The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು. ಅಭಿಮನ್ಯುವಿಗೆ ಸೌಭದ್ರ ಎಂಬ ಇನ್ನೊಂದು ಹೆಸರಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭ್ರಷ್ಟಾಚಾರವು ಯಾವುದೇ ವ್ಯಕ್ತಿ ನಿಯಮಬಾಹಿರವಾದ ಮತ್ತು ತನಗೆ ತಮ್ಮವರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ವಸ್ತು ಯಾ ಹಣ ಪಡೆಯುವುದು ಅಥವಾ ಲಾಭಮಾಡಿಕೊಳ್ಳುವುದು ಎನ್ನಬಹುದು. ಸಾರ್ವಜನಿಕ ಸೇವಾ ಸ್ಥಾನದಲ್ಲಿರುವವರು, ಜನ ಪ್ರತಿನಿಧಿಗಳು ಅಥವಾ ಸರಕಾರದ ಅಧಿಕಾರಿಗಳು ಯಾ ಸೇವಕರು ನಿಯಮ ಬಾಹಿರವಾಗಿ ಅಥವಾ ತಮ್ಮ ಆ ಸ್ಥಾನವನ್ನು ಉಪಯೋಗಿಸಿಕೊಂಡು ನಿಯಮಕ್ಕಿಂತ ಹೆಚ್ಚಿನ ಅಥವಾ ತಮಗೆ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ಲಾಭ ಪಡೆಯುವುದು. ತಮ್ಮ ಅಧಿಕಾರವನ್ನು ನಿಯಮಕ್ಕೆ ವಿರುದ್ಧವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳುವುದು.
ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ OLY (ಜನನ 24 ನವೆಂಬರ್ 1982) ಒಬ್ಬ ಭಾರತೀಯ ಹವ್ಯಾಸಿ ಬಾಕ್ಸರ್, ರಾಜಕಾರಣಿ ಮತ್ತು ಹಾಲಿ ಸಂಸತ್ತಿನ ಸದಸ್ಯ, ರಾಜ್ಯಸಭೆ. ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಗೆದ್ದ ಏಕೈಕ ಮಹಿಳೆ, ಮೊದಲ ಏಳು ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಪ್ರತಿಯೊಂದರಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಮತ್ತು ಎಂಟು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ಗೆದ್ದ ಏಕೈಕ ಬಾಕ್ಸರ್ (ಪುರುಷ ಅಥವಾ ಮಹಿಳೆ). ಮ್ಯಾಗ್ನಿಫಿಸೆಂಟ್ ಮೇರಿ ಎಂಬ ಅಡ್ಡಹೆಸರು ಹೊಂದಿರುವ ಅವರು 2012 ರ ಬೇಸಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಾಕ್ಸರ್, ಫ್ಲೈವೇಟ್ (51 ಕೆಜಿ) ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮದರ್ ತೆರೇಸಾಸುಮಾರು ೪೫ ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. ೧೯೭೦ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಭಾರತದ ರಾಷ್ಟ್ರೀಯ ಉದ್ಯಾನಗಳ ಹಾಗು ರಾಷ್ಟ್ರಮಟ್ಟದ ವನ್ಯಜೀವಿ ಧಾಮಗಳ ಪಟ್ಟಿ ಇಂತಿದೆ. ಸೂ: ಪೆಂಚ್ ರಾಷ್ಟ್ರೀಯ ಉದ್ಯಾನವು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ಹರಡಿದ್ದು ತಮ್ಮ ತಮ್ಮ ಭಾಗದ ಉಸ್ತುವಾರಿಯನ್ನು ಎರಡೂ ರಾಜ್ಯಗಳು ಬೇರೆಬೇರೆಯಾಗಿ ನೋಡಿಕೊಳ್ಳುತ್ತವೆ. ಸಂಜಯ್ ರಾಷ್ಟ್ರೀಯ ಉದ್ಯಾನವು ಛತ್ತೀಸ್ ಗಢ ಮತ್ತು ಮಧ್ಯಪ್ರದೇಶಗಳಲ್ಲಿ ಹರಡಿದ್ದು ತಮ್ಮ ತಮ್ಮ ಭಾಗದ ಉಸ್ತುವಾರಿಯನ್ನು ಎರಡೂ ರಾಜ್ಯಗಳು ಬೇರೆಬೇರೆಯಾಗಿ ನೋಡಿಕೊಳ್ಳುತ್ತವೆ.
ಪ್ರಾಚೀನ ಈಜಿಪ್ಟ್ ಪೌರಾತ್ಯ ಉತ್ತರ ಆಫ್ರಿಕಾದ ನೈಲ್ ನದಿ ದಂಡೆಯುದ್ದಕ್ಕೂ ಚಾಚಿಕೊಂಡಿದ್ದ ಒಂದು ಪುರಾತನ ನಾಗರಿಕತೆ, ಈ ಪ್ರದೇಶದಲ್ಲಿ ಈಗ ಆಧುನಿಕ ಈಜಿಪ್ಟ್ ಇದೆ. ಈ ನಾಗರಿಕತೆಯು ಸುಮಾರು ಕ್ರಿ.ಪೂ 3150ರ ಸಂದರ್ಭದಲ್ಲಿ ಒಳನಾಡು ಮತ್ತು ಕೆಳ ಈಜಿಪ್ಟಿನ ರಾಜಕೀಯ ಸಂಘಟನೆಯೊಂದಿಗೆ ಮೊದಲ ಫೇರೋನಡಿಯಲ್ಲಿ ಏಕೀಭವಗೊಂಡು, ನಂತರದ ಸುಮಾರು ಮೂರು ಸಹಸ್ರವರ್ಷಗಳಷ್ಟು ಕಾಲ ಬೆಳವಣಿಗೆ ಹೊಂದಿತು. ಇದರ ಇತಿಹಾಸವು ಸುಭದ್ರ ರಾಜ್ಯ ಗಳ ಸಂದರ್ಭದಲ್ಲಿ ಉತ್ತಮವಾಗಿತ್ತು, ನಂತರ ಈ ರಾಜ್ಯಗಳು 'ಮಧ್ಯಕಾಲೀನ ಯುಗ' ಎಂದು ಕರೆಯುವ ಪರಸ್ಪರ ಅಭದ್ರತೆಯ ಅವಧಿಯಲ್ಲಿ ಬೇರ್ಪಟ್ಟವು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಿಸುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಮಹಾನಗರಪಾಲಿಕೆಗಳು ಮಹಾನಗರಗಳ ಆಡಳಿತವನ್ನು ನಡೆಸುತ್ತವೆ. ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆಯಂತೆ ಒಂದು ನಗರ ಮಹಾನಗರಪಾಲಿಕೆ ದರ್ಜೆಗೇರಲು ಪೂರ್ಣ ನಗರ ಪ್ರದೇಶದಲ್ಲಿ ೨ ಲಕ್ಷ ಜನಸಂಖ್ಯೆ ಮತ್ತು ಸುತ್ತಲಿನ ಪ್ರದೇಶದಲ್ಲಿ ೧ ಲಕ್ಷ ಜನಸಂಖ್ಯೆ ಅಂದರೆ ಒಟ್ಟಾರೆ ೩ ಲಕ್ಷ ಜನಸಂಖ್ಯೆ ಇರಬೇಕು. ನಗರದ ಕಂದಾಯ ೬ ಕೋಟಿ ರೂಪಾಯಿಗಳಿಗೂ ಮಿಕ್ಕಿರಬೇಕು ಮತ್ತು ಜನಸಾಂದ್ರತೆ ಪ್ರತಿ ಚದರ ಕಿ.ಮಿ.ಗೆ ೩೦೦೦ ಮಿಕ್ಕಿರಬೇಕು.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ತ್ರಿಪದಿ ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ.
ಶಕುಂತಲಾ ದೇವಿ ( ಜನನ : ೧೯೩೯ , ಮರಣ ೨೦೧೩) ಸುಪ್ರಸಿದ್ಧ ಗಣಿತಜ್ಞೆ , ಜ್ಯೋತಿಷಿ, ಸಂಖ್ಯಾ ಶಾಸ್ತ್ರಜ್ಞೆ , ಎಲ್ಲಕ್ಕೂ ಮಿಗಿಲಾಗಿ ಅತ್ಯಂತ ಕಠಿಣ ಗಣಿತ ಸಮಸ್ಯೆಗಳನ್ನು ಶರವೇಗವಾಗಿ ಮನಸ್ಸಿನಲ್ಲೇ ಬಿಡಿಸಿ 'ಮಾನವ ಕಂಪ್ಯೂಟರ್' ಎಂದು ಹೆಸರಾದರು.ಇವರು ಬೆಂಗಳೂರಿನಲ್ಲಿ ೧೯೩೯ರ ನವೆಂಬರ್ ೪ರಂದು ಹುಟ್ಟಿದರು. ೨೦೧೩ರ ಏಪ್ರಿಲ್ ೨೧ರಂದು ಬೆಂಗಳೂರಿನ ತಮ್ಮ ಮನೆಯಲ್ಲಿ ತಮ್ಮ ೭೪ ನೇ ವಯಸ್ಸಿನಲ್ಲಿ ತೀರಿಕೊಂಡರು. 'ಅಸ್ಟ್ರಾಲಜಿ ಫರ್ ಯೂ', 'ಜಾಯ್ ಆಫ್ ನಂಬರ್ಸ್', 'ಪಜಲ್ಸ್ ಟು ಪಜಲ್ಸ್ ಯು' ಮುಂತಾದ ಪುಸ್ತಕಗಳನ್ನು ಬರೆದಿದ್ದಾರೆ.