The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ತೊಂಡೆ (ಕಾಕ್ಸಿನಿಯಾ ಗ್ರ್ಯಾಂಡಿಸ್) ಒಂದು ಉಷ್ಣವಲಯದ ಹಂಬು. ಅದರ ಸ್ಥಳೀಯ ವ್ಯಾಪ್ತಿ, ಭಾರತ, ಫಿಲಿಪೀನ್ಸ್, ಚೀನಾ, ಇಂಡೊನೇಷ್ಯಾ, ಮಲೇಷ್ಯಾ, ಥಾಯ್ಲಂಡ್, ಮ್ಯಾನ್ಮಾರ್, ವಿಯೆಟ್ನಾಮ್, ಪೂರ್ವ ಪ್ಯಾಪ್ಯುಯಾ ನ್ಯೂ ಗಿನಿ, ಮತ್ತು ಉತ್ತರ ಪ್ರಾಂತ್ಯಗಳು, ಆಸ್ಟ್ರೇಲಿಯಾವನ್ನು ಒಳಗೊಂಡಂತೆ, ಆಫ್ರಿಕಾದಿಂದ ಏಷ್ಯಾದ ವರೆಗೆ ವಿಸ್ತರಿಸುತ್ತದೆ. ಈ ಹಂಬಿನ ಬೀಜಗಳು ಅಥವಾ ತುಣುಕುಗಳನ್ನು ಸ್ಥಳಾಂತರ ಮಾಡಬಹುದು ಮತ್ತು ಸಮರ್ಥ ಸಂತತಿಗೆ ಕಾರಣವಾಗಬಲ್ಲದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದುಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sowthe seeds to get ripen fruits.) ಹಾವೂ ಸಾಯ್ಬಾರದು, ಕೋಲೂಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English:from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಚಂದ್ರಯಾನ-೩ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯ ಯೋಜಿತ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾಗಿದೆ. ಚಂದ್ರಯಾನ-೨ ರಲ್ಲಿ, ಸಾಫ್ಟ್ ಲ್ಯಾಂಡಿಂಗ್ ಮಾರ್ಗದರ್ಶನ ಸಾಫ್ಟ್ವೇರ್ನಲ್ಲಿ ಉಂಟಾದ ಕೊನೆಯ ನಿಮಿಷದ ದೋಷವು ಲ್ಯಾಂಡರ್ನ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನದ ವಿಫಲತೆಗೆ ಕಾರಣವಾಯಿತು, ಸಾಫ್ಟ್ ಲ್ಯಾಂಡಿಂಗ್ ಅನ್ನು ಪ್ರದರ್ಶಿಸಲು ಮತ್ತೊಂದು ಚಂದ್ರನ ಕಾರ್ಯಾಚರಣೆಯನ್ನು ಪ್ರಸ್ತಾಪಿಸಲಾಯಿತು. ಚಂದ್ರಯಾನ-೩ ಚಂದ್ರಯಾನ-೨ರ ಮಿಷನ್ ಪುನರಾವರ್ತನೆ ಆದರೆ ಚಂದ್ರಯಾನ-೨ರಂತೆಯೇ ಲ್ಯಾಂಡರ್ ಮತ್ತು ರೋವರ್ ಅನ್ನು ಮಾತ್ರ ಒಳಗೊಂಡಿರುತ್ತದೆ.
ಆಯುರ್ವೇದ ರೀತ್ಯಾ ಚಿಕಿತ್ಸೆ ಮಾಡಬೇಕಾದರೆ ಮತ್ತು ಪರಿಶೋಧನೆ ಮಾಡಬೇಕಾದರೆ ವ್ಯಾಧಿಗಳ ಲಕ್ಷಣಗಳು, ಅವುಗಳ ಆಶ್ರಯ ಸ್ಥಾನಗಳು ಮತ್ತು ರೋಗೋತ್ಪತ್ತಿಗೆ ಕಾರಣಗಳಾದ ತ್ರಿದೋಷಗಳು (ವಾಯು, ಪಿತ್ತ, ಕಫ), ಪಂಚಭೂತಗಳು (ಪೃಥ್ವಿ, ಅಪ್, ತೇಜಸ್ಸು, ವಾಯು, ಆಕಾಶ) ಷಡ್ರಸಗಳು (ಮಧುರ, ಹುಳಿ, ಉಪ್ಪು, ಖಾರ, ಕಹಿ, ಕಷಾಯ), ಸಪ್ತಧಾತುಗಳು (ರಸ, ರಕ್ತ, ಮಾಂಸ ಮೇದಸ್ಸು, ಅಸ್ಥಿ, ಮಜ್ಜ, ಶುಕ್ರ), ವೀರ್ಯಗಳು (ಶೀತ, ಉಷ್ಣ) ವಿಪಾಕ ಮತ್ತು ಪ್ರಭಾವಗಳನ್ನು ವೈದ್ಯನಾದವ ಅರಿತಿರಬೇಕು. ಈ ಪ್ರಕಾರ ವ್ಯಾಧಿಗಳನ್ನು ಚೆನ್ನಾಗಿ ತಿಳಿದುಕೊಂಡು ತಡಮಾಡದೆ ಚಿಕಿತ್ಸಿಸಬೇಕು. ಉಪೇಕ್ಷೆ ಮಾಡಿದರೆ ರೋಗ ದುಸ್ಸಾಧ್ಯ ಅಥವಾ ಅಸಾಧ್ಯವಾಗಿ ಪರಿಣಮಿಸಬಹುದು.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಪಾಸ್ಟ್ರಫಿ ಎಂಬ ಚಿಹ್ನೆಯು ( ’ , ಕೆಲವೊಮ್ಮೆ ' ಎಂದು ನಮೂದಿಸಲಾಗಿದೆ) ಒಂದು ವಿರಾಮ (punctuation) ಚಿಹ್ನೆಯಾಗಿದೆ. ಲ್ಯಾಟೀನ್ ಅಕ್ಷರಮಾಲೆಗಳನ್ನು ಬಳಸುವ ಭಾಷೆಗಳಲ್ಲಿ, ಇದನ್ನು ಕೆಲವೊಮ್ಮೆ ಉಚ್ಚಾರಣಾ (diacritic) ಚಿಹ್ನೆಯಾಗಿ ಬಳಸಲಾಗುತ್ತದೆ. ಇಂಗ್ಲಿಷ್ ಭಾಷೆಯಲ್ಲಿ, ಇದು ಎರಡು ಮುಖ್ಯ ಉದ್ದೇಶಗಳನ್ನು ಪೂರೈಸುತ್ತದೆ - ಒಂದು ಅಥವಾ ಎರಡು ಅಕ್ಷರಗಳನ್ನು ಬಿಟ್ಟುಬಿಡಬಹುದು (ಇದಕ್ಕೆ 'ಸಂಕುಚಿತಗೊಳಿಸುವಿಕೆ (contraction) ಎನ್ನಲಾಗಿದೆ); (ಉದಾಹರಣೆಗೆ does not ಬದಲಿಗೆ doesn't ), ಹಾಗೂ, ಸ್ವಾಮ್ಯಸೂಚಕಗಳನ್ನು (possessives) ಗುರುತಿಸಲು ಬಳಸಲಾಗಿದೆ (ಉದಾಹರಣೆಗೆ the cat's whiskers ).
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಹಿಂದೂ ಧರ್ಮ ದಲ್ಲಿ , ಸೂರ್ಯದೇವ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] Error: {{Lang}}: text has italic markup (help); ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು , ಅದಿತಿ ;ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು , ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
REDIRECT Template:History of the Cold Warಶೀತಲ ಸಮರ ವು (1945–1991) ಎರಡನೇ ವಿಶ್ವಯುದ್ಧದ(1939–1945) ನಂತರ, ಮುಖ್ಯವಾಗಿ ಯು.ಎಸ್.ಎಸ್.ಆರ್ ಮತ್ತು ಅದರ ಆಶ್ರಿತ ದೇಶಗಳು, ಹಾಗೂ ಯುನೈಟೆಡ್ ಸ್ಟೇಟ್ಸ್ನ್ನು ಒಳಗೊಂಡಂತೆ ಪಾಶ್ಚಾತ್ಯ ವಿಶ್ವಶಕ್ತಿಗಳ ನಡುವಣ ಎಂದೂ ನಿಲ್ಲದೆ ಮುಂದುವರೆಯುತ್ತಲೇ ಬಂದ ರಾಜಕೀಯ ಘರ್ಷಣೆ, ಮಿಲಿಟರಿ ಉದ್ವಿಗ್ನತೆ, ಮತ್ತು ಆರ್ಥಿಕ ಪೈಪೋಟಿಗಳಿಗೆ ನೀಡಿದ ಹೆಸರಾಗಿದೆ. ಈ ಸಮರದಲ್ಲಿ ಪಾಲ್ಗೊಂಡ ಪ್ರಮುಖ ದೇಶಗಳ ಮಿಲಿಟರಿ ಶಕ್ತಿಗಳು ಎಂದೂ ಅಧಿಕೃತವಾಗಿ ನೇರ ಯುದ್ಧಕ್ಕಿಳಿಯದಿದ್ದರೂ, ಮಿಲಿಟರಿ ಮೈತ್ರಿಗಳು, ಆಯಕಟ್ಟಿನ ಜಾಗಗಳಲ್ಲಿ ಸಾಂಪ್ರದಾಯಿಕವಾಗಿ ಸೈನ್ಯವನ್ನು ಇರಿಸುವುದು, ಪರಮಾಣು ಅಸ್ತ್ರ ಪೈಪೋಟಿ, ಗೂಢಚರ್ಯೆ, ಹುಸಿ ಯುದ್ಧಗಳು, ಪ್ರಚಾರಕಾರ್ಯಗಳು, ಮತ್ತು ಅಂತರಿಕ್ಷ ಪೈಪೋಟಿಯೇ ಮೊದಲಾದ ತಂತ್ರಜ್ಞಾನ ಸ್ಪರ್ಧೆಗಳ ಮೂಲಕ ಈ ಘರ್ಷಣೆಯನ್ನು ವ್ಯಕ್ತಪಡಿಸಲಾಯಿತು. ಆಕ್ಸಿಸ್ ಶಕ್ತಿಗಳ ವಿರುದ್ಧದ ಮೈತ್ರಿಕೂಟದಲ್ಲಿದ್ದು ಅತ್ಯಂತ ಶಕ್ತಿಶಾಲಿಗಳಾಗಿದ್ದರೂ, ಯು.ಎಸ್.ಎಸ್.ಆರ್ ಮತ್ತು ಯು.ಎಸ್ಗಳು ವಿಶ್ವಯುದ್ಧಾನಂತರದ ಸಂರಚನೆಯ ಬಗ್ಗೆ ಯುರೋಪ್ನ ಹೆಚ್ಚಿನ ಭಾಗವನ್ನು ಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಪರಸ್ಪರ ವಿರೋಧ ವ್ಯಕ್ತಪಡಿಸಿದವು.
ARM (ಎಆರ್ಎಂ) ಎನ್ನುವುದು ARM ಹೋಲ್ಡಿಂಗ್ಸ್ ಎನ್ನುವ ಕಂಪನಿ ಅಭಿವೃದ್ಧಿಪಡಿಸಿರುವ 32 ಬಿಟ್ ರಿಡ್ಯೂಸ್ಡ್ ಇನಸ್ಟ್ರಕ್ಷನ್ ಸೆಟ್ ಕಂಪ್ಯೂಟರ್ (RISC) ಇನಸ್ಟ್ರಕ್ಷನ್ ಸೆಟ್ ಆರ್ಕಿಟೆಕ್ಚರ್(ISA). (ರೆಡ್ಯೂಸಡ್ ಇನ್ಸ್ಟ್ರಕ್ಷನ್ ಸೆಟ್ ಕಂಪ್ಯೂಟಿಂಗ್ - ಸಂಕ್ಷಿಪ್ತವಾಗಿ RISC ಎಂದು ಕೆರಯಲಾಗುವ- ಇದು CPU ರಚನೆ ವ್ಯವಸ್ಥೆ ಪ್ರತಿನಿಧಿಸುತ್ತದೆ ಇದರಿಂದಾಗಿ ಸೂಚನೆಗಳನ್ನು ಸರಳಿಕರಸಿಬಹುದಾಗಿದ್ದು, ಇದರಿಂದ ಸೂಚನೆಗಳನ್ನು ಕಡಿಮೆ ಪ್ರಮಾಣದಲ್ಲಿ ಆದರೆ ವೇಗವಾಗಿ ಅನುಷ್ಠಾನಗೊಳ್ಳುವುದರಿಂದ ಹೆಚ್ಚಿನ ಕಾರ್ಯಕ್ಷಮತೆಯನ್ನು ಪಡೆಯಬಹುದು.). ಹಿಂದೆ ಇದನ್ನು, ಅಡ್ವಾನ್ಸಡ್ RISC ಮಷೀನ್ ಎಂದೂ ಹಾಗು ಅದಕ್ಕೂ ಹಿಂದೆ ಇದನ್ನು ಆಕ್ರಾನ್ RISC ಮಷೀನ್ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ನಗರವು ತುಲನಾತ್ಮಕವಾಗಿ ಒಂದು ದೊಡ್ಡ ಮತ್ತು ಶಾಶ್ವತವಾದ ವಾಸಸ್ಥಳ. ಒಂದು ನಗರವನ್ನು ಒಂದು ಪಟ್ಟಣದಿಂದ ಭೇದ ಮಾಡುವ ಯಾವುದೇ ಅಂಗೀಕೃತ ಅಥವಾ ಪಾರಿಭಾಷಿಕ ವ್ಯಾಖ್ಯಾನಗಳಿಲ್ಲವಾದರೂ, ಹಲವು ನಗರಗಳು ಸ್ಥಳೀಯ ಕಾನೂನಿನ ಮೇಲೆ ಆಧಾರಿತವಾದ ಒಂದು ವಿಶಿಷ್ಟ ಆಡಳಿತಾತ್ಮಕ, ಕಾನೂನುಬದ್ಧ, ಅಥವಾ ಐತಿಹಾಸಿಕ ಮಾನ್ಯತೆಯನ್ನು ಹೊಂದಿರುತ್ತವೆ —ಉದಾಹರಣೆಗೆ ಮ್ಯಾಸಚೂಸಿಟ್ಸ್ನಲ್ಲಿ ಸ್ಥಳೀಯ ಗುರುತಿನ (ರಾಜ್ಯ) ಶಾಸಕಾಂಗದಿಂದ ಅನುಮೋದನೆಗೊಂಡ ಏಕೀಕರಣದ ಒಂದು ನಿಯಮವು ಪಟ್ಟಣಗಳನ್ನು ನಗರ ಸರ್ಕಾರದ ಪ್ರಕಾರಗಳು, ಹಕ್ಕುಗಳು, ಕರ್ತವ್ಯಗಳು ಮತ್ತು ಸವಲತ್ತುಗಳಿಂದ ಬೇರ್ಪಡಿಸುತ್ತವೆ —ಇದೇ ವಿಧದ ವ್ಯತ್ಯಾಸಗಳನ್ನು ವಿಶ್ವಾದ್ಯಂತ ಮಾಡಲಾಗುತ್ತದೆ, ವಿಶೇಷವಾಗಿ ಬ್ರಿಟನ್ನ ಹಿಂದಿನ ವಸಾಹತುಗಳಲ್ಲಿ. ಐತಿಹಾಸಕವಾಗಿ, ಯೂರಪ್ನಲ್ಲಿ, ನಗರವು ಒಂದು ಕಥೀಡ್ರಲ್ಅನ್ನು ಹೊಂದಿದ ವಾಸಸ್ಥಳವೆಂದು ತಿಳಿಯಲಾಗಿತ್ತು; ನಂತರದ ಬಳಕೆಗಳಲ್ಲಿ, ವಿಶೇಷವಾಗಿ ಬ್ರಿಟನ್ ಮತ್ತು ಕಾಮನ್ವೆಲ್ತ್ ಒಕ್ಕೂಟದ ಭಾಗಗಳಲ್ಲಿ, ನಗರವು ರಾಜಶಾಸನವನ್ನು ಹೊಂದಿದ ಒಂದು ವಾಸಸ್ಥಳ.
ಕರ್ಮಧಾರೆಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:- (i) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.
ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ
ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ( ಎಸ್.ಟಿ.ಇ.ಎಮ್ ) ಈ ಶೈಕ್ಷಣಿಕ ವಿಭಾಗಗಳನ್ನು ಒಟ್ಟುಗೂಡಿಸಲು ಬಳಸಲಾಗುವ ವಿಶಾಲ ಪದವಾಗಿದೆ. ಶಾಲೆಗಳಲ್ಲಿ ಶಿಕ್ಷಣ ನೀತಿ ಅಥವಾ ಪಠ್ಯಕ್ರಮದ ಆಯ್ಕೆಗಳನ್ನು ತಿಳಿಸಲು ಈ ಪದವನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಇದು ಉದ್ಯೋಗಿಗಳ ಅಭಿವೃದ್ಧಿ, ರಾಷ್ಟ್ರೀಯ ಭದ್ರತಾ ಕಾಳಜಿಗಳು (ಎಸ್.ಟಿ.ಇ.ಎಮ್-ಶಿಕ್ಷಿತ ನಾಗರಿಕರ ಕೊರತೆಯಿಂದಾಗಿ ಈ ಪ್ರದೇಶದಲ್ಲಿ ಪರಿಣಾಮಕಾರಿತ್ವವನ್ನು ಕಡಿಮೆ ಮಾಡಬಹುದು) ಮತ್ತು ವಲಸೆ ನೀತಿಗೆ ಪರಿಣಾಮಗಳನ್ನು ಹೊಂದಿದೆ.
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO - Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.