The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಹೊಸದಿಲ್ಲಿಯ ರಾಜಪಥ್ನಲ್ಲಿ ನೆಡೆಸಲು ಭಾರತ ಸರಕಾರ ಕಾರ್ಯಕ್ರಮ ರೂಪಿಸಿತ್ತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ಅಡಾಲ್ಫ್ ಹಿಟ್ಲರ್ , (೨೦ ಏಪ್ರಿಲ್ ೧೮೮೯ - ೩೦ ಏಪ್ರಿಲ್ ೧೯೪೫) ಆಸ್ಟ್ರಿಯಾದಲ್ಲಿ ಜನಿಸಿದ ಜರ್ಮನ್ ರಾಜಕಾರಣಿ ಹಾಗೂ ನಾಜಿ ಪಕ್ಷವೆಂದೇ ಖ್ಯಾತವಾದ ನ್ಯಾಶನಲ್ ಸೋಶಿಯಲಿಸ್ಟ್ ಜರ್ಮನ್ ವರ್ಕರ್ಸ್ ಪಾರ್ಟಿಯ (ಸಂಕ್ಷಿಪ್ತ ರೂಪ NSDAP) ನೇತಾರನಾಗಿದ್ದವನು. ಈತನು ೧೯೩೩ರಿಂದ ೧೯೪೫ರ ವರೆಗೆ ಜರ್ಮನಿಯನ್ನು ಆಳಿದನು. ೧೯೩೩ರಿಂದ ೧೯೪೫ರವರೆಗೆ ಚಾನ್ಸೆಲರ್ ಆಗಿ ಹಾಗೂ ೧೯೩೪ರಿಂದ ೧೯೪೫ರವರೆಗೆ ರಾಷ್ಟ್ರದ ಮುಖ್ಯಸ್ಥನಾಗಿ ಆಡಳಿತ ನಡೆಸಿದನು.
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಫ್ರಾನ್ಸ್ ಪಶ್ಚಿಮ ಯೂರೋಪಿನಲ್ಲಿರುವ ದೇಶ.ಇದು ಯುರೋಪ್ ಖಂಡದ ಮೂರನೆಯ ಅತ್ಯಂತ ದೊಡ್ಡ ದೇಶ.ಇದು ಯುರೋಪಿನ ಒಂದು ಬಲಾಡ್ಯ ದೇಶವಾಗಿದೆ.ಇದು ಪ್ರಪಂಚದ ಹಲವೆಡೆ ತನ್ನ ವಸಾಹತುಗಳನ್ನು ಸ್ಥಾಪಿಸಿ ಹತ್ತಂಭತ್ತನೆಯ ಶತಮಾನ ಮತ್ತು ೨೦ನೆಯ ಶತಮಾನದ ಮೊದಲ ಭಾಗದಲ್ಲಿ ಅತ್ಯಂತ ಪ್ರಭಾವಶಾಲಿಯಾಗಿತ್ತು.ಸಾಂಸ್ಕೃತಿಕವಾಗಿ ಹಲವಾರು ಚಿಂತಕರು, ಕಲಾವಿದರು,ವಿಜ್ಞಾನಿಗಳನ್ನು ಹೊಂದಿ ಈಗಲೂ ಪ್ರಪಂಚದ ಗಮನಸೆಳೆಯುತ್ತಿದೆ. ಪ್ರಪಂಚದಲ್ಲಿ ನಾಲ್ಕನೆಯದಾಗಿ ಅತೀ ಹೆಚ್ಚು ಪಾರಂಪರಿಕ ತಾಣಗಳಿದ್ದು, ವರ್ಷಕ್ಕೆ ೮ ಕೊಟಿಗಿಂತಲೂ ಹೆಚ್ಚು ಪ್ರವಾಸಿಗಳನ್ನು ಸೆಳೆಯುತ್ತಿದೆ. ಫ್ರಾನ್ಸ್ ಅಧಿಕೃತವಾಗಿ ರೇಪಬ್ಲೀಕ್ ಫ್ರಾನ್ಸೇಸ್.
ಭಾರತೀಯ ಧರ್ಮಗಳು, ದಕ್ಷಿಣ ಏಷ್ಯಾದ ಧರ್ಮಗಳು ಅಥವಾ ಧರ್ಮ ಧರ್ಮಗಳು ಪ್ರಪಂಚದ ಅನೇಕ ಧರ್ಮಗಳ ಮೂಲವಾಗಿ ಭಾರತೀಯ ಉಪಖಂಡದಲ್ಲಿ ಹುಟ್ಟಿಕೊಂಡ ಧರ್ಮಗಳು ಮತ್ತು ಧರ್ಮವನ್ನು ಆಧರಿಸಿವೆ. ಭಾರತೀಯ ಉಪಖಂಡದಲ್ಲಿ, ಹಿಂದೂ ( ಶೈವ ಧರ್ಮ, ವೈಷ್ಣವ ಧರ್ಮ, ಚಾಕ್ತಂ ), ಜೈನ ಧರ್ಮ, ಬೌದ್ಧ ಧರ್ಮ, ಸಿಖ್ ಧರ್ಮ, ಅಯ್ಯವಾಝಿ ವಿವಿಧ ಕಾಲಘಟ್ಟಗಳಲ್ಲಿ ಧರ್ಮಗಳು ಕಾಣಿಸಿಕೊಂಡು ಪ್ರಪಂಚದಾದ್ಯಂತ ಕಾಲಾನಂತರದಲ್ಲಿ ಹರಡಿತು. ಸಾಮಾನ್ಯವಾಗಿ ಇವೆಲ್ಲವೂ ಅನೇಕ ಧರ್ಮಗಳು ಮತ್ತು ಪಂಗಡಗಳೊಂದಿಗೆ ಒಂದೇ ಧರ್ಮವೆಂದು ಪರಿಗಣಿಸಲಾಗುತ್ತದೆ.