The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಇಂಡಿಯನ್, ಬೂದುಕಂಠ, ಸಿಲೋನ್ ಅಥವಾ ಕೊಲಂಬೊ ಕಾಗೆ, ಎಂದೂ ಕರೆಯಲ್ಪಡುವ ಭಾರತೀಯ ಕಾಗೆ ಅಥವಾ ಮನೆ ಕಾಗೆ ( ಕಾರ್ವುಸ್ ಸ್ಪ್ಲೆಂಡೆನ್ಸ್ ) ಏಷ್ಯಾದ ಮೂಲದ ಕಾಗೆ ಕುಟುಂಬದ ಒಂದು ಸಾಮಾನ್ಯ ಹಕ್ಕಿಯಾಗಿದ್ದು, ಈಗ ವಿಶ್ವದ ಅನೇಕ ಭಾಗಗಳಲ್ಲಿ ಕಂಡುಬರುತ್ತದೆ. ಹಣೆಯ, ತಲೆ, ಗಂಟಲು ಮತ್ತು ಎದೆಯ ಮೇಲ್ಭಾಗವು ಸಮೃದ್ಧವಾಗಿ ಕಪ್ಪು ಬಣ್ಣದ್ದು, ಕುತ್ತಿಗೆ ಮತ್ತು ಸ್ತನವು ಹಗುರವಾದ ಬೂದು-ಕಂದು ಬಣ್ಣದಲ್ಲಿರುತ್ತದೆ. ರೆಕ್ಕೆಗಳು, ಬಾಲ ಮತ್ತು ಕಾಲುಗಳು ಕಪ್ಪು ಬಣ್ಣದಲ್ಲಿರುತ್ತವೆ.
ಕದಂಬ ಮನೆತನ : ಪಶ್ಚಿಮ ಕರ್ನಾಟಕದಲ್ಲಿ ಪ್ರ.ಶ. 4-7ನೆಯ ಶತಮಾನದವರೆಗೆ ಸ್ವತಂತ್ರರಾಗಿಯೂ 10-13ನೆಯ ಶತಮಾನದವರೆಗೆ ಹಾನುಗಲ್ಲು, ಗೋವ ಮುಂತಾದ ಕಡೆಗಳಲ್ಲಿ ಬಹುತೇಕ ಸಾಮಂತರು ಅಥವಾ ಮಾಂಡಲಿಕರಾಗಿಯೂ ಆಳಿದ ಒಂದು ರಾಜಮನೆತನ. ಈ ಮನೆತನದ ಅರಸರಿಗೆ ಸಂಬಂಧಿಸಿದ ಶಾಸನಗಳು ಮತ್ತು ದಿನಾಂಕಗಳನ್ನು ಆಯಾ ಅರಸರ ಆಳ್ವಿಕೆಯ ವರ್ಷ ಮಾಸ ಪಕ್ಷ ದಿನಗಳ ಎಣಿಕೆಯಲ್ಲಿ ನಿರೂಪಿಸಿರುವುದರಿಂದ ಇವಕ್ಕೆ ಸಮಾನವಾದ ತಾರೀಖುಗಳನ್ನು ನಿಷ್ಕರ್ಷಿಸುವುದು ಕಷ್ಟವೆಂದು ಹೇಳಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಕನ್ನಡ ವಿಶ್ವವಿದ್ಯಾಲಯ : ಕನ್ನಡ ನಾಡು, ನುಡಿ, ಸಂಸ್ಕೃತಿಗಳ ವಿಶೇಷ ಅಧ್ಯಯನಕ್ಕಾಗಿ 1991ರಲ್ಲಿ ಸ್ಥಾಪಿತವಾದ ಒಂದು ವಿಶ್ವವಿದ್ಯಾಲಯ. ಕನ್ನಡದ ಕೆಲಸಗಳು ವಿವಿಧ ವಿಶ್ವವಿದ್ಯಾಲಯಗಳ ಕನ್ನಡ ಅಧ್ಯಯನ ಕೇಂದ್ರಗಳು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಅಕಾಡೆಮಿಗಳ ಮೂಲಕ ನಡೆಯುತ್ತಿದ್ದರೂ ಕನ್ನಡ ನಾಡುನುಡಿಯ ಬಗ್ಗೆ, ಕನ್ನಡ ಭಾಷಾ ಪುರೋಬಿsವೃದ್ಧಿಯ ಬಗ್ಗೆ ಆಳವಾದ ಕೆಲಸ ಕಾರ್ಯಗಳು ನಡೆಯಬೇಕೆಂಬ ಮಹೋದ್ದೇಶದಿಂದ ಕರ್ನಾಟಕ ಸರ್ಕಾರ ಈ ವಿಶ್ವವಿದ್ಯಾಲಯವನ್ನು ಅಸ್ತಿತ್ವಕ್ಕೆ ತಂದಿತು. ವಿಜಯನಗರ ಜಿಲ್ಲೆಯ (ಆಗ ಬಳ್ಳಾರಿ ಜಿಲ್ಲೆ) ಚಾರಿತ್ರಿಕ ಮಹತ್ತ್ವವುಳ್ಳ ಹಂಪೆಯ ಪರಿಸರದಲ್ಲಿ ಈ ವಿಶ್ವವಿದ್ಯಾಲಯ ನೆಲೆಗೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಭಕ್ತಿ ಚಳುವಳಿಯು ಮೋಕ್ಷವು ಎಲ್ಲರಿಂದ ಹೊಂದಲ್ಪಡಬಹುದು ಎಂಬ ನಂಬಿಕೆಯನ್ನು ಪ್ರಚಾರಮಾಡಿದ ಮಧ್ಯಯುಗದ ಒಂದು ಹಿಂದೂ ಧಾರ್ಮಿಕ ಚಳುವಳಿಯಾಗಿತ್ತು. ಈ ಚಳುವಳಿಯು ಸುಮಾರು ಇದೇ ಕಾಲಕ್ಕೆ ಕಾಣಿಸಿಕೊಂಡ ಇಸ್ಲಾಮಿ ಸೂಫಿ ತತ್ವಕ್ಕೆ ನಿಕಟವಾಗಿ ಸಂಬಂಧಿಸಿದೆ: ದೇವರಿಗೆ ಭಕ್ತಿಯ ವೈಯಕ್ತಿಕ ಅಭಿವ್ಯಕ್ತಿಯು ಅವನೊಂದಿಗೆ ಒಂದಾಗಲು ದಾರಿ ಎಂದು ಎರಡೂ ಪ್ರತಿಪಾದಿಸಿದವು. ಭಕ್ತಿ ಚಳುವಳಿಯು ಏಳನೇ ಶತಮಾನದ ತಮಿಳುನಾಡಿನಲ್ಲಿ ಹುಟ್ಟಿಕೊಂಡಿತು ಮತ್ತು ಭಾರತದ ಮೂಲಕ ಉತ್ತರಕ್ಕೆ ಹರಡಿತು.
ಒಂದು ರಾಜಕೀಯ ಪಕ್ಷ ವು ಸರ್ಕಾರದೊಳಗೆ, ಸಾಮಾನ್ಯವಾಗಿ ಮತದಾನ ಶಿಬಿರಗಳಲ್ಲಿ, ಶೈಕ್ಷಣಿಕ ವ್ಯಾಪ್ತಿಗಳಲ್ಲಿ ಅಥವಾ ವಿರೋಧ ಪ್ರಕ್ರಿಯೆಗಳಲ್ಲಿ ಭಾಗವಹಿಸುವುದರ ಮೂಲಕ, ವಿಶಿಷ್ಟವಾಗಿ ರಾಜಕೀಯ ಬಲವನ್ನು ಸಾಧಿಸುವ ಮತ್ತು ನಿರ್ವಹಿಸಿಕೊಂಡು ಹೋಗುವ ಒಂದು ರಾಜಕೀಯ ಸಂಘಟನೆಯಾಗಿದೆ. ಪಕ್ಷಗಳು ಅನೇಕ ವೇಳೆ ಬಹಿರಂಗಗೊಳಿಸಲ್ಪಟ್ಟ ವಿಚಾರಪರಂಪರೆ ಅಥವಾ ನಿರ್ದಿಷ್ಟ ಗುರಿಗಳ ಜೊತೆ ಒಂದು ಬರೆಯಲ್ಪಟ್ಟ ವೇದಿಕೆಯ ಮೂಲಕ ದೂರದೃಷ್ಟಿಯನ್ನು ಪ್ರೋತ್ಸಾಹಿಸುವ, ವಿಭಿನ್ನ ಆಸಕ್ತಿಗಳ ನಡುವೆ ಒಂದು ಸಮ್ಮಿಶ್ರಣವನ್ನು ಸ್ಥಾಪಿಸುವ ಅಭಿಪ್ರಾಯವನ್ನು ಸಮರ್ಥಿಸುತ್ತವೆ.
ಲಂಡನ್ನಿನ 'ನೈಸರ್ಗಿಕ ಇತಿಹಾಸ ಸಂಗ್ರಹಾಲಯವು(ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ), ನೈಸರ್ಗಿಕ ಇತಿಹಾಸದ ವಿವಿಧ ವಲಯದಿಂದ ಮಾದರಿಗಳ ವ್ಯಾಪಕ ಪ್ರದರ್ಶಿಸುತ್ತದೆ. ಮ್ಯೂಸಿಯಂ ಒಂದು ವಿಶ್ವ ವರ್ಗ ಭೇಟಿ ಆಕರ್ಷಣೆ ಮತ್ತು ಪ್ರಮುಖ ವಿಜ್ಞಾನ ಸಂಶೋಧನಾ ಕೇಂದ್ರವಾಗಿದೆ. ಮೂರು ಪ್ರಮುಖ ಸಂಗ್ರಹಾಲಯಗಳಲ್ಲಿ, ಒಂದು ಸೌತ್ ಕೆನ್ಸಿಂಗ್ಟನ್'ನ ಪ್ರದರ್ಶನ ರಸ್ತೆಯಲ್ಲಿದೆ, ಇನ್ನುಳಿದವುಗಳಾದ 'ಸೈನ್ಸ್ ಮ್ಯೂಸಿಯಂ' ಮತ್ತು 'ವಿಕ್ಟೋರಿಯಾ ಮತ್ತು ಆಲ್ಬರ್ಟ್ ಮ್ಯೂಸಿಯಂ' ಬೇರೆ ಶಾಖೆಯಾಗಿವೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಸುವ್ಯಕ್ತ ಭೋಗ ಅಂದರೆ ಸಾರ್ವಜನಿಕವಾಗಿ ಆದಾಯದ ಆರ್ಥಿಕ ಶಕ್ತಿ ಅಥವಾ ಖರೀದಿದಾರನ ಸಂಪಾದಿಸಿದ ಆಸ್ತಿಯ ಶಕ್ತಿಯನ್ನು ತೋರಿಸಿಕೊಳ್ಳಲು ಐಷಾರಾಮಿ ಸರಕುಗಳು ಮತ್ತು ಸೇವೆಗಳ ಮೇಲೆ ಮತ್ತು ಅವನ್ನು ಪಡೆಯಲು ಹಣವನ್ನು ಖರ್ಚುಮಾಡುವುದು. ಗಮನ ಸೆಳೆವ ಗ್ರಾಹಕನಿಗೆ, ವಿವೇಚನಾ ಆರ್ಥಿಕ ಶಕ್ತಿಯ ಅಂತಹ ಸಾರ್ವಜನಿಕ ಪ್ರದರ್ಶನವು ನಿರ್ದಿಷ್ಟ ಸಾಮಾಜಿಕ ಅಂತಸ್ತನ್ನು ಹೊಂದುವ ಒಂದು ವಿಧಾನವಾಗಿದೆ.೧೯ನೇ ಶತಮಾನದಲ್ಲಿ, ಎರಡನೇ ಕೈಗಾರಿಕಾ ಕ್ರಾಂತಿಯ ಅವಧಿಯಲ್ಲಿ ಬಂಡವಾಳ ಶೇಖರಣೆಯ ಪರಿಣಾಮವಾಗಿ ಬೆಳಕಿಗೆ ಬಂದ ನ್ಯೂವೊ ರೀಶ್ (ನವಶ್ರೀಮಂತರು) ಸಾಮಾಜಿಕ ವರ್ಗದ ವರ್ತನೆಯ ಗುಣಲಕ್ಷಣಗಳನ್ನು ವರ್ಣಿಸಲು ಅರ್ಥಶಾಸ್ತ್ರಜ್ಞ ಮತ್ತು ಸಮಾಜಶಾಸ್ತ್ರಜ್ಞ ಥಾರ್ಸ್ಟೈನ್ ವೆಬ್ಲನ್ (೧೮೫೭-೧೯೨೯) ಸುವ್ಯಕ್ತ ಭೋಗ ಪದವನ್ನು ಪರಿಚಯಿಸಿದರು. ಆ ೧೯ನೇ ಶತಮಾನದ ಸಾಮಾಜಿಕ ಮತ್ತು ಐತಿಹಾಸಿಕ ಸಂದರ್ಭದಲ್ಲಿ, ತಮ್ಮ ವಾಸ್ತವ ಅಥವಾ ಗ್ರಹಿತ ಸಾಮಾಜಿಕ ಅಧಿಕಾರ ಮತ್ತು ಪ್ರತಿಷ್ಠೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸುವ ವಿಧಾನವಾಗಿ ತಮ್ಮ ಭಾರೀ ಸಂಪತ್ತನ್ನು ಬಳಸಿದ ಮೇಲ್ವರ್ಗದ ಪುರುಷರು, ಮಹಿಳೆಯರು, ಮತ್ತು ಕುಟುಂಬಗಳನ್ನು ವರ್ಣಿಸಲು "ಸುವ್ಯಕ್ತ ಭೋಗ" ಪದವನ್ನು ಸೂಕ್ಷ್ಮವಾಗಿ ಅನ್ವಯಿಸಲಾಗಿತ್ತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ತ್ರಿಪದಿ ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.