The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ., ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು. ಶಿವನು ಶಾಂತ ಹಾಗೂ ರೌದ್ರ ಸ್ವರೂಪನು, ಶಾಂತ ರೂಪದಲ್ಲಿ ಯೋಗಿಯಾಗಿ ವೈರಾಗ್ಯ ಜೀವನವನ್ನು ಮತ್ತು ಸಂಸಾರಿಯಾಗಿ ಪತ್ನಿ ಪಾರ್ವತಿ ಹಾಗೂ ಮಕ್ಕಳು ಗಣೇಶ, ಕಾರ್ತಿಕೇಯನ ಜೊತೆ ಇರವನು., ರೌದ್ರ ರೂಪದಲ್ಲಿ ದುಷ್ಟರನ್ನು ಸಂಹರಿಸುವ ಮಹಾಕಾಲ, ಭೈರವ, ವೀರಭದ್ರ ಹಾಗೂ ಇತರ ರೂಪಗಳನ್ನು ಅವತರಿಸಿದ್ದಾನೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದುಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sowthe seeds to get ripen fruits.) ಹಾವೂ ಸಾಯ್ಬಾರದು, ಕೋಲೂಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English:from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
'ಆಂಗ್ಕರ್ ವಾಟ್' (ನಗರ ವತ್ತ) ಕಾಂಬೋಡಿಯಾ ದೇಶದಲ್ಲಿರುವ ಹಿಂದೂ ದೇವಾಲಯ ಸಮುಚ್ಛಯ. ಕಾಂಬೋಡಿಯಾ ದೇಶದ ಖ್ಮೇರ್(Khmer) ಸಾಮ್ರಾಜ್ಯದ ರಾಜಧಾನಿಯಾಗಿದ್ದ 'ಆಂಗ್ಕರ್' ಎಂಬಲ್ಲಿದೆ. ಇದನ್ನು ಸಾಮ್ರಾಟ ಎರಡನೆಯ ಸೂರ್ಯವರ್ಮ ೧೨ನೆಯ ಶತಮಾನದಲ್ಲಿ ಕಟ್ಟಿಸಿದನು.ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಧಾರ್ಮಿಕ ಸಮುಚ್ಛಯವಾಗಿದೆ.ಇದು ಆಯತಾಕಾರದಲ್ಲಿ ೨೮೦೦ ಆಡಿ ಅಗಲ ಮತ್ತು ೩೮೦೦ ಅಡಿ ಉದ್ದವಾಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಸ್ಟಾರ್ ಚಂದ್ರು ಎಂದು ಸ್ಥಳೀಯವಾಗಿ ಕರೆಸಿಕೊಳ್ಳುವ ವೆಂಕಟರಮಣೇಗೌಡ ಅವರು ರಾಜ್ಯದ ಖ್ಯಾತ ಉದ್ಯಮಿ ಮತ್ತು 2024ರ ಲೋಕಸಭಾ ಚುನಾವಣೆಯ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘೋಷಿತ ಅಭ್ಯರ್ಥಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಕನ್ನಾಘಟ್ಟ ಗ್ರಾಮದಲ್ಲಿ 1965ರ ಜೂನ್ 24ರಂದು ಜನಿಸಿದರು. ಅವರ 'ಸ್ಟಾರ್ ಇನ್ಫ್ರಾಟೆಕ್’ ಸಂಸ್ಥೆಯು ಈಗ ಬೆಂಗಳೂರಿನಲ್ಲಿ ಸುಮಾರು ನಾಲ್ಕು ಸಾವಿರ ಮಂದಿಗೆ ಉದ್ಯೋಗ ನೀಡುವ ಮೂಲಕ ಅವರ ಬಾಳಿಗೆ ಬೆಳಕಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಈ ಲೇಖನವು ಸಮುದ್ರ (ಉಪ್ಪುನೀರು) ಸೀಗಡಿ ಕೃಷಿ ಕುರಿತು ಇರುವುದು. ಸಿಹಿ ನೀರು ಜಾತಿಯ ಕೃಷಿಗಾಗಿ ಸಿಹಿ ನೀರು ಸೀಗಡಿ ಕೃಷಿಯನ್ನು ನೋಡಿ.ಸಿಗಡಿ ಕೃಷಿ ಯು ಜಲಚರಗಳನ್ನು ಸಾಕುವ ಉದ್ಯಮವಾಗಿದ್ದು ಇದರಲ್ಲಿ ಸಮುದ್ರದ ಸಿಗಡಿಯನ್ನು ಅಥವಾ ಸಿಹಿನೀರಿನ ಸಿಗಡಿಗಳನ್ನು[೧] ಮನುಷ್ಯನ ಆಹಾರಕ್ಕಾಗಿ ಸಾಕುತ್ತಾರೆ. ೧೯೭೧ರ ದಶಕದಲ್ಲಿ ವಾಣಿಜ್ಯಕ ಸಿಗಡಿ ಸಾಕಣೆ ಆರಂಭವಾಯಿತು ಮತ್ತು ತೀವ್ರವಾಗಿ ಅದರ ಉತ್ಪಾದನೆ ಹೆಚ್ಚಿತು.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಆದಿಯೋಗಿ ಪ್ರತಿಮೆಯು ೩೪-ಮೀಟರ್ ಎತ್ತರ (೧೧೨ ಅಡಿ), ೪೫-ಮೀಟರ್ ಉದ್ದ (೧೪೭ ಅಡಿ) ಮತ್ತು ೨೫-ಮೀಟರ್ ಅಗಲದ (೮೨ ಅಡಿ) ಶಿವನ ತಿರುನಾಮಮ್ ಹೊಂದಿರುವ ಉಕ್ಕಿನ ಪ್ರತಿಮೆಯಾಗಿದ್ದು, ತಮಿಳುನಾಡಿನ ಕೊಯಮತ್ತೂರಿನಲ್ಲಿದೆ. ಇದು ವಿಶ್ವದ "ಅತಿದೊಡ್ಡ ಬಸ್ಟ್ ಸ್ಕಲ್ಪ್ಚರ್" ಎಂದು ಗಿನ್ನೆಸ್ ವಿಶ್ವ ದಾಖಲೆಗಳಿಂದ ಗುರುತಿಸಲ್ಪಟ್ಟಿದೆ. ಇಶಾ ಫೌಂಡೇಶನ್ನ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ಸದ್ಗುರು ಜಗ್ಗಿ ವಾಸುದೇವ್ ವಿನ್ಯಾಸಗೊಳಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.೧೯೪೭ರಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ೧೯೯೧ರ ವರೆಗೆ, ಅನುಕ್ರಮದ ಸರ್ಕಾರಗಳು ವ್ಯಾಪಕ ಸರ್ಕಾರಿ ಹಸ್ತಕ್ಷೇಪ ಮತ್ತು ನಿಯಂತ್ರಣವುಳ್ಳ ರಕ್ಷಣಾವಾದಿ ಆರ್ಥಿಕ ನೀತಿಗಳನ್ನು ಪ್ರೋತ್ಸಾಹಿಸಿದವು; ಶೀತಲ ಸಮರದ ಅಂತ್ಯ ಮತ್ತು ೧೯೯೧ ರಲ್ಲಿ ತೀವ್ರ ಪಾವತಿ ಬಾಕಿ ಬಿಕ್ಕಟ್ಟಿನ ಕಾರಣ ಭಾರತವು ಆರ್ಥಿಕ ಉದಾರೀಕರಣದ ವಿಶಾಲ ಕಾರ್ಯಕ್ರಮವನ್ನು ಅಳವಡಿಸಿಕೊಂಡಿತು.
ಎಣ್ಣೆಯು ಒಳಾಂಗಣ ಉಷ್ಣಾಂಶ (ಸಾಮಾನ್ಯ ಉಷ್ಣಾಂಶಗಳಲ್ಲಿ) ದ್ರವವಾಗಿರುವ ಮತ್ತು ಜಲವಿಕರ್ಷಕವಾಗಿರುವ ಆದರೆ ಸಾವಯವ ದ್ರಾವಕಗಳಲ್ಲಿ ಕರಗುವ ಯಾವುದೇ ರಾಸಾಯನಿಕ ಪದಾರ್ಥ. ಎಣ್ಣೆಗಳು ಅಧಿಕ ಇಂಗಾಲ ಮತ್ತು ಜಲಜನಕ ಅಂಶವನ್ನು ಹೊಂದಿರುತ್ತವೆ ಮತ್ತು ಅಧ್ರುವೀಯ ಪದಾರ್ಥಗಳಾಗಿವೆ. ಮೇಲಿನ ಸಾಮಾನ್ಯ ಅರ್ಥವಿವರಣೆಯು ವನಸ್ಪತಿ ತೈಲಗಳು, ಖನಿಜತೈಲ ರಸಾಯನಶಾಸ್ತ್ರ ಖನಿಜ ರಾಸಾಯನಿಕ ಎಣ್ಣೆಗಳು, ಮತ್ತು ಆವಿಶೀಲ ಸಾರಭೂತ ತೈಲಗಳನ್ನು ಒಳಗೊಂಡಂತೆ ಅನ್ಯಥಾ ಅಸಂಬಂಧಿತ ರಾಸಾಯನಿಕ ರಚನೆಗಳು, ರಾಸಾಯನಿಕ ಲಕ್ಷಣಗಳು ಮತ್ತು ಬಳಕೆಗಳನ್ನು ಹೊಂದಿರುವ ಸಂಯುಕ್ತ ವರ್ಗಗಳನ್ನು ಒಳಗೊಳ್ಳುತ್ತದೆ.
ಚಂದ್ರಯಾನ-೩ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯ ಯೋಜಿತ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾಗಿದೆ. ಚಂದ್ರಯಾನ-೨ ರಲ್ಲಿ, ಸಾಫ್ಟ್ ಲ್ಯಾಂಡಿಂಗ್ ಮಾರ್ಗದರ್ಶನ ಸಾಫ್ಟ್ವೇರ್ನಲ್ಲಿ ಉಂಟಾದ ಕೊನೆಯ ನಿಮಿಷದ ದೋಷವು ಲ್ಯಾಂಡರ್ನ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನದ ವಿಫಲತೆಗೆ ಕಾರಣವಾಯಿತು, ಸಾಫ್ಟ್ ಲ್ಯಾಂಡಿಂಗ್ ಅನ್ನು ಪ್ರದರ್ಶಿಸಲು ಮತ್ತೊಂದು ಚಂದ್ರನ ಕಾರ್ಯಾಚರಣೆಯನ್ನು ಪ್ರಸ್ತಾಪಿಸಲಾಯಿತು. ಚಂದ್ರಯಾನ-೩ ಚಂದ್ರಯಾನ-೨ರ ಮಿಷನ್ ಪುನರಾವರ್ತನೆ ಆದರೆ ಚಂದ್ರಯಾನ-೨ರಂತೆಯೇ ಲ್ಯಾಂಡರ್ ಮತ್ತು ರೋವರ್ ಅನ್ನು ಮಾತ್ರ ಒಳಗೊಂಡಿರುತ್ತದೆ.
ಜಗ್ಗಿ ವಾಸುದೇವ್ರವರು (ಸದ್ಗುರು) (ಜನನ ೩ ಸೆಪ್ಟೆಂಬರ್ ೧೯೫೭) ಒಬ್ಬ ಭಾರತೀಯ ಯೋಗಿ ಮತ್ತು ಅನುಭವಿ ಅಲ್ಲದೆ ಲೇಖಕರೂ ಆಗಿದ್ದಾರೆ. ಇವರು ಸ್ಥಾಪಿಸಿರುವ ’ಈಶ ಪ್ರತಿಷ್ಠಾನ’ ಸೇವಾಸಂಸ್ಥೆಯು ಲಾಭರಹಿತ ಹಾಗು ಜಾತ್ಯಾತೀತವಾಗಿದ್ದು, ಇದು ಭಾರತ, ಅಮೆರಿಕ, ಇಂಗ್ಲೆಂಡ್, ಲೆಬನಾನ್, ಸಿಂಗಪೂರ್, ಕೆನಡ, ಮಲೇಶಿಯ, ಉಗಾಂಡಾ, ಆಸ್ಟ್ರೇಲಿಯ ಮುಂತಾದ ದೇಶಗಳಲ್ಲಿ ಯೋಗಾಭ್ಯಾಸದ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದೆ. ಈಶ ಪ್ರತಿಷ್ಠಾನವು ಅನೇಕ ಸಮಾಜೋದ್ಧಾರಕ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವರು.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ