The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದುಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sowthe seeds to get ripen fruits.) ಹಾವೂ ಸಾಯ್ಬಾರದು, ಕೋಲೂಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English:from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಸಾಮಾನ್ಯವಾಗಿ ಎಸ್ಎಸ್ಎಲ್ಸಿ ಎಂದು ಉಲ್ಲೇಖಿಸಲಾಗುತ್ತದೆ) ಭಾರತದಲ್ಲಿ ಮಾಧ್ಯಮಿಕ ಶಾಲಾ ಹಂತದಲ್ಲಿ ಅಧ್ಯಯನದ ಕೊನೆಯಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಯಿಂದ ಪಡೆಯುವ ಪ್ರಮಾಣೀಕರಣವಾಗಿದೆ. SSLC ಅನ್ನು 10 ನೇ ತರಗತಿಯ ಸಾರ್ವಜನಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮೇಲೆ ಪಡೆಯಲಾಗುತ್ತದೆ, ಇದನ್ನು ಸಾಮಾನ್ಯವಾಗಿ ಭಾರತದಲ್ಲಿ '10 ನೇ ತರಗತಿ ಬೋರ್ಡ್ ಪರೀಕ್ಷೆಗಳು' ಎಂದು ಕರೆಯಲಾಗುತ್ತದೆ. SSLC ಭಾರತದ ಹಲವು ರಾಜ್ಯಗಳಲ್ಲಿ ವಿಶೇಷವಾಗಿ ಕೇರಳ, ಕರ್ನಾಟಕ, ಮತ್ತು ತಮಿಳುನಾಡಿನಲ್ಲಿ ಜನಪ್ರಿಯವಾಗಿರುವ ಸಾಮಾನ್ಯ ಅರ್ಹತಾ ಪರೀಕ್ಷೆಯಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ವೈರಾಗ್ಯ ಹಿಂದೂ ತತ್ತ್ವಶಾಸ್ತ್ರದಲ್ಲಿ ಬಳಸಲಾದ ಒಂದು ಸಂಸ್ಕೃತ ಪದ. ಇದನ್ನು ಸ್ಥೂಲವಾಗಿ ನಿರುದ್ವಿಗ್ನತೆ, ನಿರ್ಲಿಪ್ತತೆ, ಅಥವಾ ವಿರಕ್ತಿ, ವಿಶೇಷವಾಗಿ ತಾತ್ಕಾಲಿಕ ಭೌತಿಕ ಪ್ರಪಂಚದಲ್ಲಿನ ನೋವುಗಳು ಹಾಗೂ ಸಂತೋಷಗಳ ತ್ಯಾಗ ಎಂದು ಅನುವಾದಿಸಬಹುದು. ಇದು ಮೋಕ್ಷವನ್ನು ಸಾಧಿಸಲು ಒಂದು ಮಾರ್ಗವಾಗಿದೆ ಎಂದು ವೈರಾಗ್ಯವನ್ನು ಪ್ರತಿಪಾದಿಸಿದ ಹಿಂದೂ ತತ್ತ್ವಶಾಸ್ತ್ರಜ್ಞರು ತಮ್ಮ ಅನುಯಾಯಿಗಳಿಗೆ ಹೇಳಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ದೆಹಲಿಯ ಸುಲ್ತಾನರು ದೆಹಲಿಯಲ್ಲಿದ್ದ ಮುಸಲ್ಮಾನ ಸುಲ್ತಾನರು, ಇದು ಭಾರತೀಯ ಉಪಖಂಡದ ದೊಡ್ಡ ಭಾಗಗಳನ್ನು 320 ವರ್ಷಗಳವರೆಗೆ (1206-1526) ವಿಸ್ತರಿಸಿತು. ಐದು ರಾಜವಂಶಗಳಾದ ದೆಹಲಿ ಸುಲ್ತಾನರ ಅನುಕ್ರಮವಾಗಿ: ಗುಲಾಮ (ಮಾಮ್ಲುಕ್) ಸಾಮ್ರಾಜ್ಯ (1206-90), ಖಲ್ಜಿ ಸಾಮ್ರಾಜ್ಯ (1290-1320), ತುಘಲಕ್ ರಾಜವಂಶ (1320-1414), ಸಯ್ಯಿದ್ ಸಾಮ್ರಾಜ್ಯ (1414- 51), ಮತ್ತು ಲೋದಿ ಸಾಮ್ರಾಜ್ಯ (1451-1526).ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು 1236 ರಿಂದ 1240 ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿಕ್ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ .
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಓಜೋನ ಪದರವು ಕ್ಷೀಣಿಸುತ್ತಿದೆ.
ನೋಡಿ:ವಾಯುಗುಣ ಬದಲಾವಣೆಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಆರ್ಥಿಕತೆಯ ಎಲ್ಲ ವಲಯಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸಿದಾಗ ಕೈಗಾರಿಕೆಗಳು 'ದ್ವಿತೀಯ' ವಲಯ (Secondary Sector) ಎನ್ನಿಸಿಕೊಂಡಿದೆ. ಕೈಗಾರಿಕೆಗಳು ಒಂದು ದೇಶದ ಮೂಳೆಗಳಿದ್ದಂತೆ. ಮಾನವ ದೇಹಕ್ಕೆ ಪೂರ್ಣ ಚೈತನ್ಯವನ್ನು ಒದಗಿಸಲು ಮೂಳೆಗಳು ಹೇಗೆ ಅವಶ್ಯಕವೋ ಹಾಗೆಯೇ ಆರ್ಥಿಕತೆಗೆ ಚೇತನ ನೀಡಿ ದೀರ್ಘಕಾಲೀನ ಅಭಿವೃದ್ಢಿ ಸಾಧನೆಗೆ ನೆರವಾಗಲು ಕೈಗಾರಿಕೆಗಳು ಅತ್ಯಂತ ಆವಶ್ಯಕ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಜಾಹೀರಾತು ಎಂದರೆ ಯಾವುದೇ ಸಾಧನ ಅಥವಾ ಪ್ರಾತಿನಿಧ್ಯವನ್ನು ಯಾವುದೇ ರೀತಿಯಲ್ಲಿ ಘೋಷಣೆ, ಪದ, ಅಕ್ಷರ, ಮಾದರಿ, ಚಿತ್ರ, ನಿರ್ದೇಶನ ಅಥವಾ ಸಂಯೋಜನೆಯ ಮೂಲಕ ಪೋಸ್ಟರ್, ಹೋರ್ಡಿಂಗ್, ಬ್ಯಾನರ್ಗಳು, ತಾತ್ಕಾಲಿಕ ಕಮಾನುಗಳು, ಎಲೆಕ್ಟ್ರಾನಿಕ್ ಪ್ರದರ್ಶನ, ಹೆಸರು ಫಲಕಗಳು, ನಿರ್ದೇಶನ ಫಲಕಗಳು, ಆಕಾಶಬುಟ್ಟಿಗಳು ಅಥವಾ ಯಾವುದೇ ಇತರ ದೃಶ್ಯ ಅಥವಾ ಶ್ರವ್ಯ ಮಾಧ್ಯಮ ಇತ್ಯಾದಿಗಳನ್ನು ವಾಣಿಜ್ಯ ಅರ್ಥದಲ್ಲಿ ಉತ್ಪನ್ನ ಅಥವಾ ಸೇವೆಯನ್ನು ಉತ್ತೇಜಿಸಲು ಪ್ರದರ್ಶಿಸಲಾಗುತ್ತದೆ ಜಾಹೀರಾತು ವಿಶಿಷ್ಟವಾಗಿ ಸಂಭಾವ್ಯ ಗ್ರಾಹಕರನ್ನು ಖರೀದಿ ಮಾಡುವಂತೆ ಅಥವಾ ಒಂದು ನಿರ್ದಿಷ್ಟ ಗುರುತಿನ ಉತ್ಪನ್ನ ಅಥವಾ ಸೇವೆಯನ್ನು ಹೆಚ್ಚು ಬಳಸುವಂತೆ ಒಲಿಸಲು ಪ್ರಯತ್ನಿಸುವ ಒಂದು ಪ್ರಸಾರ ಸಾಧನ. ಬಹಳ ಜಾಹೀ ರಾತುಗಳು "ಗುರುತಿನ ಪ್ರತಿ ಅಭಿಪ್ರಾಯ" (ಬ್ರ್ಯಾಂಡ್ ಇಮೇಜ್) ಮತ್ತು "ಗುರುತಿನ ಪ್ರತಿ ನಿಷ್ಠೆ"ಯ (ಬ್ರ್ಯಾಂಡ್ ಲಾಯಲ್ಟಿ) ನಿರ್ಮಾಣ ಮತ್ತು ಬಲವರ್ಧನೆ ಮೂಲಕ ಆ ಉತ್ಪನ್ನಗಳ ಮತ್ತು ಸೇವೆಗಳ ಬಳಕೆ ಹೆಚ್ಚಾಗುವಂತೆ ರೂಪಿಸಲ್ಪಡುತ್ತವೆ. ಈ ಉದ್ದೇಶಗಳಿಗಾಗಿ, ಜಾಹೀರಾತು ಗಳು ಕೆಲವು ಸಲ ವಾಸ್ತವವಾದ ಮಾಹಿತಿಯ ಜೊತೆಗೆ ತಮ್ಮ ಪ್ರೇರಿಸುವ ಸಂದೇಶವನ್ನು ಹುದುಗಿಸುತ್ತವೆ.
ಗ್ರಂಥ ಸಂಪಾದನೆ ಎಂದರೆ ಉಪಲಬ್ಧವಿರುವ ಪ್ರತಿಗಳ ಆಧಾರದ ಮೇಲೆ ಗ್ರಂಥದ ಮೂಲಪಾಠವೇನಿದ್ದಿರಬಹುದೆಂಬುದನ್ನು ಗುರುತಿಸುವ ಹಾಗೂ ಸಮಗ್ರ ಗ್ರಂಥದ ಬಗ್ಗೆ ವಿಮರ್ಶೆಯನ್ನು ನೀಡುವ ಕೆಲಸ (ಟೆಕ್ಸ್ಚುಅಲ್ ಕ್ರಿಟಿಸಿಸóಂ). ಕೈಬರೆಹದಲ್ಲಿ ಉಳಿದಿರುವ ಕೃತಿಗಳ ಸಂಪಾದನೆಯಲ್ಲೇ ಹೆಚ್ಚಿನ ಕ್ಲೇಶಗಳು ಕಂಡುಬರುತ್ತವಾಗಿ ಅವನ್ನೇ ಗಮನದಲ್ಲಿಟ್ಟುಕೊಂಡು ವಿಷವನ್ನಿಲ್ಲಿ ವಿಮರ್ಶಿಸಲಾಗಿದೆ. ಹಿಂದಿನ ಕಾಲದಲ್ಲಿ ಕವಿಗಳು, ಜ್ಞಾನಿಗಳು, ಸಂತರು ತಾವು ಲೋಕಕ್ಕೆ ಹೇಳಬಯಸಿದ ವಿಚಾರಗಳನ್ನು ಭೂರ್ಜಪತ್ರಗಳ ಮೇಲೂ ತಾಳೆಗರಿಗಳ ಮೇಲೂ ಬರೆದಿಡುತ್ತಿದ್ದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ., ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು. ಶಿವನು ಶಾಂತ ಹಾಗೂ ರೌದ್ರ ಸ್ವರೂಪನು, ಶಾಂತ ರೂಪದಲ್ಲಿ ಯೋಗಿಯಾಗಿ ವೈರಾಗ್ಯ ಜೀವನವನ್ನು ಮತ್ತು ಸಂಸಾರಿಯಾಗಿ ಪತ್ನಿ ಪಾರ್ವತಿ ಹಾಗೂ ಮಕ್ಕಳು ಗಣೇಶ, ಕಾರ್ತಿಕೇಯನ ಜೊತೆ ಇರವನು., ರೌದ್ರ ರೂಪದಲ್ಲಿ ದುಷ್ಟರನ್ನು ಸಂಹರಿಸುವ ಮಹಾಕಾಲ, ಭೈರವ, ವೀರಭದ್ರ ಹಾಗೂ ಇತರ ರೂಪಗಳನ್ನು ಅವತರಿಸಿದ್ದಾನೆ.
೨೦೨೪ ನೇಪಾಳ ತ್ರಿ-ರಾಷ್ಟ್ರ ಸರಣಿ (ಸುತ್ತು ೧)
೨೦೨೪ ನೇಪಾಳ ತ್ರಿ-ರಾಷ್ಟ್ರ ಸರಣಿಯು ೨೦೨೪-೨೦೨೬ ಐಸಿಸಿ ಕ್ರಿಕೆಟ್ ವಿಶ್ವಕಪ್ ಲೀಗ್ ೨ ಕ್ರಿಕೆಟ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲಿ ಫೆಬ್ರವರಿ 2024 ರಲ್ಲಿ ನೇಪಾಳದಲ್ಲಿ ನಡೆಯಿತು. ನಮೀಬಿಯ, ನೇಪಾಳ ಮತ್ತು ನೆದರ್ಲ್ಯಾಂಡ್ಸ್ ರಾಷ್ಟ್ರೀಯ ತಂಡಗಳು ಸರಣಿಯಲ್ಲಿ ಭಾಗವಹಿಸಿದ್ದವು.ODI ಸರಣಿಯ ನಂತರ, ಮೂರು ತಂಡಗಳು ಟ್ವೆಂಟಿ20 ಅಂತರಾಷ್ಟ್ರೀಯ (ಟಿ೨೦ಐ) ತ್ರಿ-ರಾಷ್ಟ್ರ ಸರಣಿಯನ್ನು ಆಡಿದವು.
thumb|coin money ಸಾಮಾನ್ಯವಾಗಿ ಸರಕು ಮತ್ತು ಸೇವೆಗಳು ಹಾಗೂ ಋಣಗಳ ವಾಪಸಾತಿಗೆ ಸಂದಾಯದ ರೂಪವೆಂದು ಒಪ್ಪಿಕೊಳ್ಳಲಾದ ಯಾವುದಕ್ಕಾದರೂ ಹಣವೆನ್ನಬಹುದು. ಪ್ರಮುಖವಾಗಿ ಒಂದು ವಿನಿಮಯ ಸಾಧನವಾಗಿ (ಮೀಡಿಯಮ್ ಆಫ಼್ ಎಕ್ಸ್ಚೇಂಜ್), ಒಂದು ಲೆಕ್ಕದ ಏಕಮಾನವಾಗಿ (ಯೂನಿಟ್ ಆಫ಼್ ಅಕೌಂಟ್), ಮತ್ತು ಒಂದು ಮೌಲ್ಯದ ಸಂಗ್ರಹವಾಗಿ (ಸ್ಟೋರ್ ಆಫ಼್ ವ್ಯಾಲ್ಯು) ಹಣವನ್ನು ಉಪಯೋಗಿಸಲಾಗುತ್ತದೆ. ಕೆಲವು ಲೇಖಕರು ಹಣವು ಸ್ಪಷ್ಟವಾಗಿ ಒಂದು ಮುಂದೆ ಸಲ್ಲಿಸುವ ಸಂದಾಯದ ಮಾನದಂಡ (ಸ್ಟ್ಯಾಂಡರ್ಡ್ ಆಫ಼್ ಡೆಫ಼ರ್ಡ್ ಪೇಮಂಟ್) ಆಗಿರಬೇಕೆಂದು ಬಯಸುತ್ತಾರೆ.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.