The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ OLY (ಜನನ 24 ನವೆಂಬರ್ 1982) ಒಬ್ಬ ಭಾರತೀಯ ಹವ್ಯಾಸಿ ಬಾಕ್ಸರ್, ರಾಜಕಾರಣಿ ಮತ್ತು ಹಾಲಿ ಸಂಸತ್ತಿನ ಸದಸ್ಯ, ರಾಜ್ಯಸಭೆ. ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಗೆದ್ದ ಏಕೈಕ ಮಹಿಳೆ, ಮೊದಲ ಏಳು ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಪ್ರತಿಯೊಂದರಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಮತ್ತು ಎಂಟು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ಗೆದ್ದ ಏಕೈಕ ಬಾಕ್ಸರ್ (ಪುರುಷ ಅಥವಾ ಮಹಿಳೆ). ಮ್ಯಾಗ್ನಿಫಿಸೆಂಟ್ ಮೇರಿ ಎಂಬ ಅಡ್ಡಹೆಸರು ಹೊಂದಿರುವ ಅವರು 2012 ರ ಬೇಸಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಾಕ್ಸರ್, ಫ್ಲೈವೇಟ್ (51 ಕೆಜಿ) ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಲೆಕ್ಕ ಪರಿಶೋದನೆ ಎಂದರೆ : ಮೊಂಟಗೊಮರಿ ಅವರ ಪ್ರಕಾರ "ಯಾವುದೊಂದು ವ್ಯವಹಾರಿ ಸಂಸ್ಧೆ ಯು ಅಥವಾ ಇತರ ಸಂಸ್ಥೆ ಯ ಹಣಹಾಸಿನ ವ್ಯವಹಾರಗಳನ್ನು ಮತ್ತು ಅವುಗಳಿಂದ ಪರಿಣಾಮವನ್ನು ಕಂಡು ಹಿಡಿದು ಅವುಗಳ ಬಗ್ಗೆ ವರದಿ ಸಲ್ಲಿಸಲು ಆ ಸಂಸ್ಥೆ ಯ ಲೆಕ್ಕದ ಪತ್ರಗಳನ್ನು ಮತ್ತು ದಾಖಲೆ ಪತ್ರಗಳನ್ನು ಸುವ್ಯ ವಸ್ಥಿತವಾಗಿ ಪರಿಶೀಲುವುದೇ ಲೆಕ್ಕ ಪರಿಶೋದನೆಯಾಗಿದೆ. ಲೆಕ್ಕ ಪರಿಶೋಧನೆ ಯ ವಿವರಣೆ ಏನೆಂದರೆ ಯಾವುದೇ ವ್ಯಕ್ತಿ, ಸಂಘಟನೆ, ವ್ಯವಸ್ಥೆ, ಕಾರ್ಯ ವಿಧಾನ, ಮಹೋದ್ಯಮ, ಯೋಜನೆ ಅಥವಾ ಉತ್ಪನ್ನಗಳ ಪರಿಣಾಮ ನಿರ್ಧರಿಸುತ್ತದೆ. ಇದನ್ನು ಬಹು ಸಾಮಾನ್ಯವಾಗಿ ಅಕೌಂಟಿಂಗ್ನಲ್ಲಿ ಲೆಕ್ಕ ಪರಿಶೋಧನೆ ಎನ್ನುತ್ತಾರೆ, ಆದರೆ ಯೋಜನಾ ಆಡಳಿತ, ಗುಣಮಟ್ಟದ ಆಡಳಿತ, ಮತ್ತು ಬಲ ಸಂರಕ್ಷಣೆಗಾಗಿ ಸಮಾನರೂಪದ ಭಾವನೆಗಳೂ ಇರುತ್ತವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೊರೊನಾ ವೈರಸ್ ಕಾಯಿಲೆ 2019 ( ಕೋವಿಡ್ ೧೯ ) ಎಂಬುದು ತೀವ್ರವಾದ ಉಸಿರಾಟದ ಸಮಸ್ಯೆಯಾದ ಸಿಂಡ್ರೋಮ್ ಕೊರೊನಾವೈರಸ್ ೨ (ಸಾರ್ಸ್-ಕೋವಿಡ್-೧೯) ನಿಂದ ಉಂಟಾಗುವ ಸಾಂಕ್ರಾಮಿಕ ಕಾಯಿಲೆಯಾಗಿದೆ . ಈ ರೋಗ ಮೊದಲು ೨೦೧೯ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕಾಣಿಸಿಕೊಂಡಿತು. ಈ ಕಾಯಿಲೆಯ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಕೆಮ್ಮು,ವಾಸನೇ ಮತ್ತು ರುಚಿ ನಷ್ಟ ಉಸಿರಾಟದ ತೊಂದರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಅಡ್ಡಹೆಸರು ಪರಿಚಿತ ವ್ಯಕ್ತಿ, ಸ್ಥಳ, ಅಥವಾ ವಸ್ತುವಿನ ಸರಿಯಾದ ಹೆಸರಿಗೆ ಒಂದು ಬದಲಿ ಹೆಸರು ಮತ್ತು ಪ್ರೀತಿ ಅಥವಾ ಅಣಕದ ಉದ್ದೇಶಕ್ಕಾಗಿ ಬಳಸಲಾಗುತ್ತದೆ. ಅಕ್ಕರೆಯಿರುವ ಇಬ್ಬರ ಅಥವಾ ಭಾವನಾತ್ಮಕ ಬಂಧವಿರುವವರ ನಡುವೆ ಪ್ರೀತಿಯ ಅಡ್ಡಹೆಸರನ್ನು ಸೂಚಿಸಲು ಮುದ್ದುಹೆಸರು ಪದವನ್ನು ಬಳಸಲಾಗುತ್ತದೆ. ಅಲ್ಪಾರ್ಥಕ ಹೆಸರು ಎಂಬ ಪದವು ಕಿರಿತನವನ್ನು ತಿಳಿಸುವ ಅಡ್ಡಹೆಸರುಗಳನ್ನು ಸೂಚಿಸುತ್ತದೆ, ಹಾಗಾಗಿ ಪ್ರೀತಿ ಅಥವಾ ಅನ್ಯೋನ್ಯತೆ (ಉದಾ.
ಶ್ಯಾಮನೂರ್ ಶಿವಶಂಕರಪ್ಪರವರು ೧೬ ಜೂನ್ ೧೯೩೧ರಂದು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರ ಹೆಂಡತಿ ಎಸ್ ಎಸ್ ಪಾರ್ವತಮ್ಮ, ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯ ದಕ್ಶಿಣ ಭಾಗದಿಂದ ಚುನಾವಣೆಯಲ್ಲಿ ಕಳೆದ ಸುಮಾರು ೧೦ ವರ್ಷಗಳಿಂದ ಸ್ಪರ್ಧಿಸುತ್ತಿದ್ದಾರೆ. ಶಿವಶಂಕರಪ್ಪನವರು ಕಳೆದ ೩ ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೈತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಹೆನ್ರಿಕ್ ಲ್ಯೂಟಿಪೋಲ್ಡ್ ಹಿಮ್ಲರ್ (pronounced [ˈhaɪnʁɪç ˈluˑɪtˌpɔlt ˈhɪmlɐ] ( ) 7 ಅಕ್ಟೋಬರ್ 1900 – 23 ಮೇ 1945), SSನ ರೀಕ್ಸ್ಫಹ್ರರ್, ಅಂದರೆ ಓರ್ವ ಸೇನಾ ದಳಪತಿ, ಮತ್ತು ನಾಜಿ ಪಕ್ಷದ ಓರ್ವ ಅಗ್ರಗಣ್ಯ ಸದಸ್ಯನಾಗಿದ್ದ. ಜರ್ಮನ್ ಆರಕ್ಷಕ ಪಡೆಯ ಓರ್ವ ಮುಖ್ಯಸ್ಥನಾಗಿ ಮತ್ತು ನಂತರದಲ್ಲಿ ಗೃಹಖಾತೆಯ ಸಚಿವನಾಗಿ, ಗೆಸ್ಟಾಪೊವನ್ನು ಒಳಗೊಂಡಂತೆ ಎಲ್ಲಾ ಆಂತರಿಕ ಮತ್ತು ಬಾಹ್ಯ ಆರಕ್ಷಕ ಮತ್ತು ಭದ್ರತಾ ಪಡೆಗಳ ಮೇಲ್ವಿಚಾರಣೆಯನ್ನು ಹಿಮ್ಲರ್ ವಹಿಸಿದ್ದ. ರೀಕ್ಸ್ಫಹ್ರರ್ ಆಗಿ ಮತ್ತು ನಂತರದಲ್ಲಿ ಬದಲಿ (ಸ್ವದೇಶಿ) ಸೇನೆಯ ದಳಪತಿಯಾಗಿ ಮತ್ತು ರೀಕ್ನ ಸಮಗ್ರ ಆಡಳಿತಕ್ಕೆ (ಜೆನರಲ್ಬೆಲ್ವೊಲ್ಮ್ಯಾಟೈಟರ್ ಫರ್ ಡೈ ವೆರ್ವಾಲ್ಟಂಗ್ ) ಸಂಬಂಧಿಸಿದ ಪ್ರಧಾನ ಪೂರ್ಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ಹಿಮ್ಲರ್, ನಾಜಿ ಜರ್ಮನಿಯಲ್ಲಿ ಎರಡನೇ ಅತ್ಯಂತ ಶಕ್ತಿವಂತ ಮನುಷ್ಯನಾಗುವವರೆಗಿನ ಹಂತವನ್ನು ತಲುಪಿದ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಕರ್ನಾಟಕ ರಾಜ್ಯ ಸರ್ಕಾರವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಯಾಗಿದ್ದು, ರಾಜ್ಯಪಾಲರು ಸಾಂವಿಧಾನಿಕ ಮುಖ್ಯಸ್ಥರಾಗಿರುತ್ತಾರೆ. ಐದು ವರ್ಷಗಳ ಕಾಲ ನೇಮಕಗೊಳ್ಳುವ ರಾಜ್ಯಪಾಲರು ಮುಖ್ಯಮಂತ್ರಿಯನ್ನು ನೇಮಿಸುತ್ತಾರೆ ಮತ್ತು ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ ಅವರ ಮಂತ್ರಿ ಮಂಡಳಿಯನ್ನು ನೇಮಿಸುತ್ತಾರೆ. ರಾಜ್ಯಪಾಲರು ರಾಜ್ಯದ ವಿಧ್ಯುಕ್ತ ಮುಖ್ಯಸ್ಥರಾಗಿ ಉಳಿದಿದ್ದರೂ ಸಹ, ಸರ್ಕಾರದ ದಿನನಿತ್ಯದ ಓಟವನ್ನು ಮುಖ್ಯಮಂತ್ರಿ ಮತ್ತು ಅವರ ಮಂತ್ರಿ ಮಂಡಳಿಯು ನೋಡಿಕೊಳ್ಳುತ್ತದೆ, ಇದರಲ್ಲಿ ಹೆಚ್ಚಿನ ಪ್ರಮಾಣದ ಶಾಸಕಾಂಗ ಅಧಿಕಾರಗಳನ್ನು ನೀಡಲಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ದೇಶದ ಮುಖ್ಯಸ್ಥರಾಗಿ ರಾಷ್ಟ್ರಪತಿ ಇರುವಂತೆಯೇ, ಭಾರತದಲ್ಲಿ ರಾಜ್ಯಗಳ ಮುಖ್ಯಸ್ಥರನ್ನು ರಾಜ್ಯಪಾಲ ಎಂದು ಕರೆಯುತ್ತಾರೆ.ಕಾರ್ಯಾಂಗದ ನಿಜವಾದ ಮುಖ್ಯಸ್ಥರು ಮುಖ್ಯಮಂತ್ರಿಗಳಾಗಿದ್ದರೂ ರಾಜ್ಯಪಾಲರು ರಾಜ್ಯಗಳ ಮುಖ್ಯಸ್ಥರಾಗಿರುತ್ತಾರೆ.ರಾಜ್ಯಪಾಲರನ್ನು ರಾಷ್ಟ್ರಪತಿಗಳು ನೇಮಿಸುತ್ತಾರೆ. ರಾಜ್ಯಪಾಲರ ಅಧಿಕಾರಾವಧಿ ೫ ವರ್ಷಗಳು.ಕೇಂದ್ರದಲ್ಲಿ ರಾಷ್ಟ್ರಪತಿ ಇದ್ದಂತೆ ರಾಜ್ಯದಲ್ಲಿ ರಾಜ್ಯಪಾಲ ಇರಬೇಕಾಗುತ್ತದೆ. ಭಾರತದ ಸಂವಿಧಾನದಲ್ಲಿ ರಾಜ್ಯದ ಶಾಸನ ರಚನಾ ಅಧಿಕಾರ ಹಾಗೂ ನ್ಯಾಯಾಂಗದ ಅಧಿಕಾರ ಹೊರತುಪಡಿಸಿ ಇರುವ ಉಳಿದೆಲ್ಲ ಅಧಿಕಾರವನ್ನು ರಾಜ್ಯಪಾಲರು ಇಲ್ಲವೆ ಅವರ ಹೆಸರಿನಲ್ಲಿಯೇ ನಿರ್ವಹಣೆ ಮಾಡಬೇಕಾಗುತ್ತದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ಪ್ರಸ್ತುತ ರಾಜ್ಯಪಾಲರಾಗಿದ್ದಾರೆ. ಅವರು ಮಧ್ಯಪ್ರದೇಶದಿಂದ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ವ್ಯಕ್ತಿ. ಜುಲೈ 6, 2021 ರಂದು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡು 2021 ರ ಜುಲೈ 11 ರಂದು ಅಧಿಕಾರ ವಹಿಸಿಕೊಂಡರು.ಅವರು 2014 ರಿಂದ 2021 ರವರೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.