The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ , ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ.ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ. ಔಷಧ ವಿಜ್ಞಾನ ಶಾಸ್ತ್ರವು ನೈಸರ್ಗಿಕ ಮೂಲಗಳಿಂದ ದೊರೆಯುವ ಔಷಧಗಳ ಬಗೆಗಿನ ಅಧ್ಯಯನವಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಅರಮನೆಯ ಒಂದು ಭವ್ಯ ನಿವಾಸ, ವಿಶೇಷವಾಗಿ ರಾಜಮನೆತನದವರು ಅಥವಾ ಉನ್ನತ ಶ್ರೇಣಿಯ ಪ್ರತಿಷ್ಠಿತ ಸಂಸ್ಥಾನದ ಮುಖ್ಯಸ್ಥರು ನಿವಾಸಿಸುವ ಭವ್ಯ ನಿವಾಸ.ಈ ಪದವು ಲ್ಯಾಟಿನ್ ಪದ Palatium ದಿಂದ ಬಂದಿದೆ (ರೋಮ್ನಲ್ಲಿ ಬೆಟ್ಟದ ಇಂಪೀರಿಯಲ್ ನಿವಾಸಗಳು ವಾಸಿಸುವ ಮನೆ).ಯುರೋಪಿನ ಬಹುತೇಕ ಭಾಗಗಳಲ್ಲಿ ಶ್ರೀಮಂತ ಮಹತ್ವಾಕಾಂಕ್ಷೆಯ ಖಾಸಗಿ ಮಹಲುಗಳನ್ನು ಅರಮನೆ ಎಂದು ಕರೆಯಲಾಗುತ್ತದೆ. ಈಗ ಅನೇಕ ಐತಿಹಾಸಿಕ ಅರಮನೆಗಳು ಸಂಸತ್, ವಸ್ತುಸಂಗ್ರಹಾಲಯಗಳು,ಕಚೇರಿ ಕಟ್ಟಡಗಳು,ಹೋಟೆಲ್ಗಳಾಗಿವೆ.ಕೆಲವೊಮ್ಮೆ ಸಾರ್ವಜನಿಕ ಮನರಂಜನಾ ಅಥವಾ ಪ್ರದರ್ಶನಗಳು ನಡೆಸುವ ಕಟ್ಟಡಗಳನ್ನು ಅರಮನೆ ಎನ್ನಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ನೀರುನಾಯಿ(Lutra lutra)ಭಾರತದಲ್ಲಿ ಕಾಶ್ಮೀರ,ಅಸ್ಸಾಂ ಹಾಗೂ ದಕ್ಷಿಣ ಭಾರತದಲ್ಲಿ ಇದು ವ್ಯಾಪಕವಾಗಿದೆ.ಇದು ನದಿಗಳ ಸಮೀಪ ಬಂಡೆಗಳ ಪೊಟರೆಗಳಲ್ಲಿ ವಾಸಿಸುವುದು.ನೀಳ ದೇಹ,ನೀರಿನಲ್ಲಿ ತೋಯದ ತುಪ್ಪಳದ ಚರ್ಮ,ಚಪ್ಪಟೆಯಾದ ತಲೆ,ಬಲವಾದ ಬಾಲ,ಹುಟ್ಟುಗಳಿಂತಿರುವ ಪಾದಗಳು, ಸ್ಪರ್ಶಸೂಕ್ಷ್ಮ ಮೀಸೆಗೂದಲು ಇವು ನೀರುನಾಯಿಯ ಮುಖ್ಯ ಲಕ್ಷಣಗಳು.ಮುಖ್ಯ ಆಹಾರ ಮೀನು.ಏಡಿ,ಕಪ್ಪೆ,ಬಾತುಕೋಳಿ,ನೀರುಕೋಳಿ ಹಾಗೂ ಕೆಲವೊಮ್ಮೆ ಎಲೆಗಳು ಕೂಡಾ ಇದರ ಆಹಾರವಾಗುವವು.ಗರ್ಭಧಾರಣಾ ಅವದಿ ಸುಮಾರು ೬೦ ದಿನಗಳು.
[[ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಕರ್ನಾಟಕದ ಸಂಸ್ಕೃತಿ : ‘ಸಂಸ್ಕೃತಿ’ ಎಂಬ ಶಬ್ದದ ಅರ್ಥ ಬಹು ವ್ಯಾಪಕವಾಗಿ ಬೆಳೆಯುತ್ತ ಬಂದಿದೆ; ಹೊಸ ಹೊಸ ಅರ್ಥಗಳನ್ನು ಒಳಗೊಂಡಿದೆ. ಸಮಷ್ಟಿ ಜೀವನದ ಅಂತರಂಗದ ಸಾಧನೆಗೆ ಸಹಕಾರಿಯಾದ ಸಾಮಗ್ರಿಗಳಿಂದ ಹಿಡಿದು, ವ್ಯಷ್ಟಿ ಜೀವನದ ವಿಕಾಸಕ್ಕೆ ಕಾರಣವಾದ ಸಂಸ್ಕಾರದವರೆಗೆ ಈ ಪದದ ಅರ್ಥ ಬೆಳೆದಿದೆ. ವ್ಯಕ್ತಿಯ ವಿಕಾಸಕ್ಕೆ ಕಾರಣವಾಗುವ ಸಾಮಾಜಿಕ ಪರಿಕರಗಳು ಸಹ ಸಂಸ್ಕೃತಿಯಲ್ಲಿಯೇ ಸಮಾವೇಶಗೊಳ್ಳುತ್ತವೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಹಬಲ್ ದೂರದರ್ಶಕ ಭೂಮಿಯ ಸುತ್ತ ಬಾಹ್ಯಾಕಾಶದಲ್ಲಿ ಸುತ್ತುತ್ತಿರುವ ಒಂದು ದೂರದರ್ಶಕ. ಬಾಹ್ಯಾಕಾಶದಲ್ಲಿರುವುದರಿಂದ ಈ ದೂರದರ್ಶಕವು ಭೂಮಿಯ ವಾಯುಮಂಡಲದ ಹೊರಗಿರುವುದರಿಂದ ಬ್ರಹ್ಮಾಂಡದ ದೂರ ಪ್ರದೇಶಗಳಿಂದ ಬರುವ ದುರ್ಬಲ ಬೆಳಕನ್ನು ಕೂಡ ಪತ್ತೆ ಹಚ್ಚಬಲ್ಲದು. ೧೯೯೦ರಲ್ಲಿ ಅಂತರಿಕ್ಷದಲ್ಲಿ ಸ್ಥಾಪನೆಗೊಂಡ ನಂತರದಿಂದಲೂ ಇದು ಖಗೋಳವಿಜ್ಞಾನಕ್ಕೆ ಬ್ರಹ್ಮಾಂಡದ ಬಗ್ಗೆ ಅತ್ಯಮೂಲ್ಯ ಮಾಹಿತಿಗಳನ್ನು ನೀಡುತ್ತಾ ಬಂದಿದೆ.
ಮಾಹಿತಿ ಎಂದರೆ ಅನಿಶ್ಚಿತತೆಯ ನಿವಾರಣೆ ಎಂದು ಭಾವಿಸಬಹುದು; ಇದು "ಒಂದು ವಸ್ತು ಏನಾಗಿದೆ" ಎಂಬ ಪ್ರಶ್ನೆಯನ್ನು ಉತ್ತರಿಸುವಂಥದ್ದು ಮತ್ತು ಹಾಗಾಗಿ ಅದರ ಸಾರ ಹಾಗೂ ಅದರ ಗುಣಲಕ್ಷಣಗಳ ಸ್ವರೂಪ ಎರಡನ್ನೂ ವ್ಯಾಖ್ಯಾನಿಸುತ್ತದೆ. ಇದು ದತ್ತದೊಂದಿಗೆ ಸಂಬಂಧ ಹೊಂದಿದೆ, ಏಕೆಂದರೆ ದತ್ತವು ನಿಯತಾಂಕಗಳಿಗೆ ಸಂಬಂಧಿಸಲಾದ ಮೌಲ್ಯಗಳನ್ನು ಪ್ರತಿನಿಧಿಸುತ್ತದೆ, ಮತ್ತು ಮಾಹಿತಿಯು ಸಂದರ್ಭದಲ್ಲಿನ ದತ್ತವಾಗಿದೆ ಮತ್ತು ಜೊತೆಗೆ ಅರ್ಥ ಸೇರಿದ್ದು. ಮಾಹಿತಿಯು ಜ್ಞಾನಕ್ಕೆ ಕೂಡ ಸಂಬಂಧಿಸಿದೆ, ಏಕೆಂದರೆ ಜ್ಞಾನವು ಒಂದು ಅಮೂರ್ತ ಅಥವಾ ಮೂರ್ತ ಪರಿಕಲ್ಪನೆಯ ತಿಳಿವಳಿಕೆಯನ್ನು ಸೂಚಿಸುತ್ತದೆ.ಸಂವಹನಕ್ಕೆ ಸಂಬಂಧಿಸಿದಂತೆ, ಮಾಹಿತಿಯನ್ನು ಒಂದು ಸಂದೇಶದ ಒಳವಸ್ತು ಅಥವಾ ನೇರ ಅಥವಾ ಪರೋಕ್ಷ ವೀಕ್ಷಣೆಯ ಮೂಲಕ ವ್ಯಕ್ತಪಡಿಸಲಾಗುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಬೋಯಿಂಗ್ ಕಂಪನಿ ಯು ಒಂದು ಪ್ರಮುಖ ಎರೊಸ್ಪೇಸ್ ಮತ್ತು ರಕ್ಷಣಾ ಸಂಸ್ಥೆ, ವಾಷಿಂಗ್ಟನ್ ಸೀಟಲ್ ನಗರದಲ್ಲಿ ವಿಲಿಯಮ್ ಇ.ಬೋಯಿಂಗ್ ಅವರು ಸ್ಥಾಪಿಸಿದರು. ಬೋಯಿಂಗ್ ಹಲವು ವರ್ಷಗಳಿಂದ ವಿಸ್ತರಿಸಲ್ಪಟ್ಟಿರುವುದಲ್ಲದೇ, ಸೈಂಟ್ ಲೂಯಿಸ್ನೊಂದಿಗೆ ಮೆಕ್ ಡೊನ್ನೆಲ್ ಡೊಗ್ಲಾಸ್ನೊಂದಿಗೆ 1997ರಲ್ಲಿ ಐಕ್ಯಗೊಂಡಿತು. ಬೋಯಿಂಗ್ ಕಾರ್ಪೋರೇಟ್ ಮುಖ್ಯಕಚೇರಿಯು 2001ರಿಂದೀಚೆಗೆ ಇಲ್ಲಿನೋಯಿಸ್ನ ಚಿಕಾಗೊದಲ್ಲಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.