The most-visited ಕನ್ನಡ Wikipedia articles, updated daily. Learn more...
ಕರ್ಮಧಾರೆಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:- (i) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶ ಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ಅಥವಾ ಕೆ-ಸಿಇಟಿ ) ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದೆ. ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತದೆ, ಇದು ಕರ್ನಾಟಕದ ಉನ್ನತ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ಇದು ಕರ್ನಾಟಕ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣ ಸಮಯದ ಎಂಜಿನಿಯರಿಂಗ್, ತಂತ್ರಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ, ಕೃಷಿ ಶಿಕ್ಷಣ (ಕೃಷಿ ವಿಜ್ಞಾನ) ಮತ್ತು ಪಶುವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾದ ಆಫ್ಲೈನ್ ಪರೀಕ್ಷೆಯಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು. ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಜೀವಸತ್ವವೆಂದರೆ (ವಿಟಮಿನ್) ಯಾವುದೇ ಜೀವಿಗೆ ಕೂಡಾ ಪೋಷಕಾಂಶದ ರೂಪದಲ್ಲಿ ಅಲ್ಪ ಪ್ರಮಾಣದಲ್ಲಿ ಅಗತ್ಯವಾಗಿರುವ ಸಾವಯವ ಸಂಯೋಗ. ಆಂಗ್ಲ ಪದ 'ವಿಟಮಿನ್' (vitamin) ಎಂಬುದು ಮೊದಲಿಗೆ 1800ನೇ ಶತಮಾನದ ಮೊದಲ ಭಾಗದಲ್ಲಿ 'vital' ಹಾಗೂ 'mineral' ಎಂಬೆರಡು ಪದಗಳ ಮಿಶ್ರಪದವಾಗಿ ಜನಪ್ರಿಯವಾಗಿತ್ತಾದರೂ, ಪದದ ನಿಜವಾದ ಅರ್ಥವು ಆ ಸಮಯದಿಂದೀಚೆಗೆ ಸಾಕಷ್ಟು ಬದಲಾಗಿದೆ. ಯಾವುದೇ ಜೀವಿಯು ಸಂಯೋಗವೊಂದನ್ನು ಸಾಕಷ್ಟು ಪ್ರಮಾಣದಲ್ಲಿ ಸಂಯೋಜಿಸಲು ಸಾಧ್ಯವಾಗದೇ ಆಹಾರದ ಮೂಲಕವೇ ಪಡೆದುಕೊಳ್ಳಬೇಕಾಗಿದ್ದರೆ ಅದನ್ನು ಜೀವಸತ್ವ ಎಂದು ಕರೆಯಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಉಚ್ಚಾಟನೆ: ಸ್ವಾಮ್ಯದ ಹಕ್ಕು ಚಲಾಯಿಸಿ ಒಂದು ಸ್ವತ್ತನ್ನು ಸ್ವಾಧೀನಪಡಿಸಿಕೊಳ್ಳುವ ನ್ಯಾಯಬದ್ಧ ಕ್ರಮ (ಇಜೆಕ್ಟ್ಮೆಂಟ್). ಗೇಣಿದಾರನನ್ನು (ಲೆಸೀ) ಗೇಣಿದಾತನೋ (ಲೆಸರ್) ಆತನಿಂದ ಸ್ವತ್ತಿನ ಹಕ್ಕಿನ ವರ್ಗಾವಣೆ ಪಡೆದವನೋ ಗೇಣಿದಾರಿಯಿಂದ (ಲೀಸ್) ಬಿಡುಗಡೆ ಮಾಡಿ ಸ್ವತ್ತು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಉಚ್ಚಾಟನೆಯೆಂಬ ಶಬ್ದ ಬಳಸಲಾಗಿದೆ. ಭಾರತದಲ್ಲಿ ಸ್ವತ್ತು ವರ್ಗಾವಣೆ ಕಾಯಿದೆಯಲ್ಲೂ ಮನೆ ಬಾಡಿಗೆ ನಿಯಂತ್ರಣ ಕಾಯಿದೆಗಳಲ್ಲೂ ಭೂ ಹಿಡುವಳಿಯ ಕಾಯಿದೆಗಳಲ್ಲೂ ವಿವಿಧ ಉಚ್ಚನ್ಯಾಯಾಲ ಯಗಳ ನಾನಾ ತೀರ್ಪುಗಳಲ್ಲೂ ಉಚ್ಚಾಟನೆಗೆ ಸಂಬಂಧಿಸಿದ ನ್ಯಾಯ ಅಂತರ್ಗತವಾಗಿದೆ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ದೆಹಲಿಯ ಅಥವಾ ದಿಲ್ಲಿ ಸುಲ್ತಾನತೆ ದೆಹಲಿಯಲ್ಲಿದ್ದ ಸುಲ್ತಾನತೆ (ಮುಸಲ್ಮಾನ ಸಾಮ್ರಾಜ್ಯ) ಆಗಿತ್ತು, ಇದು ಭಾರತ ಉಪಖಂಡದ ದೊಡ್ಡ ಭಾಗಗಳನ್ನು ೩೨೦ ವರ್ಷಗಳವರೆಗೆ (೧೨೦೬-೧೫೨೬) ವಿಸ್ತರಿಸಿತು. ಐದು ರಾಜವಂಶಗಳಾದ ದಿಲ್ಲಿ ಸುಲ್ತಾನತೆಯ ಅನುಕ್ರಮವಾಗಿ: ಗುಲಾಮ (ಮಾಮ್ಲುಕ್) ರಾಜವಂಶ (೧೨೦೬-೯೦), ಖಲಜಿ ರಾಜವಂಶ (೧೨೯೦-೧೩೨೦), ತುಘಲಕ್ ರಾಜವಂಶ (೧೩೨೦-೧೪೧೪), ಸಯ್ಯಿದ್ ರಾಜವಂಶ (೧೪೧೪- ೫೧), ಮತ್ತು ಲೋದಿ ರಾಜವಂಶ (೧೪೫೧-೧೫೨೬). ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು ೧೨೩೬ ರಿಂದ ೧೨೪೦ ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಪಾಂಡವರು ಮಹಾಭಾರತದ ಮಹಾಕಾವ್ಯದ ಪ್ರಮುಖ ಪಾತ್ರಗಳಾದ ಯುಧಿಷ್ಠಿರ, ಭೀಮ, ಅರ್ಜುನ, ನಕುಲ ಮತ್ತು ಸಹದೇವ ಎಂಬ ಐದು ಸಹೋದರರನ್ನು ಉಲ್ಲೇಖಿಸಲಾಗಿದೆ. ಅವರನ್ನು ಕುರು ರಾಜ ಪಾಂಡುವಿನ ಪುತ್ರರೆಂದು ಪರಿಗಣಿಸಲಾಗುತ್ತಿತ್ತು, ಆದರೆ ಪಾಂಡುವಿನ ಮಕ್ಕಳನ್ನು ಹೊಂದಲು ಅಸಮರ್ಥತೆಯಿಂದಾಗಿ ಕುಂತಿ-ಮಾದ್ರಿಯರು ಬೇರೆ ಬೇರೆ ದೇವರುಗಳಿಂದ ಪಾಂಡವರನ್ನು ಪಡೆದರು. ಪಾಂಡವರು ದ್ರೌಪದಿ ಎಂಬ ಹೆಂಡತಿಯನ್ನು ಹಂಚಿಕೊಂಡರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಉಷ್ಣವಲಯದ ನಿತ್ಯಹರಿದ್ವರ್ಣದ ಕಾಡುಗಳು
ಭೂಮಧ್ಯರೇಖೆಯಿಂದ ಸುಮಾರು 28 ಡಿಗ್ರಿಗಳ ಅಂತರದಲ್ಲಿ ಉತ್ತರಕ್ಕೆ ಇಲ್ಲವೇ ದಕ್ಷಿಣಕ್ಕೆ ಇರುವ ಸ್ಥಳವೇ ಉಷ್ಣವಲಯದ ನಿತ್ಯಹರಿದ್ವರ್ಣದ ಕಾಡುಗಳು. ಇವುಗಳು ಕಂಡುಬರುವುದು ಏಷಿಯಾ, ಆಸ್ಟ್ರೇಲಿಯಾ, ಆಫ್ರಿಕಾ, ದಕ್ಷಿಣ ಅಮೇರಿಕಾ, ಮಧ್ಯ ಅಮೇರಿಕಾ, ಮೆಕ್ಸಿಕೊ ಹಾಗೂ ಪೆಸಿಫಿಕ್ ದ್ವೀಪಗಳ ಹಲವು ದ್ವೀಪಗಳು. ವಿಶ್ವ ವನ್ಯಜೀವಿ ನಿಧಿಯ ಪ್ರಕಾರ (ಜೀವರಾಶಿ)ಜೀವ ಮಂಡಲ, ಉಷ್ಣವಲಯದ ಆರ್ದ್ರ ಕಾಡುಗಳ ಜಾತಿಯ ಕಾಡುಗಳನ್ನು ಉಷ್ಣವಲಯದ ನಿತ್ಯಹರಿದ್ವರ್ಣದ ಕಾಡುಗಳು ಉಷ್ಣವಲಯದ ಆರ್ದ್ರ ಕಾಡುಗಳು ಅಥವಾ ವಿಸ್ತಾರ ಕಾಡುಗಳು ) ಮತ್ತು ಕೆಲವೊಮ್ಮೆ ಅವುಗಳನ್ನು ತಗ್ಗುಪ್ರದೇಶದ ಉಷ್ಣವಲಯದ ನಿತ್ಯಹಸಿರಿನ ಕಾಡುಗಳು .
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.