The most-visited ಕನ್ನಡ Wikipedia articles, updated daily. Learn more...
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಅಟ್ಲಾಂಟಿಕ್ ಮಹಾಸಾಗರ ಭೂಮಿಯ ಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸಂಭಾಜಿ (ಶಂಭುರಾಜೆ ಅಥವಾ ಸಂಭಾಜಿ ರಾಜೇ ಶಿವಾಜಿರಾಜೇ ಭೋಸ್ಲೆ) (೧೬೫೭-೧೬೮೯) ಒಬ್ಬ, ಮರಾಠಾ ಸಾಮ್ರಾಜ್ಯದ ಎರಡನೆಯ ಛತ್ರಪತಿ ಅಥವಾ ಅರಸ ಮತ್ತು ಶಿವಾಜಿಯ ಮೂರನೆಯ ಪುತ್ರ. ಆ ಸಮಯದಲ್ಲಿ, ಅವರು ಮರಾಠರ ಶತ್ರುಗಳಾದ, ಮುಘಲ್ ಚಕ್ರವರ್ತಿ ಔರಂಗಜೇಬ್, ಬಿಜಾಪುರ ಸುಲ್ತಾನರ ಅತ್ಯಂತ ಶಕ್ತಿಶಾಲಿ ಆಳ್ವಿಕೆಯನ್ನು ಅಂತ್ಯಗೊಳಿಸಲು ಪ್ರಮುಖ ಪಾತ್ರ ವಹಿಸಿದರು. ಸಂಭಾಜಿ ಅವರು ಧೈರ್ಯಕ್ಕಾಗಿ ಪ್ರಸಿದ್ಧರಾಗಿದ್ದರು.
ಪೆಸಿಫಿಕ್ ಮಹಾಸಾಗರ ಭೂಮಿಯ ಅತ್ಯಂತ ದೊಡ್ಡ ಮಹಾಸಾಗರ. ಲ್ಯಾಟಿನ್ ಭಾಷೆಯಲ್ಲಿ "ಶಾಂತ ಸಾಗರ" ಎಂಬ ಅರ್ಥದ ಈ ಹೆಸರಿನ್ನಿಟ್ಟವನು ಪೋರ್ಚುಗೀಯ ನಾವಿಕ ಫರ್ಡಿನ್ಯಾಂಡ್ ಮೆಗೆಲನ್. ಅಮೆರಿಕಾ ಭೂಖಂಡಗಳ ಪಶ್ಚಿಮಕ್ಕೆ ಹಾಗೂ ಏಷ್ಯಾ ಮತ್ತು ಆಸ್ಟ್ರೇಲಿಯಾ ಭೂಖಂಡಗಳ ಪೂರ್ವದ ಪ್ರದೇಶವನ್ನು ವ್ಯಾಪಿಸಿಕೊಂಡಿರುವ ಈ ಅಗಾಧ ಜಲರಾಶಿಯು ಭೂಮಿಯ ಒಟ್ಟು ವಿಸ್ತೀರ್ಣದ ೩೫.೨೫% ಪ್ರದೇಶವನ್ನು ಆವರಿಸಿಕೊಂಡಿದೆ.
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಭಾಷಾ ನೀತಿಯಲ್ಲಿ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆಯ ಹಕ್ಕಿಗಾಗಿ ೧೯೮೦ರ ದಶಕದಲ್ಲಿ ನಡೆದ ಒಂದು ಚಳವಳಿ/ಆಂದೋಲನವೇ ಗೋಕಾಕ್ ಚಳವಳಿ ತ್ರಿಭಾಷಾ ಸೂತ್ರದಡಿಯಲ್ಲಿ ಕರ್ನಾಟಕದ ಶಾಲೆಗಳಲ್ಲಿ ಕನ್ನಡವನ್ನು ಮುಖ್ಯ ಭಾಷೆಯನ್ನಾಗಿ ಪರಿಗಣಿಸಬೇಕು ಎನ್ನವಂತಹ ಹಲವಾರು ಬೇಡಿಕೆಗಳನ್ನೊಳಗೊಂಡ ವರದಿಯೊಂದನ್ನು ಕನ್ನಡದ ಕವಿ ವಿ.ಕೃ ಗೋಕಾಕ್ ರು ಸಿದ್ಧಪಡಿಸಿ ಸಲ್ಲಿಸಿದ್ದರು, ಆದ ಕಾರಣ ಚಳವಳಿಗೆ ಅವರದೇ ಹೆಸರು ಬಂದಿದೆ. ವಿ.ಕೃ ಗೋಕಾಕ್ ತಂಡಕೆ ಹಲವಾರು ಭಾಷಾ ವ್ಯಾಸಂಗರವರು ವಿರೋಧ ಮಾಡಿದರು. ಈ ಸಮಯದಲ್ಲಿ ನಾಯಕತ್ವ ಹುಡುಕುವ ಸಂದರ್ಭ ಬಂದಿತು ಮತ್ತೆ ಆ ನಾಯಕ ಬೇರೆ ಯಾರು ಅಲ್ಲ ಅದು ಡಾ|| ರಾಜಕುಮಾರ್.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು We want to kill the snake in a stick but the stick do not break ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳ ನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಮಹಾನಗರಪಾಲಿಕೆಗಳು ಮಹಾನಗರಗಳ ಆಡಳಿತವನ್ನು ನಡೆಸುತ್ತವೆ. ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆಯಂತೆ ಒಂದು ನಗರ ಮಹಾನಗರಪಾಲಿಕೆ ದರ್ಜೆಗೇರಲು ಪೂರ್ಣ ನಗರ ಪ್ರದೇಶದಲ್ಲಿ ೨ ಲಕ್ಷ ಜನಸಂಖ್ಯೆ ಮತ್ತು ಸುತ್ತಲಿನ ಪ್ರದೇಶದಲ್ಲಿ ೧ ಲಕ್ಷ ಜನಸಂಖ್ಯೆ ಅಂದರೆ ಒಟ್ಟಾರೆ ೩ ಲಕ್ಷ ಜನಸಂಖ್ಯೆ ಇರಬೇಕು. ನಗರದ ಕಂದಾಯ ೬ ಕೋಟಿ ರೂಪಾಯಿಗಳಿಗೂ ಮಿಕ್ಕಿರಬೇಕು ಮತ್ತು ಜನಸಾಂದ್ರತೆ ಪ್ರತಿ ಚದರ ಕಿ.ಮಿ.ಗೆ ೩೦೦೦ ಮಿಕ್ಕಿರಬೇಕು.
ಒಳಮಾಳಿಗೆ : ಮಾಳಿಗೆಯ ಒಳ ಭಾಗಕ್ಕೆ ಈ ಹೆಸರಿದೆ (ಸೀಲಿಂಗ್), ಒಳ ಎಂದರೆ ಮನೆಯ ಒಂದು ಕೊಠಡಿಯಲ್ಲಿ ನಿಂತು ಮೇಲೆ ನೋಡಿದರೆ ಕಾಣುವ ಸೂರಿನ ಒಳಭಾಗ ಎಂದರ್ಥ. ಎಂದರೆ ಪೂರ್ವಕಾಲದಲ್ಲಿ ಮರದ ತೀರುಗಳನ್ನೆಳೆದು ಅವುಗಳ ಮೇಲೆ ಮರದ ಮಾಡನ್ನು ಕಟ್ಟುತ್ತಿದ್ದಾಗ ತೀರುಗಳು ಒಳಗಿನಿಂದ ಕಾಣದ ಹಾಗೆ ಮುಚ್ಚುವುದಕ್ಕಾಗಿ ಒಳಮಾಳಿಗೆಗಳನ್ನು ಮಟ್ಟವಾಗಿ ಮರದ ಹಲಗೆಗಳಿಂದ ಮಾಡುತ್ತಿದ್ದರು. ಈಚೆಗೆ ಉಕ್ಕಿನ ಸರಕಟ್ಟುಗಳಿಂದ ಮಾಡಿದ ಮಾಡಿನ ಕೆಳಗೂ ಇಂಥ ಒಳಮಾಳಿಗೆಗಳು ಅವಶ್ಯವಾಗುತ್ತಿವೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಚಳಿಗಾಲವು ಸಮಶೀತೋಷ್ಣ ವಾತಾವರಣಗಳಲ್ಲಿ ಶರತ್ಕಾಲ ಮತ್ತು ವಸಂತಕಾಲಗಳ ನಡುವೆ ಬರುವ ವರ್ಷದ ಅತ್ಯಂತ ಶೀತಲ ಋತು. ದಕ್ಷಿಣಾಯಣದಂದು, ದಿನಗಳು ಅತ್ಯಲ್ಪಾವಧಿಯನ್ನು ಹೊಂದಿರುತ್ತವೆ ಮತ್ತು ರಾತ್ರಿಗಳು ಅತಿದೀರ್ಘಾವಧಿಯನ್ನು ಹೊಂದಿರುತ್ತವೆ, ಮತ್ತು ಅಯನದ ನಂತರ ಋತು ಮುಂದುವರಿದಂತೆ ದಿನಗಳ ಅವಧಿ ಹೆಚ್ಚಾಗುತ್ತದೆ. ಕೆಲವು ತಜ್ಞರು ಖಗೋಳೀಯ ಚಳಿಗಾಲವನ್ನು ಕೇವಲ ಸೂರ್ಯನ ಸುತ್ತ ಭೂಮಿಯ ಅಕ್ಷದಲ್ಲಿನ ಅದರ ಸ್ಥಿತಿ ಮೇಲೆ ಆಧರಿಸಿ ವ್ಯಾಖ್ಯಾನಿಸಲು ಪ್ರಯತ್ನಿಸುತ್ತಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ನಡೆಸುವ ಅಂತಾರಾಷ್ಟ್ರೀಯ ಏಕದಿನ ಪಂದ್ಯ ಪಂದ್ಯಗಳ ಪಂದ್ಯಾವಳಿ. ಇದು ಐಸಿಸಿ ಕ್ರಿಕೆಟ್ ವಿಶ್ವ ಕಪ್ನ ನಂತರ ಒಂದು-ದಿನದ ಕ್ರಿಕೆಟ್ ಆಟದಲ್ಲಿ ಎರಡನೇ ಅತಿ ಮುಖ್ಯ ಸ್ಪರ್ಧೆ. ಐಸಿಸಿ ನಾಕೌಟ್ ಎಂಬ ಹೆಸರಿನಿಂದ ೧೯೯೮ರಲ್ಲಿ ಆರಂಭವಾದ ಈ ಸ್ಪರ್ಧೆಯನ್ನು ೨೦೦೨ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯೆಂದು ಮರುನಾಮಕರಿಸಲಾಯಿತು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.