The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ರುಮಾಲು ಬಟ್ಟೆಯ ಸುತ್ತುವಿಕೆಯನ್ನು ಆಧರಿಸಿದ ಒಂದು ಬಗೆಯ ತಲೆಯುಡುಗೆ. ಅನೇಕ ಸ್ವರೂಪಗಳನ್ನು ಹೊಂದಿರುವ ಇದನ್ನು ವಿವಿಧ ದೇಶಗಳ ಪುರುಷರು ಸಾಂಪ್ರದಾಯಿಕ ತಲೆಯುಡುಗೆಯಾಗಿ ಧರಿಸುತ್ತಾರೆ. ರುಮಾಲು ಧರಿಸುವ ಮಹತ್ವದ ಸಂಪ್ರದಾಯಗಳನ್ನು ಹೊಂದಿರುವ ಸಮುದಾಯಗಳನ್ನು ಭಾರತೀಯ ಉಪಖಂಡ, ಅಫ಼್ಘಾನಿಸ್ತಾನ, ಆಗ್ನೇಯ ಏಷ್ಯಾ, ಅರಬ್ಬೀ ಪರ್ಯಾಯದ್ವೀಪ, ಮಧ್ಯಪ್ರಾಚ್ಯ, ನಿಕಟಪ್ರಾಚ್ಯ, ಮಧ್ಯ ಏಷ್ಯಾ, ಉತ್ತರ ಆಫ಼್ರಿಕಾ, ಆಫ಼್ರಿಕಾದ ಕೊಂಬು, ಉತ್ತರ ಅಮೇರಿಕಾ, ಮತ್ತು ಸ್ವಾಹಿಲಿ ಕರಾವಳಿಯ ಭಾಗಗಳಲ್ಲಿ ಕಾಣಬಹುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಟೈಟಾನಿಕ್ - ೧೯೧೨ರಲ್ಲಿ ಇಂಗ್ಲೆಂಡಿನ ಸೌತ್ಹ್ಯಾಂಪ್ಟನ್ನಿಂದ ಅಮೆರಿಕಾದ ನ್ಯೂಯಾರ್ಕ್ಗೆ ಹೊರಟು, ತನ್ನ ಮೊದಲ ಯಾನದಲ್ಲೇ ಅಪಘಾತಕ್ಕೀಡಾಗಿ ಮುಳುಗಿಹೋದ ಬೃಹತ್ ಹಡಗು. 'ಮುಳುಗಲಾರದ ಹಡಗು' ಎಂದು ಭಾರೀ ಪ್ರಚಾರ ಪಡೆದು ವಿಶ್ವಪ್ರಖ್ಯಾತವಾಗಿದ್ದ ಟೈಟಾನಿಕ್ನ ದಾರುಣ ಅಂತ್ಯ ಮಾನವ ಇತಿಹಾಸದ ಅತ್ಯಂತ ಭೀಕರ ದುರ್ಘಟನೆಗಳಲ್ಲೊಂದು. 'ವೈಟ್ ಸ್ಟಾರ್ ಲೈನ್' ಎಂಬ ಸಾರಿಗೆ ಸಂಸ್ಥೆಯ ಒಡೆತನದಲ್ಲಿದ್ದ ಟೈಟಾನಿಕ್ ಅನ್ನು ಬೆಲ್ಫಾಸ್ಟ್ನ ಹಾರ್ಲಂಡ್ ಅಂಡ್ ವುಲ್ಫ್ ಎಂಬ ಸಂಸ್ಥೆ ನಿರ್ಮಿಸಿತ್ತು.
ಭೂಮಿಯ ವಾತಾವರಣ ಅಥವಾ ವಾಯುಮಂಡಲವು, ಭೂಮಿಯು ತನ್ನ ಸುತ್ತಲೂ ಗುರುತ್ವಾಕರ್ಷಣೆಯಿಂದ ಸೆಳೆದಿಟ್ಟಿರುವ ಅನಿಲಗಳ ವಿಶಾಲ ಆವರಣ.ಭೂಮಿಯ ವಾತಾವರಣವು ಸೂರ್ಯನ ಅತಿನೇರಳೆ ಕಿರಣಗಳನ್ನು ಹೀರಿಕೊಳ್ಳುವುದರಿಂದಲೂ,ಸೂರ್ಯನಿಂದ ಬರುವ ಉಷ್ಣತೆಯನ್ನು ಉಳಿಸಿಕೊಂಡು(ಹಸಿರುಮನೆ ವಿದ್ಯಮಾನ ಅಥವಾ ಗ್ರೀನ್ ಹೌಸ್ ಎಫೆಕ್ಟ್)ಭೂಮಿಯ ಮೇಲ್ಮೈಯನ್ನು ಬೆಚ್ಚಗಿಡುವುದರಿಂದಲೂ ಮತ್ತು ಹಗಲು, ರಾತ್ರಿಗಳಲ್ಲಿ ತಾಪಮಾನವು ತೀರಾ ಏರಿಳಿಕೆಯಾಗದಂತೆ ನಿಯಂತ್ರಿಸುವುದರಿಂದಲೂ ಭೂಮಿಯ ಜೀವರಾಶಿಗಳನ್ನು ರಕ್ಷಿಸುತ್ತದೆ. ಭೂಮಿಯ ವಾತಾವರಣದ ತೂಕವು ಸುಮಾರು ಐದು ಕ್ವಾಡ್ರಿಲಿಯನ್ (೫೦೦೦೦೦೦೦೦೦೦೦೦೦೦)ಟನ್ ಗಳಷ್ಟು. ಈ ತೂಕದ ಮುಕ್ಕಾಲು ಭಾಗದಷ್ಟು ಭಾರವು ಭೂಮಿಯ ಮೇಲ್ಮೈಯಿಂದ ೧೧ ಕಿ.ಮೀ ವರೆಗಿನ ವಾಯುವಿನಿಂದಾಗುತ್ತದೆ.ಮೇಲ್ಮೈಯಿಂದ ಎತ್ತರಕ್ಕೆ ಹೋದಂತೆಲ್ಲಾ ವಾತಾವರಣದ ಸಾಂದ್ರತೆಯು ಕ್ಷೀಣಿಸುತ್ತಾ, ವಾತಾವರಣವು ತೆಳ್ಳಗಾಗುತ್ತಾ, ಇನ್ನೂ ಮೇಲಕ್ಕೆ ಹೋದಂತೆ ನಿಧಾನವಾಗಿ ಅಂತರಿಕ್ಷವಾಗಿ ಮಾರ್ಪಡುತ್ತದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಾನವನ ಕಣ್ಣು ಬೆಳಕಿಗೆ ಪ್ರತಿಕ್ರಿಯಿಸುವ ವಿವಿಧೋದ್ದೇಶಗಳುಳ್ಳ ಅತ್ಯಮೂಲ್ಯ ಅಂಗವಾಗಿದೆ. ಪ್ರಜ್ಞಾತ್ಮಕ ಜ್ಞಾನೇಂದ್ರಿಯವಾಗಿರುವ ಕಣ್ಣು, ದೃಷ್ಟಿಗೆ ಅವಕಾಶ ನೀಡುತ್ತದೆ. ಅಕ್ಷಿಪಟದಲ್ಲಿರುವ ರಾಡ್(ಕಣ್ಣಿನ ಪಾಪೆಯ ದಂಡ) ಮತ್ತು ಕೋನ್ (ಅಕ್ಷಿಪಟದಲ್ಲಿರುವ ಶಂಕುವಿನಾಕಾರದ ರಚನೆ) ಕೋಶಗಳು, ವಿವಿಧ ಬಣ್ಣಗಳು ಮತ್ತು ಅವುಗಳ ಗಾಢತೆಯನ್ನು ಗ್ರಹಿಸುವುದು ಸೇರಿದಂತೆ ಜಾಗೃತ ಬೆಳಕಿನ ಗ್ರಹಿಕೆ ಮತ್ತು ದೃಷ್ಟಿಗೆ ಅವಕಾಶ ಕಲ್ಪಿಸುತ್ತದೆ.
ಜಾಹೀರಾತು ವಿಶಿಷ್ಟವಾಗಿ ಸಂಭಾವ್ಯ ಗ್ರಾಹಕರನ್ನು ಖರೀದಿ ಮಾಡುವಂತೆ ಅಥವಾ ಒಂದು ನಿರ್ದಿಷ್ಟ ಗುರುತಿನ ಉತ್ಪನ್ನ ಅಥವಾ ಸೇವೆಯನ್ನು ಹೆಚ್ಚು ಬಳಸುವಂತೆ ಒಲಿಸಲು ಪ್ರಯತ್ನಿಸುವ ಒಂದು ಪ್ರಸಾರ ಸಾಧನ. ಬಹಳ ಜಾಹೀ ರಾತುಗಳು "ಗುರುತಿನ ಪ್ರತಿ ಅಭಿಪ್ರಾಯ" (ಬ್ರ್ಯಾಂಡ್ ಇಮೇಜ್) ಮತ್ತು "ಗುರುತಿನ ಪ್ರತಿ ನಿಷ್ಠೆ"ಯ (ಬ್ರ್ಯಾಂಡ್ ಲಾಯಲ್ಟಿ) ನಿರ್ಮಾಣ ಮತ್ತು ಬಲವರ್ಧನೆ ಮೂಲಕ ಆ ಉತ್ಪನ್ನಗಳ ಮತ್ತು ಸೇವೆಗಳ ಬಳಕೆ ಹೆಚ್ಚಾಗುವಂತೆ ರೂಪಿಸಲ್ಪಡುತ್ತವೆ. ಈ ಉದ್ದೇಶಗಳಿಗಾಗಿ, ಜಾಹೀರಾತು ಗಳು ಕೆಲವು ಸಲ ವಾಸ್ತವವಾದ ಮಾಹಿತಿಯ ಜೊತೆಗೆ ತಮ್ಮ ಪ್ರೇರಿಸುವ ಸಂದೇಶವನ್ನು ಹುದುಗಿಸುತ್ತವೆ.
ತುರ್ಕಮೆನಿಸ್ತಾನ್ ಗಣರಾಜ್ಯTurkmen: [Türkmenistan Respublikasy] Error: {{Lang}}: text has italic markup (help)ವನ್ನು ತುರ್ಕಮೆನಿಯ Russian: Туркмения ಎಂದೂ ಕರೆಯುತ್ತಾರೆ. ಕೇಂದ್ರ ಏಶಿಯಾದ ತರ್ಕಿಕ್ ರಾಜ್ಯಗಳಲ್ಲಿ ಇದು ಒಂದು. 1991ರ ವರೆಗೆ ಇದು ಸೋವಿಯೆಟ್ ರಶಿಯಾದ ಭಾಗವಾದ ತುರ್ಕಮನ್ ಸೋವಿಯೆಟ್ ಸೋಶಿಯಲಿಸ್ಟ್ ರಿಪಬ್ಲಿಕ್ (ತುರ್ಕಮನ್ SSR) ಗಣರಾಜ್ಯವಾಗಿತ್ತು.
ಒಂದು ಪುಸ್ತಕ, ಮ್ಯಾಗಜ಼ೀನ್, ಸುದ್ದಿಪತ್ರಿಕೆ, ಅಥವಾ ಹಾಳೆಗಳ ಇತರ ಸಂಗ್ರಹದಲ್ಲಿ, ಪುಟವು ಕಾಗದ, ಚರ್ಮದ ಕಾಗದ ಅಥವಾ ಇತರ ವಸ್ತುವಿನ (ಅಥವಾ ವಿದ್ಯುನ್ಮಾನ ಮಾಧ್ಯಮ) ಹಾಳೆಯ ಒಂದು ಬದಿಯಾಗಿರುತ್ತದೆ. ದಸ್ತಾವೇಜನ್ನು ಸೃಷ್ಟಿಸಲು ಇದರ ಮೇಲೆ ಪಠ್ಯ ಅಥವಾ ಚಿತ್ರಗಳನ್ನು ಮುದ್ರಿಸಬಹುದು, ಬರೆಯಬಹುದು ಅಥವಾ ಬಿಡಿಸಬಹುದು. ಇದನ್ನು ಮಾಹಿತಿಯ ಸಾಮಾನ್ಯ ಪ್ರಮಾಣವನ್ನು ("ಆ ವಿಷಯವು ಹನ್ನೆರಡು ಪುಟಗಳನ್ನು ಒಳಗೊಳ್ಳುತ್ತದೆ") ಅಥವಾ ಹೆಚ್ಚು ನಿರ್ದಿಷ್ಟ ಪ್ರಮಾಣವನ್ನು (ಒಂದು ಸಾಮಾನ್ಯ ಪುಟದಲ್ಲಿ ಹನ್ನೆರಡು ಬಿಂದು ಫ಼ಾಂಟ್ ಪ್ರಕಾರದಲ್ಲಿ ೫೩೫ ಶಬ್ದಗಳಿವೆ) ತಿಳಿಸುವ ಅಳತೆಯಾಗಿ ಬಳಸಬಹುದು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಅನುಬಂಧ, ಸಾಮಾನ್ಯವಾಗಿ, ಅದರ ಮುದ್ರಣ ಅಥವಾ ಪ್ರಕಟಣೆಯ ತರುವಾಯ ಒಂದು ದಸ್ತಾವೇಜಿಗೆ ಅದರ ಲೇಖಕನಿಂದ ಮಾಡಬೇಕಾದ ಒಂದು ಸೇರ್ಪಡೆ. ಅನುಬಂಧವು ಅಸಮಂಜಸತೆಗಳನ್ನು ವಿವರಿಸಬಹುದು ಅಥವಾ ಅಸ್ತಿತ್ವದಲ್ಲಿರುವ ಕೃತಿಯನ್ನು ವಿಸ್ತರಿಸಬಹುದು ಅಥವಾ ಮುಖ್ಯ ಕೃತಿಯಲ್ಲಿ ಕಂಡುಬರುವ ಮಾಹಿತಿಯನ್ನು ವಿವರಿಸಬಹುದು ಅಥವಾ ನವೀಕರಿಸಬಹುದು, ವಿಶೇಷವಾಗಿ ಯಾವುದೇ ಅಂಥ ಸಮಸ್ಯೆಗಳನ್ನು ಮುಖ್ಯ ಕೃತಿಯಲ್ಲಿ ಸರಿಪಡಿಸಲು ಬಹಳ ತಡವಾಗಿ ಕಂಡುಹಿಡಿದಾಗ. ಉದಾಹರಣೆಗೆ, ಮುಖ್ಯ ಕೃತಿಯನ್ನು ಆಗಲೇ ಮುದ್ರಣ ಮಾಡಿರಬಹುದು ಮತ್ತು ಒಗ್ಗಡವನ್ನು ನಾಶಮಾಡಿ ಪುನಃ ಮುದ್ರಿಸುವ ವೆಚ್ಚ ಬಹಳ ಹೆಚ್ಚು ಎಂದು ಪರಿಗಣಿಸಲಾಗಿರಬಹುದು.
ಒಪ್ಪಂದ: ಏನನ್ನಾದರೂ ಮಾಡುವುದಾಗಿ ಅಥವಾ ಮಾಡದೆ ಬಿಡುವುದಾಗಿ ಒಂದು ಗೊತ್ತುಪಾಡಿನ ವ್ಯಕ್ತಿಗಳ ಅಥವಾ ಪಕ್ಷಗಳ ನಡುವೆ ಏರ್ಪಟ್ಟ ಏಕಾಭಿಪ್ರಾಯ; ಪರಸ್ಪರ ತಿಳಿವಳಿಕೆ, ನಿರ್ಣಯ, ಷರತ್ತು; ಮನಸ್ಸುಗಳ ಕೂಡಿಕೆ (ಅಗ್ರೀಮೆಂಟ್),ಒಬ್ಬ ಅಥವಾ ಒಂದು ಪಕ್ಷ ಏನನ್ನಾದರೊ ಮಾಡಲು ಇಲ್ಲವೇ ಮಾಡದಿರಲು ಪ್ರಸ್ತಾಪ (ಪ್ರೊಪೋಸಲ್) ಮಾಡಲಾಗಿ, ಇನ್ನೊಬ್ಬ ಅಥವಾ ಇನ್ನೊಂದು ಪಕ್ಷ ಅದನ್ನು ನವೀಕರಿಸಿರುವುದನ್ನು ಅಥವಾ ಅದಕ್ಕೆ ಸಮ್ಮತಿಸಿರುವುದನ್ನು ಮತ್ತು ಆ ಬಗ್ಗೆ ಬರೆಯಲಾದ ಪತ್ರವನ್ನು ಒಪ್ಪಂದ ಎನ್ನಲಾಗುತ್ತದೆ. ಈ ಪದವನ್ನು ನ್ಯಾಯಶಾಸ್ತ್ರದಲ್ಲಿ ತಾತ್ಕಾಲಿಕ ವ್ಯವಸ್ಥೆ ಮತ್ತು ವ್ಯವಹಾರದ ಮುಕ್ತಾಯ ಎಂಬ ಎರಡರ್ಥದಲ್ಲಿ ಉಪಯೋಗಿಸಲಾಗುತ್ತದೆ. ಅದನ್ನು ಯಾವ ಅರ್ಥದಲ್ಲಿ ಬಳಸಲಾಗಿದೆ ಎಂಬುದನ್ನು ಒಪ್ಪಂದದ ಪತ್ರದ ಸಂದರ್ಭದಿಂದ ತಿಳಿಯಬಹುದು.ಭಾರತದ ಕರಾರು ಕಾಯಿದೆಯಲ್ಲಿ ಒಪ್ಪಂದ ಪದದ ವಿವರಣೆಯುಂಟು.
'ಸಾಕ್ಷರತೆಯನ್ನು ಸಾಂಪ್ರದಾಯಿಕವಾಗಿ ಓದುವ ಮತ್ತು ಬರೆಯುವ ಸಾಮರ್ಥ್ಯವೆಂದು ಬಣ್ಣಿಸಲಾಗಿದೆ. ವಿವಿಧ ಸೈದ್ಧಾಂತಿಕ ಕ್ಷೇತ್ರಗಳ ವ್ಯಾಪ್ತಿ ಮೂಲಕ ಈ ಪರಿಕಲ್ಪನೆಯನ್ನು ಹೇಳಲಾಗಿದೆ ಮತ್ತು ವ್ಯಾಖ್ಯಾನಿಸಲಾಗಿದೆ. ವಿಶ್ವಸಂಸ್ಥೆಯ ಶಿಕ್ಷಣ,ವಿಜ್ಞಾನ ಮತ್ತು ಸಾಂಸ್ಕೃತಿಕ ಸಂಸ್ಥೆ (UNESCO) ಸಾಕ್ಷರತೆಯನ್ನು ವಿವಿಧ ಸನ್ನಿವೇಶಗಳಿಗೆ ಸಂಬಂಧಿಸಿದ ಮುದ್ರಿತ ಮತ್ತು ಲಿಖಿತ ವಸ್ತುಗಳನ್ನು ಗುರುತುಹಿಡಿಯುವ, ತಿಳಿವಳಿಕೆ ಮಾಡಿಕೊಳ್ಳುವ, ವ್ಯಾಖ್ಯಾನಿಸುವ ,ಸೃಷ್ಟಿಮಾಡುವ, ಸಂವಹಿಸುವ, ಎಣಿಕೆಮಾಡುವ ಮತ್ತು ಬಳಸುವ ಸಾಮರ್ಥ್ಯವೆಂದು ವ್ಯಾಖ್ಯಾನಿಸಿದೆ.
ವಿಂಡೋಸ್ ೧೦ ಎನ್ನುವುದು ಮೈಕ್ರೋಸಾಫ್ಟ್ ತನ್ನ ವಿಂಡೋಸ್ ಎನ್ಟಿ ಫ್ಯಾಮಿಲಿ ಆಫ್ ಆಪರೇಟಿಂಗ್ ಸಿಸ್ಟಂನ ಭಾಗವಾಗಿ ನಿರ್ಮಿಸಿದ ವೈಯಕ್ತಿಕ ಕಂಪ್ಯೂಟರ್ ಆಪರೇಟಿಂಗ್ ಸಿಸ್ಟಮ್ಗಳ ಸರಣಿಯಾಗಿದೆ. ಇದು ವಿಂಡೋಸ್ ೮.೧ ರ ಉತ್ತರಾಧಿಕಾರಿಯಾಗಿದೆ, ಮತ್ತು ಇದನ್ನು ಜುಲೈ ೧೫, ೨೦೧೯ ರಂದು ಉತ್ಪಾದನೆಗೆ ಬಿಡುಗಡೆ ಮಾಡಲಾಯಿತು ಮತ್ತು ಜುಲೈ ೨೯, ೨೦೧೫ ರಂದು ವ್ಯಾಪಕವಾಗಿ ಮಾರಾಟಕ್ಕೆ ಬಿಡುಗಡೆ ಮಾಡಲಾಯಿತು. ವಿಂಡೋಸ್ ೧೦ ಹೊಸ ನಿರ್ಮಾಣಗಳನ್ನು ನಡೆಯುತ್ತಿರುವ ಆಧಾರದ ಮೇಲೆ ಪಡೆಯುತ್ತದೆ.
ಶ್ರವಣ ಎಂಜಿನಿಯರಿಂಗ್ (ಆಡಿಯೋ ಎಂಜಿನಿಯರಿಂಗ್) ಎಂಬುದು ಒಂದು ಪರಿಣತ ವೃತ್ತಿಯಾಗಿದ್ದು, ಧ್ವನಿಗಳ ಮುದ್ರಿಸುವಿಕೆ, ಬೆರೆಸುವಿಕೆ ಮತ್ತು ಪ್ರತಿ ಮಾಡುವಿಕೆಗಳಿಗೆ ಸಂಬಂಧಿಸಿರುವ ಯಂತ್ರೋಪಕರಣ ಹಾಗೂ ಉಪಕರಣದ ಬಳಕೆಯೊಂದಿಗೆ ಅದು ವ್ಯವಹರಿಸುತ್ತದೆ. ವಿದ್ಯುನ್ಮಾನ ಶಾಸ್ತ್ರ, ಶ್ರವಣ ವಿಜ್ಞಾನ, ಮನೋಶ್ರವಣ ವಿಜ್ಞಾನ, ಮತ್ತು ಸಂಗೀತ ಕ್ಷೇತ್ರಗಳನ್ನು ಒಳಗೊಂಡಂತೆ ಅನೇಕ ಕಲಾತ್ಮಕ ಮತ್ತು ವೃತ್ತಿಪರ ವಲಯಗಳ ಮೇಲೆ ಈ ಕ್ಷೇತ್ರವು ಅವಲಂಬಿಸುತ್ತದೆ. ವಿಭಿನ್ನ ಬಗೆಯ ಧ್ವನಿಮುದ್ರಣ ಮಾಧ್ಯಮಗಳೊಂದಿಗೆ ಓರ್ವ ಶ್ರವಣ ಎಂಜಿನಿಯರ್ ಪ್ರಾವೀಣ್ಯತೆಯನ್ನು ಪಡೆದಿರುತ್ತಾನೆ ಹಾಗೂ ಸಾದೃಶ್ಯ ಟೇಪು (ಅನಲಾಗ್ ಟೇಪ್), ಅಂಕೀಯ ಬಹುಪಥ ಧ್ವನಿಮುದ್ರಕಗಳು (ಡಿಜಿಟಲ್ ಮಲ್ಟಿಟ್ರಾಕ್ ರೆಕಾರ್ಡರ್ಸ್) ಮತ್ತು ಕಾರ್ಯಕೇಂದ್ರಗಳಂಥ ಮಾಧ್ಯಮಗಳು, ಹಾಗೂ ಕಂಪ್ಯೂಟರ್ ಜ್ಞಾನ ಇವೇ ಮೊದಲಾದವು ಸದರಿ ಪರಿಣತಿಯ ವ್ಯಾಪ್ತಿಯಲ್ಲಿ ಬರುತ್ತವೆ.
ಥ್ರಿಲರ್ ಅಮೇರಿಕದ ಹಾಡುಗಾರ ಮೈಕಲ್ ಜ್ಯಾಕ್ಸನ್ರ ಆರನೆಯ ಧ್ವನಿಸುರುಳಿ. ಜ್ಯಾಕ್ಸನ್ರ ವಿಮರ್ಶಾತ್ಮಕವಾಗಿ ಮತ್ತು ವಾಣಿಜ್ಯದ ದೃಷ್ಟಿಯಿಂದ ಸಫಲವಾಗಿದ್ದ ೧೯೭೯ರ ಧ್ವನಿಸುರುಳಿ ಆಫ್ ದ ವಾಲ್ನ ಮುಂಬರಿವಾಗಿ ಈ ಧ್ವನಿಸುರುಳಿಯನ್ನು ನವೆಂಬರ್ ೩೦, ೧೯೮೨ರಂದು ಎಪಿಕ್ ರಿಕಾರ್ಡ್ಸ್ನಿಂದ ಬಿಡುಗಡೆಮಾಡಲಾಯಿತು. ಥ್ರಿಲರ್, ಸರಳ ಭಾವುಕ ಶೈಲಿ (ಫಂಕ್), ಡಿಸ್ಕೋ, ಭಾವನಾತ್ಮಕ ಸಂಗೀತ (ಸೋಲ್ ಮ್ಯೂಸಿಕ್), ರಿದಮ್ ಅಂಡ್ ಬ್ಲೂಸ್, ಹಾಗೂ ಪಾಪ್ ಒಳಗೊಂಡಂತೆ, ಆಫ್ ದ ವಾಲ್ ಅಂತಹದೇ ಬಗೆಗಳನ್ನು ಅನ್ವೇಷಿಸುತ್ತದೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಮೀಟರ್ ಎಂಬುದು ಅಂತರರಾಷ್ಟ್ರೀಯ ಏಕಮಾನ ವ್ಯವಸ್ಥೆಯಲ್ಲಿ (en:SI units) ಉದ್ದದ ಅಳತೆಯ ಮೂಲ ಪ್ರಮಾಣ. ಐತಿಹಾಸಿಕವಾಗಿ ಇದು ಭೂಮಿಯ ಸಮಭಾಜಕ ವೃತ್ತದಿಂದ ಉತ್ತರ ಧ್ರುವದ ವರೆಗಿನ ದೂರದ ೧೦ ಮಿಲಿಯನ್ರ ಒಂದು ಭಾಗವಾಗಿ ನಿರ್ಧಾರಿತವಾಯಿತು. ಈ ಅಳತೆಯನ್ನು ಫ್ರಾನ್ಸ್ನ ವಿಜ್ಞಾನ ಪರಿಷತ್ತಿನಲ್ಲಿ ಒಂದು ಪ್ಲಾಟಿನಮ್-ಇರಿಡಿಯಮ್ ಲೋಹದ ಪಟ್ಟಿಯ ಮೇಲೆ ಎರಡು ಗೆರೆಗಳಿಂದ ಸೂಚಿತವಾಗಿತ್ತು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ಆಂಟೋನಿಯೊ ಲೂಚಿಯೊ ವಿವಾಲ್ಡಿ (ಮಾರ್ಚ್ ೪ ೧೬೭೮ – ಜುಲೈ ೨೮ ೧೭೪೧) ಪಾಶ್ಚಾತ್ಯ ಶಾಸ್ತ್ರೀಯ ಸಂಗೀತದ ಬಾರೊಖ್ ಶೈಲಿಯ ಪ್ರಸಿದ್ದ ವಾಗ್ಗೇಯಕಾರ ಹಾಗು ಇಟಲಿಯ ಕ್ರೈಸ್ತ ಧರ್ಮ ಗುರು. ಇವರು ಪಿಯಾನೋ, ಚೇಂಬರ್ ಸಂಗೀತ, ಸಿಂಫೊನಿ ಸಂಗೀತ, ಧಾರ್ಮಿಕ ವೃಂದ ಗಾನ ಮತ್ತು ಆಪೇರಾ ಸಂಗೀತ ಶೈಲಿಗಳ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇವರ ಫೋರ್ ಸೀಜನ್ಸ್ (ಲೆ ಕ್ವಾತ್ರೊ ಸ್ಟಗಿನೋನಿ) ಕೃತಿ ಅಪಾರ ಜನಪ್ರಿಯತೆ ಕಂಡಿದೆ.