The most-visited ಕನ್ನಡ Wikipedia articles, updated daily. Learn more...
ಪೆಸಿಫಿಕ್ ಮಹಾಸಾಗರ ಭೂಮಿಯ ಅತ್ಯಂತ ದೊಡ್ಡ ಮಹಾಸಾಗರ. ಲ್ಯಾಟಿನ್ ಭಾಷೆಯಲ್ಲಿ "ಶಾಂತ ಸಾಗರ" ಎಂಬ ಅರ್ಥದ ಈ ಹೆಸರಿನ್ನಿಟ್ಟವನು ಪೋರ್ಚುಗೀಯ ನಾವಿಕ ಫರ್ಡಿನ್ಯಾಂಡ್ ಮೆಗೆಲನ್. ಅಮೆರಿಕಾ ಭೂಖಂಡಗಳ ಪಶ್ಚಿಮಕ್ಕೆ ಹಾಗೂ ಏಷ್ಯಾ ಮತ್ತು ಆಸ್ಟ್ರೇಲಿಯಾ ಭೂಖಂಡಗಳ ಪೂರ್ವದ ಪ್ರದೇಶವನ್ನು ವ್ಯಾಪಿಸಿಕೊಂಡಿರುವ ಈ ಅಗಾಧ ಜಲರಾಶಿಯು ಭೂಮಿಯ ಒಟ್ಟು ವಿಸ್ತೀರ್ಣದ ೩೫.೨೫% ಪ್ರದೇಶವನ್ನು ಆವರಿಸಿಕೊಂಡಿದೆ.
ಅಟ್ಲಾಂಟಿಕ್ ಮಹಾಸಾಗರ ಭೂಮಿಯ ಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಪುಸ್ತಕದ ರಕ್ಷಾಕವಚ ಎಂದರೆ ಒಂದು ಪುಸ್ತಕದ ಪುಟಗಳನ್ನು ಒಟ್ಟಾಗಿ ಕಟ್ಟಲು ಬಳಸಲಾದ ಯಾವುದೇ ರಕ್ಷಣಾತ್ಮಕ ಹೊದಿಕೆ. ಗಟ್ಟಿರಟ್ಟುಗಳು ಮತ್ತು ಕಾಗದಕವಚಗಳ ನಡುವಿನ ಪರಿಚಿತ ವ್ಯತ್ಯಾಸವನ್ನು ಮೀರಿ, ಮತ್ತಷ್ಟು ಪರ್ಯಾಯಗಳು ಮತ್ತು ಸೇರ್ಪಡಿಕೆಗಳಿವೆ, ಉದಾಹರಣೆಗೆ ಧೂಳು ಹೊದಿಕೆಗಳು, ಉಂಗುರ ರಟ್ಟು ಮತ್ತು ಹತ್ತೊಂಭತ್ತನೇ ಶತಮಾನದ ಪೇಪರ್-ಬೋರ್ಡ್ ಹಾಗೂ ಕೈರಟ್ಟಿನ ಸಾಂಪ್ರದಾಯಿಕ ಪ್ರಕಾರಗಳಂತಹ ಹೆಚ್ಚು ಹಳೆಯ ರೂಪಗಳು.
ಕಾವ್ಯಮೀಮಾಂಸೆ ಎಂದರೆ ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯಪ್ರಭೇದಗಳು, ಕಾವ್ಯಗಳಲ್ಲಿ ಅಲಂಕಾರ, ರೀತಿ, ರಸ, ಧ್ವನಿ ಮೊದಲಾದುವುಗಳ ಸ್ಥಾನ, ಕಾವ್ಯದ ವಸ್ತು ಮತ್ತು ಆತ್ಮಗಳ ಪರಿಶೀಲನ--ಇತ್ಯಾದಿಯಾಗಿ ಕಾವ್ಯವಿದ್ಯೆಗೆ ಸಂಬಂಧಿಸಿದ ವಿಷಯಗಳ ಶಾಸ್ತ್ರೀಯ ನಿರೂಪಣೆ. ಸಂಸ್ಕೃತದಲ್ಲಿ ಕಾವ್ಯಮೀಮಾಂಸೆ ಕ್ರಿಸ್ತಶಕದ ಆರಂಭದ ವೇಳೆಗೆ ಸ್ವತಂತ್ರ ಶಾಸ್ತ್ರವೆನಿಸುತ್ತಿದ್ದುದನ್ನು ರುದ್ರದಾಮನ ಶಿಲಾಲೇಖ, ಪತಂಜಲಿಯ ಮಹಾಭಾಷ್ಯ ಭರತನ ನಾಟ್ಯಶಾಸ್ತ್ರ ಮುಂತಾದವು ಸೂಚಿಸುತ್ತವೆ. ಆದರೆ ಕ್ರಿ.ಶ.
ಹಿಂದೂ ಧರ್ಮದಲ್ಲಿ, ಪಂಡಿತನು ಜ್ಞಾನದ ಯಾವುದೇ ಕ್ಷೇತ್ರದ ಒಬ್ಬ ವಿದ್ವಾಂಸ ಅಥವಾ ಶಿಕ್ಷಕ, ವಿಶೇಷವಾಗಿ ವೈದಿಕ ಗ್ರಂಥಗಳು, ಧರ್ಮ, ಹಿಂದೂ ತತ್ವಶಾಸ್ತ್ರ, ಅಥವಾ ಸಂಗೀತದಂತಹ ಜಾತ್ಯತೀತ ವಿಷಯಗಳಲ್ಲಿ. ಅವನು ಗುರುಕುಲದಲ್ಲಿರುವ ಒಬ್ಬ ಗುರುವಾಗಿರಬಹುದು. ಸಂಸ್ಕೃತದಲ್ಲಿ, ಪಂಡಿತ ಪದವು ಸಾಮಾನ್ಯವಾಗಿ ಯಾವನಾದರೂ "ಬುದ್ಧಿವಂತ, ವಿದ್ಯಾವಂತ ಅಥವಾ ಕಲಿತ ವ್ಯಕ್ತಿ"ಯನ್ನು ಸೂಚಿಸುತ್ತದೆಂದು ಮೊನಿಯರ್ ವಿಲಿಯಮ್ಸ್ ಹೇಳುತ್ತಾರೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ಕಂದಕವು ಸಾಮಾನ್ಯವಾಗಿ (ಹೆಚ್ಚು ಅಗಲದ ಕಮರಿ ಅಥವಾ ಅಗಳಿಗೆ ವಿರುದ್ಧವಾಗಿ) ಅಗಲಕ್ಕಿಂತ ಹೆಚ್ಚು ಆಳವಾಗಿರುವ, ಅದರ ಉದ್ದಕ್ಕೆ ಹೋಲಿಸಿದರೆ ಕಿರಿದಾದ ನೆಲದಲ್ಲಿನ ಒಂದು ಬಗೆಯ ಅಗೆಯುವಿಕೆ ಅಥವಾ ತಗ್ಗು. ಭೂವಿಜ್ಞಾನದಲ್ಲಿ, ಕಂದಕಗಳು ನದಿಗಳಿಂದ ಭೂಸವೆತದ ಪರಿಣಾಮವಾಗಿ ಅಥವಾ ಭೂಮಿಯ ಹೊರಪದರಗಳ ಭೂವೈಜ್ಞಾನಿಕ ಚಲನೆಯಿಂದ ಸೃಷ್ಟಿಯಾಗುತ್ತವೆ. ನಾಗರಿಕ ಶಿಲ್ಪವಿಜ್ಞಾನ ಕ್ಷೇತ್ರದಲ್ಲಿ, ಕಂದಕಗಳನ್ನು ಹಲವುವೇಳೆ ನೆಲದಡಿಯ ಆಧಾರರಚನೆ ಅಥವಾ ಸೌಲಭ್ಯಗಳನ್ನು (ಉದಾ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮರಾಠಾ ಚಕ್ರವರ್ತಿ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಉತ್ತರಾಧಿಕಾರಿ ಛತ್ರಪತಿ ಸಂಭಾಜಿ ರಾಜೇ (ಛತ್ರಪತಿ ಸಂಭಾಜಿ ರಾಜೇ ಭೋಸ್ಲೆ) ಅಥವಾ ಶಂಭಬ್ಬಾರಿ (೧೬೫೭-೧೬೮೯). ಆ ಸಮಯದಲ್ಲಿ, ಅವರು ಮರಾಠರ ಶತ್ರುಗಳಾದ, ಮುಘಲ್ ಚಕ್ರವರ್ತಿ ಔರಂಗಜೇಬ್, ಬಿಜಾಪುರ ಸುಲ್ತಾನರ ಅತ್ಯಂತ ಶಕ್ತಿಶಾಲಿ ಆಳ್ವಿಕೆಯನ್ನು ಅಂತ್ಯಗೊಳಿಸಲು ಪ್ರಮುಖ ಪಾತ್ರ ವಹಿಸಿದರು. ಸಂಭಾಜಿ ಅವರು ಧೈರ್ಯಕ್ಕಾಗಿ ಪ್ರಸಿದ್ಧರಾಗಿದ್ದರು.
ಬಡಿಗಲ್ಲು ಲೇಖನಕ್ಕಾಗಿ ಇಲ್ಲಿ ನೋಡಿ. ಅಡಿಗಲ್ಲು ಪರಿಕಲ್ಪನೆಯು ಕಲ್ಲಿನ ಅಡಿಪಾಯದ ನಿರ್ಮಾಣದಲ್ಲಿ ಸ್ಥಾಪಿಸಲಾದ ಮೊದಲ ಕಲ್ಲಿನಿಂದ ಹುಟ್ಟಿಕೊಂಡಿದೆ ಮತ್ತು ಎಲ್ಲ ಇತರ ಕಲ್ಲುಗಳನ್ನು ಈ ಕಲ್ಲಿನ ಸಂಬಂಧದಲ್ಲಿ ಸ್ಥಾಪಿಸಲಾಗುವುದರಿಂದ ಮಹತ್ವದ್ದಾಗಿದೆ, ಮತ್ತು ಹಾಗಾಗಿ ಸಂಪೂರ್ಣ ರಚನೆಯ ಸ್ಥಾನವನ್ನು ನಿರ್ಧರಿಸುತ್ತದೆ. ಕಾಲಾನಂತರದಲ್ಲಿ ಅಡಿಗಲ್ಲು ಕಟ್ಟಡದ ಹೊರಗಿನ ಒಂದು ಪ್ರಮುಖ ಸ್ಥಳದಲ್ಲಿ ಸ್ಥಾಪಿಸಲಾದ ವಿಧ್ಯುಕ್ತ ಕಲ್ಲುಕೆಲಸದ ಕಲ್ಲು, ಅಥವಾ ಪ್ರತಿಕೃತಿಯಾಯಿತು, ಮತ್ತು ಕಲ್ಲಿನ ಮೇಲೆ ಕಟ್ಟಡದ ನಿರ್ಮಾಣ ದಿನಾಂಕಗಳು ಮತ್ತು ವಾಸ್ತುಶಿಲ್ಪಿ, ಕಟ್ಟಡ ಕಾರ್ಮಿಕ, ಮತ್ತು ಇತರ ಪ್ರಧಾನ ವ್ಯಕ್ತಿಗಳ ಹೆಸರುಗಳನ್ನು ಸೂಚಿಸುವ ಕೆತ್ತನೆ ಇರುತ್ತಿತ್ತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು We want to kill the snake in a stick but the stick do not break ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಇದು ಸಂಸ್ಕೃತದ ೨೧ ಅಕ್ಷರಗಳ 'ಪ್ರಕೃತಿ' ಎಂಬ ಛಂದಸ್ಸಿನ ಒಳ ಪ್ರಬೇಧ.೬ ವೃತ್ತಗಳಲ್ಲಿ ಹೆಚ್ಚು ಖ್ಯಾತಿ ಪಡೆದಿರುವ ವೃತ್ತ ಎಂದರೆ ಅದು 'ಚಂಪಕ ಮಾಲಾವೃತ್ತ'. ಸಂಸ್ಕೃತದಲ್ಲಿ ಇದಕ್ಕೆ ಸರಸಿ, ಶಶಿವದನ,ಪಂಚಕಾವಲಿ ಎಂಬ ಹೆಸರುಗಳು ಇವೆ. ಚಂಪಕಮಾಲೆಯು ಸಂಸ್ಕೃತದ 'ಸರಸಿ' ವೃತ್ತವನ್ನು ಹೋಲುತ್ತದೆ.ನಾಗವರ್ಮನು ತನ್ನ ಛಂದೋಂಬುದಿ ಯಲ್ಲಿ ಚಂಪಕಮಾಲಾ ವೃತ್ತವನ್ನು ಕುರಿತು ಈ ರೀತಿ ಹೇಳುತ್ತಾನೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.
ಭಾರತದ ತುತ್ತತುದಿಗಳು ಉತ್ತರ, ದಕ್ಷಿಣ, ಪೂರ್ವ ಹಾಗೂ ಪಶ್ಚಿಮ ಭಾರತದಲ್ಲಿನ ಇತರ ಯಾವುದೇ ಸ್ಥಳಗಿಂತ ಅಂತ್ಯದಲ್ಲಿರುವಂಥಹ ಸ್ಥಳಗಳಾಗಿವೆ. ಉತ್ತರ ಮತ್ತು ಪೂರ್ವದಲ್ಲಿ ಗುರುತಿಸಲ್ಪಟ್ಟಿರುವ ತುತ್ತತುದಿಗಳು ಚೀನಾ ಮತ್ತು ಭಾರತ ನಡುವಿನ ವಿವಾದಿತ ಪ್ರದೇಶದಲ್ಲಿವೆ. ಭಾರತ ಭೂಖಂಡದಲ್ಲಿ (ಅಂಡಮಾನ್ ದ್ವೀಪ ಸಮೂಹವನ್ನು ಹೊರತುಪಡಿಸಿ) ದಕ್ಷಿಣದ ತುತ್ತತುದಿಯಾದ ಕನ್ಯಾಕುಮಾರಿಯನ್ನು ಹೊರತುಪಡಿಸಿ, ಉಳಿದ ಯಾವುದೇ ತುತ್ತತುದಿಯ ಪ್ರದೇಶವು ವಾಸಯೋಗ್ಯವಿಲ್ಲ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ತ್ರಿಪದಿ ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ.
ಸಾಂದ್ರತೆ ಎಂದರೆ ವಸ್ತುವಿನ ಏಕಮಾನ ಗಾತ್ರದಲ್ಲಿರುವ ದ್ರವ್ಯರಾಶಿಯ ಅಳತೆ. ಗಾತ್ರ V, ರಾಶಿ m, ಸಾಂದ್ರತೆ D ಆದಲ್ಲಿ D = m / V {\displaystyle D=m/V} ಒಂದು ಘನಮೀಟರ್ನಲ್ಲಿ ಇಂತಿಷ್ಟು ಕಿ.ಗ್ರಾಂ (Kg/m೩) ಅಥವಾ ಒಂದು ಘನ ಸೆಂಟಿಮೀಟರ್ನಲ್ಲಿ ಇಂತಿಷ್ಟು ಗ್ರಾಮ್ (g/cm೩) ಎಂದು ಅಳೆಯಲಾಗುತ್ತದೆ. ಸಾಂದ್ರತೆಗೆ ಹೆಚ್ಚಾಗಿ ಬಳಸುವ ಚಿಹ್ನೆ ρ (ಗ್ರೀಕ್ ಅಕ್ಷರ ರೋ), ಆದರೂ ಲ್ಯಾಟಿನ್ ಅಕ್ಷರ D ಅನ್ನು ಸಹ ಬಳಸಬಹುದು.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಅಪಘಾತವು (ಆಕಸ್ಮಿಕ) ಒಂದು ಅನಪೇಕ್ಷಿತ, ಪ್ರಾಸಂಗಿಕ, ಮತ್ತು ಅಯೋಜಿತ ಘಟನೆ. ಅದು ಸಂಭವಿಸುವುದಕ್ಕೆ ಮೊದಲು, ಅದಕ್ಕೆ ದಾರಿಕಲ್ಪಿಸುವ ಸಂದರ್ಭಗಳನ್ನು ಗುರುತಿಸಿ ಕ್ರಮ ತೆಗೆದುಕೊಂಡರೆ ಅಪಘಾತವನ್ನು ತಡೆಗಟ್ಟಬಹುದು. ಅನುದ್ದೇಶಿತ ಗಾಯವನ್ನು ಅಧ್ಯಯನ ಮಾಡುವ ಬಹುತೇಕ ವಿಜ್ಞಾನಿಗಳು "ಅಪಘಾತ" ಪದವನ್ನು ಬಳಸುವುದಿಲ್ಲ ಮತ್ತು ತೀವ್ರ ಗಾಯದ ಅಪಾಯವನ್ನು ಹೆಚ್ಚಿಸುವ ಮತ್ತು ಗಾಯದ ವ್ಯಾಪ್ತಿ ಮತ್ತು ತೀವ್ರತೆಯನ್ನು ಕಡಿಮೆಮಾಡುವ ಅಂಶಗಳ ಮೇಲೆ ಕೇಂದ್ರೀಕರಿಸುತ್ತಾರೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಫೆಬ್ರವರಿ 14, 2019 ರಂದು, ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ, ಭದ್ರತಾ ಸಿಬ್ಬಂದಿಯನ್ನು ಸಾಗಿಸುವ ವಾಹನಕ್ಕೆ , ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್ಪೊರದಲ್ಲಿ (ಅವಾಂತಿಪೋರಾ ಬಳಿ) ಆತ್ಮಹತ್ಯಾ ಬಾಂಬರ್ ವಾಹನದಿಂದ ದಾಳಿ ಮಾಡಲಾಯಿತು. ಈ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ ೪೦ ಮಂದಿ ಹುತಾತ್ಮರಾದರು. ದಾಳಿಯ ಜವಾಬ್ದಾರಿಯನ್ನು ಪಾಕಿಸ್ತಾನ ಮೂಲದ ಇಸ್ಲಾಮ್ ಉಗ್ರಗಾಮಿ ಗುಂಪು ಜೈಷ್–ಎ–ಮೊಹಮದ್ ಹೊತ್ತುಕೊಂಡಿದೆ.
ಪರಿಸರ ವ್ಯವಸ್ಥೆ ಎಂದರೆ ಪರಿಸರದ ಭೌತಿಕವಾದ ಮತ್ತು ಜೈವಿಕವಾದ ಸಂಯೋಜಿತ ಘಟಕಗಳಿಗೆ ಅನ್ವಯಿಸುತ್ತದೆ. ಪರಿಸರ ವ್ಯವಸ್ಥೆ ಒಂದು ನೈಸರ್ಗಿಕ ಪರಿಸರದೊಳಗಿನ ಪ್ರದೇಶವಾಗಿದೆ.ಈ ಪರಿಸರದಲ್ಲಿ ನಾವು ಜೈವಿಕ ಮತ್ತು ಅಜೈವಿಕ ವಸ್ತುಗಳು ಅಂದರೆ , ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೈವಿಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ . ಪರಿಸರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಅಥವಾ ಶಾಶ್ವತ ವ್ಯವಸ್ಥೆಯನ್ನು ಕಾಣಬಹುದು ಮತ್ತು ಸಾಮಾನ್ಯವಾಗಿ ಒಂದು ಅಸಂಖ್ಯಾತ ಆಹಾರ ಜಾಲಗಳನ್ನು ರೂಪಿಸುತ್ತವೆ.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.