The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾಷಾಂತರ ಎಂದರೆ ಒಂದು ಭಾಷೆಯಲ್ಲಿನ ಮಾತು ಅಥವಾ ಬರವಣಿಗೆಯನ್ನು ಇನ್ನೊಂದು ಭಾಷೆಯಲ್ಲಿ ಸಮಾನ ಅರ್ಥ ನೀಡುವಂತೆ ಪರಿವರ್ತಿಸುವ ಒಂದು ಪ್ರಕ್ರಿಯೆ. ಕನ್ನಡದಲ್ಲಿ ಇದಕ್ಕೆ ಸಂವಾದಿಯಾದ ಇತರ ಪದಗಳು: ಅನುವಾದ, ತರ್ಜುಮೆ, ಕನ್ನಡೀಕರಿಸು (ಬೇರೆ ಭಾಷೆಗಳಿಂದ ಕನ್ನಡಕ್ಕೆ ಭಾಷಾಂತರಿಸುವಾಗ), ಮರುಬರವಣಿಗೆ, ರೂಪಾಂತರ, ಅಳವಡಿಕೆ ಇತ್ಯಾದಿ. ಭಾಷೆಗಳು ಆರಂಭವಾದಾಗಿನಿಂದ ಭಾಷಾಂತರವು ಆರಂಭಗೊಂಡಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಹಿಂದೂ ಧರ್ಮ ದಲ್ಲಿ , ಸೂರ್ಯ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] Error: {{Lang}}: text has italic markup (help); ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು , ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು , ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಪಿಂಗಾಣಿಯು ಸಾಮಾನ್ಯವಾಗಿ ಚೀನೀ ಮಣ್ಣು ಸೇರಿದಂತೆ ವಿವಿಧ ವಸ್ತುಗಳನ್ನು ಆವಿಗೆಯಲ್ಲಿ ೧೨೦೦ ಮತ್ತು ೧೪೦೦ ಡಿಗ್ರಿ ನಡುವಿನ ಉಷ್ಣಾಂಶದಲ್ಲಿ ಸುಟ್ಟು ತಯಾರಿಸಲಾದ ಒಂದು ಸೆರಾಮಿಕ್ ವಸ್ತುವಾಗಿದೆ. ಇತರ ಬಗೆಯ ಮಣ್ಣಿನ ವಸ್ತುಗಳಿಗೆ ಹೋಲಿಸಿದರೆ, ಪಿಂಗಾಣಿಯ ಕಾಠಿಣ್ಯ, ಬಲ, ಮತ್ತು ಅರೆಪಾರದರ್ಶಕತೆಯು ಮುಖ್ಯವಾಗಿ ಈ ಹೆಚ್ಚಿನ ಉಷ್ಣಾಂಶದಲ್ಲಿ ಕಾಚೀಕರಣ ಮತ್ತು ಕಾಯದೊಳಗೆ ಮಲೈಟ್ ಖನಿಜದ ರಚನೆಯಿಂದ ಉಂಟಾಗುತ್ತದೆ. ವ್ಯಾಖ್ಯಾನಗಳು ಬದಲಾಗುತ್ತಾವಾದರೂ, ಪಿಂಗಾಣಿಯನ್ನು ಮೂರು ಮುಖ್ಯ ವರ್ಗಗಳಾಗಿ ವಿಭಜಿಸಬಹುದು: ಗಟ್ಟಿ ಪೇಸ್ಟ್, ಮೃದು ಪೇಸ್ಟ್ ಮತ್ತು ಮೂಳೆ ಪಿಂಗಾಣಿ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ OLY (ಜನನ 24 ನವೆಂಬರ್ 1982) ಒಬ್ಬ ಭಾರತೀಯ ಹವ್ಯಾಸಿ ಬಾಕ್ಸರ್, ರಾಜಕಾರಣಿ ಮತ್ತು ಹಾಲಿ ಸಂಸತ್ತಿನ ಸದಸ್ಯ, ರಾಜ್ಯಸಭೆ. ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಗೆದ್ದ ಏಕೈಕ ಮಹಿಳೆ, ಮೊದಲ ಏಳು ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಪ್ರತಿಯೊಂದರಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಮತ್ತು ಎಂಟು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ಗೆದ್ದ ಏಕೈಕ ಬಾಕ್ಸರ್ (ಪುರುಷ ಅಥವಾ ಮಹಿಳೆ). ಮ್ಯಾಗ್ನಿಫಿಸೆಂಟ್ ಮೇರಿ ಎಂಬ ಅಡ್ಡಹೆಸರು ಹೊಂದಿರುವ ಅವರು 2012 ರ ಬೇಸಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಾಕ್ಸರ್, ಫ್ಲೈವೇಟ್ (51 ಕೆಜಿ) ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಮಾನವ ಅಸ್ಥಿಪಂಜರ ಎಂದರೆ ಶರೀರದ ಆಂತರಿಕ ಚೌಕಟ್ಟು. ಅದು ಜನನದ ಸಮಯದಲ್ಲಿ ೨೭೦ ಮೂಳೆಗಳಿಂದ ಕೂಡಿದ್ದು – ಪ್ರೌಢಾವಸ್ಥೆಯ ವೇಳೆಗೆ ಕೆಲವು ಮೂಳೆಗಳು ಒಟ್ಟಿಗೆ ಕೂಡಿಕೊಂಡ ನಂತರ ಈ ಮೊತ್ತ ೨೦೬ ಮೂಳೆಗಳಿಗೆ ಇಳಿಯುತ್ತದೆ. ಅಸ್ಥಿಪಂಜರದಲ್ಲಿ ಮೂಳೆಯ ದ್ರವ್ಯರಾಶಿಯು ಸುಮಾರು ೩೦ರ ವಯಸ್ಸಿನ ಹೊತ್ತಿಗೆ ಗರಿಷ್ಠ ಸಾಂದ್ರತೆಯನ್ನು ಮುಟ್ಟುತ್ತದೆ.ಮಾನವನ ಅಸ್ಥಿಪಂಜರವನ್ನು ಅಕ್ಷೀಯ ಅಸ್ಥಿಪಂಜರ ಮತ್ತು "ಅಪೆಂಡಿಕ್ಯುಲಾರ್"(appendicular) ಅಸ್ಥಿಪಂಜರ ಎಂದು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ.ಅಕ್ಷೀಯ ಅಸ್ಥಿಪಂಜರವು ಬೆನ್ನೆಲುಬು, ಪಕ್ಕೆಲುಬು ಮತ್ತು ತಲೆಬುರುಡೆಯಿಂದ ರೂಪುಗೊಂಡಿದೆ."ಅಪೆಂಡಿಕ್ಯುಲಾರ್" ಅಸ್ತಿಪಂಜರವು ಅಕ್ಷೀಯ ಅಸ್ಥಿಪಂಜರಕ್ಕೆ ಲಗತ್ತಿಸಲಾಗಿದ್ದು ಇದು ಎದೆಯ ನಡುಕಟ್ಟು,ಶ್ರೋಣಿಯ ಹುಳು ಹಾಗು ಕೈ ಕಾಲುಗಳ ಮೂಳೆಗಳಿಂದ ರೂಪುಗೊಂಡಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಮೆರಿಕ ಸಂಯುಕ್ತ ಸಂಸ್ಥಾನದ ರಾಜ್ಯಗಳು
ಕೆಳಗಿನ ಪಟ್ಟಿಯಲ್ಲಿ ಅಮೇರಿಕ ಸಂಯುಕ್ತ ಸಂಸ್ಥಾನದ ೫೦ ರಾಜ್ಯಗಳ ಬಗ್ಗೆ ಈ ಮಾಹಿತಿ ಇದೆ: ರಾಜ್ಯದ ಸಾಮಾನ್ಯ ಹೆಸರು. ಅಮೇರಿಕ ದೇಶದ ಅಂಚೆ ಸಂಸ್ಥ ಉಪಯೋಗಿಸುವ ಎರಡಕ್ಷರದ ಕೋಡ್ ರಾಜ್ಯವು ಸಂಯುಕ್ತ ಸಂಸ್ಥಾನವನ್ನು ಸೇರಿದ ದಿನಾಂಕ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಅರ್ಜಿದಾರ ಲೇಖನಕ್ಕಾಗಿ ಇಲ್ಲಿ ನೋಡಿ.ಅಭ್ಯರ್ಥಿ, ಅಥವಾ ನಿರ್ದಿಷ್ಟನಾಮಿ, ಒಂದು ಪ್ರಶಸ್ತಿ ಅಥವಾ ಗೌರವದ ಭಾವೀ ಗ್ರಾಹಿ, ಅಥವಾ ಯಾವುದೋ ರೀತಿಯ ಸ್ಥಾನಕ್ಕಾಗಿ ಅರಸುತ್ತಿರುವ ಅಥವಾ ಪರಿಗಣಿಸಲ್ಪಡುತ್ತಿರುವ ವ್ಯಕ್ತಿ; ಉದಾಹರಣೆಗೆ: ಒಂದು ಕಾರ್ಯಸ್ಥಾನಕ್ಕೆ ಚುನಾಯಿತನಾಗಲು — ಈ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಒಂದು ಗುಂಪಿನಲ್ಲಿ ಸದಸ್ಯತ್ವ ಪಡೆಯಲು"ನಾಮನಿರ್ದೇಶನ"ವು ರಾಜಕೀಯ ಪಕ್ಷದಿಂದ ಒಂದು ಕಾರ್ಯಸ್ಥಾನಕ್ಕೆ ಚುನಾವಣೆಗಾಗಿ ಅಥವಾ ಒಂದು ಗೌರವ ಅಥವಾ ಪ್ರಶಸ್ತಿ ನೀಡಲು ಒಬ್ಬ ಅಭ್ಯರ್ಥಿಯನ್ನು ಆಯ್ಕೆಮಾಡುವ ಪ್ರಕ್ರಿಯೆಯ ಭಾಗವಾಗಿದೆ. ಈ ವ್ಯಕ್ತಿಯನ್ನು ನಿರ್ದಿಷ್ಟನಾಮಿ ಎಂದು ಕರೆಯಲಾಗುತ್ತದೆ.
ತ್ರಿಪದಿ ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ.
ಹಿಂದಿಯ ಪ್ರಸಿದ್ಧ ಕಾದಂಬರಿಕಾರ, ಕತೆಗಾರ, ಚಿಂತಕ. ಪ್ರಗತಿಶೀಲ ಆಂದೋಲನದ ನೇತಾರ ಹಾಗೂ ಕ್ರಾಂತಿಕಾರಿ ಯಶಪಾಲ್ ಬಗ್ಗೆ ಮಾಹಿತಿಗೆ ಈ ಲೇಖನ ನೋಡಿ. ಯಶ್ ಪಾಲ್ ಅಥವಾ ಯಶ್ ಪಾಲ್ ಸಿಂಗ್ ಭಾರತದ ವಿಜ್ಞಾನಿ, ಶಿಕ್ಷಣ ತಜ್ಞ, ಆಡಳಿಗಾರ, ಮಾತುಗಾರ, ಅವರು ನೇರ ನಡೆ, ನುಡಿಗಳಿಗಾಗಿ ಹೆಸರಾಗಿದ್ದರು.ಅವರು ಸೂರ್ಯನಿಂದ ಹೊರಹೊಮ್ಮವ ವಿಶ್ವ ಕಿರಣಗಳ (ಕಾಸ್ಮಿಕ್ ರೇಸ್) ಅಧ್ಯಯನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.