The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಈ ಚಿತ್ರವನ್ನು ದ್ವಾರಕೀಶ್ ಅವರು ನಿರ್ದೇಶಿಸಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಬರುವ ಪಾತ್ರಗಳು ಅಂಬರೀಶ್, ರಜನಿ, ಶಿವರಾಂ, ಕ್ಯಾಪ್ಟನ್ ರಾಜು, ರತ್ನಾಕರ್ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ವಿಜಯಾನಂದ್.ಈ ಚಿತ್ರದ ಛಾಯಾಗ್ರಹಕರು ದೇವಿಪ್ರಸಾದ್.ಈ ಚಿತ್ರದ ಹಿನ್ನಲೆ ಗಾಯಕರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಈ ಚಿತ್ರವು ೧೯೮೯ ರಲ್ಲಿ ಬಿಡುಗಡೆಯಾಯಿತು.ಈ ಚಿತ್ರವು ಹಿಂದಿ ಚಲನಚಿತ್ರ "ಮಿಸ್ಟರ್ ಇಂಡಿಯಾ"ದಿಂದ ಪ್ರೇರಿತವಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಕದಂಬ ಮನೆತನ : ಪಶ್ಚಿಮ ಕರ್ನಾಟಕದಲ್ಲಿ ಪ್ರ.ಶ. ೪-೭ನೆಯ ಶತಮಾನದವರೆಗೆ ಸ್ವತಂತ್ರರಾಗಿಯೂ ೧೦-೧೩ನೆಯ ಶತಮಾನದವರೆಗೆ ಹಾನುಗಲ್ಲು, ಗೋವ ಮುಂತಾದ ಕಡೆಗಳಲ್ಲಿ ಬಹುತೇಕ ಸಾಮಂತರು ಅಥವಾ ಮಾಂಡಲಿಕರಾಗಿಯೂ ಆಳಿದ ಒಂದು ರಾಜಮನೆತನ. ಈ ಮನೆತನದ ಅರಸರಿಗೆ ಸಂಬಂಧಿಸಿದ ಶಾಸನಗಳು ಮತ್ತು ದಿನಾಂಕಗಳನ್ನು ಆಯಾ ಅರಸರ ಆಳ್ವಿಕೆಯ ವರ್ಷ ಮಾಸ ಪಕ್ಷ ದಿನಗಳ ಎಣಿಕೆಯಲ್ಲಿ ನಿರೂಪಿಸಿರುವುದರಿಂದ ಇವಕ್ಕೆ ಸಮಾನವಾದ ತಾರೀಖುಗಳನ್ನು ನಿಷ್ಕರ್ಷಿಸುವುದು ಕಷ್ಟವೆಂದು ಹೇಳಲಾಗಿದೆ.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು. ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ಧಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಆಲೂರು ವೆಂಕಟ ರಾವ್ (ಕೆಲವೊಮ್ಮೆ ಆಲೂರು ವೆಂಕಟ ರಾಯ ಎಂದೂ ಕರೆಯುತ್ತಾರೆ) (12 ಜುಲೈ 1880 – 25 ಫೆಬ್ರವರಿ 1964) ಒಬ್ಬ ಭಾರತೀಯ ಇತಿಹಾಸಕಾರ, ಬರಹಗಾರ ಮತ್ತು ಪತ್ರಕರ್ತ. ಪ್ರತ್ಯೇಕ ಕರ್ನಾಟಕ ರಾಜ್ಯದ ಉದ್ದೇಶಕ್ಕಾಗಿ ಅವರು ನೀಡಿದ ಕೊಡುಗೆಗಾಗಿ ಅವರನ್ನು ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಕುಲಪುರೋಹಿತ ( ಕನ್ನಡ ಕುಟುಂಬದ ಪ್ರಧಾನ ಅರ್ಚಕ ) ಎಂದು ಪೂಜಿಸುತ್ತಾರೆ. ಮೈಸೂರು, ಬಾಂಬೆ ಪ್ರೆಸಿಡೆನ್ಸಿ ಮತ್ತು ನಿಜಾಮರ ಹೈದರಾಬಾದ್ನ ಕನ್ನಡ ಮಾತನಾಡುವ ಜನರಿಗಾಗಿ ರಾಜ್ಯ ರಚನೆಗೆ ಬೆಂಬಲವಾಗಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಕೈಗೊಂಡಿದ್ದಕ್ಕಾಗಿ ಅವರು ಪ್ರಸಿದ್ಧರಾದ್ದಾರೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ನರಕ ಚತುರ್ದಶಿ ( ಕಾಳಿಯಾ ಚೌದಸ್ , ರೂಪ್ ಚೌದಸ್, ಛೋಟಿ ದೀಪಾವಳಿ, ನರಕ ನಿವಾರಣ ಚತುರ್ದಶಿ ಅಥವಾ ಭೂತ ಚತುರ್ದಶಿ ಎಂದೂ ಕರೆಯಲಾಗುತ್ತದೆ) ಹಿಂದೂ ಪಂಚಾಂಗದಲ್ಲಿ ಶಾಲಿವಾಹನ ಶಕೆಯ ಅಶ್ವಿನ ತಿಂಗಳಿನ ಕೃಷ್ಣ ಪಕ್ಷದಲ್ಲಿ ಚತುರ್ದಶಿ ಅಂದರೆ ೧೪ನೇ ದಿನ ಬರುವ ಹಬ್ಬವಾಗಿದೆ. ಇದು ಐದು ದಿನಗಳ ಕಾಲ ನಡೆಯುವ ದೀಪಾವಳಿ ಹಬ್ಬದ ಎರಡನೇ ದಿನವಾಗಿದೆ. ಈ ದಿನ ಅಸುರ (ರಾಕ್ಷಸ) ನರಕಾಸುರನನ್ನು ಕೃಷ್ಣ, ಸತ್ಯಭಾಮ ಮತ್ತು ಕಾಳಿ ಕೊಂದರು ಎಂದು ಹಿಂದೂ ಸಾಹಿತ್ಯವು ಹೇಳುತ್ತದೆ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು, ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾದಾನ ಪತ್ರ ಬರೆದಿದ್ದಾರೆ ಇವರು ಕೆಲವು ಬಾರಿ ಬ್ರಿಟಿಷರ ಏಜೆಂಟ್ ತರಹ ವರ್ತಿಸಿದರು,ಭಾರತ ಸ್ವಾತಂತ್ರ್ಯ ಬಂದ ನಂತರ ಸರ್ದಾರ್ ವಲ್ಲಭಭಾಯ್ ಪಟೇಲ್ , ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರನ್ನು ಗಾಂಧೀಜಿ ಅವರ ಜೊತೆ ಸೇರಿ ಕುತಂತ್ರ ಮಾಡಿ ಭಾರತದ ಪ್ರಧಾನಮಂತ್ರಿ ಆಗದಂತೆ ತಡೆದು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಿತ್ರರಂಗದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಕನ್ನಡ ರಂಗಭೂಮಿಯ ಪರಂಪರೆ ಅತಿ ಪ್ರಾಚೀನವಾದದ್ದೆಂಬುದರಲ್ಲಿ ಸಂದೇಹವಿಲ್ಲ. ಕನ್ನಡ ರಂಗಭೂಮಿಯ ಪ್ರಕಾರಗಳಲ್ಲಿ ಗೊಂಬೆಯಾಟ, ತೊಗಲು ಗೊಂಬೆಯಾಟ, ಬಯಲಾಟ ದಶಾವತಾರ ಎಂದು ಕರೆಯುವ ಯಕ್ಷಗಾನದ ಆಟಗಳು (ಅದರ ತೆಂಕು ಬಡಗು ಎಂಬ ಪ್ರಭೇದ), ದೊಡ್ಡಾಟ(ಮೂಡಲಪಾಯ ಎನ್ನುವುದು ಅಧ್ಯಯನಕ್ಕೆ ಇಟ್ಟ ಹೆಸರು), ಘಟ್ಟದಕೋರೆ, ಶನಿಕಥೆ ಆಟ, ಕೃಷ್ಣಪಾರಿಜಾತ ಎನ್ನುವ ದೊಡ್ಡಾಟದ ಪ್ರಕಾರಗಳು ಮತ್ತು ನಾಟಕಗಳು ಪ್ರಮುಖವಾಗಿವೆ. ಪಾರ್ತಿಸುಬ್ಬನ ರಾಮಾಯಣದ ಯಕ್ಷಗಾನದ ಪ್ರಸಂಗಗಳು (ಸೀತಾಪಹಾರ, ವಾಲೀ ವಧಾ, ರಾವಣಾ ವಧಾ) ಸುಮಾರು ೧೬ನೇ ಶತಮಾನದವು.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಹ್ಯಾಲೋವೀನ್ (Halloween ಅಥವಾ Hallowe'en ಎಂದೂ ಬರೆಯುತ್ತಾರೆ) ಎನ್ನುವುದು ಅಕ್ಟೋಬರ್ 31ನೇ ತಾರೀಖಿನಂದು ಆಚರಿಸುವ ಒಂದು ವಾರ್ಷಿಕ ಹಬ್ಬವಾಗಿದೆ. ಇದು, ಮೂಲತಃ ಸೆಲ್ಟ್ ಜನಗಳ ಸೋಯಿನ್ ಹಬ್ಬವಾಗಿದೆ ಮತ್ತು ಕ್ರಿಶ್ಚಿಯನ್ನರ ಪವಿತ್ರ ದಿನವಾದ ಆಲ್ ಸೇಂಟ್ಸ್ ಇವುಗಳಲ್ಲಿ ತನ್ನ ಬೇರನ್ನು ಹೊಂದಿದೆ. ಆದರೆ ಇಂದು ಇದನ್ನು ಜಾತ್ಯಾತೀತವಾಗಿ ದೊಡ್ಡ ಪ್ರಮಾಣದಲ್ಲಿ ಎಲ್ಲೆಡೆಯಲ್ಲಿಯೂ ಆಚರಿಸಲಾಗುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಭಾಷಾ ನೀತಿಯಲ್ಲಿ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆಯ ಹಕ್ಕಿಗಾಗಿ ೧೯೮೦ರ ದಶಕದಲ್ಲಿ ನಡೆದ ಒಂದು ಚಳವಳಿ/ಆಂದೋಲನವೇ ಗೋಕಾಕ್ ಚಳವಳಿ ತ್ರಿಭಾಷಾ ಸೂತ್ರದಡಿಯಲ್ಲಿ ಕರ್ನಾಟಕದ ಶಾಲೆಗಳಲ್ಲಿ ಕನ್ನಡವನ್ನು ಮುಖ್ಯ ಭಾಷೆಯನ್ನಾಗಿ ಪರಿಗಣಿಸಬೇಕು ಎನ್ನವಂತಹ ಹಲವಾರು ಬೇಡಿಕೆಗಳನ್ನೊಳಗೊಂಡ ವರದಿಯೊಂದನ್ನು ಕನ್ನಡದ ಕವಿ ವಿ.ಕೃ ಗೋಕಾಕ್ ರು ಸಿದ್ಧಪಡಿಸಿ ಸಲ್ಲಿಸಿದ್ದರು, ಆದ ಕಾರಣ ಚಳವಳಿಗೆ ಅವರದೇ ಹೆಸರು ಬಂದಿದೆ. ವಿ.ಕೃ ಗೋಕಾಕ್ ತಂಡಕೆ ಹಲವಾರು ಭಾಷಾ ವ್ಯಾಸಂಗರವರು ವಿರೋಧ ಮಾಡಿದರು. ಈ ಸಮಯದಲ್ಲಿ ನಾಯಕತ್ವ ಹುಡುಕುವ ಸಂದರ್ಭ ಬಂದಿತು ಮತ್ತೆ ಆ ನಾಯಕ ಬೇರೆ ಯಾರು ಅಲ್ಲ ಅದು ಡಾ|| ರಾಜಕುಮಾರ್.
ಕರ್ನಾಟಕ ರಾಜ್ಯ ಸರ್ಕಾರವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಯಾಗಿದ್ದು, ರಾಜ್ಯಪಾಲರು ಸಾಂವಿಧಾನಿಕ ಮುಖ್ಯಸ್ಥರಾಗಿರುತ್ತಾರೆ. ಐದು ವರ್ಷಗಳ ಕಾಲ ನೇಮಕಗೊಳ್ಳುವ ರಾಜ್ಯಪಾಲರು ಮುಖ್ಯಮಂತ್ರಿಯನ್ನು ನೇಮಿಸುತ್ತಾರೆ ಮತ್ತು ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ ಅವರ ಮಂತ್ರಿ ಮಂಡಳಿಯನ್ನು ನೇಮಿಸುತ್ತಾರೆ. ರಾಜ್ಯಪಾಲರು ರಾಜ್ಯದ ವಿಧ್ಯುಕ್ತ ಮುಖ್ಯಸ್ಥರಾಗಿ ಉಳಿದಿದ್ದರೂ ಸಹ, ಸರ್ಕಾರದ ದಿನನಿತ್ಯದ ಓಟವನ್ನು ಮುಖ್ಯಮಂತ್ರಿ ಮತ್ತು ಅವರ ಮಂತ್ರಿ ಮಂಡಳಿಯು ನೋಡಿಕೊಳ್ಳುತ್ತದೆ, ಇದರಲ್ಲಿ ಹೆಚ್ಚಿನ ಪ್ರಮಾಣದ ಶಾಸಕಾಂಗ ಅಧಿಕಾರಗಳನ್ನು ನೀಡಲಾಗುತ್ತದೆ.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.