The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಕೇಡು, ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಸಾಮಾನ್ಯವಾಗಿ ಆರ್ ಸಿ ಬಿ ಎಂದು ಸಂಕ್ಷಿಪ್ತಗೊಳಿಸಲಾಗಿದೆ) ಕರ್ನಾಟಕ, ಬೆಂಗಳೂರು ಮೂಲದ ವೃತ್ತಿಪರ ಫ್ರಾಂಚೈಸ್ ಕ್ರಿಕೆಟ್ ತಂಡವಾಗಿದ್ದು, ಇದು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುತ್ತದೆ. ಫ್ರ್ಯಾಂಚೈಸ್ ಅನ್ನು 2008 ರಲ್ಲಿ ಯುನೈಟೆಡ್ ಸ್ಪಿರಿಟ್ಸ್ ಸ್ಥಾಪಿಸಿತು ಮತ್ತು ಅದರ ಮದ್ಯದ ಬ್ರ್ಯಾಂಡ್ ರಾಯಲ್ ಚಾಲೆಂಜ್ ನಂತರ ಹೆಸರಿಸಲಾಯಿತು. ರಾಯಲ್ ಚಾಲೆಂಜರ್ಸ್ ತಮ್ಮ ತವರಿನ ಪಂದ್ಯಗಳನ್ನು 32,000 ಸಾಮರ್ಥ್ಯದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾರೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಸಾಮಾನ್ಯವಾಗಿ ಎಸ್ಎಸ್ಎಲ್ಸಿ ಎಂದು ಉಲ್ಲೇಖಿಸಲಾಗುತ್ತದೆ) ಭಾರತದಲ್ಲಿ ಮಾಧ್ಯಮಿಕ ಶಾಲಾ ಹಂತದಲ್ಲಿ ಅಧ್ಯಯನದ ಕೊನೆಯಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಯಿಂದ ಪಡೆಯುವ ಪ್ರಮಾಣೀಕರಣವಾಗಿದೆ. SSLC ಅನ್ನು 10 ನೇ ತರಗತಿಯ ಸಾರ್ವಜನಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮೇಲೆ ಪಡೆಯಲಾಗುತ್ತದೆ, ಇದನ್ನು ಸಾಮಾನ್ಯವಾಗಿ ಭಾರತದಲ್ಲಿ '10 ನೇ ತರಗತಿ ಬೋರ್ಡ್ ಪರೀಕ್ಷೆಗಳು' ಎಂದು ಕರೆಯಲಾಗುತ್ತದೆ. SSLC ಭಾರತದ ಹಲವು ರಾಜ್ಯಗಳಲ್ಲಿ ವಿಶೇಷವಾಗಿ ಕೇರಳ, ಕರ್ನಾಟಕ, ಮತ್ತು ತಮಿಳುನಾಡಿನಲ್ಲಿ ಜನಪ್ರಿಯವಾಗಿರುವ ಸಾಮಾನ್ಯ ಅರ್ಹತಾ ಪರೀಕ್ಷೆಯಾಗಿದೆ.
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಆರ್ಥಿಕ ವ್ಯವಹಾರಗಳ ಮಾಹಿತಿಯನ್ನು ಒಂದು ಪುಸ್ತಕದಲ್ಲಿ ದಾಖಲೆ ಮಾಡಿ ಇಟ್ಟುಕೊಳ್ಳುವುದನ್ನು ಲೆಕ್ಕ ಬರಹ (ಬುಕ್ ಕೀಪಿಂಗ್) ಎಂದು ಕರೆಯುತ್ತಾರೆ ಹಾಗು ಇದು ವ್ಯಾಪಾರದಲ್ಲಿ ಲೆಕ್ಕಪತ್ರವನ್ನು ಸಿದ್ಧಪಡಿಸುವ ಕೆಲಸದ ಒಂದು ಮುಖ್ಯ ಭಾಗವಾಗಿದೆ. ಒಬ್ಬ ವ್ಯಕ್ತಿ ಅಥವಾ ಒಂದು ಸಂಸ್ಥೆಯ ಖರೀದಿ, ಮಾರಾಟ, ರಸೀದಿ ಹಾಗು ಹಣ ಪಾವತಿ ಮಾಡುವ ವಿವರಗಳನ್ನೆಲ್ಲ ಲೆಕ್ಕ ಬರಹದಲ್ಲಿ ನೀಡಲಾಗುತ್ತದೆ. ಬುಕ್ ಕೀಪಿಂಗ್ ನಲ್ಲಿ ಎರಡು ವಿಧಾನಗಳಿವೆ - ಏಕದಾಖಲೆ ಪದ್ಧತಿ(single entry system) ದ್ವಿದಾಖಲೆ ಪದ್ಧತಿ(double entry system) ಈ ಲೆಕ್ಕ ಪುಸ್ತಕದ ನಿರ್ವಹಣೆ ಮಾಡುವವರನ್ನು ಲೆಕ್ಕಬರಹಗಾರರೆಂದು ಕರೆಯುತ್ತಾರೆ.
ಡಮರು ಹಿಂದೂ ಧರ್ಮ ಮತ್ತು ಟಿಬೇಟಿಯನ್ ಬೌದ್ಧ ಧರ್ಮದಲ್ಲಿ ಬಳಸಲ್ಪಡುವ ಒಂದು ಸಣ್ಣದಾದ ಎರಡು-ತಲೆಯ ಡೋಲು. ಹಿಂದೂ ಧರ್ಮದಲ್ಲಿ, ಡಮರುವನ್ನು ಶಿವನ ವಾದ್ಯವೆಂದು ಕರೆಯಲಾಗುತ್ತದೆ ಮತ್ತು ಆಧ್ಯಾತ್ಮಿಕ ಶಬ್ದಗಳನ್ನು ಉತ್ಪತ್ತಿ ಮಾಡಲು ಶಿವನಿಂದ ಸೃಷ್ಟಿಸಲ್ಪಟ್ಟಿತು ಎಂದು ಹೇಳಲಾಗುತ್ತದೆ. ಈ ಶಬ್ದಗಳಿಂದಲೇ ಬ್ರಹ್ಮಾಂಡದ ಸೃಷ್ಟಿ ಮತ್ತು ನಿಯಂತ್ರಣವಾಗುತ್ತದೆ ಎಂದು ಹೇಳಲಾಗಿದೆ.
ತಾಪಮಾನವು ಭೌತಶಾಸ್ತ್ರದಲ್ಲಿ ವಸ್ತು ಅಥವಾ ವ್ಯವಸ್ಥೆಯೊಂದರ ಭೌತಿಕ ಗುಣಲಕ್ಷಣ.ಈ ಭೌತಿಕ ಗುಣಲಕ್ಷಣವೇ ವಸ್ತುವು "ಬಿಸಿ" ಅಥವಾ "ತಣ್ಣಗಿದೆ" ಎಂದು ಅನುಭವಕ್ಕೆ ಬರುವ ಸಂವೇದನೆಯ ಆಧಾರ. ಯಾವುದೇ ವಸ್ತುವು ಬಿಸಿಯಾಗುತ್ತಾ ಹೋದಂತೆ ಅದರ ತಾಪಮಾನವು ಹೆಚ್ಚುತ್ತದೆ.ತಾಪಮಾನವು ಥರ್ಮೋಡೈನಾಮಿಕ್ಸ್ ನಲ್ಲಿ ಒಂದು ಪ್ರಮುಖ ಅಧ್ಯಯನದ ಅಂಶ.ಏರಡು ವಸ್ತುಗಳ ಮಧ್ಯೆ ಯಾವುದೇ ರೀತಿಯ ಉಷ್ಣತೆ ಪ್ರವಹಿಸದಿದ್ದಲ್ಲಿ, ಆ ಎರಡು ವಸ್ತುಗಳು ಒಂದೇ ತಾಪಮಾನದಲ್ಲಿವೆಯೆಂದು ತಿಳಿಯಬೇಕು.ಇಲ್ಲದಿದ್ದಲ್ಲಿ ಹೆಚ್ಚು ತಾಪಮಾನದ ವಸ್ತುವಿನಿಂದ ಕಡಿಮೆ ತಾಪಮಾನದ ವಸ್ತುವಿಗೆ ಉಷ್ಣತೆ ಪ್ರವಹಿಸುತ್ತದೆ. ಒಂದು ವಸ್ತುವಿನ ತಾಪವನ್ನು ಅಳೆಯಲು ನಾವು ಮುಖ್ಯವಾಗಿ ಮೂರು ರೀತಿಯ ತಾಪಮಾನ ಪದ್ದತಿಗಳನ್ನು ಬಳಸುತ್ತೇವೆ ಅವುಗಳೆಂದರೆ, ೧)ಸೆಲ್ಸಿಯಸ್ ಪದ್ದತಿ ೨)ಫ್ಯಾರನ್ ಹೀಟ್ ಪದ್ದತಿ ಮತ್ತು ೩) ಕೆಲ್ವಿನ್ ಪದ್ದತಿ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಸಹಾಯಧನ (subvention ಎಂದೂ ಕರೆಯಲ್ಪಡುವುದು) ಎಂಬುದು ಒಂದು ವ್ಯವಹಾರ ಅಥವಾ ಆರ್ಥಿಕ ಕ್ಷೇತ್ರಕ್ಕೆ ಪಾವತಿಸಲಾಗುವ ಆರ್ಥಿಕ ಸಹಾಯದ ಒಂದು ರೂಪ. ಬಹುತೇಕ ಸಹಾಯಧನಗಳು ಸರ್ಕಾರದಿಂದ ಒಂದು ಉದ್ಯಮದಲ್ಲಿನ ಉತ್ಪಾದಕರಿಗೆ ಅಥವಾ ವಿತರಕರಿಗೆ, ಆ ಉದ್ಯಮದ ಅಧೋಗತಿಯನ್ನು ತಡೆಯಲು(ಉದಾಹರಣೆಗೆ ಸತತ ಲಾಭಕಾರಿಯಲ್ಲದ ಕಾರ್ಯಾಚರಣೆಗಳ ಪರಿಣಾಮವಾಗಿ) ಅಥವಾ ಅದರ ಉತ್ಪನ್ನಗಳ ಬೆಲೆಯಲ್ಲಿ ಏರಿಕೆಯನ್ನು ತಡೆಯಲು ಅಥವಾ ಸುಮ್ಮನೆ ಅದು ಹೆಚ್ಚು ಕಾರ್ಮಿಕರನ್ನು ತೆಗೆದುಕೊಳ್ಳಲು ಪ್ರೋತ್ಸಾಹಿಸಲು (ಕೂಲಿ ಸಹಾಯಧನದ ಪ್ರಕರಣದಲ್ಲಿನಂತೆ) ನೀಡಲಾಗುತ್ತದೆ. ಉದಾಹರಣೆಗಳೆಂದರೆ ರಫ್ತುಗಳನ್ನು ಪ್ರೋತ್ಸಾಹಿಸಲು ನೀಡಲಾಗುವ ಸಹಾಯಧನಗಳು; ಜೀವನನಿರ್ವಹಣಾ ವೆಚ್ಚವನ್ನು ಕಡಿಮೆ ಮಟ್ಟದಲ್ಲಿಡಲು ಕೆಲವು ಆಹಾರಗಳ ಮೇಲೆ ಸಹಾಯಧನಗಳು, ವಿಶೇಷವಾಗಿ ನಗರ ಪ್ರದೇಶಗಳಲ್ಲಿ; ಮತ್ತು ಜಮೀನಿನ ಉತ್ಪಾದನೆಯ ವಿಸ್ತರಣೆಯನ್ನು ಪ್ರೋತ್ಸಾಹಿಸಲು ಮತ್ತು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ನೀಡುವ ಸಹಾಯಧನಗಳು.
ಭಾರತೀಯ ಜಾತಿ ಪದ್ದತಿ ಯು ಸಾಮಾಜಿಕ ಶ್ರೇಣೀಕರಣವನ್ನು ವಿವರಿಸುತ್ತದೆ.ಅದಲ್ಲದೇ ಸಾಮಾಜಿಕ ನಿರ್ಭಂಧಗಳಡಿ ಭಾರತ ಉಪಖಂಡದ ಸಾವಿರಾರು ಪಂಗಡದ ಪ್ರವರ್ಗಗಳನ್ನು, ವಂಶವಾಹಿನಿಗಳ ಸಮೂಹವನ್ನು ವ್ಯಾಖ್ಯಾನಿಸುತ್ತದೆ.ಇದನ್ನೇ ಜಾತಿ ಗಳು ಅಥವಾ ಕೋಮು ಗಳೆಂದು ಹೇಳಲಾಗುತ್ತದೆ. ಈ ಜಾತಿಯಲ್ಲಿಯೇ ಅನ್ಯಗೋತ್ರ ಗುಂಪುಗಳ ಅಸ್ತಿತ್ವ ಇದೆ,ಇದನ್ನು ಗೋತ್ರಗಳು,ವಂಶವಾಹಿನಿ ಅಥವಾ ಕುಟುಂಬದ ಕುಲಗೋತ್ರವನ್ನು ವೈಯಕ್ತಿಕ ನೆಲೆಯಲ್ಲಿ ಗುರುತಿಸಲಾಗುತ್ತದೆ. ಹಲವಾರು ಉಪ-ಜಾತಿಗಳಲ್ಲಿ ಶಾಕಾದ್ವಿಪಿ,ಕೂಡಾ ಒಂದು,ಒಂದೇ ಗೋತ್ರದಲ್ಲಿ ವಿವಾಹ ಅನುಮತಿಸಿದ್ದರೂ ಅದನ್ನು ಪರ್ಯಾಯ ನಿರ್ಭಂದಿತ ಸಗೋತ್ರ ವಿವಾಹಕ್ಕೆ ಪರಿಗಣಿಸಲಾಗುತ್ತದೆ.(ಉದಾಹರಣೆಗೆ ಅಡ್ಡಹೆಸರುಗಳು ಒಂದೇ ಆಗಿದ್ದರೆ ಅಲ್ಲಿ ವಿವಾಹ ನಿಷಿದ್ದದ ನಿಯಮ ಉಂಟು) ಹಿಂದುತ್ವದೊಂದಿಗೆ ಗುರುತಿಸಿಕೊಂಡಿರುವ ಇತರ ಮುಸ್ಲಿಮರ ಕೆಲವು ಗುಂಪುಗಳು ಮತ್ತು ಕ್ರಿಶ್ಚನ್ ರು ಕೂಡಾ ಇದೇ ತೆರನಾದ ಗುಂಪು ಪ್ರಭೇದವನ್ನು ಹೊಂದಿರುವುದು ಭಾರತದ ಉಪಖಂಡದಲ್ಲಿ ಕಾಣುತ್ತದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.