The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದುಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sowthe seeds to get ripen fruits.) ಹಾವೂ ಸಾಯ್ಬಾರದು, ಕೋಲೂಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English:from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಒಳಮಾಳಿಗೆ : ಮಾಳಿಗೆಯ ಒಳ ಭಾಗಕ್ಕೆ ಈ ಹೆಸರಿದೆ (ಸೀಲಿಂಗ್), ಒಳ ಎಂದರೆ ಮನೆಯ ಒಂದು ಕೊಠಡಿಯಲ್ಲಿ ನಿಂತು ಮೇಲೆ ನೋಡಿದರೆ ಕಾಣುವ ಸೂರಿನ ಒಳಭಾಗ ಎಂದರ್ಥ. ಎಂದರೆ ಪೂರ್ವಕಾಲದಲ್ಲಿ ಮರದ ತೀರುಗಳನ್ನೆಳೆದು ಅವುಗಳ ಮೇಲೆ ಮರದ ಮಾಡನ್ನು ಕಟ್ಟುತ್ತಿದ್ದಾಗ ತೀರುಗಳು ಒಳಗಿನಿಂದ ಕಾಣದ ಹಾಗೆ ಮುಚ್ಚುವುದಕ್ಕಾಗಿ ಒಳಮಾಳಿಗೆಗಳನ್ನು ಮಟ್ಟವಾಗಿ ಮರದ ಹಲಗೆಗಳಿಂದ ಮಾಡುತ್ತಿದ್ದರು. ಈಚೆಗೆ ಉಕ್ಕಿನ ಸರಕಟ್ಟುಗಳಿಂದ ಮಾಡಿದ ಮಾಡಿನ ಕೆಳಗೂ ಇಂಥ ಒಳಮಾಳಿಗೆಗಳು ಅವಶ್ಯವಾಗುತ್ತಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಚಂದ್ರಯಾನ-೩ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯ ಯೋಜಿತ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾಗಿದೆ. ಚಂದ್ರಯಾನ-೨ ರಲ್ಲಿ, ಸಾಫ್ಟ್ ಲ್ಯಾಂಡಿಂಗ್ ಮಾರ್ಗದರ್ಶನ ಸಾಫ್ಟ್ವೇರ್ನಲ್ಲಿ ಉಂಟಾದ ಕೊನೆಯ ನಿಮಿಷದ ದೋಷವು ಲ್ಯಾಂಡರ್ನ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನದ ವಿಫಲತೆಗೆ ಕಾರಣವಾಯಿತು, ಸಾಫ್ಟ್ ಲ್ಯಾಂಡಿಂಗ್ ಅನ್ನು ಪ್ರದರ್ಶಿಸಲು ಮತ್ತೊಂದು ಚಂದ್ರನ ಕಾರ್ಯಾಚರಣೆಯನ್ನು ಪ್ರಸ್ತಾಪಿಸಲಾಯಿತು. ಚಂದ್ರಯಾನ-೩ ಚಂದ್ರಯಾನ-೨ರ ಮಿಷನ್ ಪುನರಾವರ್ತನೆ ಆದರೆ ಚಂದ್ರಯಾನ-೨ರಂತೆಯೇ ಲ್ಯಾಂಡರ್ ಮತ್ತು ರೋವರ್ ಅನ್ನು ಮಾತ್ರ ಒಳಗೊಂಡಿರುತ್ತದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ತಂತ್ರಜ್ಞಾನವು ಒಂದು ಜೀವಜಾತಿಯಿಂದ ಉಪಕರಣಗಳು ಹಾಗೂ ಕುಶಲಕರ್ಮಗಳ ಬಳಕೆ ಮತ್ತು ಜ್ಞಾನಕ್ಕೆ ಸಂಬಂಧಿಸಿರುವ, ಮತ್ತು ಒಂದು ಜೀವಜಾತಿಯ ಪರಿಸರವನ್ನು ನಿಯಂತ್ರಿಸಲು ಹಾಗೂ ಅದಕ್ಕೆ ಹೊಂದಿಕೊಳ್ಳಲು ಜೀವಜಾತಿಯ ಸಾಮರ್ಥ್ಯದ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆಂಬುದನ್ನು ತಿಳಿಸುವ ಒಂದು ವಿಶಾಲವಾದ ಪರಿಕಲ್ಪನೆಯಾಗಿದೆ. ಆದರೆ, ಒಂದು ನಿಖರವಾದ ವ್ಯಾಖ್ಯಾನ ಸಾಧ್ಯವಿಲ್ಲ; "ತಂತ್ರಜ್ಞಾನವು" ಮಾನವಕುಲಕ್ಕೆ ಉಪಯುಕ್ತವಾಗಿರುವ ಯಂತ್ರಗಳು, ಯಂತ್ರಾಂಶ ಅಥವಾ ಗೃಹೋಪಕರಣಗಳಂತಹ ಭೌತಿಕ ವಸ್ತುಗಳನ್ನು ನಿರ್ದೇಶಿಸಬಹುದು, ಆದರೆ, ವ್ಯವಸ್ಥೆಗಳು, ಸಂಘಟನೆಯ ವಿಧಾನಗಳು, ಮತ್ತು ತಂತ್ರಗಳ ಸಹಿತ ಹೆಚ್ಚು ವಿಶಾಲವಾದ ವಿಷಯಗಳನ್ನೂ ಒಳಗೊಳ್ಳಬಹುದು. ಒಂದು ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ , ಒಂದು ಸಮಸ್ಯೆಗೆ ಮೊದಲೇ ಅಸ್ತಿತ್ವದಲ್ಲಿರುವ ಪರಿಹಾರ ಸುಧಾರಿಸಲು ಒಂದು ಗುರಿಯನ್ನು ಸಾಧಿಸಲು , ಒಂದು ಅನ್ವಯಿಕ ಇನ್ಪುಟ್ ಔಟ್ಪುಟ್ ಸಂಬಂಧಿಸಿದಂತೆ ನಿರ್ವಹಿಸಲು ಅಥವಾ ಒಂದು ನಿರ್ದಿಷ್ಟ ಕಾರ್ಯ ನಿರ್ವಹಿಸಲು, ಇದು ಯಂತ್ರಗಳು , ಮಾರ್ಪಾಡುಗಳನ್ನು , ವ್ಯವಸ್ಥೆಗಳು, ಕಾರ್ಯವಿಧಾನಗಳು ಸೇರಿದಂತೆ ಉಪಕರಣಗಳ ,ಜ್ಞಾನದ ಸಂಗ್ರಹ ಎಂದು ಉಲ್ಲೇಖಿಸಬಹುದು .
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಹಿಂದೂ ಧರ್ಮ ದಲ್ಲಿ , ಸೂರ್ಯದೇವ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] Error: {{Lang}}: text has italic markup (help); ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು , ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು , ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.೧೯೪೭ರಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ೧೯೯೧ರ ವರೆಗೆ, ಅನುಕ್ರಮದ ಸರ್ಕಾರಗಳು ವ್ಯಾಪಕ ಸರ್ಕಾರಿ ಹಸ್ತಕ್ಷೇಪ ಮತ್ತು ನಿಯಂತ್ರಣವುಳ್ಳ ರಕ್ಷಣಾವಾದಿ ಆರ್ಥಿಕ ನೀತಿಗಳನ್ನು ಪ್ರೋತ್ಸಾಹಿಸಿದವು; ಶೀತಲ ಸಮರದ ಅಂತ್ಯ ಮತ್ತು ೧೯೯೧ ರಲ್ಲಿ ತೀವ್ರ ಪಾವತಿ ಬಾಕಿ ಬಿಕ್ಕಟ್ಟಿನ ಕಾರಣ ಭಾರತವು ಆರ್ಥಿಕ ಉದಾರೀಕರಣದ ವಿಶಾಲ ಕಾರ್ಯಕ್ರಮವನ್ನು ಅಳವಡಿಸಿಕೊಂಡಿತು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಬೈಜಿಕ ಬೌತಶಾಸ್ತ್ರ ಮತ್ತು ಬೈಜಿಕ ರಸಾಯನಶಾಸ್ತ್ರದಲ್ಲಿ , ಬೈಜಿಕ ವಿದಳನವು ಬೈಜಿಕ ಪ್ರತಿಕ್ರಿಯೆ ಅಥವಾ ವಿಕಿರಣ ಶೀಲ ಕ್ಷೀಣತೆ ಪ್ರಕ್ರಿಯೆಯಾಗಿದ್ದು, ಇಲ್ಲಿ ಬೀಜಕೇಂದ್ರವು ವಿದಳನ ಹೊಂದಿ ಸಣ್ಣ ಸಣ್ಣ ಬೀಜ (ಹಗುರ ಬೀಜ)ಗಳಾಗಿ ವಿಭಜನೆ ಹೊಂದುತ್ತದೆ.ವಿದಳನ ಕ್ರಿಯೆಯು ಪ್ರತಿಸಲವು ನ್ಯೂಟ್ರಾನ್ಗಳನ್ನು ಮತ್ತು ಫೋಟಾನ್(ಗಾಮಾ ಕಿರಣಗಳ ರೂಪದಲ್ಲಿ)ಗಳನ್ನು ಬಿಡುಗಡೆಗೊಳಿಸುತ್ತವೆ.ಮತ್ತು ಇದರೊಂದಿಗೆ ವಿಕಿರಣ ಶೀಲ ಧಾತುಗಳಿಂದ ಬಿಡುಗಡೆಯಾಗುವ ಪ್ರಮಾಣೀಕೃತ ಮಟ್ಟದ ಶಕ್ತಿಗಿಂತಲೂ ಅಗಾಧ ಪ್ರಮಾಣದ ಶಕ್ತಿಯನ್ನು ಬಿಡುಗಡೆಗೊಳಿಸುತ್ತದೆ. ಡಿಸೆಂಬರ್ ೧೭ರ ೧೯೩೮ರಲ್ಲಿ ಜರ್ಮನಿಯ ಓಟ್ಟೋ ಹಾನ್ ಎಂಬಾತನಿಂದ ಆವಿಷ್ಕಾರದಿಂದಾಗಿ ಭಾರವಾದ ಧಾತುಗಳಿಂದ ಬೀಜ ವಿದಳನ ಕ್ರಿಯೆ ಜರುಗುತ್ತದೆ ಎಂದು ತಿಳಿದು ಬಂತು.ಮತ್ತು ೧೯೩೯ ರಲ್ಲಿ ಅವನ ಸಹಾಯಕರಾದ ಪ್ರಿಟ್ಞ ಸ್ಟ್ರಾಸಮನ್ ಮತ್ತು ಲೈಸ್ ಮೆಟನರ್ ಹಾಗೂ ಓಟ್ಟೋ ಹಾನ್ನ ಸಂಬಂಧಿಕಳಾದ ಒಟ್ಟೊ ರಾಬರ್ಟ ಪ್ರಿಶ್ಚ ರವರು ವಿದಳನದ ಸೈದ್ಧಾಮತಿಕ ವಿವರಣೆಯನ್ನು ನೀಡಿದರು.ಪ್ರಿಶ್ಚರವರು ಜೀವಕೋಶಗಳಲ್ಲಿ ಜರುಗುವ ಜೈವಿಕ ವಿದಳನ ಕ್ರಿಯೆಗೆ ಸಾದೃಷ್ಯವಾಗಿ ಬೈಜಿಕ ವಿದಳನ ಕ್ರಿಯೆಯನ್ನು ಹೆಸರಿಸಿದರು.ಇದೊಂದು ಬಹಿರ್ ಉಷ್ಣ ಕ್ರಿಯೆಯಾಗಿದ್ದು ಅದು ಬಿಡುಗಡೆಗೊಳಿಸುವ ಅಗಾಧ ಪ್ರಮಾಣದ ಶಕ್ತಿಯ ಭಾಗಗಳು ವಿದ್ಯುತ್ಕಾಂತೀಯ ವಿಕಿರಣ ಮತ್ತು ಚಲನ ಶಕ್ತಿ ಎರಡನ್ನೂ ಒಳಗೊಂಡಿದೆ.ವಿದಳನ ಕ್ರಿಯೆಯಿಂದ ಶಕ್ತಿಬಿಡುಗಡೆಗೊಳ್ಳ ಬೇಕಾದರೆ ಪ್ರತಿಕ್ರಿಯೆಯ ನಂತರ ಉಂಟಾಗುವ ಧಾತುಗಳ ಬಂಧಕ ಶಕ್ತಿಗಿಂತ ಮುಂಚೆಯ ಧಾತುಗಳ ಬಂಧಕ ಶಕ್ತಿಗಿಂತ ಕಡಿಮೆ ಇರಬೇಕು. ವಿದಳನವು ಒಂದು ರೀತಿಯ ಬೈಜಿಕ ಪರಿವರ್ತನಾ ಕ್ರಿಯೆಯಾಗಿದೆ, ಏಕೆಂದರೆ ನಂತರ ಉಂಟಾಗುವ ಮುಂಚಿನ ಧಾತುಗಳಿಗಿಂತ ಭಿನ್ನವಾಗಿರುತ್ತವೆ.ಮತ್ತು ಉಂಟಾಗುವ ಎರಡು ಬೀಜಗಳು ಹೋಲಿಕೆ ಮಾಡಬಲ್ಲವಾಗಿವೆ, ಅದರೆ ಗಾತ್ರದಲ್ಲಿ ಬಿನ್ನವಾಗಿವೆ, ಸಾಮಾನ್ಯವಾಗಿ ೩ ರಿಂದ ೨ ವಿದಳನೀಯ ಸಮಸ್ಥಾನಿಗಳ ದ್ರವ್ಯರಾಶಿ ಅನುಪಾತಗಳಿಗೆ ಹೋಲಿಸಲಾಗಿ ಬಿನ್ನವಾಗುತ್ತವೆ.ಬಹಳಷ್ಟು ವಿದಳನಗಳು ದ್ವೀವಿದಳನವಾಗಿದೆ(ಎರಡು ವಿದ್ಯುದಂಶ ಹೊಂದಿದ ಉತ್ಪನ್ನಗಳು), ಆದರೆ ಸಾಂಧರ್ಬಿಕವಾಗಿ ( ೧೦೦೦ ವಿದಳನದಲ್ಲಿ ೨ ಅಥವಾ ೪ ಬಾರಿ ಮಾತ್ರ) ತೃತೀಯಕ ವಿದಳನದಲ್ಲಿ ಮೂರು ಧನ ವಿದ್ಯುದಂಶ ಹೊಂದಿರುವ ಭಾಗಗಳು ಉಂಟಾಗುತ್ತವೆ.ಈ ಭಾಗಗಳಲ್ಲಿ ಅತ ಚಿಕ್ಕ ಭಾಗಗಳ ಗಾತ್ರವು ಫೋಟಾನ್ನ ಬೀಜಕೇಂದ್ರದಿಂದ ಅರ್ಗಾನ್ ಬೀಜಕೇಂದ್ರದವರೆಗೂ ಇರಬಹುದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಈ ಲೇಖನ ಸಮಾಜ ವಿಜ್ಞಾನದ ಬಗ್ಗೆ. ಅರ್ಥಶಾಸ್ತ್ರ ಪದದ ಇತರ ಬಳಕೆಗಳಿಗಾಗಿ ಅರ್ಥಶಾಸ್ತ್ರ (ದ್ವಂದ್ವ ನಿವಾರಣೆ) ನೋಡಿ.ಅರ್ಥಶಾಸ್ತ್ರವು ಸರಕುಗಳ ಮತ್ತು ಸೇವೆಗಳ ಉತ್ಪಾದನೆ, ಹಂಚುವಿಕೆ ಮತ್ತು ಬಳಕೆಗಳನ್ನು ಅಧ್ಯಯನ ಮಾಡುವ ಒಂದು ಸಮಾಜ ವಿಜ್ಞಾನ. ಪ್ರಚಲಿತ ಆರ್ಥಿಕ ವಿನ್ಯಾಸಗಳು, ಭೌತಿಕ ವಿಜ್ಞಾನಗಳಿಗೆ ಹೆಚ್ಚಿನ ಸಮಾನ ಧರ್ಮವುಳ್ಳ ಒಂದು ಪ್ರಾಯೋಗಿಕ ಹಾದಿ ಬಳಸುವ ಒಂದು ಅಪೇಕ್ಷೆಗೆ ಬದ್ಧವಾಗಿ, ೧೯ನೇ ಶತಮಾನದಲ್ಲಿ ತಡವಾಗಿ ರಾಜಕೀಯ ಆರ್ಥಿಕ ವ್ಯವಸ್ಥೆಯ ವಿಶಾಲವಾದ ವ್ಯಾಪ್ತಿಯಿಂದ ಹೊರಹೊಮ್ಮಿದವು.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.