The most-visited ಕನ್ನಡ Wikipedia articles, updated daily. Learn more...
ದಾಳಗಳು ಹಲವು ಗುರುತಿರುವ ಪಾರ್ಶ್ವ ಮುಖಗಳಲ್ಲಿ ಯಾವುದರ ಮೇಲಾದರೂ ಇಳಿಯುವಂತೆ ವಿನ್ಯಾಸಗೊಳಿಸಲಾದ, ಹಲವುವೇಳೆ ಸರಿಸುಮಾರು ಲಂಬ ಅಕ್ಷದ ಪಟ್ಟಕದಂತಿರುವ ಡೈಸ್. ತುದಿಯ ಮೇಲೆ ಇಳಿಯುವಿಕೆ ಬಹಳ ಅಪರೂಪ ಏಕೆಂದರೆ ಇತರ ಮುಖಗಳಿಗೆ ಹೋಲಿಸಿದರೆ ಅವುಗಳ ಗಾತ್ರ ಸಣ್ಣದಾಗಿದೆ, ದಾಳದ ಎತ್ತರದಲ್ಲಿ ಅಂತರ್ಗತವಾಗಿರುವ ಅಸ್ಥಿರತೆಯಿರುವುದರಿಂದ, ಮತ್ತು ದಾಳವನ್ನು ಎಸೆಯುವುದರ ಬದಲು ಅಕ್ಷದ ಮೇಲೆ ಉರುಳಿಸುವುದರಿಂದ. ಅನೇಕ ದಾಳಗಳು ತುದಿಯ ಮೇಲೆ ಇಳಿಯುವುದನ್ನು ತಪ್ಪಿಸಲು, ತುದಿಗಳಿಗೆ ದುಂಡನೆಯ ಅಥವಾ ಶಿಖರಾಕಾರ ಕೊಟ್ಟು, ಹೆಚ್ಚಿನ ಪರಿಹಾರ ಒದಗಿಸುತ್ತವೆ, ಮತ್ತು ಇದರಿಂದ ಅಂತಹ ಆಗುಹ ಭೌತಿಕವಾಗಿ ಅಸಾಧ್ಯವಾಗುತ್ತದೆ (ಕನಿಷ್ಠಪಕ್ಷ ಚಪ್ಪಟೆ ಭದ್ರ ಮೇಲ್ಮೈ ಮೇಲೆ).
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿರುವ ವಿಮರ್ಶಕರಾದ ಗೋವಿಂದರಾಯ ಹಮ್ಮಣ್ಣ ನಾಯಕ . ಅವರು ೧೯೩೫ ಸೆಪ್ಟಂಬರ ೧೮ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಜೀವನದಲ್ಲಿರುವ ಇವರು ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದ ನಾಯಕರು ದಿನಾಂಕ ೨೬ ಮೇ ೨೦೨೩ರಂದು ನಿಧನ ಹೊಂದಿದರು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತದ ಸಂಸತ್ತು ಭಾರತದ ಗಣರಾಜ್ಯದ ಒಕ್ಕೂಟ ಸರ್ಕಾರದ ಎರಡು ಶಾಸನಸಭೆಗಳುಳ್ಳ (ಉಭಯ ಸದನಿಕ) ಸರ್ವೋಚ್ಚ ವಿಧಾಯಕ ಘಟಕವಾಗಿದೆ. ಭಾರತದ ರಾಷ್ಟ್ರಪತಿಯವರ ಕಚೇರಿ, "ರಾಜ್ಯಸಭಾ" ಎಂದು ಕರೆಯಲ್ಪಡುವ ರಾಜ್ಯಗಳ ಪರಿಷತ್ತು ಆಗಿರುವ ಒಂದು ಮೇಲ್ಮನೆ, ಮತ್ತು "ಲೋಕಸಭಾ" ಎಂದು ಕರೆಯಲ್ಪಡುವ ಪ್ರಜಾಪ್ರತಿನಿಧಿಗಳ ಸಭೆಯಾಗಿರುವ ಒಂದು ಕೆಳಮನೆಯನ್ನು ಇದು ಒಳಗೊಂಡಿದೆ. ನವದೆಹಲಿಯಲ್ಲಿನ ಸಂಸದ್ ಭವನದಲ್ಲಿರುವ (ಇದನ್ನು ಸಾಮಾನ್ಯವಾಗಿ ಸಂಸದ್ ಮಾರ್ಗ ಎಂದು ಕರೆಯಲಾಗುತ್ತದೆ) ಪ್ರತ್ಯೇಕ ಶಾಸನಸಭೆಗಳಲ್ಲಿ ಎರಡೂ ಸದನಗಳು ಸಭೆ ಸೇರುತ್ತವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಮಳೆಬಿಲ್ಲು (ಅಥವಾ ಕಾಮನಬಿಲ್ಲು) ಎಂಬುದೊಂದು ದೃಗ್ವೈಜ್ಞಾನಿಕ ಮತ್ತು ಪವನಶಾಸ್ತ್ರದ ವಿದ್ಯಮಾನವಾಗಿದ್ದು, ಭೂಮಿಯ ವಾತಾವರಣದಲ್ಲಿನ ಸಣ್ಣಹನಿಗಳ ಮೇಲೆ ಸೂರ್ಯನು ಬೆಳಗಿದಾಗ ಆಕಾಶದಲ್ಲಿ ಬೆಳಕಿನ ಬಣ್ಣಗಳ ಪಟ್ಟಿಯೊಂದು ಕಾಣಿಸುವಂಥ ಪರಿಣಾಮವನ್ನು ಇದು ಉಂಟು ಮಾಡುತ್ತದೆ. ಒಂದು ಬಹುವರ್ಣದ ಬಿಲ್ಲಿನ ಸ್ವರೂಪವನ್ನು ತಳೆಯುವ ಇದು ತನ್ನ ಹೊರಗಿನ ಭಾಗದಲ್ಲಿ ಕೆಂಪು ಬಣ್ಣವನ್ನೂ ಒಳಗಿನ ವಿಭಾಗದಲ್ಲಿ ನೇರಿಳೆ ಬಣ್ಣವನ್ನೂ ಹೊಂದಿರುತ್ತದೆ. ಒಂದು ಅಖಂಡವಾಗಿರುವ ಬಣ್ಣಗಳ ರೋಹಿತವನ್ನು (ಬಣ್ಣಗಳ ಪಟ್ಟಿಯನ್ನು) ಒಂದು ಮಳೆಬಿಲ್ಲು ವ್ಯಾಪಿಸಿಕೊಳ್ಳುತ್ತದೆ; ಇದರ ವಿಶಿಷ್ಟ-ವಿಸ್ಪಷ್ಟ ಪಟ್ಟಿಗಳು ಮಾನವನ ವರ್ಣ ಕಲ್ಪನಾಚಿತ್ರದ ಒಂದು ಕಲಾಕೃತಿಯಂತೆ ಭಾಸವಾಗುತ್ತವೆ.
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ತತ್ವಜ್ಞಾನಿ (ದಾರ್ಶನಿಕ) ಎಂದರೆ ತತ್ತ್ವಶಾಸ್ತ್ರವನ್ನು ಅಭ್ಯಾಸಮಾಡುವ ವ್ಯಕ್ತಿ. ಆಧುನಿಕ ಅರ್ಥದಲ್ಲಿ, ತತ್ವಜ್ಞಾನಿಯು ತತ್ತ್ವಶಾಸ್ತ್ರದ ಒಂದು ಅಥವಾ ಹೆಚ್ಚು ಶಾಖೆಗಳಲ್ಲಿ ಕೊಡುಗೆ ನೀಡಿರುವ ಬುದ್ಧಿಜೀವಿ, ಉದಾಹರಣೆಗೆ ಸೌಂದರ್ಯಶಾಸ್ತ್ರ, ನೀತಿಶಾಸ್ತ್ರ, ಜ್ಞಾನಮೀಮಾಂಸೆ, ತರ್ಕಶಾಸ್ತ್ರ, ತತ್ವಮೀಮಾಂಸೆ, ಸಾಮಾಜಿಕ ಸಿದ್ಧಾಂತ, ಮತ್ತು ರಾಜಕೀಯ ತತ್ತ್ವಶಾಸ್ತ್ರ. ತತ್ವಜ್ಞಾನಿಯು ಮಾನವಶಾಸ್ತ್ರಗಳು ಅಥವಾ ಶತಮಾನಗಳಿಂದ ನೈಜ ತತ್ತ್ವಶಾಸ್ತ್ರದಿಂದ ಬೇರ್ಪಟ್ಟಿರುವ ಇತರ ವಿಜ್ಞಾನಗಳಲ್ಲಿ ಕೆಲಸ ಮಾಡಿರುವ ವ್ಯಕ್ತಿಯೂ ಆಗಿರಬಹುದು, ಉದಾಹರಣೆಗೆ ಕಲೆಗಳು, ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಮನಶ್ಶಾಸ್ತ್ರ, ಭಾಷಾ ವಿಜ್ಞಾನ, ಮಾನವಶಾಸ್ತ್ರ, ದೇವತಾಶಾಸ್ತ್ರ, ಮತ್ತು ರಾಜನೀತಿ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜಾಕಿ ಚಾನ್ , SBS, MBE (ಹುಟ್ಟಿದಾಗ ಇಟ್ಟ ಹೆಸರು ಚಾನ್ ಕಾಂಗ್ ಸ್ಯಾಂಗ್ , 陳港生; ಹುಟ್ಟಿದ್ದು 1954ರ ಏಪ್ರಿಲ್ 7ರಂದು) ಓರ್ವ ಹಾಂಗ್ ಕಾಂಗ್ ಮೂಲದ ನಟ, ಚಲನಾ ನೃತ್ಯ ಸಂಯೋಜಕ, ಚಲನಚಿತ್ರೋದ್ಯಮಿ, ಹಾಸ್ಯನಟ, ನಿರ್ಮಾಪಕ, ಕದನ ಕಲೆಯ ಕಲಾವಿದ, ಚಿತ್ರಕಥಾ ಲೇಖಕ, ವಾಣಿಜ್ಯೋದ್ಯಮಿ, ಗಾಯಕ ಮತ್ತು ಸಾಹಸ ಪ್ರದರ್ಶನ ನಿರ್ವಾಹಕನಾಗಿದ್ದಾನೆ. ಆತನ ಚಲನಚಿತ್ರಗಳಲ್ಲಿನ, ಆತನ ದೊಂಬರಾಟದಂಥ ಹೊಡೆದಾಟದ ಶೈಲಿ, ಕಾಲೋಚಿತವಾಗಿ ನಗೆಯುಕ್ಕಿಸುವ ಸಾಮರ್ಥ್ಯ, ಸುಧಾರಿತ ಶಸ್ತ್ರಾಸ್ತ್ರಗಳು ಹಾಗೂ ನಾವೀನ್ಯತೆಯ ಸಾಹಸ ಪ್ರದರ್ಶನಗಳ ಬಳಕೆಗೆ ಆತ ಖ್ಯಾತಿಯನ್ನು ಪಡೆದಿದ್ದಾನೆ. 1970ರ ದಶಕದಿಂದಲೂ ಜಾಕಿ ಚಾನ್ ಅಭಿನಯಿಸುತ್ತಾ ಬಂದಿದ್ದು, ಇದುವರೆಗೂ 100 ಹೆಚ್ಚಿನ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾನೆ.
ಜಾನ್ ಫಿಟ್ಜ್ ಜೆರಾಲ್ಡ್ ಕೆನಡಿ (ಮೇ ೨೯,೧೯೧೭ - ನವೆಂಬರ್ ೨೨, ೧೯೬೩) ಅಮೆರಿಕಾ ಸಂಯುಕ್ತ ಸಂಸ್ಥಾನದ ೩೫ ನೇ ರಾಷ್ಟ್ರಪತಿಗಳಾಗಿ ೧೯೬೧ ರಲ್ಲಿ ಅಧಿಕಾರಕ್ಕೇರಿದ್ದರು. ಅಮೆರಿಕಾ ಸಂಯುಕ್ತ ಸಂಸ್ಥಾನದ ರಾಜಕೀಯ ರಂಗದಲ್ಲಿ ಜೆ.ಎಫ್.ಕೆ ಅಥವಾ ಜಾಕ್ ಎಂದೇ ಪ್ರಸಿದ್ಧರಾಗಿದ್ದ ಕೆನಡಿಯವರು ೧೯೬೩ರ ನವೆಂಬರ್ ೨೨ ರಂದು ಡಲ್ಲಾಸ್ ನಲ್ಲಿ ಕಾರಿನ ರ್ಯಾಲಿಯಲ್ಲಿ ಪಾಲ್ಗೊಂಡು ಜನರತ್ತ ಕೈ ಬೀಸುತ್ತಾ ಸಾಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆ ಮಾಡಲಾಯಿತು. ಆಗಿನ ಸೋವಿಯತ್ ಒಕ್ಕೂಟದ ಶೀತಲ ಸಮರ ಹಾಗು ಕ್ಯೂಬಾ ಕ್ಷಿಪಣಿ ಬಿಕ್ಕಟ್ಟಿನ ಸಂದರ್ಭದಲ್ಲಿ ಯು.ಎಸ್.ಎ ಬಣದಲ್ಲಿ ಮುಖ್ಯ ಪಾತ್ರ ವಹಿಸಿದ್ದ ಕೆನಡಿ ಅಮೆರಿಕಾ ಸಂಯುಕ್ತ ಸಂಸ್ಥಾನಗಳ ಉದಾರವಾದದಲ್ಲಿಯೂ ಮಹತ್ತರ ಪಾತ್ರ ವಹಿಸಿದ್ದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಆರ್ಥಿಕತೆಯ ಎಲ್ಲ ವಲಯಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸಿದಾಗ ಕೈಗಾರಿಕೆಗಳು 'ದ್ವಿತೀಯ' ವಲಯ (Secondary Sector) ಎನ್ನಿಸಿಕೊಂಡಿದೆ. ಕೈಗಾರಿಕೆಗಳು ಒಂದು ದೇಶದ ಮೂಳೆಗಳಿದ್ದಂತೆ. ಮಾನವ ದೇಹಕ್ಕೆ ಪೂರ್ಣ ಚೈತನ್ಯವನ್ನು ಒದಗಿಸಲು ಮೂಳೆಗಳು ಹೇಗೆ ಅವಶ್ಯಕವೋ ಹಾಗೆಯೇ ಆರ್ಥಿಕತೆಗೆ ಚೇತನ ನೀಡಿ ದೀರ್ಘಕಾಲೀನ ಅಭಿವೃದ್ಢಿ ಸಾಧನೆಗೆ ನೆರವಾಗಲು ಕೈಗಾರಿಕೆಗಳು ಅತ್ಯಂತ ಆವಶ್ಯಕ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .