ಗದ ಬೇಡರ ಪಡೆಗಳು ಒಂದಾಗಿ ದಾಳಿ ಮಾಡಬಹುದೆಂಬ ಹೆದರಿ ಸೈನಿಕ ದಂಗೆಯಾದರೆ ನಮಗೆ ಸೋಲು ಖಚಿತವೆಂದು ಭಾವಿಸಿ ಯುದ್ಧಭಯದಿಂದ ಮದಕರಿ ಊಟದಲ್ಲಿ ವಿಷವಿಟ್ಟು ಕೊಲೆ ಮಾಡುತ್ತಾನೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಆದಾಯ ಎಂದರೆ ಒಂದು ನಿರ್ದಿಷ್ಟ ಕಾಲಮಿತಿಯೊಳಗೆ ಒಂದು ಘಟಕ ಅಥವಾ ವ್ಯಕ್ತಿಯು ಗಳಿಸುವ ಬಳಕೆ ಮತ್ತು ಉಳಿತಾಯದ ಅವಕಾಶ. ಇದನ್ನು ಸಾಮಾನ್ಯವಾಗಿ ವಿತ್ತೀಯ ಪರಿಭಾಷೆಯಲ್ಲಿ ವ್ಯಕ್ತಪಡಿಸಲಾಗುತ್ತದೆ. ಆದರೆ, ಮನೆಗಳು ಮತ್ತು ವ್ಯಕ್ತಿಗಳ ವಿಷಯದಲ್ಲಿ, ಆದಾಯ ಎಂದರೆ ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ಎಲ್ಲ ವೇತನಗಳು, ಸಂಬಳಗಳು, ಲಾಭಗಳು, ಬಡ್ಡಿ ಪಾವತಿಗಳು, ಬಾಡಿಗೆಗಳು ಮತ್ತು ಪಡೆದ ಗಳಿಕೆಗಳ ಇತರ ರೂಪಗಳ ಮೊತ್ತ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅರ ತಯಾರಿಕಾ ವಸ್ತುವಿನಿಂದ ನಾಜೂಕು ಪ್ರಮಾಣದ ವಸ್ತುವನ್ನು ತೆಗೆಯಲು ಬಳಸಲಾಗುವ ಒಂದು ಉಪಕರಣ. ಇದು ಮರಗೆಲಸ, ಲೋಹಗೆಲಸ, ಮತ್ತು ಇತರ ಹೋಲುವ ವ್ಯಾಪಾರ ಹಾಗೂ ಹವ್ಯಾಸ ಕಾರ್ಯಗಳಲ್ಲಿ ಸಾಮಾನ್ಯವಾಗಿದೆ. ಬಹುತೇಕ ಅರಗಳು ಆಯತಾಕಾರದ, ಚೌಕಾಕಾರದ, ತ್ರಿಕೋನ, ಅಥವಾ ದುಂಡು ಅಡ್ಡಛೇದದ ಗಟ್ಟಿಗೊಳಿಸಲಾದ ಉಕ್ಕಿನ ಸರಳಿನಿಂದ ತಯಾರಿಸಲಾದ ಕೈ ಉಪಕರಣಗಳಾಗಿರುತ್ತವೆ, ಮತ್ತು ಒಂದು ಅಥವಾ ಹೆಚ್ಚು ಮೇಲ್ಮೈಗಳನ್ನು ಚೂಪಾದ, ಸಾಮಾನ್ಯವಾಗಿ ಸಮಾನಾಂತರ ಹಲ್ಲುಗಳಿಂದ ಕತ್ತರಿಸಲಾಗಿರುತ್ತದೆ.
ಕಾವ್ಯಮೀಮಾಂಸೆ ಎಂದರೆ ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯಪ್ರಭೇದಗಳು, ಕಾವ್ಯಗಳಲ್ಲಿ ಅಲಂಕಾರ, ರೀತಿ, ರಸ, ಧ್ವನಿ ಮೊದಲಾದುವುಗಳ ಸ್ಥಾನ, ಕಾವ್ಯದ ವಸ್ತು ಮತ್ತು ಆತ್ಮಗಳ ಪರಿಶೀಲನ--ಇತ್ಯಾದಿಯಾಗಿ ಕಾವ್ಯವಿದ್ಯೆಗೆ ಸಂಬಂಧಿಸಿದ ವಿಷಯಗಳ ಶಾಸ್ತ್ರೀಯ ನಿರೂಪಣೆ. ಸಂಸ್ಕೃತದಲ್ಲಿ ಕಾವ್ಯಮೀಮಾಂಸೆ ಕ್ರಿಸ್ತಶಕದ ಆರಂಭದ ವೇಳೆಗೆ ಸ್ವತಂತ್ರ ಶಾಸ್ತ್ರವೆನಿಸುತ್ತಿದ್ದುದನ್ನು ರುದ್ರದಾಮನ ಶಿಲಾಲೇಖ, ಪತಂಜಲಿಯ ಮಹಾಭಾಷ್ಯ ಭರತನ ನಾಟ್ಯಶಾಸ್ತ್ರ ಮುಂತಾದವು ಸೂಚಿಸುತ್ತವೆ. ಆದರೆ ಕ್ರಿ.ಶ.
ಕೈಗಾರಿಕಾ ಕ್ರಾಂತಿಯು ೧೮ ಮತ್ತು ೧೯ನೇ ಶತಮಾನದ ಅವಧಿಯಲ್ಲಿ ಸಂಭವಿಸಿದೆ. ಆ ಅವಧಿಯಲ್ಲಿ ಕೃಷಿ, ಉತ್ಪಾದನೆ,ಗಣಿಗಾರಿಕೆ ಮತ್ತು ಸಾರಿಗೆಯಲ್ಲಿ ಪ್ರಮುಖ ಬದಲಾವಣೆಗಳಿಂದ ಸಾಮಾಜಿಕ ಆರ್ಥಿಕ ಮತ್ತು ಸಾಂಸ್ಕೃತಿಕ ಸ್ಥಿತಿಗತಿಗಳ ಮೇಲೆ ಗಾಢಪರಿಣಾಮ ಬೀರಿತು. ಯುನೈಟೆಡ್ ಕಿಂಗ್ಡಮ್ನಲ್ಲಿ ಪ್ರಾರಂಭವಾದ ಕೈಗಾರಿಕಾ ಕ್ರಾಂತಿ ತರುವಾಯ ಯುರೋಪ್ನಾದ್ಯಂತ, ಉತ್ತರ ಅಮೆರಿಕ ಮತ್ತು ಅಂತಿಮವಾಗಿ ವಿಶ್ವದಲ್ಲಿ ಹರಡಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಅಂದಾಜು ಬೆಲೆ ಕಟ್ಟುವ ಅಥವಾ ನಿಶ್ಚಯಿಸುವ ಕ್ರಮ. ಇದು ಒಟ್ಟು ಮೊತ್ತ, ಪ್ರಮಾಣ ಅಥವಾ ಸನ್ನಿವೇಶ ಇವುಗಳನ್ನು ಮೂಲವಾಗಿಟ್ಟುಕೊಂಡು ನಿರ್ಧರಿಸುವ ಒಂದು ಸರಿಸುಮಾರಾದ ತೀರ್ಮಾನ ಮಾತ್ರ. ಎಂಜಿನಿಯರಿಂಗ್ ಉದ್ಯೋಗದಲ್ಲಿ ಅಂದಾಜು ಆಗಬೇಕಾಗಿರುವ ಒಂದು ಕೆಲಸಕ್ಕೆ, ಅದರ ನಕ್ಷೆಯ ಆಧಾರದ ಮೇಲೆ, ಈ ಕೆಲಸಕ್ಕೆ ಬೇಕಾಗುವ ಶರೀರಶ್ರಮ ಮತ್ತು ಸಾಮಗ್ರಿಗಳ ಪ್ರಮಾಣವನ್ನನುಸರಿಸಿ ಅದಕ್ಕಾಗುವ ಅಂದಾಜು ಖರ್ಚನ್ನು ತಿಳಿಸುವ ಕ್ರಮ ಬಳಕೆಯಲ್ಲಿದೆ.
ಅಡ್ಡಹೆಸರು ಪರಿಚಿತ ವ್ಯಕ್ತಿ, ಸ್ಥಳ, ಅಥವಾ ವಸ್ತುವಿನ ಸರಿಯಾದ ಹೆಸರಿಗೆ ಒಂದು ಬದಲಿ ಹೆಸರು ಮತ್ತು ಪ್ರೀತಿ ಅಥವಾ ಅಣಕದ ಉದ್ದೇಶಕ್ಕಾಗಿ ಬಳಸಲಾಗುತ್ತದೆ. ಅಕ್ಕರೆಯಿರುವ ಇಬ್ಬರ ಅಥವಾ ಭಾವನಾತ್ಮಕ ಬಂಧವಿರುವವರ ನಡುವೆ ಪ್ರೀತಿಯ ಅಡ್ಡಹೆಸರನ್ನು ಸೂಚಿಸಲು ಮುದ್ದುಹೆಸರು ಪದವನ್ನು ಬಳಸಲಾಗುತ್ತದೆ. ಅಲ್ಪಾರ್ಥಕ ಹೆಸರು ಎಂಬ ಪದವು ಕಿರಿತನವನ್ನು ತಿಳಿಸುವ ಅಡ್ಡಹೆಸರುಗಳನ್ನು ಸೂಚಿಸುತ್ತದೆ, ಹಾಗಾಗಿ ಪ್ರೀತಿ ಅಥವಾ ಅನ್ಯೋನ್ಯತೆ (ಉದಾ.
ಛಾಯಾಚಿತ್ರವು (ಫೋಟೊ) ದೀಪ ಸಂವೇದಿ ಪದರ, ಸಾಮಾನ್ಯವಾಗಿ ಛಾಯಾಗ್ರಾಹಿ ಪೊರೆ ಅಥವಾ ಸಿಸಿಡಿಯಂತಹ ವಿದ್ಯುನ್ಮಾನ ಚಿತ್ರಕ ಅಥವಾ ಸಿಮಾಸ್ ಚಿಪ್ನ ಮೇಲೆ ಬೀಳುವ ಬೆಳಕಿನಿಂದ ಸೃಷ್ಟಿಯಾದ ಒಂದು ಚಿತ್ರ. ಬಹುತೇಕ ಛಾಯಾಚಿತ್ರಗಳು, ದೃಶ್ಯದ ಬೆಳಕಿನ ಗೋಚರವಾಗುವ ತರಂಗಾಂತರಗಳನ್ನು ಮಾನವ ನೇತ್ರ ಕಾಣಬಲ್ಲ ನಕಲಾಗಿ ಕೇಂದ್ರೀಕರಿಸಲು ಮಸೂರವನ್ನು ಉಪಯೋಗಿಸುವ ಕ್ಯಾಮರಾ ಬಳಸಿ ಸೃಷ್ಟಿಸಲ್ಪಡುತ್ತವೆ. ಛಾಯಾಚಿತ್ರಗಳನ್ನು ಸೃಷ್ಟಿಸುವ ಪ್ರಕ್ರಿಯೆ ಮತ್ತು ಆಚರಣೆಯನ್ನು ಛಾಯಾಚಿತ್ರಣವೆನ್ನಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಕನಿಷ್ಠಪಕ್ಷ ಎರಡು ಪಕ್ಷಗಳು ಹಂಚಿಕೊಳ್ಳಲಾಗದಂಥ ಗುರಿಗಾಗಿ ಸೆಣಸಾಡಿದಾಗ ಸ್ಪರ್ಧೆ ಉಂಟಾಗುತ್ತದೆ: ಇದರಲ್ಲಿ ಒಬ್ಬರ ಲಾಭವು ಮತ್ತೊಬ್ಬರ ಹಾನಿಯಾಗಿರುತ್ತದೆ (ಶೂನ್ಯ ಫಲದ ಆಟವು ಇದರ ಒಂದು ಉದಾಹರಣೆಯಾಗಿದೆ).ಇದು, ಸಾಮಾನ್ಯವಾಗಿ ಗುಂಪು ಅಥವಾ ಸಾಮಾಜಿಕ ಸ್ಥಾನಮಾನ, ನಾಯಕತ್ವ, ಲಾಭ ಮತ್ತು ಮಾನ್ಯತೆಗಾಗಿ (ಪ್ರಶಸ್ತಿಗಳು, ಸರಕುಗಳು, ಸಂಗಾತಿಗಳು, ಪ್ರತಿಷ್ಠೆ, ಗಣ್ಯಸ್ಥಾನ, ದುರ್ಲಭ ಸಂಪನ್ಮೂಲಗಳು, ಅಥವಾ ಒಂದು ಪ್ರದೇಶ) ಎರಡು ಅಥವಾ ಹೆಚ್ಚು ಪಕ್ಷಗಳ ನಡುವಿನ ಪೈಪೋಟಿಯಾಗಿರುತ್ತದೆ. ಪಕ್ಷಗಳ ಉದಾಹರಣೆಗಳೆಂದರೆ ಪ್ರಾಣಿಗಳು, ಜೀವಿಗಳು, ಆರ್ಥಿಕ ಗುಂಪುಗಳು, ವ್ಯಕ್ತಿಗಳು, ಸಾಮಾಜಿಕ ಗುಂಪುಗಳು, ಇತ್ಯಾದಿ. ಪ್ರಕೃತಿಯಲ್ಲಿ, ಒಂದೇ ಪರಿಸರದಲ್ಲಿ ಜೊತೆಯಾಗಿರುವ ಜೀವಿಗಳ ನಡುವೆ ಸ್ಪರ್ಧೆ ಉಂಟಾಗುತ್ತದೆ.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕ ವಿಧಾನಸಭೆಯು 224 ಸದಸ್ಯರ ಸದಸ್ಯ ಬಲವನ್ನು ಹೊಂದಿದೆ. 224 ಸದಸ್ಯ ಬಲವುಳ್ಳ 15 ನೇ ಕರ್ನಾಟಕ ವಿಧಾನಸಭೆಯ 222ವಿಧಾನಸಭಾ ಕ್ಷೇತ್ರಗಳಿಗೆ 12 ಮೇ 2018 ಶನಿವಾರ ಚುನಾವಣೆ ನೆಡೆಯಿತು. ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ 2-5-2018 ರಂದು ನಿಧನರಾದ್ದರಿಂದ ಮತ್ತು ರಾಜರಾಜೇಶ್ವರಿ ನಗರದಲ್ಲಿ ಮತದಾರರ ವಂಚನೆ ಹಗರಣದ ನಂತರ, ಈ ಎರಡು ಕ್ಷೇತ್ರಗಳ ಚುನಾವಣೆ ಮುಂದೂಡಲ್ಪಟ್ಟಿತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ಪೀಟ್ಸಾ ನೇಪಲ್ಸ್ ಮೂಲದ, ಒಲೆಯಲ್ಲಿ ಬೆಂದ, ಚಪ್ಪಟೆಯಾದ, ಹಲವುವೇಳೆ ಟಮೇಟೋಗಳು ಅಥವಾ ಟಮೇಟೋ ಸಾಸ್ ಮತ್ತು ಕೆನೆಯಿಂದ ಅಲಂಕರಿಸಲಾದ ಸಾಮಾನ್ಯವಾಗಿ ದುಂಡನೆಯ ಆಕಾರದ ಬ್ರೆಡ್ಡಿನಿಂದ ತಯಾರಿಸಲಾದ ಒಂದು ಲೋಕಪ್ರಿಯವಾದ ತಿನಿಸು. ಪ್ರದೇಶ, ಸಂಸ್ಕೃತಿ, ಅಥವಾ ವೈಯಕ್ತಿಕ ಇಷ್ಟದ ಪ್ರಕಾರ ಇತರ ಅಲಂಕಾರಗಳನ್ನು ಸೇರಿಸಲಾಗುತ್ತದೆ. ನೇಪಲ್ಸ್ನ ಪಾಕಪದ್ಧತಿಯಲ್ಲಿ ಜನ್ಮತಾಳಿದ ಈ ತಿನಿಸು ವಿಶ್ವದ ಹಲವಾರು ಕಡೆಗಳಲ್ಲಿ ಜನಪ್ರಿಯವಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.