The most-visited ಕನ್ನಡ Wikipedia articles, updated daily. Learn more...
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜೈನಿ, ಹಾಗು ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಬಿಗ್ ಬಾಸ್ ಕನ್ನಡ ಸೀಸನ್ 11 ಒಂದು ಭಾರತೀಯ ಕನ್ನಡ ಭಾಷೆಯ ರಿಯಾಲಿಟಿ ಟೆಲಿವಿಷನ್ ಗೇಮ್ ಶೋ ಆಗಿದೆ. ಬಿಗ್ ಬಾಸ್ ಕನ್ನಡದ ಹನ್ನೋಂದನೇ ಸೀಸನ್ 29 ಸೆಪ್ಟಂಬರ್ 2024 ರಂದು ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಥಮ ಪ್ರದರ್ಶನ ಕಂಡಿತು. ಬನಿಜಯ್ ಅವರ ನಿಯಂತ್ರಣದಲ್ಲಿ ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಿಸುತ್ತಿರುವ ಈ ರಿಯಾಲಿಟಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರದ ಜೊತೆಗೆ ಜಿಯೋಸಿನಿಮಾದಲ್ಲಿ ಪ್ರಸಾರವಾಗುತ್ತಿದೆ.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು We want to kill the snake in a stick but the stick do not break ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.ಪ್ರತಿ ವರ್ಷ ಚಂದ್ರಮಾನ ಯುಗಾದಿಯ ದಿನದಿಂದ ಒಂದು ತಿಂಗಳ ವರೆಗೂ ಶ್ರೀ ಚನ್ನಕೇಶವ ಸ್ವಾಮಿಯವರಿಗೆ ಅನೇಕ ಉತ್ಸವಗಳು ಜರುಗುತ್ತವೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಕರ್ನಾಟಕ ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಆಯೋಗಗಳನ್ನು ರಚಿಸಿದೆ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಹಿಂದುಳಿದ ವರ್ಗಗಳೆಂಬ ಪರಿಕಲ್ಪನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು. ಅದುವರೆಗೂ ಬ್ರಿಟಿಷರ ನೇರ ಅಧೀನದ ಪ್ರಾಂತಗಳಲ್ಲಿ ಮತ್ತು ಸಂಸ್ಥಾನಗಳಲ್ಲಿ ಸರ್ಕಾರಿ ನೌಕರಿಗಳನ್ನು ವಿವೇಚನೆಯ ಮತ್ತು ಅರ್ಹತೆಯ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿತ್ತು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಶಿವಕುಮಾರ ಸ್ವಾಮಿ (ಜನನ- ಶಿವಣ್ಣ, ೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.ಹಿಂದೂಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ ದೇವರು ಎಂದು ಕೂಡ ಉಲ್ಲೇಖಿಸಲಾಗಿದೆ.ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು.
ಉತ್ತರ ಕರ್ನಾಟಕವು ದಕ್ಷಿಣ ಭಾರತದಲ್ಲಿ ಕರ್ನಾಟಕ ಪ್ರಾಂತದಲ್ಲಿರುವ ೩೦೦ರಿಂದ ೭೦೦ ಮೀಟರ್ ಎತ್ತರದಲ್ಲಿನ, ತುಲನಾತ್ಮಕವಾಗಿ ಪ್ರಸ್ಥಭೂಮಿಯ ಒಂದು ಶುಷ್ಕವಾದ ವಿಸ್ತಾರ. ಇದು ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಬೀದರ್, ಬಳ್ಳಾರಿ,ವಿಜಯನಗರ,ಗುಲ್ಬರ್ಗಾ, ಯಾದಗಿರಿ, ರಾಯಚೂರು, ಗದಗ್, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳನ್ನು ಒಳಗೊಂಡಿದೆ. ಕೃಷ್ಣಾ ನದಿ ಮತ್ತು ಅದರ ಉಪನದಿಗಳಾದ ಭೀಮಾ, ಘಟಪ್ರಭಾ, ಮಲಪ್ರಭಾ ಮತ್ತು ತುಂಗಭದ್ರಾ ನದಿಗಳು ಈ ಪ್ರದೇಶದಲ್ಲಿ ಹರಿಯುತ್ತವೆ.ಉತ್ತರ ಕರ್ನಾಟಕದ ಜನರ ಮುಖ್ಯ ಆಹಾರವು ಬಿಳಿಜೊಳದ ರೊಟ್ಟಿ ,ವಿವಿಧ ತರಕಾರಿ ಅಥವಾ ಕಾಳುಗಳಿಂದ ತಯಾರಿಸಿದ ಪಲ್ಯಾ,ವಿವಿಧ ಚಟ್ನಿ ಮತ್ತು ಗಟ್ಟಿ ಮೊಸರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ತ್ರಿಪದಿ ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ.