The most-visited ಕನ್ನಡ Wikipedia articles, updated daily. Learn more...
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳ ನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.
ರಾಮನ್ ಪರಿಣಾಮ ಎಂದರೆ ಏಕವರ್ಣೀಯ ಬೆಳಕು (ಮಾನೊಕ್ರೊಮ್ಯಾಟಿಕ್ ಲೈಟ್) ಪಾರದರ್ಶಕ ಮಾಧ್ಯಮದ (ಟ್ರ್ಯಾನ್ಸ್ಪೆರೆಂಟ್ ಮೀಡಿಯಮ್) ಮೂಲಕ ಹಾದುಹೋಗುವಾಗ ಆ ಮಾಧ್ಯಮದ ಅಣುಗಳೊಂದಿಗೆ ಅಂತರವರ್ತಿಸಿ ಶಕ್ತಿಯನ್ನು ಕಳೆದುಕೊಳ್ಳುವುದರಿಂದ ಇಲ್ಲವೆ ಪಡೆಯುವುದರಿಂದ ಚದರಿದ ಬೆಳಕಿನ ಆವರ್ತಾಂಕದಲ್ಲಿ (ಫ್ರೀಕ್ವೆನ್ಸಿ) ಬದಲಾವಣೆಯಾಗಿ ಹೆಚ್ಚುವರಿ ರೋಹಿತ ರೇಖೆಗಳು ಕಾಣಿಸುವ ವಿದ್ಯಮಾನ (ರಾಮನ್ ಎಫೆಕ್ಟ್). ಯಾವುದೇ ಪಾರದರ್ಶಕ ರಾಸಾಯನಿಕ ವಸ್ತುವಿನ ಮೂಲಕ ಬೆಳಕನ್ನು ಹಾಯಿಸಿದಾಗ ಅದರಿಂದ ಹೊರಬರುವ ಕಿರಣಗಳು ಒಳಬರುವ ಕಿರಣಗಳಿಗಿಂತ ಭಿನ್ನವಾದ ದಿಕ್ಕಿನತ್ತ ಹೊರಳಿರುವುದನ್ನು ನೋಡಬಹುದು (ಗಾಜಿನ ಪಟ್ಟಕದ ಮೂಲಕ ಬೆಳಕನ್ನು ಹಾಯಿಸುವ ಉದಾಹರಣೆ ನೆನಪಿಸಿಕೊಳ್ಳಬಹುದು). ಹೀಗೆ ಚದುರಿದ ಬಹುಪಾಲು ಕಿರಣಗಳ ಸ್ವರೂಪ ಮೂಲ ಕಿರಣದಂತೆಯೇ ಇರುತ್ತದಾದರೂ ಒಂದಷ್ಟು ಭಾಗದ ಕಿರಣಗಳ ತರಂಗಾಂತರ ಮೂಲಕ್ಕಿಂತ ಬದಲಾಗಿರುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದುಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sowthe seeds to get ripen fruits.) ಹಾವೂ ಸಾಯ್ಬಾರದು, ಕೋಲೂಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English:from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು.ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ. ಈ ಶೈಲಿಯಲ್ಲಿ ನವರತ್ನಗಳನ್ನು ಉಪಯೋಗಿಸಿಕೊಂಡು ರಚಿತವಾದ ಆಭರಣ ಹಿಂದೂ ಧರ್ಮ, ಜೈನ್ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮ ಪ್ರಮುಖ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಇತರ ಧರ್ಮಗಳ ನಡುವೆ ಹೊಂದಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಪಾಂಡವರು ಮಹಾಭಾರತದ ಮಹಾಕಾವ್ಯದ ಪ್ರಮುಖ ಪಾತ್ರಗಳಾದ ಯುಧಿಷ್ಠಿರ, ಭೀಮ, ಅರ್ಜುನ, ನಕುಲ ಮತ್ತು ಸಹದೇವ ಎಂಬ ಐದು ಸಹೋದರರನ್ನು ಉಲ್ಲೇಖಿಸಲಾಗಿದೆ. ಅವರನ್ನು ಕುರು ರಾಜ ಪಾಂಡುವಿನ ಪುತ್ರರೆಂದು ಪರಿಗಣಿಸಲಾಗುತ್ತಿತ್ತು, ಆದರೆ ಪಾಂಡುವಿನ ಮಕ್ಕಳನ್ನು ಹೊಂದಲು ಅಸಮರ್ಥತೆಯಿಂದಾಗಿ ಕುಂತಿ-ಮಾದ್ರಿಯರು ಬೇರೆ ಬೇರೆ ದೇವರುಗಳಿಂದ ಪಾಂಡವರನ್ನು ಪಡೆದರು. ಪಾಂಡವರು ದ್ರೌಪದಿ ಎಂಬ ಹೆಂಡತಿಯನ್ನು ಹಂಚಿಕೊಂಡರು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಮೊರಾರ್ಜಿ ದೇಸಾಯಿ ಮೊರಾರ್ಜಿ (೨೯ ಫೆಬ್ರವರಿ ೧೮೯೬ - ೧೦ ಏಪ್ರಿಲ್ ೧೯೯೫) ಒಬ್ಬ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಮತ್ತು ೧೯೮೭ ರಿಂದ ೧೯೭೯ ರವರೆಗೆ ಭಾರತದಲ್ಲಿ ೪ ನೇ ಪ್ರಧಾನಿಯಾಗಿ(ಜನತಾ ಪಾರ್ಟಿ) ಸರ್ಕಾರಕ್ಕೆ ಸೇವೆ ಸಲ್ಲಿಸಿದರು. ಅವರ ಸುದೀರ್ಘ ವೃತ್ತಿಜೀವನದ ಅವಧಿಯಲ್ಲಿ, ಅವರು ಹಲವಾರು ಪ್ರಮುಖ ಹುದ್ದೆಗಳನ್ನು ಸರ್ಕಾರದಲ್ಲಿ ಹೊಂದಿದ್ದರು: ಮುಂಬಯಿ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವ, ಹಣಕಾಸು ಸಚಿವ ಮತ್ತು ಭಾರತದ ಉಪ ಪ್ರಧಾನ ಮಂತ್ರಿ. ಅಂತರರಾಷ್ಟ್ರೀಯ ಸನ್ನಿವೇಶದಲ್ಲಿ, ದೇಸಾಯಿ ತಮ್ಮ ಶಾಂತಿ ಕ್ರಿಯಾವಾದಕ್ಕಾಗಿ ಅಂತಾರಾಷ್ಟ್ರೀಯ ಖ್ಯಾತಿಯನ್ನು ಪಡೆದಿದ್ದಾರೆ ಮತ್ತು ಎರಡು ಪ್ರತಿಸ್ಪರ್ಧಿ ದಕ್ಷಿಣ ಏಷ್ಯಾದ ರಾಜ್ಯಗಳು, ಪಾಕಿಸ್ತಾನ ಮತ್ತು ಭಾರತ ನಡುವೆ ಶಾಂತಿ ಆರಂಭಿಸಲು ಪ್ರಯತ್ನಗಳನ್ನು ಮಾಡಿದ್ದಾರೆ.
ಚಂದ್ರಯಾನ-೩ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯ ಯೋಜಿತ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾಗಿದೆ. ಚಂದ್ರಯಾನ-೨ ರಲ್ಲಿ, ಸಾಫ್ಟ್ ಲ್ಯಾಂಡಿಂಗ್ ಮಾರ್ಗದರ್ಶನ ಸಾಫ್ಟ್ವೇರ್ನಲ್ಲಿ ಉಂಟಾದ ಕೊನೆಯ ನಿಮಿಷದ ದೋಷವು ಲ್ಯಾಂಡರ್ನ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನದ ವಿಫಲತೆಗೆ ಕಾರಣವಾಯಿತು, ಸಾಫ್ಟ್ ಲ್ಯಾಂಡಿಂಗ್ ಅನ್ನು ಪ್ರದರ್ಶಿಸಲು ಮತ್ತೊಂದು ಚಂದ್ರನ ಕಾರ್ಯಾಚರಣೆಯನ್ನು ಪ್ರಸ್ತಾಪಿಸಲಾಯಿತು. ಚಂದ್ರಯಾನ-೩ ಚಂದ್ರಯಾನ-೨ರ ಮಿಷನ್ ಪುನರಾವರ್ತನೆ ಆದರೆ ಚಂದ್ರಯಾನ-೨ರಂತೆಯೇ ಲ್ಯಾಂಡರ್ ಮತ್ತು ರೋವರ್ ಅನ್ನು ಮಾತ್ರ ಒಳಗೊಂಡಿರುತ್ತದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
REDIRECT Template:History of the Cold Warಶೀತಲ ಸಮರ ವು (1945–1991) ಎರಡನೇ ವಿಶ್ವಯುದ್ಧದ(1939–1945) ನಂತರ, ಮುಖ್ಯವಾಗಿ ಯು.ಎಸ್.ಎಸ್.ಆರ್ ಮತ್ತು ಅದರ ಆಶ್ರಿತ ದೇಶಗಳು, ಹಾಗೂ ಯುನೈಟೆಡ್ ಸ್ಟೇಟ್ಸ್ನ್ನು ಒಳಗೊಂಡಂತೆ ಪಾಶ್ಚಾತ್ಯ ವಿಶ್ವಶಕ್ತಿಗಳ ನಡುವಣ ಎಂದೂ ನಿಲ್ಲದೆ ಮುಂದುವರೆಯುತ್ತಲೇ ಬಂದ ರಾಜಕೀಯ ಘರ್ಷಣೆ, ಮಿಲಿಟರಿ ಉದ್ವಿಗ್ನತೆ, ಮತ್ತು ಆರ್ಥಿಕ ಪೈಪೋಟಿಗಳಿಗೆ ನೀಡಿದ ಹೆಸರಾಗಿದೆ. ಈ ಸಮರದಲ್ಲಿ ಪಾಲ್ಗೊಂಡ ಪ್ರಮುಖ ದೇಶಗಳ ಮಿಲಿಟರಿ ಶಕ್ತಿಗಳು ಎಂದೂ ಅಧಿಕೃತವಾಗಿ ನೇರ ಯುದ್ಧಕ್ಕಿಳಿಯದಿದ್ದರೂ, ಮಿಲಿಟರಿ ಮೈತ್ರಿಗಳು, ಆಯಕಟ್ಟಿನ ಜಾಗಗಳಲ್ಲಿ ಸಾಂಪ್ರದಾಯಿಕವಾಗಿ ಸೈನ್ಯವನ್ನು ಇರಿಸುವುದು, ಪರಮಾಣು ಅಸ್ತ್ರ ಪೈಪೋಟಿ, ಗೂಢಚರ್ಯೆ, ಹುಸಿ ಯುದ್ಧಗಳು, ಪ್ರಚಾರಕಾರ್ಯಗಳು, ಮತ್ತು ಅಂತರಿಕ್ಷ ಪೈಪೋಟಿಯೇ ಮೊದಲಾದ ತಂತ್ರಜ್ಞಾನ ಸ್ಪರ್ಧೆಗಳ ಮೂಲಕ ಈ ಘರ್ಷಣೆಯನ್ನು ವ್ಯಕ್ತಪಡಿಸಲಾಯಿತು. ಆಕ್ಸಿಸ್ ಶಕ್ತಿಗಳ ವಿರುದ್ಧದ ಮೈತ್ರಿಕೂಟದಲ್ಲಿದ್ದು ಅತ್ಯಂತ ಶಕ್ತಿಶಾಲಿಗಳಾಗಿದ್ದರೂ, ಯು.ಎಸ್.ಎಸ್.ಆರ್ ಮತ್ತು ಯು.ಎಸ್ಗಳು ವಿಶ್ವಯುದ್ಧಾನಂತರದ ಸಂರಚನೆಯ ಬಗ್ಗೆ ಯುರೋಪ್ನ ಹೆಚ್ಚಿನ ಭಾಗವನ್ನು ಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಪರಸ್ಪರ ವಿರೋಧ ವ್ಯಕ್ತಪಡಿಸಿದವು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ರಾಜಕೀಯ ಅಸ್ತಿತ್ವವುಳ್ಳ ವ್ಯಕ್ತಿಗಳ ಸಮೂಹದ ಒಂದು ದೃಢ ಗುರುತಿಸುವುಕೆಯನ್ನು ರಾಷ್ಟ್ರೀಯತೆ ಯು ಒಳಗೊಂಡಿದೆ, ಇದನ್ನು ರಾಷ್ಟ್ರೀಯತೆಯ ವಿಧಾನಗಳಲ್ಲಿ ಒಂದು ರಾಷ್ಟ್ರ ಎಂದು ವ್ಯಾಖ್ಯಾನಿಸಲಾಗಿದೆ. ಹಲವು ಬಾರಿ, ಒಂದು ಜನಾಂಗೀಯ ಗುಂಪಿಗೆ ರಾಜ್ಯತ್ವದ ಅಧಿಕಾರವಿದೆ ಎಂಬ ನಂಬಿಕೆ ಇದೆ, ಅಥವಾ ಒಂದು ರಾಜ್ಯದ ಪೌರತ್ವ ಬರಿ ಒಂದೇ ಜನಾಂಗೀಯ ಗುಂಪಿಗೆ ಸೀಮಿತವಾಗಿರಬೇಕೆಂದು, ಅಥವಾ ಒಂದೇ ರಾಜ್ಯದಲ್ಲಿ ಇರಬಹುದಾದ ಬಹುರಾಷ್ಟ್ರೀಯತೆಯು ಅವಶ್ಯವಾಗಿ ವ್ಯಕ್ತಪಡಿಸುವ ಹಕ್ಕನ್ನು ಒಳಗೊಂಡಿರಬೇಕು ಮತ್ತು ಅಲ್ಪಸಂಖ್ಯಾತರುಗಳಿಂದ ಕೂಡ ರಾಷ್ಟ್ರದ ಗುರುತಿಸುವಿಕೆಯನ್ನು ಕಾರ್ಯಗತ ಮಾಡಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
(ಸೂಚನೆ : ನಮ್ಮ ನುಡಿಯಲ್ಲಿ ಜ್ವಾಲಾಮುಖಿ ಮತ್ತು ಅಗ್ನಿಪರ್ವತ ಈ ಎರಡೂ ಪದಗಳು ಸಮಾನಾರ್ಥಕವಾಗಿ ಬಳಸಲ್ಪಡುತ್ತವೆ. ಈ ಲೇಖನದಲ್ಲಿ ಎರಡೂ ಪದಗಳನ್ನು ಬಳಸಲಾಗಿದೆ) ಉರಿಬೆಟ್ಟ (ಜ್ವಾಲಾಮುಖಿ) ಭೂಮಿಯ ಮೇಲ್ಮೈ ಅಥವಾ ಚಿಪ್ಪಿನಲ್ಲಿರುವ ಒಂದು ಬಿರುಕು. ಇಂತಹ ಬಿರುಕಿನ ಮೂಲಕ ಭೂಗರ್ಭದಿಂದ ಕುದಿಯುವ ದ್ರವರೂಪದಲ್ಲಿನ ಕಲ್ಲುಗಳು, ಬೂದಿ ಮತ್ತು ಇತರ ಅನಿಲಗಳು ಹೊರಗೆ ಚಿಮ್ಮುತ್ತವೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಅಲಿಪ್ತ ಚಳುವಳಿ (Non Aligned Movement (ನ್ಯಾಮ್)(ಎನ್ಎಎಂ)), ಅಮೇರಿಕಾ ಹಾಗು ಹಿಂದಿನ ಸೊವಿಯತ್ ಸಂಘದ ನಡುವಿನ ಶೀತಲ ಸಮರದ ಕಾಲದಲ್ಲಿ, ಎರಡೂ ಶಕ್ತಿ ಕೇಂದ್ರಗಳಿಂದ ದೂರವುಳಿದು ಈ ಸಂಘಟನೆಯ ಮುಖ್ಯ ದ್ಯೇಯವಾಗಿತ್ತು. ಇದು ಯುನೈಟೆಡ್ ಸೈಟ್ಸ್ ಮತ್ತು ಸೋವಿಯತ್ ಒಕ್ಕೂಟದ ಯಾವುದೇ ಪ್ರಮುಖ ರಾಜಕೀಯ ಶಕ್ತಿಯೊಂದಿಗೆ ಔಪಚಾರಿಕವಾಗಿ ಅಥವಾ ವಿರುದ್ಧವಾಗಿ ನಿಲ್ಲುವುದಿಲ್ಲ. ವಿಶ್ವಸಂಸ್ಥೆಯ ನಂತರ, ಇದು ವಿಶ್ವದಾದ್ಯಂತ ರಾಜ್ಯಗಳ ಅತಿದೊಡ್ಡ ಗುಂಪು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ನೊಬೆಲ್ ಪ್ರಶಸ್ತಿ ಪುರಸ್ಕೃತ ಭಾರತೀಯರ ಪಟ್ಟಿ
ನೊಬೆಲ್ ಪ್ರಶಸ್ತಿ ಎನ್ನುವುದು, ಆಲ್ಫ್ರೆಡ್ ನೊಬೆಲ್ ಅವರ ಕೊನೆಯ ಇಚ್ಛೆಯಂತೆ ಸ್ಥಾಪಿಸಲಾದ, "ಭೌತಶಾಸ್ತ್ರ, ರಸಾಯನಶಾಸ್ತ್ರ, ಶರೀರಶಾಸ್ತ್ರ, ಸಾಹಿತ್ಯ, ಶಾಂತಿ ಮತ್ತು ಆರ್ಥಿಕ ವಿಜ್ಞಾನ ಕ್ಷೇತ್ರಗಳಲ್ಲಿ "ಮಾನವಕುಲಕ್ಕೆ ಹೆಚ್ಚಿನ ಕೊಡುಗೆಯನ್ನು ನೀಡಿದವರಿಗೆ" ನೀಡಲಾಗುವ ವಾರ್ಷಿಕ ಅಂತರರಾಷ್ಟ್ರೀಯ ಪ್ರಶಸ್ತಿಗಳ" ಒಂದು ಗುಂಪಾಗಿದೆ. ಪ್ರತಿಯೊಂದು ಪ್ರಶಸ್ತಿ ವಿಜೇತರಿಗೆ ಚಿನ್ನದ ಪದಕ, ಒಂದು ಡಿಪ್ಲೊಮಾ ಮತ್ತು ಹಣದ ಮೊತ್ತವನ್ನು ನೀಡಲಾಗುತ್ತದೆ. ಇದನ್ನು ನೊಬೆಲ್ ಪ್ರತಿಷ್ಠಾನವು ವಾರ್ಷಿಕವಾಗಿ ನಿರ್ಧರಿಸುತ್ತದೆ.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.