The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
"ಪಂಚತಂತ್ರ ಕಥೆಗಳ ಮೂಲ ಭಾರತ".ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ( ಸಂಸ್ಕೃತ:पञ्चतन्त्र' )ಐದು ಮೂಲತತ್ವಗಳು'ಕ್ರಿಸ್ತ ಪೂರ್ವ 3ನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಮರಿಗಳಿಗೆ ಮೊಲೆ ಹಾಲೂಡಿಸುವ ಪ್ರಾಣಿಗಳನ್ನು, ಎಂದರೆ ಸಸ್ತನಿಗಳನ್ನು, ಕುರಿತು ಗರ್ಭಾವಸ್ಥೆ ಎಂಬ ಪದದ ಬಳಕೆ ಉಂಟು. ಇಂಥ ಪ್ರಾಣಿಗಳಲ್ಲಿ ಸಹ ಗರ್ಭಾವಸ್ಥೆಯ ಅವಧಿಯನ್ನು ಮನುಷ್ಯರಲ್ಲಿ ವ್ಯಾಖ್ಯಾನಿಸಿರುವಂತೆಯೇ ವ್ಯಾಖ್ಯಾನಿಸಲಾಗಿದೆ: ಗರ್ಭದಲ್ಲಿ ಭ್ರೂಣವುಂಟಾಗಿ ಪಿಂಡವಾಗಿ ಬೆಳೆದು ಅದು ಮರಿಯಾಗಿ ಹುಟ್ಟುವವರೆಗಿನ ಕಾಲ. ಯಾವುದೇ ಪ್ರಾಣಿಯಲ್ಲಿ ನಿಷೇಚನ ಯಾವಾಗ ನಡೆಯಿತು ಎಂಬುದನ್ನು ಕರಾರುವಾಕ್ಕಾಗಿ ಹೇಳುವುದು ಕಷ್ಟ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಗ್ರೀಕ್ (ελληνικά, IPA: [eliniˈka] or ελληνική γλώσσα, IPA: [eliniˈci ˈɣlosa]), ಇಂಡೋ-ಯೂರೋಪ್ ಭಾಷೆಗಳ ಒಂದು ಸ್ವತಂತ್ರ ಭಾಗವಾಗಿದ್ದು, ಇದು ಗ್ರೀಕರ ಭಾಷೆಯಾಗಿದೆ. ಇದು ದಕ್ಷಿಣ ಬಾಲ್ಕನ್ಸ್ನ ಮೂಲದಿಂದ ಹುಟ್ಟಿದ್ದು, ಸುಮಾರು 34 ಶತಮಾನಗಳ ಲಿಖಿತ ದಾಖಲೆಯನ್ನು ಹೊಂದಿರುವ ಈ ಭಾಷೆಯು ಇತರ ಯಾವುದೇ ಇಂಡೋ-ಯೂರೋಪ್ ಭಾಷೆಗಳಿಗಿಂತಲೂ ಧೀರ್ಘಕಾಲದ ದಾಖಲೆಯ ಚರಿತ್ರೆಯನ್ನು ಹೊಂದಿದೆ.ಇದರ ಬರವಣಿಗೆಯ ವಿಧಾನವು ಪ್ರಮುಖವಾಗಿ ಗ್ರೀಕ್ ಅಕ್ಷರಮಾಲೆಯಿಂದ ಉಗಮಗೊಂಡಿದೆ.(ಇದಕ್ಕೆ ಮೊದಲು ಇತರ ಪದ್ದತಿಗಳಾದ ಲೀನಿಯರ್ ಬಿ ಮತ್ತು ಸಿಪ್ರಿಯೋಟ್ ಕಾಗುಣಿತ , ಪದ್ದತಿಗಳನ್ನು ಬಳಸಲಾಗುತ್ತಿತ್ತು). ಈ ಅಕ್ಷರಮಾಲೆಯು ಫೀನೀಸಿಯನ್ ಲಿಪಿಯಿಂದ ಉಗಮಗೊಡಿದ್ದು, ನಂತರ ಇದು ಲ್ಯಾಟಿನ್, ಸಿರಿಲಿಕ್, ಕೋಪ್ಟಿಕ್, ಮತ್ತು ಇತರ ಬರಹ ಪದ್ದತಿಗಳ ಮೂಲವಾಯಿತು.
ಝೂಲಾಜಿಕಲ್ ಗಾರ್ಡನ್ , ಝೂಲಾಜಿಕಲ್ ಪಾರ್ಕ್ , ಪ್ರಾಣಿಸಂಗ್ರಹಾಲಯ , ಅಥವಾ ಮೃಗಾಲಯ ಇದೊಂದು ಆವರಣದೊಳಗಡೆಯ ಎಲ್ಲೆಯಲ್ಲಿಯೇ ಪ್ರಾಣಿಗಳಿಗೆ ಅವಕಾಶನೀಡುವ, ಸಾರ್ವಜನಿಕರಿಗೆ ಪ್ರದರ್ಶನ ನೀಡಲು ಮತ್ತು ಆ ಪ್ರಾಣಿಗಳಿಗೆ ಅಲ್ಲಿಯೇ ಆಹಾರ ಒದಗಿಸುವಂತಹ ಸ್ಥಳವಾಗಿದೆ. . ಝೂಲಾಜಿಕಲ್ ಗಾರ್ಡನ್ ಎನ್ನುವ ಪದವು ಝುವಾಲಜಿ ಅನ್ವಯಿಸುವುದಲ್ಲದೇ, ಪ್ರಾಣಿಗಳ ಬಗ್ಗೆ ಅಧ್ಯಯನ ನಡೆಸುವುದೆಂಬುದಾಗಿದ್ದು, ಈ ಪಾರಿಬಾಷಿಕವು ಗ್ರೀಕ್ನ ಝೂನ್ (“ಪ್ರಾಣಿ”) ಮತ್ತು ಲೋಗೋಸ್ (λóγος, "ಸ್ಟಡಿ") ಎಂಬ ಪದದಿಂದ ವ್ಯುತ್ಪತ್ತಿಗೊಂಡಿದೆ. ಈ “ಮೃಗಾಲಯ” ಎನ್ನುವ ಸಂಕ್ಷೇಪವು ಮೊತ್ತಮೊದಲಿಗೆ ಲಂಡನ್ ಝೂಲಾಜಿಕಲ್ ಗಾರ್ಡನ್ಸ್ ಬಳಸಲ್ಪಟ್ಟಿತ್ತಲ್ಲದೇ, 1828ರ ವೈಜ್ಞಾನಿಕ ಅಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿತ್ತಲ್ಲದೇ, ಸಾರ್ವಜನಿಕವಾಗಿ 1828ರಲ್ಲಿ ಬಳಸಲ್ಪಟ್ಟಿತು.
ರಜಾದಿನ ಎಂದರೆ ವಾಡಿಕೆ ಅಥವಾ ಕಾನೂನಿನಿಂದ ಮೀಸಲಿಡಲಾದ ದಿನ. ಆ ದಿನದಂದು ಮಾಮೂಲಿನ ಚಟುವಟಿಕೆಗಳನ್ನು, ವಿಶೇಷವಾಗಿ ಶಾಲೆ ಸೇರಿದಂತೆ ವ್ಯಾಪಾರ ಅಥವಾ ಕೆಲಸವನ್ನು, ನಿಲ್ಲಿಸಲಾಗುತ್ತದೆ ಅಥವಾ ಕಡಿಮೆಮಾಡಲಾಗುತ್ತದೆ. ವ್ಯಕ್ತಿಗಳಿಗೆ ಸಾಂಸ್ಕೃತಿಕ ಅಥವಾ ಧಾರ್ಮಿಕ ಮಹತ್ವದ ಒಂದು ಘಟನೆ ಅಥವಾ ಸಂಪ್ರದಾಯವನ್ನು ಆಚರಿಸಲು ಅಥವಾ ಸ್ಮರಿಸಲು ಅವಕಾಶ ನೀಡುವುದು ಸಾಮಾನ್ಯವಾಗಿ ರಜಾದಿನಗಳ ಉದ್ದೇಶವಾಗಿರುತ್ತದೆ.
ಸರ್ವಾಧಿಕಾರ ಎಂದರೆ ಸಂಪೂರ್ಣ ಅಧಿಕಾರ, ಅಂದರೆ ಒಬ್ಬ ವ್ಯಕ್ತಿ ಅಥವಾ ಒಂದು ಸಣ್ಣ ಗುಂಪಿನಲ್ಲಿ ಕೇಂದ್ರೀಕೃತಗೊಂಡಿರುವ ಆಡಳಿತ ವ್ಯವಸ್ಥೆ (ಡಿಕ್ಟೇಟರ್ಶಿಪ್). ಈ ಪದವನ್ನು ಪ್ರಾಚೀನ ರೋಮ್ನಿಂದ ಪಡೆಯಲಾಗಿದೆ. ಪ್ರಜಾಪ್ರಭುತ್ವದಲ್ಲಿ ಇರುವ ಸಮತೋಲನಾತ್ಮಕ ಪದ್ಧತಿಗಳು, ಕಾನೂನು ಮತ್ತು ಮೌಲ್ಯ ಪದ್ಧತಿ ಇಲ್ಲಿ ಗೌಣವಾಗಿ, ಸರ್ವಾಧಿಕಾರಿ ಇಚ್ಛೆಗೆ ಅನುಗುಣವಾಗಿ ಆಡಳಿತ ನಡೆಯುತ್ತದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅರ್ನಾಲ್ಡ್ ಅಲೋಯಿಸ್ ಶ್ವಾರ್ಜಿನೆಗ್ಗರ್ (English pronunciation: /ˈʃwɔrtsənɛɡər/German: [ˈaɐnɔlt ˈaloʏs ˈʃvaɐtsənˌʔɛɡɐ]ಜುಲೈ ೩೦, ೧೯೪೭ರಲ್ಲಿ ಜನನ); ಆಸ್ಟ್ರಿಯಾ ಅಮೇರಿಕದ ದೇಹಧಾಡ್ಯಪಟು, ನಟ, ಉದ್ಯಮಿ ಮತ್ತು ರಾಜಕಾರಣಿ ಆಗಿದ್ದು, ಪ್ರಸ್ತುತ ಕ್ಯಾಲಿಪೋರ್ನಿಯಾದ ೩೮ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಲಿದ್ದಾರೆ. ತನ್ನ ಹದಿನೈದರ ಹರಯದಿಂದಲೇ ಶ್ವಾರ್ಜಿನೆಗ್ಗರ್ ದೈಹಿಕ ಕಸರತ್ತುಗಳನ್ನು ಆರಂಭಿಸಿದರು. ೨೨ನೇ ವಯಸ್ಸಿನಲ್ಲಿಯೇ ಮಿ.ಯುನಿವರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು ಮತ್ತು ಮಿ.ಒಲಂಪಿಯಾ ಸ್ಪರ್ಧೆಯಲ್ಲಿ ಸತತವಾಗಿ ಏಳು ಬಾರಿ ವಿಜೇತರಾದರು.
ಅರಿಸ್ಟಾಟಲ್ (Greek: Ἀριστοτέλης , ಅರಿಸ್ಟಾಟೆಲೆಸ್ ) (384 BC – 322 BC) ಒಬ್ಬ ಗ್ರೀಕ್ ದಾರ್ಶನಿಕ ಮಾತ್ರವಲ್ಲದೆ, ಪ್ಲೇಟೋನ ಓರ್ವ ವಿದ್ಯಾರ್ಥಿ ಹಾಗೂ ಅಲೆಕ್ಸಾಂಡರ್ನ ಗುರುವಾಗಿದ್ದ. ಭೌತಶಾಸ್ತ್ರ, ತತ್ತ್ವಮೀಮಾಂಸೆ, ಕವಿತೆ, ರಂಗಭೂಮಿ, ಸಂಗೀತ, ತರ್ಕಶಾಸ್ತ್ರ, ಭಾಷಣಶಾಸ್ತ್ರ, ರಾಜಕಾರಣ, ಸರ್ಕಾರ, ನೀತಿಶಾಸ್ತ್ರ, ಜೀವಶಾಸ್ತ್ರ, ಮತ್ತು ಪ್ರಾಣಿಶಾಸ್ತ್ರ ಇವೇ ಮೊದಲಾದವನ್ನು ಒಳಗೊಂಡಂತೆ ಅನೇಕ ವಿಷಯಗಳ ಕುರಿತು ಆತ ಬರೆದ. ಪ್ಲೇಟೋನ ಗುರುವಾದ ಸಾಕ್ರಟಿಸ್ ಮತ್ತು ಪ್ಲೇಟೋನ ಜೊತೆಜೊತೆಗೆ, ಪಾಶ್ಚಿಮಾತ್ಯ ತತ್ತ್ವಶಾಸ್ತ್ರದಲ್ಲಿನ ಅತಿ ಪ್ರಮುಖ ಪ್ರಸಿದ್ಧ ಸಂಸ್ಥಾಪಕರಲ್ಲಿ ಅರಿಸ್ಟಾಟಲ್ ಕೂಡಾ ಒಬ್ಬನಾಗಿದ್ದಾನೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಇದು ಭಾರತದ ಒಂದು ಕೇಂದ್ರೀಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸೇವೆಗೆ ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆಗಳನ್ನು ನಡೆಸಿ ಲೋಕ ಸೇವಾ ಅಧಿಕಾರಿಗಳನ್ನು ಆಯ್ಕೆ ಮಾಡುವ ಕಾರ್ಯದಲ್ಲಿ ತೊಡಗುವ ಅಧಿಕಾರವನ್ನು ಹೊಂದಿದೆ. ಭಾರತೀಯ ನಾಗರೀಕ ಸೇವಾ ಪರೀಕ್ಷೆ, ಇಂಜಿನಿಯರಿಂಗ್ ಸೇವಾ ಪರೀಕ್ಷೆ, ಕಂಬೈನ್ಡ್ ಡಿಫೆನ್ಸ್ ಸೇವಗಳ ಪರೀಕ್ಷೆ, ರಾಷ್ಟ್ರೀಯ ಸೇನಾ ಅಕಾಡೆಮಿ ಪರೀಕ್ಷೆ,ಜಲ ಸೇನಾ ಅಕಾಡೆಮಿ ಪರೀಕ್ಷೆ, ಭಾರತೀಯ ಅರಣ್ಯ ಸೇವೆ ಪರೀಕ್ಷೆ, ಭಾರತೀಯ ಅರ್ಥ ಸೇವೆ ಪರೀಕ್ಷೆ, ಭಾರತೀಯ ಸಂಖ್ಯಾ ಸೇವೆ ಪರೀಕ್ಷೆ, ಸಂಯೋಜಿತ ಭೂಗರ್ಭವಿಜ್ಞಾನ ಹಾಗು ಭೂಗರ್ಭ ತಜ್ಞರ ಪರೀಕ್ಷೆ ಹಾಗು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಪರೀಕ್ಷೆಗಳನ್ನು ಕೇಂದ್ರ ಲೋಕ ಸೇವಾ ಆಯೋಗವು ಕಾಲ ಕಾಲಕ್ಕೆ ತಕ್ಕಂತೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಪರೀಕ್ಷೆಗಳು ಅಭ್ಯರ್ಥಿಯ ಮಾನಸಿಕ ಸಾಮರ್ಥ್ಯ, ಭೌದ್ದಿಕ ಸಾಮರ್ಥ್ಯಗಳನ್ನು ಅಳೆಯುವ ಬಹು ಮುಖ್ಯ ಸಾಧನಗಳಾಗಿರುತ್ತವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ಸಂವಿಧಾನದ ಪ್ರಕಾರ ಭಾರತದ ರಾಜಕೀಯ ಪಕ್ಷಗಳು ಭಾರತದ ವಿವಿಧ ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರಕ್ಕೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರವನ್ನು ಹೊಂದಿರುವ ಸದಸ್ಯರಿರುವ ಪಕ್ಷಗಳು ರಾಷ್ಟ್ರೀಯ ಪಕ್ಷಗಳೆಂದು ಕರೆಯಲಾಗುತ್ತವೆ. ಇವುಗಳಲ್ಲಿ ಮುಖ್ಯವಾದವು: ಬಹುಜನ ಸಮಾಜ ಪಕ್ಷ (BSP) - ಮಾಯಾವತಿ ಕುಮಾರಿ ಅವರ ನೇತೃತ್ವದಲ್ಲಿ.
ಭಾರತೀಯ ಜಾತಿ ಪದ್ದತಿ ಯು ಸಾಮಾಜಿಕ ಶ್ರೇಣೀಕರಣವನ್ನು ವಿವರಿಸುತ್ತದೆ.ಅದಲ್ಲದೇ ಸಾಮಾಜಿಕ ನಿರ್ಭಂಧಗಳಡಿ ಭಾರತ ಉಪಖಂಡದ ಸಾವಿರಾರು ಪಂಗಡದ ಪ್ರವರ್ಗಗಳನ್ನು, ವಂಶವಾಹಿನಿಗಳ ಸಮೂಹವನ್ನು ವ್ಯಾಖ್ಯಾನಿಸುತ್ತದೆ.ಇದನ್ನೇ ಜಾತಿ ಗಳು ಅಥವಾ ಕೋಮು ಗಳೆಂದು ಹೇಳಲಾಗುತ್ತದೆ. ಈ ಜಾತಿಯಲ್ಲಿಯೇ ಅನ್ಯಗೋತ್ರ ಗುಂಪುಗಳ ಅಸ್ತಿತ್ವ ಇದೆ,ಇದನ್ನು ಗೋತ್ರಗಳು,ವಂಶವಾಹಿನಿ ಅಥವಾ ಕುಟುಂಬದ ಕುಲಗೋತ್ರವನ್ನು ವೈಯಕ್ತಿಕ ನೆಲೆಯಲ್ಲಿ ಗುರುತಿಸಲಾಗುತ್ತದೆ. ಹಲವಾರು ಉಪ-ಜಾತಿಗಳಲ್ಲಿ ಶಾಕಾದ್ವಿಪಿ,ಕೂಡಾ ಒಂದು,ಒಂದೇ ಗೋತ್ರದಲ್ಲಿ ವಿವಾಹ ಅನುಮತಿಸಿದ್ದರೂ ಅದನ್ನು ಪರ್ಯಾಯ ನಿರ್ಭಂದಿತ ಸಗೋತ್ರ ವಿವಾಹಕ್ಕೆ ಪರಿಗಣಿಸಲಾಗುತ್ತದೆ.(ಉದಾಹರಣೆಗೆ ಅಡ್ಡಹೆಸರುಗಳು ಒಂದೇ ಆಗಿದ್ದರೆ ಅಲ್ಲಿ ವಿವಾಹ ನಿಷಿದ್ದದ ನಿಯಮ ಉಂಟು) ಹಿಂದುತ್ವದೊಂದಿಗೆ ಗುರುತಿಸಿಕೊಂಡಿರುವ ಇತರ ಮುಸ್ಲಿಮರ ಕೆಲವು ಗುಂಪುಗಳು ಮತ್ತು ಕ್ರಿಶ್ಚನ್ ರು ಕೂಡಾ ಇದೇ ತೆರನಾದ ಗುಂಪು ಪ್ರಭೇದವನ್ನು ಹೊಂದಿರುವುದು ಭಾರತದ ಉಪಖಂಡದಲ್ಲಿ ಕಾಣುತ್ತದೆ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.