The most-visited ಕನ್ನಡ Wikipedia articles, updated daily. Learn more...
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು. ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ.
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ಬೆರಿಲಿಯಂ ಮತ್ತು ಅಲ್ಯೂಮಿನಂ ಹಾಗೂ ಸಿಲಿಕೇಟುಳ್ಳ ಖನಿಜ ದ ವೈವಿಧ್ಯ ವಸ್ತು ಪಚ್ಚೆ (Be3Al2(SiO3)6,) ಇದು ಹಸಿರು ಬಣ್ಣವುಳ್ಳದಾಗಿದ್ದು ಇದರಲ್ಲಿ ಕ್ರೋಮಿಯಂ ನ ಜಾಡು ಇರುತ್ತದೆ ಮತ್ತು ಕೆಲವು ಸಾರಿ ವನೇಡಿಯಂ ಕೂಡ ಇರುತ್ತದೆ. ಖನಿಜ ಕಾಠಿಣ್ಯ ಮೋಹ್ಸ್ ಮಾಪನದ 10 ಪಾಯಿಂಟ್ನಲ್ಲಿ ಬೆರಿಲ್ನ ಕಾಠಿಣ್ಯ 7.5–8ರಷ್ಟು ಇರುತ್ತದೆ. ಅನೇಕ ಪಚ್ಚೆಗಳು ಅಂತರ್ಗತವಾಗಿರುತ್ತದೆ, ಆದುದರಿಂದ ಅವುಗಳ ಕಾಠಿಣ್ಯತೆ (ಮುರಿಯುವುದಕ್ಕೆ ಇರುವ ಪ್ರತಿರೋಧ) ಪಚ್ಚೆಯಲ್ಲಿ ಉತ್ತಮವಾಗಿಲ್ಲ, ಸಾಧಾರಣವಾಗಿದೆ ಎಂದು ವರ್ಗೀಕರಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪೆಸಿಫಿಕ್ ಮಹಾಸಾಗರ ಭೂಮಿಯ ಅತ್ಯಂತ ದೊಡ್ಡ ಮಹಾಸಾಗರ. ಲ್ಯಾಟಿನ್ ಭಾಷೆಯಲ್ಲಿ "ಶಾಂತ ಸಾಗರ" ಎಂಬ ಅರ್ಥದ ಈ ಹೆಸರಿನ್ನಿಟ್ಟವನು ಪೋರ್ಚುಗೀಯ ನಾವಿಕ ಫರ್ಡಿನ್ಯಾಂಡ್ ಮೆಗೆಲನ್. ಅಮೆರಿಕಾ ಭೂಖಂಡಗಳ ಪಶ್ಚಿಮಕ್ಕೆ ಹಾಗೂ ಏಷ್ಯಾ ಮತ್ತು ಆಸ್ಟ್ರೇಲಿಯಾ ಭೂಖಂಡಗಳ ಪೂರ್ವದ ಪ್ರದೇಶವನ್ನು ವ್ಯಾಪಿಸಿಕೊಂಡಿರುವ ಈ ಅಗಾಧ ಜಲರಾಶಿಯು ಭೂಮಿಯ ಒಟ್ಟು ವಿಸ್ತೀರ್ಣದ ೩೫.೨೫% ಪ್ರದೇಶವನ್ನು ಆವರಿಸಿಕೊಂಡಿದೆ.
ಅಟ್ಲಾಂಟಿಕ್ ಮಹಾಸಾಗರ ಭೂಮಿಯ ಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಾಮಾಜಿಕ ಉದ್ಯಮಶೀಲತೆ ಎಂಬುದು ಸಮಾಜ ಸೇವಕ ನೊಬ್ಬನು ಕೈಗೊಳ್ಳುವ ಕೆಲಸವಾಗಿದೆ. ಯಾವುದೇ ಸಮಾಜ ಸೇವಕನೊಬ್ಬ ಸಮಾಜದ ಸಮಸ್ಯೆಯೊಂದನ್ನು ಗುರುತಿಸಿ, ಬಳಿಕ ತನ್ನ ಉದ್ಯಮಶೀಲ ತತ್ವಗಳನ್ನು ಬಳಸಿಕೊಂಡು ವಾಣಿಜ್ಯ ಉದ್ಯಮವೊಂದನ್ನ ಹುಟ್ಟುಹಾಕಿ, ವ್ಯವಸ್ಥಿತ ರೀತಿಯಲ್ಲಿ ಅದನ್ನು ಪೋಷಿಸುತ್ತ, ಬೆಳೆಸಿಕೊಂಡು ಹೋಗುವುದನ್ನು ಮತ್ತು ಆ ಮೂಲಕ ಸಮಾಜ ಮತ್ತು ಉದ್ಯಮ ಕ್ಷೇತ್ರಗಳೆರಡರಲ್ಲೂ ಒಂದು ಸಾಮಾಜಿಕ ಬದಲಾವಣೆಯನ್ನು ತರುವ ಸಾಮಾಜಿಕ ಸಾಹಸದ ಪ್ರಯತ್ನವನ್ನೇ ಸಾಮಾಜಿಕ ಉದ್ಯಮಶೀಲತೆ ಅಥವಾ ಸಮಾಜಸೇವೆ ಎಂದು ಕರೆಯಬಹುದಾಗಿದೆ. ವ್ಯಾಪಾರೋದ್ಯಮಿಯೊಬ್ಬನು ಏನೇ ಮಾಡಿದರೂ ಅದು ತನ್ನ ಲಾಭದ ಮತ್ತು ತನಗೆ ಸಿಕ್ಕುವ ಆದಾಯದ ಕುರಿತೇ ಆಗಿರುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶಕ್ತಿ ಎಂದರೆ ಕೆಲಸ (ಅಥವಾ ಕಾರ್ಯ) ಮಾಡಲು ಇರುವ ಅಳವು. ಗ್ರೀಕ್ನ ಮೂಲ ಪದಗಳಾದ ἐνέργεια ಅಂದರೆ ಎನರ್ಜೀಯಾ (ಚಟುವಟಿಕೆ, ಕಾರ್ಯಾಚರಣೆ) ಮತ್ತು ἐνεργός ಎನರ್ಗೊಸ್' (ಸಕ್ರಿಯ, ಕಾರ್ಯನಿರತ) ಎಂಬ ಪದಗಳಿಂದ ಭೌತವಿಜ್ಞಾನದ ಶಕ್ತಿ ('ಎನರ್ಜಿ') ಎಂಬ ಇಂಗ್ಲಿಷ್ ಪದವು ನಿಷ್ಪನ್ನವಾಗಿದೆ. 'ಶಕ್ತಿ' ಎಂಬುದು, ಬಲವು ನಿರ್ವಹಿಸಬಲ್ಲ ಕಾರ್ಯದ ಯಾವುದೇ ಭೌತಿಕ ಅದಿಶ ಪರಿಮಾಣವನ್ನು ಸೂಚಿಸುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಆಕಾಶವು, ಬಾಹ್ಯಾಕಾಶದ ಗುಮ್ಮಟ ಎಂದೂ ಪರಿಚಿತವಿರುವ, ಸಾಮಾನ್ಯವಾಗಿ, ವಾತಾವರಣ ಮತ್ತು ಉಳಿದ ಬಾಹ್ಯಾಕಾಶವನ್ನು ಒಳಗೊಂಡಂತೆ, ಭೂಮಿಯ ಮೇಲ್ಮೈಯ ಮೇಲೆ ಒಂದು ನಿರ್ದಿಷ್ಟ ದೂರದಲ್ಲಿ ಸ್ಥಿತವಾಗಿರುವ ಎಲ್ಲವನ್ನೂ ನಿರ್ದೇಶಿಸುತ್ತದೆ. ಖಗೋಳಶಾಸ್ತ್ರದ ಕ್ಷೇತ್ರದಲ್ಲಿ, ಆಕಾಶವನ್ನು ಬಾಹ್ಯಾಕಾಶ ಗೋಳ ಎಂದೂ ಕರೆಯಲಾಗುತ್ತದೆ. ಇದು ಸೂರ್ಯ, ನಕ್ಷತ್ರಗಳು, ಗ್ರಹಗಳು, ಮತ್ತು ಚಂದ್ರ ಸಾಗುತ್ತಿರುವಂತೆ ಕಾಣುವ ಒಂದು ಕಾಲ್ಪನಿಕ ಗುಮ್ಮಟ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು We want to kill the snake in a stick but the stick do not break ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಮಾನವ ಸಂಪನ್ಮೂಲ ನಿರ್ವಹಣೆ (ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್)(HRM) ಎಂಬುದು ಒಂದು ಸಂಸ್ಥೆಯ ಅತ್ಯಂತ ಮೌಲ್ಯಯುತ ಮಾನವ ಸಂಪತ್ತಿನ ನಿರ್ವಹಣೆಯೆಡೆಗೆ ತೋರುವ ನಿರ್ವಹಣಾ ಚಾತುರ್ಯ ಮತ್ತು ಹೊಂದಾಣಿಕೆಯಾಗಿದೆ- ಉದಾಹರಣೆಗೆ ವ್ಯಾಪಾರದ ಗುರಿಗಳನ್ನು ಸಾಧಿಸಲು ವೈಯಕ್ತಿಕ ಮತ್ತು ಸಾಮೂಹಿಕವಾಗಿ ತಮ್ಮ ಕೊಡುಗೆ ನೀಡಲು ಕಾರಣ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗವಾಗಿದೆ. "ಮಾನವ ಸಂಪನ್ಮೂಲ ನಿರ್ವಹಣೆ" ಮತ್ತು "ಮಾನವ ಸಂಪನ್ಮೂಲಗಳು" (HR) ಎಂಬ ಪದಗಳನ್ನು "ವೈಯಕ್ತಿಕ ನಿರ್ವಹಣೆ" ಎಂಬ ಪದದ ಬದಲಿಗೆ ಬಳಸಲಾಗಿದೆ. ಇದು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನಿರ್ವಹಣೆಯನ್ನೊಳಗೊಂಡ ಕಾರ್ಯಚಟುವಟಿಕೆಯ ವಿವರಣೆಯಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಭಾರತದ ಸಂಸತ್ತು ಭಾರತದ ಗಣರಾಜ್ಯದ ಒಕ್ಕೂಟ ಸರ್ಕಾರದ ಎರಡು ಶಾಸನಸಭೆಗಳುಳ್ಳ (ಉಭಯ ಸದನಿಕ) ಸರ್ವೋಚ್ಚ ವಿಧಾಯಕ ಘಟಕವಾಗಿದೆ. ಭಾರತದ ರಾಷ್ಟ್ರಪತಿಯವರ ಕಚೇರಿ, "ರಾಜ್ಯಸಭಾ" ಎಂದು ಕರೆಯಲ್ಪಡುವ ರಾಜ್ಯಗಳ ಪರಿಷತ್ತು ಆಗಿರುವ ಒಂದು ಮೇಲ್ಮನೆ, ಮತ್ತು "ಲೋಕಸಭಾ" ಎಂದು ಕರೆಯಲ್ಪಡುವ ಪ್ರಜಾಪ್ರತಿನಿಧಿಗಳ ಸಭೆಯಾಗಿರುವ ಒಂದು ಕೆಳಮನೆಯನ್ನು ಇದು ಒಳಗೊಂಡಿದೆ. ನವದೆಹಲಿಯಲ್ಲಿನ ಸಂಸದ್ ಭವನದಲ್ಲಿರುವ (ಇದನ್ನು ಸಾಮಾನ್ಯವಾಗಿ ಸಂಸದ್ ಮಾರ್ಗ ಎಂದು ಕರೆಯಲಾಗುತ್ತದೆ) ಪ್ರತ್ಯೇಕ ಶಾಸನಸಭೆಗಳಲ್ಲಿ ಎರಡೂ ಸದನಗಳು ಸಭೆ ಸೇರುತ್ತವೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.