The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಚಂದ್ರಯಾನ-೩ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯ ಯೋಜಿತ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾಗಿದೆ. ಚಂದ್ರಯಾನ-೨ ರಲ್ಲಿ, ಸಾಫ್ಟ್ ಲ್ಯಾಂಡಿಂಗ್ ಮಾರ್ಗದರ್ಶನ ಸಾಫ್ಟ್ವೇರ್ನಲ್ಲಿ ಉಂಟಾದ ಕೊನೆಯ ನಿಮಿಷದ ದೋಷವು ಲ್ಯಾಂಡರ್ನ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನದ ವಿಫಲತೆಗೆ ಕಾರಣವಾಯಿತು, ಸಾಫ್ಟ್ ಲ್ಯಾಂಡಿಂಗ್ ಅನ್ನು ಪ್ರದರ್ಶಿಸಲು ಮತ್ತೊಂದು ಚಂದ್ರನ ಕಾರ್ಯಾಚರಣೆಯನ್ನು ಪ್ರಸ್ತಾಪಿಸಲಾಯಿತು. ಚಂದ್ರಯಾನ-೩ ಚಂದ್ರಯಾನ-೨ರ ಮಿಷನ್ ಪುನರಾವರ್ತನೆ ಆದರೆ ಚಂದ್ರಯಾನ-೨ರಂತೆಯೇ ಲ್ಯಾಂಡರ್ ಮತ್ತು ರೋವರ್ ಅನ್ನು ಮಾತ್ರ ಒಳಗೊಂಡಿರುತ್ತದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO - Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಚಂದ್ರಯಾನ-೨ (ಸಂಸ್ಕೃತ:चंद्रयान-२, lit: Moon-vehicle pronunciation ), ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆಯ ಸಂಪೂರ್ಣ ದೇಶೀಯ ತಂತ್ರಜ್ಞಾನ ಅಳವಡಿಸಿ ನಿರ್ಮಿಸಿರುವ ಚಾಂದ್ರ ಪರಿಶೋಧನಾ ಅಭಿಯಾನ. ೨೨ ಜುಲೈ ೨೦೧೯ ರ ಅಪರಾಹ್ನ ೦೨ ಗಂಟೆ ೪೩ (2ಗಂ.43 ನಿ.ಕ್ಕೆ)ನಿಮಿಷ ಭಾರತೀಯ ಕಾಲಮಾನಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮಾರ್ಕ್ 3 (ಜಿ ಎಸ್ ಎಲ್ ವಿ ಎಂಕೆ 3-ಎಂ1 ) ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಒಂದು ಚಾಂದ್ರ ಕಕ್ಷೆಗಾಮಿ, ರೋವರ್ ಹಾಗು ಒಂದು ಭೂಸ್ಪರ್ಶಕ ಒಳಗೊಂಡಿರುವ ಇದು ಸೆಪ್ಟೆಂಬರ್ ವೇಳೆಗೆ ಚಂದ್ರನ ದಕ್ಷಿಣ ದ್ರುವಕ್ಕೆ ಇಳಿಯುವ ಯೋಜನೆ ಇದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶಕ್ಕೆ ಭೂಸ್ಪರ್ಶಕವನ್ನು ಇಳಿಸುವ ಮೊಟ್ಟ ಮೊದಲ ಯೋಜನೆ ಇದಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ., ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು. ಶಿವನು ಶಾಂತ ಹಾಗೂ ರೌದ್ರ ಸ್ವರೂಪನು, ಶಾಂತ ರೂಪದಲ್ಲಿ ಯೋಗಿಯಾಗಿ ವೈರಾಗ್ಯ ಜೀವನವನ್ನು ಮತ್ತು ಸಂಸಾರಿಯಾಗಿ ಪತ್ನಿ ಪಾರ್ವತಿ ಹಾಗೂ ಮಕ್ಕಳು ಗಣೇಶ, ಕಾರ್ತಿಕೇಯನ ಜೊತೆ ಇರವನು., ರೌದ್ರ ರೂಪದಲ್ಲಿ ದುಷ್ಟರನ್ನು ಸಂಹರಿಸುವ ಮಹಾಕಾಲ, ಭೈರವ, ವೀರಭದ್ರ ಹಾಗೂ ಇತರ ರೂಪಗಳನ್ನು ಅವತರಿಸಿದ್ದಾನೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
'ಕುಮಾರರಾಮ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯನಾಗಿದ್ದನೆಂಬುದಕ್ಕೆ ಸಾಕಷ್ಟು ಚಾರಿತ್ರಿಕ ಘಟನೆಗಳ ಉಲ್ಲೇಖನಗಳು ಸಿಕ್ಕುತ್ತವೆ.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.೧೯೪೭ರಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ೧೯೯೧ರ ವರೆಗೆ, ಅನುಕ್ರಮದ ಸರ್ಕಾರಗಳು ವ್ಯಾಪಕ ಸರ್ಕಾರಿ ಹಸ್ತಕ್ಷೇಪ ಮತ್ತು ನಿಯಂತ್ರಣವುಳ್ಳ ರಕ್ಷಣಾವಾದಿ ಆರ್ಥಿಕ ನೀತಿಗಳನ್ನು ಪ್ರೋತ್ಸಾಹಿಸಿದವು; ಶೀತಲ ಸಮರದ ಅಂತ್ಯ ಮತ್ತು ೧೯೯೧ ರಲ್ಲಿ ತೀವ್ರ ಪಾವತಿ ಬಾಕಿ ಬಿಕ್ಕಟ್ಟಿನ ಕಾರಣ ಭಾರತವು ಆರ್ಥಿಕ ಉದಾರೀಕರಣದ ವಿಶಾಲ ಕಾರ್ಯಕ್ರಮವನ್ನು ಅಳವಡಿಸಿಕೊಂಡಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಗ್ರಾಮ - ಹಳ್ಳಿ, ಪಳ್ಳಿ, ಊರು, ಗುಡಾ, ಗಾಂವ್, ಕಸಬಾ, ಖೇಡಾ ಎಂದು ಭಾರತದ ಬೇರೆ ಬೇರೆ ಕಡೆಗಳಲ್ಲಿ ಪರಿಚಿತವಾಗಿರುವ ಸಮುದಾಯ. ಭರತ ಇವನ್ನು ಬ್ರಾಹ್ಮಣಾದಿ ವರ್ಣಗಳಿಂದ ಕುಡಿದ, ಪ್ರಾಕಾರ ಕಂದಕಗಳಿಲ್ಲದ, ಬಹುಜನವಸತಿಗಳೆಂದು ಹೇಳಿದ್ದಾನೆ. ಇವನ್ನು ಸಾಮಾನ್ಯವಾಗಿ ಶಾಶ್ವತವಾದ, ಗಾತ್ರದಲ್ಲಿ ಚಿಕ್ಕದಾದ, ಮುಖ್ಯವಾಗಿ ಭೂವ್ಯವಸಾಯವುಳ್ಳ, ಹತ್ತಿರ ಹತ್ತಿರ ವಾಸಿಸುವ ಕೆಲವು ಕುಟುಂಬಗಳಿರುವ, ಪ್ರಾಥಮಿಕ ಸಂಬಂಧಗಳು ಪ್ರಧಾನವಾಗಿರುವ ನೆಲೆಗಳೆಂದು ಕರೆಯಬಹುದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯಾಗಿದ್ದು ಇದ್ದನ್ನು ಹಿಂದೂ ಧರ್ಮದಲ್ಲಿ ಪೂಜಿಸಲ್ಪಡುತ್ತಾವರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಜಾತಿ ಎಂದರೆ ಸಾಮಾಜಿಕ ವರ್ಗೀಕರಣದ ಒಂದು ರೂಪ, ಒಂದು ರೋಗದ ವಿಷಕಾರಿ ಜಂತದ ಅಸ್ತ್ರವಾಗಿ ತಾಂಡವಾಡುತ್ತಿದೆ.ಅಂತರ್ವಿವಾಹ, ಹಲವುವೇಳೆ ವೃತ್ತಿ, ಶ್ರೇಣಿವ್ಯವಸ್ಥೆಯಲ್ಲಿ ಸ್ಥಾನ, ರೂಢಿಗತ ಪರಸ್ಪರ ಸಾಮಾಜಿಕ ಸಂವಹನ, ಮತ್ತು ಬಹಿಷ್ಕಾರವು ಸೇರಿರುವ ಜೀವನಶೈಲಿಯ ಆನುವಂಶಿಕ ವರ್ಗಾವಣೆ ಇದರ ಲಕ್ಷಣಗಳಾಗಿವೆ. ಜಾತಿಯು ಕಾನೂನಾತ್ಮಕವಾಗಿ ನೆಲೆಗೊಂಡಿರುವ ಸಾಮಾಜಿಕ ವರ್ಗಗಳ ವ್ಯವಸ್ಥೆಯ ಅತಿಯಾದ ವಿಕಸನವಾಗಿದೆ. ಜಾತಿ ವ್ಯವಸ್ಥೆಗಳು ವಿವಿಧ ಪ್ರದೇಶಗಳಲ್ಲಿ ಇವೆಯಾದರೂ, ಕಟ್ಟುನಿಟ್ಟಾದ ಸಾಮಾಜಿಕ ಗುಂಪುಗಳಾಗಿ ಭಾರತೀಯ ಸಮಾಜದ ವಿಭಜನೆಯು ಇದರ ಮಾದರಿ ಜನಾಂಗೀಯ ಉದಾಹರಣೆಯಾಗಿದೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ Artificial Intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
[[ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.