The most-visited ಕನ್ನಡ Wikipedia articles, updated daily. Learn more...
ಭಾರತದ ಸಂಸತ್ತು ಭಾರತದ ಗಣರಾಜ್ಯದ ಒಕ್ಕೂಟ ಸರ್ಕಾರದ ಎರಡು ಶಾಸನಸಭೆಗಳುಳ್ಳ (ಉಭಯ ಸದನಿಕ) ಸರ್ವೋಚ್ಚ ವಿಧಾಯಕ ಘಟಕವಾಗಿದೆ. ಭಾರತದ ರಾಷ್ಟ್ರಪತಿಯವರ ಕಚೇರಿ, "ರಾಜ್ಯಸಭಾ" ಎಂದು ಕರೆಯಲ್ಪಡುವ ರಾಜ್ಯಗಳ ಪರಿಷತ್ತು ಆಗಿರುವ ಒಂದು ಮೇಲ್ಮನೆ, ಮತ್ತು "ಲೋಕಸಭಾ" ಎಂದು ಕರೆಯಲ್ಪಡುವ ಪ್ರಜಾಪ್ರತಿನಿಧಿಗಳ ಸಭೆಯಾಗಿರುವ ಒಂದು ಕೆಳಮನೆಯನ್ನು ಇದು ಒಳಗೊಂಡಿದೆ. ನವದೆಹಲಿಯಲ್ಲಿನ ಸಂಸದ್ ಭವನದಲ್ಲಿರುವ (ಇದನ್ನು ಸಾಮಾನ್ಯವಾಗಿ ಸಂಸದ್ ಮಾರ್ಗ ಎಂದು ಕರೆಯಲಾಗುತ್ತದೆ) ಪ್ರತ್ಯೇಕ ಶಾಸನಸಭೆಗಳಲ್ಲಿ ಎರಡೂ ಸದನಗಳು ಸಭೆ ಸೇರುತ್ತವೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕನಿಷ್ಕ : ಉತ್ತರ ಭಾರತದಲ್ಲಿ ರಾಜ್ಯವಾಳಿದ ಕುಶಾಣ ರಾಜವಂಶದ ಚಕ್ರವರ್ತಿಗಳಲ್ಲಿ ಅತ್ಯಂತ ಶ್ರೇಷ್ಠ, ಪ್ರಸಿದ್ಧ. ಪ್ರಾಚೀನ ಭಾರತದ ಪ್ರದೇಶಗಳಾದ ಮಧ್ಯ ದೇಶ, ಉತ್ತರಾಪಥ ಮತ್ತು ಅಪರಾಂತಗಳು ಇವನ ಆಳ್ವಿಕೆಗೆ ಒಳಪಟ್ಟಿದ್ದುವು. ಪುರ್ವ-ಪಶ್ಚಿಮವಾಗಿ ಬಿಹಾರದಿಂದ ಖೊರಾಸಾನದವರೆಗೂ ಉತ್ತರ-ದಕ್ಷಿಣವಾಗಿ ಖೊತಾನದಿಂದ ಕೊಂಕಣದವರೆಗೂ ಈತನ ಚಕ್ರಾಧಿಪತ್ಯ ಹಬ್ಬಿತ್ತೆಂದು ಹೇಳಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತೀಯ ಸಶಸ್ತ್ರ ದಳದ ಅತಿ ದೊಡ್ಡ ವಿಭಾಗವಾಗಿರುವ ಭಾರತೀಯ ಭೂಸೇನೆಯು ನೆಲದ ಮೇಲಿನ ಸೈನಿಕ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತದೆ. ರಾಷ್ಟ್ರೀಯ ಭದ್ರತೆ, ಬಾಹ್ಯ ಆಕ್ರಮಣ ಹಾಗೂ ಅಪಾಯಗಳಿಂದ ಭಾರತದ ರಕ್ಷಣೆ ಹಾಗೂ ತನ್ನ ಸರಹದ್ದಿನ ಒಳಗೆ ಶಾಂತಿ ಹಾಗೂ ಭದ್ರತೆಯನ್ನು ಕಾಪಾಡುವುದು ಇದರ ಪ್ರಾಥಮಿಕ ಗುರಿಯಾಗಿದೆ. ಇಬ್ಬರು ಅಧಿಕಾರಿಗಳಿಗೆ ಪಂಚತಾರಾ ದರ್ಜೆಯಾದ ಫೀಲ್ಡ್ ಮಾರ್ಷಲ್ ದರ್ಜೆಯನ್ನು ಪ್ರದಾನ ಮಾಡಲಾಗಿದೆ, ಇದೊಂದು ಶ್ರೇಷ್ಠ ಗೌರವದ ವಿಧ್ಯುಕ್ತ ಸ್ಥಾನವಾಗಿದೆ.
ಪೆಸಿಫಿಕ್ ಮಹಾಸಾಗರ ಭೂಮಿಯ ಅತ್ಯಂತ ದೊಡ್ಡ ಮಹಾಸಾಗರ. ಲ್ಯಾಟಿನ್ ಭಾಷೆಯಲ್ಲಿ "ಶಾಂತ ಸಾಗರ" ಎಂಬ ಅರ್ಥದ ಈ ಹೆಸರಿನ್ನಿಟ್ಟವನು ಪೋರ್ಚುಗೀಯ ನಾವಿಕ ಫರ್ಡಿನ್ಯಾಂಡ್ ಮೆಗೆಲನ್. ಅಮೆರಿಕಾ ಭೂಖಂಡಗಳ ಪಶ್ಚಿಮಕ್ಕೆ ಹಾಗೂ ಏಷ್ಯಾ ಮತ್ತು ಆಸ್ಟ್ರೇಲಿಯಾ ಭೂಖಂಡಗಳ ಪೂರ್ವದ ಪ್ರದೇಶವನ್ನು ವ್ಯಾಪಿಸಿಕೊಂಡಿರುವ ಈ ಅಗಾಧ ಜಲರಾಶಿಯು ಭೂಮಿಯ ಒಟ್ಟು ವಿಸ್ತೀರ್ಣದ ೩೫.೨೫% ಪ್ರದೇಶವನ್ನು ಆವರಿಸಿಕೊಂಡಿದೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಅಟ್ಲಾಂಟಿಕ್ ಮಹಾಸಾಗರ ಭೂಮಿಯ ಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ರಾಜ್ಯಸಭೆಯಲ್ಲಿನ ಸಂಸದರು ( ಸಂಕ್ಷಿಪ್ತ : ಎಂ.ಪಿ) ಇವರು ಭಾರತದ ಸಂಸತ್ತಿನ ಎರಡು ಸದನಗಳಲ್ಲಿ ಒಂದಾದ ಭಾರತದ ಸಂಸತ್ತಿನ ಮೇಲ್ಮನೆಗೆ ರಾಜ್ಯಸಭೆಗೆ ಭಾರತೀಯ ರಾಜ್ಯಗಳ ಪ್ರತಿನಿಧಿ. ರಾಜ್ಯ ಸಭೆಯ ಸಂಸದರನ್ನು ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರುಗಳು ವರ್ಗಾವಣೆ ಮಾಡಬಹುದಾದ ಮತದಿಂದ ಪ್ರಮಾಣಾನುಗುಣವಾದ ಪ್ರಾತಿನಿಧ್ಯದ ವ್ಯವಸ್ಥೆಯೊಂದಿಗೆ ಆಯ್ಕೆ ಮಾಡಲಾಗುತ್ತದೆ. ಚುನಾವಣೆಗಳು, ನಾಮನಿರ್ದೇಶನಗಳು ಅಥವಾ ಇತರ ಅಂಶಗಳಿಂದ ಸಂಯೋಜನೆ ಮತ್ತು ಸದಸ್ಯತ್ವವು ನಿಯಮಿತವಾಗಿ ಬದಲಾಗಬಹುದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು We want to kill the snake in a stick but the stick do not break ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ನವೀನಶಿಲಾಯುಗದಲ್ಲಿ ಮಾನವ ಪ್ರಾರಂಭಿಕ ಶಿಲಾ ಪರಿರಕರಗಳನ್ನು ಒಂದು ಕಲ್ಲಿನಿಂದ ಇನ್ನೊಂದು ಕಲ್ಲಿಗೆ ಹೊಡೆದು ತಯಾರಿಸುತ್ತಿದ್ದು, ಶಿಲಾಪರಿಕರಗಳು ಗಡುಸು, ನಯವಲ್ಲದ ಮೇಲ್ಮೈ ಪಡೆದಿರುತ್ತಿದ್ದವು. ನಂತರದ ಹಂತದಲ್ಲಿಯೇ,ಒಂದು ಕಲ್ಲನು ಇನ್ನೊಂದು ಕಲ್ಲಿಗೆ ಉಜ್ಜುವ ಅಧವಾ ಗಡುಸು ಕಲ್ಲಿನ ಮೇಲೆ ಮೆದು ಕಲ್ಲನ್ನು ತಿರುಗಿಸುವ ಮೂಲಕ ನಯವಾದ ಮೇಲ್ಮೈನ ಪರಿಕರಗಳನ್ನು ಅಥವಾ ಉಪಕರಣಗಳನ್ನು ಮಾನವ ತಯಾರಿಸ ತೊಡಗಿದ. ಪರಿಣಾಮವಾಗಿ ಈ ಪರಿಕರಗಳು ನಯವಾದ ಮೇಲ್ಮೈ ಪಡೆದವು.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಕುಮಾರರಾಮ: 13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ ಕುಮಾರರಾಮ ವಾಲ್ಮೀಕಿ/ಬೇಡ [೧] ಸಮುದಾಯಕ್ಕೆ ಸೇರಿದ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಲಿಷ್ಠ ಹಿಂದೂ ಸಾಮ್ರಾಜ್ಯದ ಕನಸುಕಂಡವನು ಈ ಕುಮಾರ ರಾಮ.13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು. ಅಭಿಮನ್ಯುವಿಗೆ ಸೌಭದ್ರ ಎಂಬ ಇನ್ನೊಂದು ಹೆಸರಿದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.