The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ಮಧಾರೆಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:- (i) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯, ೧೯೫೫ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವ ಮಸೂದೆಯಾಗಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಆ ಆರು ಧರ್ಮದವರು ಭಾರತಕ್ಕೆ ೩೧ ಡಿಸೆಂಬರ್ ೨೦೧೪ ಅಥವಾ ಅದಕ್ಕಿಂತಲೂ ಮೊದಲು ಪ್ರವೇಶಿಸಿದವರಾಗಿದ್ದಲ್ಲಿ, ಅವರೆಲ್ಲರೂ ಭಾರತೀಯ ಪೌರತ್ವಕ್ಕೆ ಅರ್ಹರು.ಕೇಂದ್ರ ಸಚಿವ ಸಂಪುಟವು ೪ ಡಿಸೆಂಬರ್ ೨೦೧೯ ರಂದು ಮಸೂದೆಯನ್ನು ಮುಂದಿಟ್ಟಿತು. ಇದನ್ನು ಡಿಸೆಂಬರ್ ೧೦ ರಂದು ಲೋಕಸಭೆಯು ಅಂಗೀಕರಿಸಿತು ಹಾಗೂ ಡಿಸೆಂಬರ್ ೧೧ ರಂದು ರಾಜ್ಯಸಭೆಯು ಇದನ್ನು ಅಂಗೀಕಾರ ಮಾಡಿತು.
ನುಡಿಗಟ್ಟು ಒಂದು ಭಾಷೆಯನ್ನಾಡುವ ಜನ ತಮ್ಮ ನಿತ್ಯೋಪಯೋಗದಲ್ಲಿ ಹಿಂದೆ ತಾವು ಹೇಳಿರದ, ಇನ್ನೊಬ್ಬ ಹೇಳಿದುದನ್ನು ಕೇಳಿರದ ಎಷ್ಟೋ ಹೊಸ ಮಾತುಗಳನ್ನು ಪ್ರಯೋಗಿಸಲು ಶಕ್ತರು. ಆದರೂ, ಆ ಮಾತುಗಳು ಕೇಳುವವನಿಗೆ ಅರ್ಥವಾಗುತ್ತದೆ. ಆ ಮಾತಿನ ಸಂದರ್ಭ ಮತ್ತು ಆ ಭಾಷೆಯ ಮೂಲಭೂತವಾದ ಕೆಲವು ಸಾಮಾನ್ಯ ನಿಯಮ, ಇದರ ಮೂಲಕ ಮಾತಾಡುವವನಿಗೂ ಕೇಳುವವನಿಗೂ ಇರುವ ಅನುಭವ ಸಾಮ್ಯದಿಂದ-ಹಿಂದೆ ಹೇಳದ, ಕೇಳದ ಮಾತುಗಳ ಅರ್ಥ ವೇದ್ಯವಾಗುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದುಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sowthe seeds to get ripen fruits.) ಹಾವೂ ಸಾಯ್ಬಾರದು, ಕೋಲೂಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English:from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಮೈಸೂರು ರಾಜ್ಯವು, ಅಥವಾ ಆಡುಮಾತಿನಲ್ಲಿ ಹಳೆಯ ಮೈಸೂರು, ೧೯೪೭ರಿಂದ ಭಾರತ ಪ್ರಭುತ್ವದಲ್ಲಿನ ಮತ್ತು ೧೯೫೬ರವರೆಗೆ ತದನಂತರದ ಭಾರತ ಗಣರಾಜ್ಯದಲ್ಲಿನ ರಾಜ್ಯವೊಂದು ಆಗಿ ಇದ್ದಿತು. ಮೈಸೂರು ಮಹಾಸಂಸ್ಥಾನವನ್ನು ನಾಮಕರಿಸಿ ಮೈಸೂರು ರಾಜ್ಯವನ್ನು ಸೃಷ್ಟಿಸಲಾಯಿತು; ಅದರೊಂದಿಗೆ ಮೈಸೂರಿನಿಂದ ಬೆಂಗಳೂರಿಗೆ ರಾಜಧಾನಿಯನ್ನು ಸ್ಥಳಾಂತರಿಸಲಾಯಿತು. ಭಾರತದ ಸಂಸತ್ತು ೧೯೫೬ರ ಭಾಷಾಶಾಸ್ತ್ರೀಯ ಆಧಾರದ ಮೇಲೆ ರಾಜ್ಯಗಳ ಮರುಸಂಘಟನೆ ಕಾಯಿದೆಯನ್ನು ಹೊರಡಿಸುವುದರೊಂದಿಗೆ ಭಾರತ ಗಣರಾಜ್ಯದಲ್ಲಿನ ಆಂಧ್ರ ರಾಜ್ಯ, ಬಾಂಬೆ ರಾಜ್ಯ, ಕೊಡಗು ರಾಜ್ಯ, ಹೈದರಾಬಾದ್ ರಾಜ್ಯ, ಮಡ್ರಾಸ್ ರಾಜ್ಯ, ಮತ್ತು ಹಲವು ಕ್ಷುಲ್ಲಕ ಪ್ರಾಂತ್ಯಗಳ ಸೀಮಾ ಪ್ರದೇಶಕೆಲವನ್ನು ಮೈಸೂರು ರಾಜ್ಯದೊಂದಿಗೆ ಸಂಯೋಜಿಸುವುದರೊಂದಿಗೆ ಮೈಸೂರು ರಾಜ್ಯವು ಏಕರೂಪ ಕನ್ನಡ ಭಾಷೆಯ ನಾಡಾಗಿ ಗಣನೀಯವಾಗಿ ವಿಸ್ತ್ರತಗೊಂಡಿತು.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂಧಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ಯಾಮನೂರ್ ಶಿವಶಂಕರಪ್ಪರವರು ೧೬ ಜೂನ್ ೧೯೩೧ರಂದು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರ ಹೆಂಡತಿ ಎಸ್ ಎಸ್ ಪಾರ್ವತಮ್ಮ, ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯ ದಕ್ಶಿಣ ಭಾಗದಿಂದ ಚುನಾವಣೆಯಲ್ಲಿ ಕಳೆದ ಸುಮಾರು ೧೦ ವರ್ಷಗಳಿಂದ ಸ್ಪರ್ಧಿಸುತ್ತಿದ್ದಾರೆ. ಶಿವಶಂಕರಪ್ಪನವರು ಕಳೆದ ೩ ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೈತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
[[ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಮಳೆನೀರು ಕೊಯ್ಲು ಎಂಬುದು ಮಳೆನೀರನ್ನು ಒಟ್ಟುಗೂಡಿಸುವ, ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಕುಡಿಯುವ ನೀರನ್ನು ಒದಗಿಸಲು ಜಾನುವಾರುಗಳಿಗೆ ನೀರುಣಿಸಲು ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರುಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ತ್ರಿಪದಿ ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷೀಣಿಸುತ್ತಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಕುರಿಗಳು (Ovis aries) ಸಾಮಾನ್ಯವಾಗಿ ಜಾನುವಾರಾಗಿ ಇಟ್ಟುಕೊಳ್ಳಲಾದ ಒಂದು ಚತುಷ್ಪಾದಿ, ರೋಮಂಥಕ ಸಸ್ತನಿ. ಎಲ್ಲ ರೋಮಂಥಕಗಳಂತೆ, ಕುರಿಯು ಆರ್ಟಿಯೊಡ್ಯಾಕ್ಟಿಲಾ (ಸಮ ಕಾಲ್ಬೆರಳುಗಳಿರುವ ಗೊರಸುಳ್ಳ ಪ್ರಾಣಿ) ಗಣದ ಸದಸ್ಯ. "ಕುರಿ" ಎಂಬ ಹೆಸರು ಓವೀಸ್ ಜಾತಿಯಲ್ಲಿನ ಅನೇಕ ಪ್ರಜಾತಿಗಳಿಗೆ ಅನ್ವಯಿಸುತ್ತದಾದರೂ, ದೈನಂದಿನ ಬಳಕೆಯಲ್ಲಿ ಅದು ಬಹುತೇಕ ಯಾವಾಗಲೂ ಓವೀಸ್ ಆರಿಯೆಸ್ ಅನ್ನು ನಿರ್ದೇಶಿಸುತ್ತದೆ.
ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ. ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ,ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು ಅಂಕಿತನಾಮವೆನಿಸುತ್ತದೆ.
ಆಧುನಿಕ ಮಾರುಕಟ್ಟೆ ಸಿದ್ಧಾಂತವು ಗ್ರಾಹಕನನ್ನು ಮಾರುಕಟ್ಟೆಯ 'ರಾಜ'ನೆಂದು ಪರಿಗಣಿಸಿದೆ. ಮಾರುಕಟ್ಟೆಯ ಎಲ್ಲಾ ಕಾರ್ಯಚಟುವಟಿಕೆಗಳು ಗ್ರಾಹಕನ ಅವಶ್ಯಕತೆಗಳು ಮತ್ತು ಅಭಿಲಾಷೆಗಳನ್ನು ತೃಪ್ತಿಪಡಿಸುವ ಉದ್ದೇಶವನ್ನು ಹೊಂದಿದೆ. ಆದರೆ, ವ್ಯವಹಾರ ಸಂಘಟನೆಗಳು ಹೆಚ್ಚುತ್ತಿರುವ ಪೈಪೋಟಿ, ಮಾರಾಟದ ಪ್ರಮಾಣವನ್ನು ಹೆಚ್ಚಿಸಿಕೊಳ್ಳುವ ಹಾಗೂ ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ ಅನುಚಿತ ವ್ಯಾಪಾರ ಪದ್ಧತಿಗಳಾದ ಕಲಬೆರಕೆ, ಕಾಳಸಂತೆ ವ್ಯಾಪಾರ, ತಪ್ಪು ಮಾಹಿತಿ ನೀಡುವ ಜಾಹಿರಾತು, ಮುಂತಾದವುಗಳಿಂದ ಗ್ರಾಹಕರನ್ನು ವಂಚಿಸುತ್ತಿದ್ದು, ಅವನ ರಕ್ಷಣೆ ಅತ್ಯಗತ್ಯವಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.೧೯೪೭ರಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ೧೯೯೧ರ ವರೆಗೆ, ಅನುಕ್ರಮದ ಸರ್ಕಾರಗಳು ವ್ಯಾಪಕ ಸರ್ಕಾರಿ ಹಸ್ತಕ್ಷೇಪ ಮತ್ತು ನಿಯಂತ್ರಣವುಳ್ಳ ರಕ್ಷಣಾವಾದಿ ಆರ್ಥಿಕ ನೀತಿಗಳನ್ನು ಪ್ರೋತ್ಸಾಹಿಸಿದವು; ಶೀತಲ ಸಮರದ ಅಂತ್ಯ ಮತ್ತು ೧೯೯೧ ರಲ್ಲಿ ತೀವ್ರ ಪಾವತಿ ಬಾಕಿ ಬಿಕ್ಕಟ್ಟಿನ ಕಾರಣ ಭಾರತವು ಆರ್ಥಿಕ ಉದಾರೀಕರಣದ ವಿಶಾಲ ಕಾರ್ಯಕ್ರಮವನ್ನು ಅಳವಡಿಸಿಕೊಂಡಿತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, ೨೦೧೪ ಎಂದು ಪ್ರಸ್ತಾಪಿಸಿದೆ.
ಚಂದ್ರಯಾನ-೩ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯ ಯೋಜಿತ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾಗಿದೆ. ಚಂದ್ರಯಾನ-೨ ರಲ್ಲಿ, ಸಾಫ್ಟ್ ಲ್ಯಾಂಡಿಂಗ್ ಮಾರ್ಗದರ್ಶನ ಸಾಫ್ಟ್ವೇರ್ನಲ್ಲಿ ಉಂಟಾದ ಕೊನೆಯ ನಿಮಿಷದ ದೋಷವು ಲ್ಯಾಂಡರ್ನ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನದ ವಿಫಲತೆಗೆ ಕಾರಣವಾಯಿತು, ಸಾಫ್ಟ್ ಲ್ಯಾಂಡಿಂಗ್ ಅನ್ನು ಪ್ರದರ್ಶಿಸಲು ಮತ್ತೊಂದು ಚಂದ್ರನ ಕಾರ್ಯಾಚರಣೆಯನ್ನು ಪ್ರಸ್ತಾಪಿಸಲಾಯಿತು. ಚಂದ್ರಯಾನ-೩ ಚಂದ್ರಯಾನ-೨ರ ಮಿಷನ್ ಪುನರಾವರ್ತನೆ ಆದರೆ ಚಂದ್ರಯಾನ-೨ರಂತೆಯೇ ಲ್ಯಾಂಡರ್ ಮತ್ತು ರೋವರ್ ಅನ್ನು ಮಾತ್ರ ಒಳಗೊಂಡಿರುತ್ತದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
thumb|coin money ಸಾಮಾನ್ಯವಾಗಿ ಸರಕು ಮತ್ತು ಸೇವೆಗಳು ಹಾಗೂ ಋಣಗಳ ವಾಪಸಾತಿಗೆ ಸಂದಾಯದ ರೂಪವೆಂದು ಒಪ್ಪಿಕೊಳ್ಳಲಾದ ಯಾವುದಕ್ಕಾದರೂ ಹಣವೆನ್ನಬಹುದು. ಪ್ರಮುಖವಾಗಿ ಒಂದು ವಿನಿಮಯ ಸಾಧನವಾಗಿ (ಮೀಡಿಯಮ್ ಆಫ಼್ ಎಕ್ಸ್ಚೇಂಜ್), ಒಂದು ಲೆಕ್ಕದ ಏಕಮಾನವಾಗಿ (ಯೂನಿಟ್ ಆಫ಼್ ಅಕೌಂಟ್), ಮತ್ತು ಒಂದು ಮೌಲ್ಯದ ಸಂಗ್ರಹವಾಗಿ (ಸ್ಟೋರ್ ಆಫ಼್ ವ್ಯಾಲ್ಯು) ಹಣವನ್ನು ಉಪಯೋಗಿಸಲಾಗುತ್ತದೆ. ಕೆಲವು ಲೇಖಕರು ಹಣವು ಸ್ಪಷ್ಟವಾಗಿ ಒಂದು ಮುಂದೆ ಸಲ್ಲಿಸುವ ಸಂದಾಯದ ಮಾನದಂಡ (ಸ್ಟ್ಯಾಂಡರ್ಡ್ ಆಫ಼್ ಡೆಫ಼ರ್ಡ್ ಪೇಮಂಟ್) ಆಗಿರಬೇಕೆಂದು ಬಯಸುತ್ತಾರೆ.