The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಶ್ರೀನಿವಾಸ ರಾಮಾನುಜನ್ (ಪೂರ್ಣ ಹೆಸರು - ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ್) (ಡಿಸೆಂಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದಲ್ಲಿ ಶ್ರೇಷ್ಠ ಭಾರತೀಯ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಮಹಾರಾಜ ದಶರಥ, ಅವನಾಳಿದ ರಾಜ್ಯದ ಹೆಸರು ಅಯೋಧ್ಯೆ, ಇದು ಸರಯೂ ನದಿತೀರದಲ್ಲಿದೆ. ಮಾನವೇಂದ್ರನಾದ ಮನುವಿನಿಂದ ನಿರ್ಮಿತವಾದ ರಾಜ್ಯ. ಮನುನಾ "ಮಾನವೇಂದ್ರೇಣ ಯಾ ಪುರೀ ನಿರ್ಮಿತಾ" ಸ್ವಯಂ (ವಾಲ್ಮೀಕಿ ರಾಮಾಯಣ, ಬಾಲಕಾಂಡ, ೫ನೆ ಸರ್ಗ) ಸಮೃದ್ಧವಾದ ರಾಜ್ಯ, ಸಮರ್ಥ ಮಂತ್ರಿಗಳು, ವಸಿಷ್ಠ ವಾಮದೇವರು ತಪಸ್ವಿಗಳಾದ ಗುರುಗಳು, ಪುರೋಹಿತರು, ಮನಮೆಚ್ಚಿದ ಮೂವರು ಮಡದಿಯರು, ಕೌಸಲ್ಯಾ, ಸುಮಿತ್ರಾ, ಕೈಕೇಯಿ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ತಿದ್ದುಪಡಿ ಎಂದರೆ ಒಂದು ದಸ್ತಾವೇಜಿನ (ಡಾಕ್ಯುಮೆಂಟ್), ಅಥವಾ ಲಿಖಿತ ಅಥವಾ ಮೌಖಿಕ ನಿರೂಪಣೆಯ (ಸ್ಟೇಟ್ಮೆಂಟ್) ಬದಲಾವಣೆ (ಅಮೆಂಡ್ಮೆಂಟ್). ಬದಲಿಕೆ, ಹೊಸ ಅಂಶದ ಸೇರ್ಪಡೆ, ಇದ್ದುದರ ವಿಸರ್ಜನೆ, ಬೇರೆ ಶಬ್ದಗಳಲ್ಲಿ ಹೇಳುವುದು, ವ್ಯತ್ಯಾಸಪಡಿಸುವುದು, ತಪ್ಪುಗಳನ್ನು ಸರಿಪಡಿಸುವುದು, ಸುಧಾರಣೆ ಮಾಡುವುದು ಮೊದಲಾದವೆಲ್ಲ ತಿದ್ದುಪಡಿಯ ಅಡಿಯಲ್ಲಿ ಬರುತ್ತದೆ. ತಿದ್ದುಪಡಿ ಎಂಬ ಶಬ್ದಕ್ಕೆ ನಿಘಂಟಿನಲ್ಲಿ ತಪ್ಪನ್ನು ಸರಿಪಡಿಸುವುದು, ಸುಧಾರಿಸುವುದು ಎಂಬ ಅರ್ಥಗಳಿವೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ವಾದಿರಾಜರು (ಕ್ರಿ.ಶ. ೧೪೮೦ - ೧೬೦೦) ಕನ್ನಡ ಹರಿದಾಸ ಪಂಥದ ಪ್ರಮುಖರಲ್ಲೊಬ್ಬರು.ಇವರು ವ್ಯಾಸರಾಯರ ಪ್ರಮುಖ ಶಿಷ್ಯರಲ್ಲಿ ಸೋದೆಯ ಮಠಾಧಿಪತಿಗಳಾಗಿದ್ದ ವಾದಿರಾಜರೂ ಒಬ್ಬರು.ಕನ್ನಡ ಮತ್ತು ಸಂಸ್ಕೃತ ಭಾಷೆಗಳಲ್ಲಿ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಆತನು ಕವಿತೆ ತರ್ಕಬದ್ಧವಾದುದು.ಇವರ ವಾಗ್ವೈಖರಿಯನ್ನು ಮೆಚ್ಚಿದ ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನು ಇವರಿಗೆ ಪ್ರಸಂಗಾಭರಣ ತೀರ್ಥ ಎಂಬ ಬಿರುದನ್ನು ನೀಡಿ ಗೌರವಿಸಿದರು.ಶ್ರೀಹರಿ ಭಕ್ತಿಯನ್ನು ಕೀರ್ತನೆಗಳ ಮೂಲಕ ಜನ ಸಾಮಾನ್ಯರಿಗೆ ತಿಳಿಕನ್ನಡದಲ್ಲಿ ಸರಳವಾಗಿ ಅರ್ಥವಾಗುವಂತೆ ಮಾಡಿದರು.ಅಷ್ಟ ಮಠಗಳಲ್ಲಿ ಈಗ ನಡೆಯುವ ಪರ್ಯಾಯೋತ್ಸವ ಪದ್ಧತಿಯನ್ನು ಪ್ರಾರಂಭಿಸಿದರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣದಲ್ಲಿನ ವ್ಯವಸ್ಥೆಯೂ ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ್ದಾಗಿದೆ,ಭೂಮಿಯ ಮೇಲಿನ ಜೀವಜಾಲಕ್ಕೆ ಇದು ಮಹತ್ವದ್ದಾಗಿದೆ. ವಾಯು ಮಾಲಿನ್ಯದ ದುಷ್ಪರೀಣಾಮದಿಂದ ಓಜೋನ ಪದರವು ಕ್ಷೀಣಿಸುತ್ತಿದೆ., ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.