The most-visited ಕನ್ನಡ Wikipedia articles, updated daily. Learn more...
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕಮಲ (ನೀಲಂಬೊ ನೂಸಿಫೆರಾ) ನೀಲಂಬೊನೇಸಿಯಿ ಕುಟುಂಬದಲ್ಲಿನ ಜಲವಾಸಿ ಸಸ್ಯದ ಎರಡು ಪ್ರಜಾತಿಗಳಲ್ಲಿ ಒಂದು. ಹಿಂದಿನ ಹೆಸರುಗಳಾದ ನೀಲಂಬಿಯಮ್ ಸ್ಪೀಸಿಯೋಸಮ್ (ವಿಲ್ಡೆನೌ) ಮತ್ತು ನಿಂಫೆಯಾ ನೀಲಂಬೊ ಎಂದು ವರ್ಗೀಕರಿಸಲಾಗಿರುವ ಈ ಪ್ರಜಾತಿಯ ಪ್ರಸಕ್ತವಾಗಿ ಗುರುತಿಸಲ್ಪಟ್ಟಿರುವ ಹೆಸರು ಲಿನೀಯಸ್ನ ದ್ವಿಪದ ನಾಮ ನೀಲಂಬೊ ನೂಸಿಫೆರಾ (ಗ್ಯಾಟ್ನರ್). ಈ ಸಸ್ಯವು ಒಂದು ಜಲವಾಸಿ ಬಹುವಾರ್ಷಿಕ ಸಸ್ಯವಾಗಿದೆ.
ನಾಲ್ಕೂ ಋತುಗಳಲ್ಲಿ ವಸಂತ ಹಾಗೂ ಶರತ್ಕಾಲದ ನಡುವೆ ಬೇಸಿಗೆ ಯೆಂಬುದು ಅತ ನಾಲ್ಕೂ ಋತುಗಳಲ್ಲಿ ವಸಂತ ಹಾಗೂ ಶರತ್ಕಾಲದ ನಡುವೆ ಬೇಸಿಗೆ ಯೆಂಬುದು ಅತ ಚನೆಯ ಕಾಲವಾಗಿದೆ. ದೀರ್ಘಾವಧಿಯ ಹಗಲು ಹಾಗೂ ಅಲ್ಪಾವಧಿಯ ಇರುಳು ಬೇಸಿಗೆ ಕಾಲದ ವೈಶಿಷ್ಟ್ಯವಾಗಿದೆ. ಖಗೋಳವಿಜ್ಞಾನ ಮತ್ತು ವಲಯವಾರು ಹವಾಮಾನ ವಿಜ್ಞಾನಗಳನ್ನು ಆಧರಿಸಿ, ಋತುಗಳು ವಿವಿಧ ವಲಯಗಳಲ್ಲಿ ವಿವಿಧ ದಿನಾಂಖಗಳಂದು ಆರಂಭವಾಗುತ್ತವೆ.
ಓಣಮ್ದಕ್ಷಿಣ ಭಾರತದ ಕೇರಳರಾಜ್ಯದಲ್ಲಿ ನಡೆಯುವ ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬವನ್ನು ಮಲಯಾಳೀ ಪಂಚಾಂಗದ ಮೊದಲ ತಿಂಗಳು ಚಿಂಗಮ್(ಆಗಸ್ಟ್-ಸೆಪ್ಟೆಂಬರ್) ತಿಂಗಳಿನಲ್ಲಿ, ಪುರಾಣಪ್ರಸಿದ್ಧ ಸಾಮ್ರಾಟ ಮಹಾಬಲಿಯು ಮನೆಗೆ ಮರಳಿ ಬಂದ ಕುರುಹಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಹತ್ತು ದಿನಗಳವರೆಗೆ ಸಡಗರದಿಂದ ಜರುಗುವ ಈ ಹಬ್ಬವು ಕೇರಳದ ಹಲವಾರು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದೆ.
೧೯೪೭ ಆಗಸ್ಟ್ ೧೫ರಂದು ಭಾರತ ಸ್ವತಂತ್ರವಾಯಿತು. ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ") ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ೧೯೭೩ಕ್ಕೆ ಮೊದಲು ಕರ್ನಾಟಕದ ಹೆಸರು ಮೈಸೂರು ರಾಜ್ಯ ಎಂದಿತ್ತು.ಇದಕ್ಕೆ ಕಾರಣ ಕರ್ನಾಟಕ ಏಕೀಕರಣದ ಮೊದಲ ಸೃಷ್ಟಿ ಮೈಸೂರು ಮಹಾಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ).
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಗೂಳಿಯು ಬೋಸ್ ಟಾರಸ್ ಪ್ರಜಾತಿಯ ಒಂದು ಅಖಂಡ (ಬೀಜ ಒಡೆಯದ) ವಯಸ್ಕ ಗಂಡು. ಇದೇ ಪ್ರಜಾತಿಯ ಹೆಣ್ಣಾದ ಹಸುವಿಗಿಂತ ಹೆಚ್ಚು ಮಾಂಸಲ ಮತ್ತು ಆಕ್ರಮಣಕಾರಿಯಾದ ಗೂಳಿಯು ದೀರ್ಘಕಾಲದಿಂದ ಅನೇಕ ಸಂಸ್ಕೃತಿಗಳಲ್ಲಿ ಒಂದು ಪ್ರಮುಖ ಸಂಕೇತವಾಗಿದೆ, ಮತ್ತು ಗೋಮಾಂಸ ಹಾಗು ಹೈನುಗಾರಿಕೆ ಮತ್ತು ಇತರ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಹತ್ವದ ಪಾತ್ರವಹಿಸುತ್ತದೆ. ದನಗಳಲ್ಲಿ ಬೀಜದ ಹೋರಿಗೆ ಈ ಹೆಸರುಂಟು (ಬುಲ್).
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಸೌರವ್ಯೂಹದಲ್ಲಿರುವ ಬಹಳ ಸಣ್ಣ ಗ್ರಹ. ಈಗ ಅವುಗಳನ್ನು ಕುಬ್ಜಗ್ರಹಗಳೆಂದು ಕರೆಯುವರು. ಮಂಗಳ ಹಾಗೂ ಗುರು ಗ್ರಹಗಳ ನಡುವಣ ಅಂತರದಲ್ಲಿ ಅಸಂಖ್ಯಾತ ಎಸ್ಟೆರೊಇಡ್(Asteroid)ಗಳು ಇವೆ.ಖಗೋಳ ವಿಜ್ಞಾನಿಗಳು ಇಲ್ಲಿ ಸುಮಾರು ೨೦೦೦ದಷ್ಟು ಗುರುತಿಸಿದ್ದಾರೆ.ಗುರುತಿಸಲಾಗದ ಇನ್ನೂ ಸಾವಿರಾರು ಇರಬಹುದು.ಇವುಗಳಲ್ಲಿ ಅತ್ಯಂತ ದೊಡ್ಡದಾದ 'ಸೆರೆಸ್'(ceres)ನ ವ್ಯಾಸ ಕೇವಲ ೬೮೭ ಕಿ.ಮೀ.ಗಳು (೪೨೫ ಮೈಲಿಗಳು).ಇವುಗಳ ಗಾತ್ರ ೧೬ ರಿಂದ ೮೦೦ ಕಿ.ಮೀ.(೧ ರಿಂದ ೫೦೦ ಮೈಲಿಗಳು).ಇವು ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೬೪೩ ರಿಂದ ೫,೦೦೦ ದಿನಗಳನ್ನು ತೆಗೆದುಕೊಳ್ಳುತ್ತವೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ವಿಜಯದಾಸ(೧೬೮೨– ೧೭೫೫) ೧೮ ನೇ ಶತಮಾನದಲ್ಲಿ ಕರ್ನಾಟಕದ, ಹರಿದಾಸ ಸಂಪ್ರದಾಯದ ಪ್ರಮುಖ ಸಂತ ಮತ್ತು ದ್ವೈತ ತತ್ವಶಾಸ್ತ್ರದ ಸಂಪ್ರದಾಯದ ವಿದ್ವಾಂಸ. ಸಮಕಾಲೀನ ಹರಿದಾಸ ಸಂತರಾದ ಗೋಪಾಲ ದಾಸ, ಹೆಳವನಕಟ್ಟೆ ಗಿರಿಯಮ್ಮ, ಜಗನ್ನಾಥ ದಾಸ ಮತ್ತು ಪ್ರಸನ್ನ ವೆಂಕಟ ದಾಸರೊಂದಿಗೆ, ಅವರು ಕನ್ನಡ ಭಾಷೆಯಲ್ಲಿ ಬರೆದ ದೇವರನಾಮ ಎಂಬ ಭಕ್ತಿಗೀತೆಗಳ ಮೂಲಕ ದಕ್ಷಿಣ ಭಾರತದಾದ್ಯಂತ ಮಧ್ವಾಚಾರ್ಯರ ತತ್ವಶಾಸ್ತ್ರದ ಸದ್ಗುಣಗಳನ್ನು ಪ್ರಚಾರ ಮಾಡಿದರು.ಕನ್ನಡ ವೈಷ್ಣವ ಭಕ್ತಿ ಸಾಹಿತ್ಯದ ಅವಿಭಾಜ್ಯ ಅಂಗವಾಗಿದ್ದು, ಹಿಂದೂ ದೇವರು ವಿಷ್ಣು ಮತ್ತು ಇತರ ದೇವತೆಗಳನ್ನು ಸ್ತುತಿಸುವ ಈ ಸಂಯೋಜನೆಗಳನ್ನು ದಾಸರ ಪದಗಳು (ದಾಸರ ಸಂಯೋಜನೆಗಳು) ಎಂದು ಕರೆಯಲಾಗುತ್ತದೆ. ಅವರು ತಮ್ಮ ಸಂಯೋಜನೆಗಳ ಮೂಲಕ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಎರಡನ್ನೂ ಪ್ರಭಾವಿಸಿದ್ದಾರೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಿಳಿ ಅತ್ಯಂತ ತಿಳಿ ಬಣ್ಣವಾಗಿದೆ ಮತ್ತು ವರ್ಣರಹಿತವಾಗಿದೆ, ಏಕೆಂದರೆ ಅದು ಬೆಳಕಿನ ಎಲ್ಲ ಗೋಚರವಿರುವ ತರಂಗಾಂತರಗಳನ್ನು ಸಂಪೂರ್ಣವಾಗಿ ಪ್ರತಿಫಲಿಸುತ್ತದೆ ಮತ್ತು ಚೆದುರಿಸುತ್ತದೆ; ಅದು ತಾಜಾ ಹಿಮ, ಸೀಮೆಸುಣ್ಣ ಅಥವಾ ಹಾಲಿನ ಬಣ್ಣವಾಗಿದ್ದು, ಕಪ್ಪು ಪದದ ವಿರುದ್ಧಪದವಾಗಿದೆ. ಯೂರೋಪ್ ಮತ್ತು ಅಮೇರಿಕದಲ್ಲಿನ ಸಮೀಕ್ಷೆಗಳ ಪ್ರಕಾರ, ಬಿಳಿಯು ಬಹುತೇಕ ವೇಳೆ ಪರಿಪೂರ್ಣತೆ, ಶುಭ, ಪ್ರಾಮಾಣಿಕತೆ, ಸ್ವಚ್ಛತೆ, ಆರಂಭ, ನವೀನ, ತಟಸ್ಥತೆ ಮತ್ತು ನಿಖರತೆಯೊಂದಿಗೆ ಸಂಬಂಧಿಸಲಾದ ಬಣ್ಣವಾಗಿದೆ. ಬಿಳಿಯು ಬಹುತೇಕ ಎಲ್ಲ ವಿಶ್ವ ಧರ್ಮಗಳಿಗೆ ಒಂದು ಪ್ರಮುಖ ಬಣ್ಣವಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪ್ರಜಾಪ್ರಭುತ್ವದ ವಿಧಗಳು :- ಪ್ರತ್ಯಕ್ಷ ಮತ್ತು ಪರೋಕ್ಷ ಪ್ರಜಾಪ್ರಭುತ್ವ ಎಂದು ಎರಡು ವಿಧಗಳು ಪ್ರತ್ಯಕ್ಷ ಪ್ರಜಾಪ್ರಭುತ್ವ (Direct Democracy) : ಈ ಪ್ರಕಾರದ ಸರ್ಕಾರದಲ್ಲಿ ಜನರು ತಮ್ಮದೇ ಸರ್ಕಾರವನ್ನು ಚುನಾವಣೆ ಮೂಲಕ ರಚಿಸಿಕೊಂಡು ಅವರ ಪ್ರಗತಿಗೆ ಸಹಕಾರಿಯಾಗುವ ನಿಯಮ,ಕಾನೂನುಗಳನ್ನು ರೂಪಿಸಿಕೊಳ್ಳುತ್ತಾರೆ . ಇದನ್ನು ನಿಯಮಿತ ವ್ಯಾಪ್ತಿಯನ್ನು ಹೊಂದಿರುವ ದೇಶಗಳು ಪಾಲಿಸುತ್ತವೆ . ಈ ವ್ಯವಸ್ಥೆಗಳು ಪ್ರಾಚೀನ ಗ್ರೀಕ್ ಮತ್ತು ಪ್ರಸ್ತುತ ಸ್ವಿಜ್ಜರ್ಲೆಂಡ್ ದೇಶಗಳಲ್ಲಿ ಚಾಲ್ತಿಯಲ್ಲಿವೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.ಪ್ರತಿ ವರ್ಷ ಚಂದ್ರಮಾನ ಯುಗಾದಿಯ ದಿನದಿಂದ ಒಂದು ತಿಂಗಳ ವರೆಗೂ ಶ್ರೀ ಚನ್ನಕೇಶವ ಸ್ವಾಮಿಯವರಿಗೆ ಅನೇಕ ಉತ್ಸವಗಳು ಜರುಗುತ್ತವೆ.