The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಶ್ಯಾಮನೂರ್ ಶಿವಶಂಕರಪ್ಪರವರು ೧೬ ಜೂನ್ ೧೯೩೧ರಂದು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರ ಹೆಂಡತಿ ಎಸ್ ಎಸ್ ಪಾರ್ವತಮ್ಮ, ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯ ದಕ್ಶಿಣ ಭಾಗದಿಂದ ಚುನಾವಣೆಯಲ್ಲಿ ಕಳೆದ ಸುಮಾರು ೧೦ ವರ್ಷಗಳಿಂದ ಸ್ಪರ್ಧಿಸುತ್ತಿದ್ದಾರೆ. ಶಿವಶಂಕರಪ್ಪನವರು ಕಳೆದ ೩ ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೈತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಪುರಾತತ್ತ್ವ ಶಾಸ್ತ್ರ(Archaeology) ಅಥವಾ archeology (ಗ್ರೀಕ್ನಲ್ಲಿ ἀρχαιολογία, archaiologia – ἀρχαῖος, arkhaīos , "ಪುರಾತನ"; ಮತ್ತು -λογία, -logiā , "-logy")ವು ಹಿಂದಿನ ಕಾಲದ ಮಾನವ ಸಮಾಜಗಳ ಅಭಿವೃದ್ಧಿ ಬಗೆಗಿನ ಅಧ್ಯಯನವಾಗಿದೆ, ಇದನ್ನು ಪ್ರಾಥಮಿಕವಾಗಿ ಕೈಗಳಿಂದ ಮಾಡಿದ ಹಸ್ತಕೃತಿಗಳು, ವಾಸ್ತುಶಿಲ್ಪ, ಜೈವಿಕ ಸಂಗತಿಗಳು ಮತ್ತು ಸಾಂಸ್ಕೃತಿಕ ಭೂದೃಶ್ಯಗಳು ಮೊದಲಾದವುಗಳನ್ನು ಒಳಗೊಂಡಂತೆ ಅವರು ಬಿಟ್ಟುಹೋದ ಪರಿಸರದ ಮಾಹಿತಿಗಳ ಮತ್ತು ಭೌತಿಕ ಸಂಸ್ಕೃತಿಯ ಪುನಸ್ಸಂಪಾದನೆ ಮತ್ತು ವಿಶ್ಲೇಷಣೆಯ ಮೂಲಕ ಮಾಡಲಾಗುತ್ತದೆ. ಪುರಾತತ್ತ್ವ ಶಾಸ್ತ್ರವು ಅಸಂಖ್ಯಾತ ಕಾರ್ಯಸರಣಿಗಳನ್ನು ತೊಡಗಿಸಿಕೊಳ್ಳುವುದರಿಂದ, ಇದನ್ನು ವಿಜ್ಞಾನ ಮತ್ತು ಮಾನವಕುಲ ಎಂಬುದಾಗಿ ಪರಿಗಣಿಸಲಾಗುತ್ತದೆ. ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಇದನ್ನು ಮಾನವಶಾಸ್ತ್ರದ ಉಪವಿಭಾಗವೆಂದು ಭಾವಿಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ದಿ ಮೆಟ್ರಿಕ್ಸ್ ಒಂದು(West Frisian) ವೈಜ್ಞಾನಿಕ ಕಾಲ್ಪನಿಕ ಕತೆ-ಸಾಹಸಪ್ರಧಾನ ಚಲನಚಿತ್ರವಾಗಿದ್ದು, ಇದನ್ನು ಬರೆದು ನಿರ್ದೇಶನ ಮಾಡಿದವರು ಲಾರ್ರಿ ಮತ್ತು ಎಂಡೀ ವಾಚೋಸ್ಕಿ ಮತ್ತು ಅಭಿನಯಿಸಿದವರು ಕೀನು ರೀವ್ಸ್, ಲಾರೆನ್ಸ್ ಫೀಶ್ಬರ್ನ್, ಕೇರ್ರೀ-ಆಯ್ನೆ ಮೊಸ್ ಜೋ ಪೆಂಟೋಲಿಯಾನೊ ಮತ್ತು ಹ್ಯೂಗೋ ವೀವಿಂಗ್. ಇದು ಮೊದಲು ಅಮೇರಿಕಾ ದೇಶದದಲ್ಲಿ ಮಾರ್ಚ್ 31, 1999 ರಂದು ಬಿಡುಗಡೆಗೊಂಡಿತು ಮತ್ತು ಇದು ಈ ಚಲನಚಿತ್ರ ಸರಣಿಯ, ಹಾಸ್ಯ ಪುಸ್ತಕಗಳು, ವಿಡಿಯೊ ಆಟಗಳು ಮತ್ತು ಎನಿಮೇಶನ್ಗಳ ಮೊದಲ ಭಾಗವಾಗಿದೆ. ಈ ಚಲನಚಿತ್ರವು ಭವಿಷ್ಯವೊಂದನ್ನು ವಿವರಿಸುತ್ತಿದ್ದು, ಅದರಲ್ಲಿ ನಿಜವಾಗಿ ಮನುಷ್ಯರು ತಿಳಿದುಕೊಳ್ಳುವ ವಾಸ್ತವಿಕತೆ ಮೆಟ್ರಿಕ್ಸ್ ಆಗಿರುತ್ತದೆ: ಇದು ಸಚೇತನ ಯಂತ್ರಗಳು ನಕಲು ಮಾಡಿದ ವಾಸ್ತವಿಕತೆಯಾಗಿದ್ದು, ಇದನ್ನು ಮನುಷ್ಯರನ್ನು ತಣಿಸಲು ಮತ್ತು ವಶಪಡಿಸಿಕೊಳ್ಳಲು, ಮತ್ತು ಅದೇ ಸಮಯದಲ್ಲಿ ಅವರ ದೇಹದ ಶಾಖ ಮತ್ತು ವಿದ್ಯಚ್ಛಕ್ತಿಯನ್ನು ಶಕ್ತಿಯ ಆಕರಗಳಾಗಿ ಬಳಸಿಕೊಳ್ಳಲು ಮಾಡಲಾಗಿರುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ರೋಗ ಒಂದು ಜೀವಿಯ ಭಾಗ ಅಥವಾ ಎಲ್ಲವನ್ನೂ ಬಾಧಿಸುವ ಒಂದು ನಿರ್ದಿಷ್ಟ ಅಸಹಜ ಸ್ಥಿತಿ, ಒಂದು ರಚನೆ ಅಥವಾ ಕ್ರಿಯೆಯ ಅಸ್ವಸ್ಥತೆ. ರೋಗದ ಅಧ್ಯಯನವನ್ನು ರೋಗ ವಿಜ್ಞಾನವೆಂದು ಕರೆಯಲಾಗುತ್ತದೆ ಮತ್ತು ಇದು ರೋಗನಿದಾನ ಶಾಸ್ತ್ರದ ಅಧ್ಯಯನವನ್ನು ಒಳಗೊಳ್ಳುತ್ತದೆ. ರೋಗವನ್ನು ಹಲವುವೇಳೆ ರೋಗಲಕ್ಷಣಗಳು ಮತ್ತು ವೈದ್ಯಕೀಯ ಚಿಹ್ನೆಗಳಿಗೆ ಸಂಬಂಧಿಸಿದ ವೈದ್ಯಕೀಯ ಸ್ಥಿತಿ ಎಂದು ಅರ್ಥೈಸಲಾಗುತ್ತದೆ.
ಫ್ರಾನ್ಸ್ ಕಾರ್ನೇಲಿಯಸ್ ಡಾನ್ಡರ್ಸ್
ಫ್ರಾನ್ಸ್ ಕಾರ್ನೇಲಿಯಸ್ ಡಾನ್ಡರ್ಸ್ (1818-1889) 19ನೆಯ ಶತಮಾನದ ಪ್ರಮುಖ ಡಚ್ ವೈದ್ಯ; ಶರೀರಕ್ರಿಯಾ ವಿಜ್ಞಾನಿ; ನೇತ್ರಶಾಸ್ತ್ರಜ್ಞ. ಮೊತ್ತಮೊದಲು ವೈಜ್ಞಾನಿಕವಾಗಿ ದೃಷ್ಟಿಪರೀಕ್ಷೆಯನ್ನು ಪ್ರಾರಂಭಿಸಿದಾತ.
ಡೇಮ್ ಎಲಿಜಬೆತ್ ರೋಸ್ಮಂಡ್ ಟೇಲರ್, DBE (೨೭ ಫೆಬ್ರವರಿ ೧೯೩೨ - ೨೩ ಮಾರ್ಚ್ ೨೦೧೧), ಲಿಜ್ ಟೇಲರ್ ಎಂಬ ಹೆಸರನ್ನೂ ಹೊಂದಿದ್ದು, ಓರ್ವ ಆಂಗ್ಲೋ-ಅಮೇರಿಕನ್ ನಟಿಯಾಗಿದ್ದಾರೆ. ಅವರು ತಮ್ಮ ನಟನಾ ಚಾತುರ್ಯ ಹಾಗೂ ಸೌಂದರ್ಯ ಮಾತ್ರವಲ್ಲ, ತಮ್ಮ ಅನೇಕ ಮದುವೆಗಳೂ ಸೇರಿದಂತೆ ಅವರ ಹಾಲಿವುಡ್ ಜೀವನಶೈಲಿಗಳಿಗಾಗಿ ಅವರು ಹೆಸರುವಾಸಿಯಾಗಿದ್ದಾರೆ. ಟೇಲರ್ ಅವರು ಹಾಲಿವುಡ್'ನ ಸುವರ್ಣ ವರ್ಷಗಳ ಶ್ರೇಷ್ಠ ನಟಿಯರಲ್ಲಿ ಒಬ್ಬರಾಗಿ ಹಾಗೂ, ಅತ್ಯಂತ ಉತ್ಪ್ರೇಕ್ಷಿತ ಪ್ರಸಿದ್ಧ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿತರಾಗಿದ್ದಾರೆ.
ನೀಲ್ ಆರ್ಮ್ಸ್ಟ್ರಾಂಗ್ (ಜನನ: ೫ ಆಗಸ್ಟ್, ೧೯೩೦) ಅಮೇರಿಕಾ ಸಂಯುಕ್ತ ಸಂಸ್ಥಾನದ ಅಂತರಿಕ್ಷಯಾನಿ ಮತ್ತು ವೈಮಾನಿಕ. ನೀಲ್ ಆರ್ಮ್ಸ್ಟ್ರಾಂಗ್ ಭೂಮಿಯ ಉಪಗ್ರಹವಾದ ಚಂದ್ರನ ಮೇಲೆ ಕಾಲಿರಿಸಿದ ಮೊದಲ ಮಾನವ . ೧೯೬೬ರಲ್ಲಿ ಅಂತರಿಕ್ಷ ನೌಕೆಯಾದ ಜೆಮಿನಿ ೮ರ ಚಾಲಕರಾಗಿ ಹಾಗು ೧೯೬೯ರರಲ್ಲಿ ಚಂದ್ರಯಾನ ಮಾಡಿದ ನೌಕೆ ಅಪೊಲೊ ೧೧ರ ಮುಖ್ಯಸ್ಥರಾಗಿ ಒಟ್ಟು ಎರಡು ಬಾರಿ ಅಂತರಿಕ್ಷಯಾನ ಮಾಡಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಡಯೋಡ್-ಟ್ರಾನ್ಸಿಸ್ಟರ್ ತರ್ಕ(ಡಿ.ಟಿ.ಎಲ್) ಡಿಜಿಟಲ್ ಮಂಡಲಗಳ ಒಂದು ವರ್ಗ.ಈ ತರ್ಕವನ್ನು ಟ್ರಾನ್ಸಿಸ್ಟರ್-ಟ್ರಾನ್ಸಿಸ್ಟರ್ ತರ್ಕದ ಮೂಲ ಎಂದು ಪರಿಗಣಿಸಲಾಗಿದೆ. ತರ್ಕ ಗೇಟಿಂಗ್ ಕಾರ್ಯವನ್ನು (ಉದಾ AND) ಡಯೋಡ್ ನೆಟ್ವರ್ಕ್ ಹಾಗು ವರ್ಧಿಸಿಕೊಳ್ಳುವ ಕಾರ್ಯವನ್ನು (ಆರ್.ಟಿ.ಎಲ್) ಮತ್ತು ಟಿಟಿಎಲ್ ತರ್ಕಗಳಿಗೆ ತದ್ವಿರುದ್ಧವಾಗಿ) ಟ್ರಾನ್ಸಿಸ್ಟರ್ ನಡೆಸುವ ಕಾರಣ ಈ ತರ್ಕವನ್ನು ಡಿ.ಟಿ.ಎಲ್ ಎಂದು ಕರೆಯಲಾಗುತ್ತದೆ.
ಅನ್ನಾ ಕರೆನೀನಾ (ರಷ್ಯಾದ ಭಾಷೆ: Анна Каренина) (ಕೆಲವೊಮ್ಮೆ ಆನಾ ಕರೆನಿನ್ ಎಂದು ಆಂಗ್ಲೀಕರಿಸಲಾದ) ೧೮೭೩ರಿಂದ ೧೮೭೭ರ ವರೆಗೆ ದ ರಷ್ಯನ್ ಮೆಸೆಂಜರ್ ನಿಯತಕಾಲಿಕದಲ್ಲಿ ಧಾರಾವಾಹಿ ರೂಪದಲ್ಲಿ ಪ್ರಕಟವಾದ ರಷ್ಯಾದ ಲೇಖಕ ಲಿಯೊ ಟಾಲ್ಸ್ಟಾಯ್ಯವರ ಒಂದು ಕಾದಂಬರಿ. ಮೊದಲ ಕಂತಿನ ಸಮಯದಲ್ಲಿ ಹುಟ್ಟಿದ ವಿಷಯಗಳ ಸಂಬಂಧವಾಗಿ ಅದರ ಸಂಪಾದಕ ಮಿಖಯ್ಲ್ ಕೆಟ್ಕಾಬ್ ಮತ್ತು ಟಾಲ್ಸ್ಟಾಯ್ಯವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು; ಹಾಗಾಗಿ, ಕಾದಂಬರಿಯ ಮೊದಲ ಪ್ರಕಾಶನ ಪುಸ್ತಕ ರೂಪದಲ್ಲಿತ್ತು.ಇದು ಸರ್ವಶ್ರೇಷ್ಠ ಕಾದಂಬರಿಗಳಲ್ಲಿ ಒಂದು ಎಂದು ಪರಿಗಣಿತವಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.