The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಕರ್ನಾಟಕ ಲೋಕೋಪಯೋಗಿ ಇಲಾಖೆ (ಇದನ್ನು ಕರ್ನಾಟಕ ಲೋಕೋಪಯೋಗಿ, ಬಂದರುಗಳು ಮತ್ತು ಒಳನಾಡಿನ ಜಲ ಸಾರಿಗೆ ಇಲಾಖೆ ಅಥವಾ ಕೆಪಿಡಬ್ಲ್ಯುಡಿ ಎಂದೂ ಕರೆಯುತ್ತಾರೆ ) ಕರ್ನಾಟಕ ಸರ್ಕಾರಿ ಸಂಸ್ಥೆಯಾಗಿದ್ದು, ಭಾರತದ ಕರ್ನಾಟಕ ರಾಜ್ಯದಲ್ಲಿನ ಲೋಕೋಪಯೋಗಿ ಕಾರ್ಯಗಳ ಉಸ್ತುವಾರಿ ವಹಿಸಿಕೊಂಡಿದೆ. ಕರ್ನಾಟಕದ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ಕಟ್ಟಡಗಳ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಮತ್ತು ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಮತ್ತು ಪ್ರಮುಖ ಜಿಲ್ಲಾ ರಸ್ತೆಗಳು ಸೇರಿದಂತೆ ರಸ್ತೆ ಕಾಮಗಾರಿಗಳ ನಿರ್ವಹಣೆಯನ್ನು ಇದು ವಹಿಸಿಕೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ನಗರವು ತುಲನಾತ್ಮಕವಾಗಿ ಒಂದು ದೊಡ್ಡ ಮತ್ತು ಶಾಶ್ವತವಾದ ವಾಸಸ್ಥಳ. ಒಂದು ನಗರವನ್ನು ಒಂದು ಪಟ್ಟಣದಿಂದ ಭೇದ ಮಾಡುವ ಯಾವುದೇ ಅಂಗೀಕೃತ ಅಥವಾ ಪಾರಿಭಾಷಿಕ ವ್ಯಾಖ್ಯಾನಗಳಿಲ್ಲವಾದರೂ, ಹಲವು ನಗರಗಳು ಸ್ಥಳೀಯ ಕಾನೂನಿನ ಮೇಲೆ ಆಧಾರಿತವಾದ ಒಂದು ವಿಶಿಷ್ಟ ಆಡಳಿತಾತ್ಮಕ, ಕಾನೂನುಬದ್ಧ, ಅಥವಾ ಐತಿಹಾಸಿಕ ಮಾನ್ಯತೆಯನ್ನು ಹೊಂದಿರುತ್ತವೆ —ಉದಾಹರಣೆಗೆ ಮ್ಯಾಸಚೂಸಿಟ್ಸ್ನಲ್ಲಿ ಸ್ಥಳೀಯ ಗುರುತಿನ (ರಾಜ್ಯ) ಶಾಸಕಾಂಗದಿಂದ ಅನುಮೋದನೆಗೊಂಡ ಏಕೀಕರಣದ ಒಂದು ನಿಯಮವು ಪಟ್ಟಣಗಳನ್ನು ನಗರ ಸರ್ಕಾರದ ಪ್ರಕಾರಗಳು, ಹಕ್ಕುಗಳು, ಕರ್ತವ್ಯಗಳು ಮತ್ತು ಸವಲತ್ತುಗಳಿಂದ ಬೇರ್ಪಡಿಸುತ್ತವೆ —ಇದೇ ವಿಧದ ವ್ಯತ್ಯಾಸಗಳನ್ನು ವಿಶ್ವಾದ್ಯಂತ ಮಾಡಲಾಗುತ್ತದೆ, ವಿಶೇಷವಾಗಿ ಬ್ರಿಟನ್ನ ಹಿಂದಿನ ವಸಾಹತುಗಳಲ್ಲಿ. ಐತಿಹಾಸಕವಾಗಿ, ಯೂರಪ್ನಲ್ಲಿ, ನಗರವು ಒಂದು ಕಥೀಡ್ರಲ್ಅನ್ನು ಹೊಂದಿದ ವಾಸಸ್ಥಳವೆಂದು ತಿಳಿಯಲಾಗಿತ್ತು; ನಂತರದ ಬಳಕೆಗಳಲ್ಲಿ, ವಿಶೇಷವಾಗಿ ಬ್ರಿಟನ್ ಮತ್ತು ಕಾಮನ್ವೆಲ್ತ್ ಒಕ್ಕೂಟದ ಭಾಗಗಳಲ್ಲಿ, ನಗರವು ರಾಜಶಾಸನವನ್ನು ಹೊಂದಿದ ಒಂದು ವಾಸಸ್ಥಳ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ಸಂಸದ್ ಭವನ (ಸಂಸತ್ತಿನ ಕಟ್ಟಡ) ಭಾರತದ ಸಂಸತ್ತಿನ ಸ್ಥಾನವಾಗಿದೆ. ರಾಷ್ಟ್ರಪತಿ ಭವನದಿಂದ 750 ಮೀಟರ್ ದೂರದಲ್ಲಿ, ಇದು ಮಧ್ಯ ವಿಸ್ಟಾವನ್ನು ದಾಟಿದ ಸಂಸದ್ ಮಾರ್ಗದಲ್ಲಿದೆ; ಇದರ ಸುತ್ತಲೂ ಇಂಡಿಯಾ ಗೇಟ್, ಯುದ್ಧ ಸ್ಮಾರಕ, ಪ್ರಧಾನ ಮಂತ್ರಿ ಕಚೇರಿ ಮತ್ತು ನಿವಾಸ, ಮಂತ್ರಿ ಕಟ್ಟಡಗಳು ಮತ್ತು ಭಾರತೀಯ ಸರ್ಕಾರದ ಇತರ ಆಡಳಿತ ಘಟಕಗಳಿವೆ. ಇದು ಲೋಕಸಭೆ ಮತ್ತು ರಾಜ್ಯಸಭೆಯನ್ನು ಹೊಂದಿದ್ದು, ಇದು ಭಾರತದ ದ್ವಿಪಕ್ಷೀಯ ಸಂಸತ್ತಿನಲ್ಲಿ ಕ್ರಮವಾಗಿ ಕೆಳ ಮತ್ತು ಮೇಲ್ಮನೆಗಳನ್ನು ಪ್ರತಿನಿಧಿಸುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿರುವ ವಿಮರ್ಶಕರಾದ ಗೋವಿಂದರಾಯ ಹಮ್ಮಣ್ಣ ನಾಯಕ . ಅವರು ೧೯೩೫ ಸೆಪ್ಟಂಬರ ೧೮ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಜೀವನದಲ್ಲಿರುವ ಇವರು ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದ ನಾಯಕರು ದಿನಾಂಕ ೨೬ ಮೇ ೨೦೨೩ರಂದು ನಿಧನ ಹೊಂದಿದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಶ್ಯಾಮನೂರ್ ಶಿವಶಂಕರಪ್ಪರವರು ೧೬ ಜೂನ್ ೧೯೩೧ರಂದು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರ ಹೆಂಡತಿ ಎಸ್ ಎಸ್ ಪಾರ್ವತಮ್ಮ, ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯ ದಕ್ಶಿಣ ಭಾಗದಿಂದ ಚುನಾವಣೆಯಲ್ಲಿ ಕಳೆದ ಸುಮಾರು ೧೦ ವರ್ಷಗಳಿಂದ ಸ್ಪರ್ಧಿಸುತ್ತಿದ್ದಾರೆ. ಶಿವಶಂಕರಪ್ಪನವರು ಕಳೆದ ೩ ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೈತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಕರ್ನಾಟಕ ರಾಜ್ಯ ಸರ್ಕಾರವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಯಾಗಿದ್ದು, ರಾಜ್ಯಪಾಲರು ಸಾಂವಿಧಾನಿಕ ಮುಖ್ಯಸ್ಥರಾಗಿರುತ್ತಾರೆ. ಐದು ವರ್ಷಗಳ ಕಾಲ ನೇಮಕಗೊಳ್ಳುವ ರಾಜ್ಯಪಾಲರು ಮುಖ್ಯಮಂತ್ರಿಯನ್ನು ನೇಮಿಸುತ್ತಾರೆ ಮತ್ತು ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ ಅವರ ಮಂತ್ರಿ ಮಂಡಳಿಯನ್ನು ನೇಮಿಸುತ್ತಾರೆ. ರಾಜ್ಯಪಾಲರು ರಾಜ್ಯದ ವಿಧ್ಯುಕ್ತ ಮುಖ್ಯಸ್ಥರಾಗಿ ಉಳಿದಿದ್ದರೂ ಸಹ, ಸರ್ಕಾರದ ದಿನನಿತ್ಯದ ಓಟವನ್ನು ಮುಖ್ಯಮಂತ್ರಿ ಮತ್ತು ಅವರ ಮಂತ್ರಿ ಮಂಡಳಿಯು ನೋಡಿಕೊಳ್ಳುತ್ತದೆ, ಇದರಲ್ಲಿ ಹೆಚ್ಚಿನ ಪ್ರಮಾಣದ ಶಾಸಕಾಂಗ ಅಧಿಕಾರಗಳನ್ನು ನೀಡಲಾಗುತ್ತದೆ.
ಜಲಾನಯನ ಪ್ರದೇಶವು ಅವಕ್ಷೇಪನ ಸಂಗ್ರಹಗೊಂಡು ನದಿ, ಕೊಲ್ಲಿ, ಅಥವಾ ಬೇರೆ ಜಲಸಮೂಹದಂತಹ ಸಾಮಾನ್ಯ ಹೊರಗುಂಡಿಯೊಳಗೆ ಹರಿದು ಹೋಗುವ ಯಾವುದೇ ಭೂಪ್ರದೇಶ. ಜಲಾನಯನ ಪ್ರದೇಶವು ಹಂಚಿಕೊಂಡ ಹೊರಗುಂಡಿಯ ಕಡೆಗೆ ಇಳಿಜಾರಿನಲ್ಲಿ ಚಲಿಸುವ ಹರಿದು ಹೋಗುವ ಮಳೆನೀರು, ಹಿಮಕರಗುವಿಕೆ, ಮತ್ತು ಹತ್ತಿರದ ಹೊಳೆಗಳಿಂದ ಮೇಲ್ಮೈ ನೀರನ್ನು, ಜೊತೆಗೆ ಭೂಮಿಯ ಮೇಲ್ಮೈ ಕೆಳಗಿನ ಅಂತರ್ಜಲವನ್ನು ಒಳಗೊಂಡಿರುತ್ತದೆ. ಜಲಾನಯನ ಪ್ರದೇಶಗಳು ಕ್ರಮಾನುಗತ ಮಾದರಿಯಲ್ಲಿ ಕಡಿಮೆ ಎತ್ತರದಲ್ಲಿನ ಇತರ ಜಲಾನಯನ ಪ್ರದೇಶಗಳನ್ನು ಕೂಡುತ್ತವೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ವಸ್ತುಸಂಗ್ರಹಾಲಯವು ಸಾಂಸ್ಕೃತಿಕ, ವೈಜ್ಞಾನಿಕ, ಚಾರಿತ್ರಿಕ ಅಥವಾ ಆಲಂಕಾರಿಕ ಮೌಲ್ಯವುಳ್ಳ ವಸ್ತುಗಳನ್ನು ಸಂಗ್ರಹಿಸುವ, ರಕ್ಷಿಸುವ, ಅಧ್ಯಯನ ಮಾಡುವ, ಪ್ರದರ್ಶಿಸುವ ಮತ್ತು ಶೈಕ್ಷಣಿಕ ಉಪಯೋಗಕ್ಕೆ ಒದಗಿಸುವ ಒಂದು ಸಂಸ್ಥೆ (ಮ್ಯೂಸಿಯಮ್). ವಸ್ತುಗಳನ್ನು ಸಂಗ್ರಹಿಸುವ ಮಾನವನ ಆಸಕ್ತಿ ಅವನಷ್ಟೇ ಪ್ರಾಚೀನ. ವಸ್ತುಸಂಗ್ರಹಾಲಯ ಎಂಬ ಪದವನ್ನು ಇಂಗ್ಲಿಷಿನ ಮ್ಯೂಸಿಯಮ್ ಎಂಬುದಕ್ಕೆ ಸಂವಾದಿಯಾಗಿ ಬಳಸಲಾಗುತ್ತದೆ.
ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ ...
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಇಂಗ್ಲೀಷ್ ಫುಟ್ಬಾಲ್ ಕ್ಲಬ್ ಆಗಿದೆ. ಇದರ ಮೂಲವು ಗ್ರೇಟರ್ ಮ್ಯಾಂಚೆಸ್ಟರ್ನ ಟ್ರ್ಯಾಫೋರ್ಡ್ನಲ್ಲಿನ ಓಲ್ಡ್ ಟ್ರ್ಯಾಫೋರ್ಡ್ನಲ್ಲಿದೆ ಮತ್ತು ಇದು ವಿಶ್ವದ ಜನಪ್ರಿಯ ಫುಟ್ಬಾಲ್ ಕ್ಲಬ್ಗಳಲ್ಲಿ ಒಂದಾಗಿದೆ. ಈ ಕ್ಲಬ್ ೧೯೯೨ರಲ್ಲಿ ಸ್ಥಾಪಿತವಾದ ಪ್ರೀಮಿಯರ್ ಲೀಗ್ನ ಸ್ಥಾಪಕ ಸದಸ್ಯವಾಗಿರುವುದರೊಂದಿಗೆ ೧೯೭೪–೭೫ರ ನಡುವಿನ ಕ್ರೀಡಾಋತುವನ್ನು ಹೊರತುಪಡಿಸಿ, ೧೯೩೮ರಿಂದ ಇಂಗ್ಲೀಷ್ ಫುಟ್ಬಾಲ್ನ ಅಗ್ರಶ್ರೇಣಿಯಲ್ಲಿ ಆಡಿತ್ತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜೋಹಾನ್ ಫಿಲಿಪ್ ಕಿರ್ನ್ಬರ್ಗರ್ ( ಕೆರ್ನ್ಬರ್ಗ್ ; ೨೪ ಏಪ್ರಿಲ್ ೧೭೨೧, ಸಾಲ್ಫೆಲ್ಡ್ - ೨೭ ಜುಲೈ ೧೭೮೩, ಬರ್ಲಿನ್ ) ಒಬ್ಬ ಸಂಗೀತಗಾರ, ಸಂಯೋಜಕ (ಪ್ರಾಥಮಿಕವಾಗಿ ಫ್ಯೂಗ್ಸ್ ) ಮತ್ತು ಸಂಗೀತ ಸಿದ್ಧಾಂತಿ . ಅವರು ಜೋಹಾನ್ ಸೆಬಾಸ್ಟಿಯನ್ ಬ್ಯಾಚ್ ಅವರ ವಿದ್ಯಾರ್ಥಿಯಾಗಿದ್ದರು. ಇಂಗೆಬೋರ್ಗ್ ಅಲಿಹ್ನ್ ಪ್ರಕಾರ, ೧೮ ನೇ ಶತಮಾನದ ಮಧ್ಯದಲ್ಲಿ ಜರ್ಮನಿ ಮತ್ತು ಪೋಲೆಂಡ್ ನಡುವಿನ ಬೌದ್ಧಿಕ ಮತ್ತು ಸಾಂಸ್ಕೃತಿಕ ವಿನಿಮಯದಲ್ಲಿ ಕಿರ್ನ್ಬರ್ಗರ್ ಮಹತ್ವದ ಪಾತ್ರವನ್ನು ವಹಿಸಿದರು (ಅಲಿಹ್ನ್ ೧೯೯೫, ೨೦೯).
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಗಣಿತದಲ್ಲಿ, ಪ್ರಮೇಯ ಎಂದರೆ ಸಾಮಾನ್ಯವಾಗಿ ಒಪ್ಪಿಕೊಳ್ಳಲಾದ ಆಧಾರಸೂತ್ರಗಳಂತಹ ಉಕ್ತಿಗಳ ಆಧಾರದ ಮೇಲೆ ಅಥವಾ ಇತರ ಪ್ರಮೇಯಗಳಂತಹ ಪೂರ್ವದಲ್ಲಿ ಸ್ಥಾಪಿತವಾದ ಉಕ್ತಿಗಳ ಆಧಾರದ ಮೇಲೆ ಸತ್ಯವೆಂದು ಸಾಬೀತಾಗಿರುವ ಸ್ವಯಂ-ಸ್ಪಷ್ಟವಲ್ಲದ ಉಕ್ತಿ. ಹಾಗಾಗಿ ಪ್ರಮೇಯವು ಆಧಾರಸೂತ್ರಗಳ ತಾರ್ಕಿಕ ಪರಿಣಾಮವಾಗಿರುತ್ತದೆ, ಮತ್ತು ಪ್ರಮೇಯದ ನಿಗಮನ ಪ್ರಕ್ರಿಯೆಯು ನಿಗಮನ ಪದ್ಧತಿಯ ನಿರ್ಣಯದ ನಿಯಮಗಳ ಮೂಲಕ ಸತ್ಯವನ್ನು ಪ್ರಮಾಣೀಕರಿಸುವ ತಾರ್ಕಿಕ ಸಮರ್ಥನೆಯಾಗಿರುತ್ತದೆ. ಪರಿಣಾಮವಾಗಿ, ಒಂದು ಪ್ರಮೇಯದ ನಿಗಮನ ಪ್ರಕ್ರಿಯೆಯನ್ನು ಹಲವುವೇಳೆ ಪ್ರಮೇಯ ಉಕ್ತಿಯ ಸತ್ಯದ ಸಮರ್ಥನೆ ಎಂದು ಅರ್ಥಮಾಡಿಕೊಳ್ಳಲಾಗುತ್ತದೆ.
ಮಫ್ತಿ ೨೦೧೭ರ ಕನ್ನಡ ಭಾಷೆಯ ಆಕ್ಷನ್ ಕ್ರೈಮ್ ಥ್ರಿಲ್ಲರ್ ಚಿತ್ರ. ನಾರ್ಥನ್ ರವರು ನಿರ್ದೇಶಿರುವ ಮೊದಲ ಚಿತ್ರ ಇದಾಗಿದೆ, ಜಯಣ್ಣ ಕಂಬೈನ್ಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರವು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿರುವ ಶ್ರೀಮುರುಳಿಯು ಭೂಗತ ದೊರೆ ಪಾತ್ರದಲ್ಲಿ ನಟಿಸಿರುವ ಶಿವರಾಜಕುಮಾರ್ ಅವರನ್ನು ಹುಡುಕಿಕೊಂಡು ಹೋಗುವ ಕಥೆಯಾಗಿದೆ.ಜುಲೈ ೨೦೧೬ ರಲ್ಲಿ ಚಿತ್ರದ ನಿರ್ಮಾಣ ಪ್ರಾರಂಭವಾಯಿತು ಮತ್ತು ೧ ಡಿಸೆಂಬರ್ ೨೦೧೭ ರಂದು ಚಿತ್ರ ಬಿಡುಗಡೆಯಾಯಿತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಸ್ವಿಟ್ಜರ್ಲೆಂಡ್ (German: [die Schweiz] Error: {{Lang}}: text has italic markup (help) French: la Suisse, ಇಟಾಲಿಯನ್:Svizzera, Romansh: [Svizra] Error: {{Lang}}: text has italic markup (help)), ಅಧಿಕೃತವಾಗಿ ಸ್ವಿಸ್ ಒಕ್ಕೂಟ (ಲ್ಯಾಟಿನ್ನಲ್ಲಿ ಕಾನ್ಪೊಡೆರೇಷ್ಯೋ ಹೆಲ್ವೆಟಿಕಾ, ಆದ್ದರಿಂದ ಇದರ ISO ರಾಷ್ಟ್ರ ಸಂಕೇತಗಳಾಗಿ CH ಮತ್ತು CHEಯನ್ನು ನಿಗದಿಪಡಿಸಲಾಗಿದೆ), ಸುತ್ತಲೂ ಭೂಪ್ರದೇಶದಿಂದ ಆವೃತವಾದ ಪರ್ವತ ಪ್ರದೇಶ ಸುಮಾರು 7.7 ದಶಲಕ್ಷ ಜನಸಂಖ್ಯೆ(2009ರಲ್ಲಿ)ಯನ್ನು ಹೊಂದಿರುವ 41,285 km²ನಷ್ಟು ವಿಸ್ತೀರ್ಣವಿರುವ ಪಶ್ಚಿಮ ಯೂರೋಪ್ನ ರಾಷ್ಟ್ರವಾಗಿದೆ. ಸ್ವಿಟ್ಜರ್ಲೆಂಡ್ ಕ್ಯಾಂಟನ್ಗಳೆಂದು ಕರೆಯಲಾಗುವ 26 ರಾಜ್ಯಗಳನ್ನು ಹೊಂದಿರುವ ಸಂಯುಕ್ತ ಗಣರಾಜ್ಯವಾಗಿದೆ. ಬರ್ನ್ ರಾಜ್ಯಾಡಳಿತದ ಅಧಿಕಾರ ಕೇಂದ್ರವಾಗಿದ್ದರೆ, ಇದರ ಎರಡು ಜಾಗತಿಕ ಮಹಾನಗರಗಳಾದ ಜಿನೀವಾ ಮತ್ತು ಜ್ಯೂರಿಚ್ಗಳು ರಾಷ್ಟ್ರದ ಆರ್ಥಿಕ ಕೇಂದ್ರಗಳಾಗಿವೆ.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಗೃಹ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳು
ಯಾವುದೇ ಒಂದು ದೇಶದ ಆರ್ಥಿಕ ಅಭಿವೃದ್ದಿಯಲ್ಲಿ ಕೃಷಿ ಮತ್ತು ಕೈಗಾರಿಕೆಗಳು ಪ್ರಧಾನಪಾತ್ರವನ್ನು ವಹಿಸುತ್ತವೆ. ಹಲವಾರು ಕೈಗಾರಿಕೆಗಳು ಕೃಷಿಯನ್ನಾಧರಿಸಿವೆ. ಉದಾ.ಹತ್ತಿಬಟ್ಟೆ , ಕಾಗದ, ಸಕ್ಕರೆ, ಸಣಬು, ತಂಬಾಕು ಮುಂತಾದವು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.