The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
[[ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಸಮುದ್ರ ವಿಶ್ವ-ಸಾಗರ ಅಥವಾ ಸರಳವಾಗಿ ಸಾಗರವು ಭೂಮಿಯ ಮೇಲ್ಮೈಯ 70% (361,132,000 ಚದರ ಕಿಲೋಮೀಟರ್ (139,434,000 ಚದರ ಮೈಲಿ) ಆವರಿಸಿದೆ. ಒಟ್ಟು 1,332,000,000 ಘನ ಕಿಲೋಮೀಟರ್ (320,000,000 ಕ್ಯೂ ಮೈ) ವ್ಯಾಪ್ತಿಯನ್ನು ಹೊಂದಿರುವ ಉಪ್ಪುನೀರಿನ ಸಂಪರ್ಕಿತ ಪ್ರದೇಶವಾಗಿದೆ. ಇದು ಭೂಮಿಯ ಹವಾಮಾನವನ್ನು ನಿಯಂತ್ರಿಸುತ್ತದೆ ಮತ್ತು ನೀರಿನ ಚಕ್ರ, ಇಂಗಾಲದ ಚಕ್ರ ಮತ್ತು ಸಾರಜನಕ ಚಕ್ರದಲ್ಲಿ ಪ್ರಮುಖ ಪಾತ್ರಗಳನ್ನು ಹೊಂದಿದೆ.
ಉತ್ತರ ಪ್ರದೇಶವು ನಿಶ್ಚಿತವಾಗಿ "ಉತ್ತರ ಭಾಗದ ಪ್ರಾಂತ್ಯ"[ಆಗಾಗ್ಗೆ ಇದನ್ನು U.P. ಎಂದೂ ಸಹ ಉಲ್ಲೇಖಿಸುವರು] ಭಾರತದ ಉತ್ತರ ಭಾಗದಲ್ಲಿ ನೆಲೆಸಿರುವ ಒಂದು ರಾಜ್ಯವಾಗಿದೆ. ಸುಮಾರು 190 ಮಿಲಿಯದಷ್ಟು ಜನಸಂಖ್ಯೆಯನ್ನು ಹೊಂದಿದೆ, ಇದು ಭಾರತದ ಅತಿ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ರಾಜ್ಯವಾಗಿದೆ, ಹಾಗೆಯೇ ಪ್ರಪಂಚದಲ್ಲೇ ಹೆಚ್ಚಿನ ಜನಸಂಖ್ಯೆಯು ಈ ರಾಷ್ಟ್ರದ ಒಳಗೆ ಇರುವುದು. ಜೊತೆಗೆ ಉತ್ತರ ಪ್ರದೇಶವು ಹೆಚ್ಚಾಗಿ ಫಲವತ್ತಾದ ಒಂದು ದೊಡ್ಡ ಭಾಗದ ಪ್ರದೇಶವನ್ನು ಆವರಿಸಿದೆ ಮತ್ತು ಗಂಗಾನದಿಯ ಸಮ ತಲ ಪ್ರದೇಶದಲ್ಲಿ ಜನನಿಬಿಡತೆ ಹೊಂದಿದೆ.
ಕರ್ನಾಟಕದ ಸಂಸ್ಕೃತಿ : ‘ಸಂಸ್ಕೃತಿ’ ಎಂಬ ಶಬ್ದದ ಅರ್ಥ ಬಹು ವ್ಯಾಪಕವಾಗಿ ಬೆಳೆಯುತ್ತ ಬಂದಿದೆ; ಹೊಸ ಹೊಸ ಅರ್ಥಗಳನ್ನು ಒಳಗೊಂಡಿದೆ. ಸಮಷ್ಟಿ ಜೀವನದ ಅಂತರಂಗದ ಸಾಧನೆಗೆ ಸಹಕಾರಿಯಾದ ಸಾಮಗ್ರಿಗಳಿಂದ ಹಿಡಿದು, ವ್ಯಷ್ಟಿ ಜೀವನದ ವಿಕಾಸಕ್ಕೆ ಕಾರಣವಾದ ಸಂಸ್ಕಾರದವರೆಗೆ ಈ ಪದದ ಅರ್ಥ ಬೆಳೆದಿದೆ. ವ್ಯಕ್ತಿಯ ವಿಕಾಸಕ್ಕೆ ಕಾರಣವಾಗುವ ಸಾಮಾಜಿಕ ಪರಿಕರಗಳು ಸಹ ಸಂಸ್ಕೃತಿಯಲ್ಲಿಯೇ ಸಮಾವೇಶಗೊಳ್ಳುತ್ತವೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಸರಕು ಅಥವಾ ವ್ಯಾಪಾರದ ವಸ್ತುಗಳನ್ನು ಒಂದು ನಿಗದಿತ ಸ್ಥಳದಿಂದ ಮಾರಾಟ ಮಾಡುವುದು ಚಿಲ್ಲರೆ ವ್ಯಾಪಾರ ಎಂದೆನಿಸುತ್ತದೆ. ಉದಾಹರಣೆಗೆ ಚಿಲ್ಲರೆ ಅಂಗಡಿ , ಬಟ್ಟೆ ಅಂಗಡಿ ಅಥವಾ ಕಿಯೋಸ್ಕ್ , ಅಥವಾ ಅಂಚೆಯ ರವಾನೆ , ಸಣ್ಣ ಅಥವಾ ದೊಡ್ಡ ಪ್ರಮಾಣದಲ್ಲಿ ಖರೀದಿದಾರರಿಗೆ ನೇರ ಆರ್ಥಿಕ ಉಳಿತಾಯ ಮಾಡಲಾಗುವುದು. ಇದು ವಿತರಣೆಯ ಅನೇಕ ಮಾರ್ಗಗಳ ಮೂಲಕ ಗ್ರಾಹಕರಿಗೆ ಗ್ರಾಹಕ ವಸ್ತುಗಳ ಅಥವಾ ಸೇವೆಗಳನ್ನು ಮಾರಾಟ ಮಾಡುವ ಪ್ರಕ್ರಿಯೆಯಾಗಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾರಕರಾಗಿ, ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.