The most-visited ಕನ್ನಡ Wikipedia articles, updated daily. Learn more...
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಕಿತ್ತಳೆಯು ಸಿಟ್ರಸ್ ಪಂಗಡದ ಸಿಟ್ರಸ್ ×ಸಿನೇನ್ಸಿಸ್ (ಪರ್ಯಾಯ ಪದ ಸಿಟ್ರಸ್ ಆರೇಂಟಿಯಂ) ಸಸ್ಯ ಮತ್ತು ಅದರ ಹಣ್ಣು. ಕಿತ್ತಳೆಯು ಪ್ರಾಚೀನವಾಗಿ ಬೇಸಾಯ ಮಾಡಲಾದ ಮೂಲದ ಒಂದು ಮಿಶ್ರತಳಿ, ಸಂಭಾವ್ಯವಾಗಿ ಪಾಮಲೋ (ಸಿಟ್ರಸ್ ಮ್ಯಾಕ್ಸಿಮಾ) ಮತ್ತು ಟ್ಯಾಂಜರೀನ್ (ಸಿಟ್ರಸ್ ರೆಟಿಕ್ಯೂಲೇಟಾ) ನಡುವಿನ ಮಿಶ್ರತಳಿ. ಅದು ಸುಮಾರು ೧೦ ಮಿ ಎತ್ತರಕ್ಕೆ ಬೆಳೆಯುವ, ಪ್ರತಿಯಾಗಿ ಜೋಡಣೆಗೊಂಡ ಅಂಡಾಕಾರದ ಕಚ್ಚುಳ್ಳ ಅಂಚುಗಳಿರುವ ೪-೧೦ ಸೆ.ಮಿ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೈಲಾರ ಲಿಂಗೇಶ್ವರ ದೇವಸ್ಥಾನ, ಮೈಲಾರ
ಕರ್ನಾಟಕದ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಅಲ್ಲಿರುವ ಒಂದು ಪ್ರಸಿದ್ದ ಸ್ತಳ. ತುಂಗಭದ್ರ ನದಿಯಿಂದ ೨ಕಿಮಿ, ಹೂವಿನ ಹಡಗಲಿ ಇಂದ ೪೦ಕಿಮಿ , ರಾಣೆಬೆನ್ನುರಿನಿಂದ ೩೪ಕಿಮಿ ದೂರದಲ್ಲಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ರೀತಿಯ ಹೇಳಿಕೆ ಇಲ್ಲಿಯ ಕಾರಣಿಕೋತ್ಸವದಲ್ಲಿ ಕೇಳಿಬಂದಿತ್ತು.
ರೂಢಿ ನಿಯಮಿತವಾಗಿ ಪುನರಾವರ್ತಿಸಲಾದ ವರ್ತನೆಯ ಒಂದು ವಾಡಿಕೆ ಮತ್ತು ಒಳಪ್ರಜ್ಞೆಯಿಂದ ಸಂಭವಿಸುತ್ತದೆ. ಅಮೇರಿಕನ್ ಜರ್ನಲ್ ಆಫ಼್ ಸೈಕಾಲಜಿ ರೂಢಿಯನ್ನು "ಮನೋವಿಜ್ಞಾನದ ದೃಷ್ಟಿಕೋನದಿಂದ, ಒಂದು ಮಾನಸಿಕ ಅನುಭವದ ಹಿಂದಿನ ಪುನರಾವರ್ತನೆಯ ಮೂಲಕ ಪಡೆಯಲಾದ ಹೆಚ್ಚುಕಡಿಮೆ ಸ್ಥಿರ ರೀತಿಯ ಯೋಚನೆ, ಸಮ್ಮತಿ, ಅಥವಾ ಅನಿಸಿಕೆ" ಎಂದು ವ್ಯಾಖ್ಯಾನಿಸುತ್ತದೆ." ರೂಢಿಯ ವರ್ತನೆ ಅದನ್ನು ಪ್ರದರ್ಶಿಸುವ ವ್ಯಕ್ತಿಗಳಲ್ಲಿ ಹಲವುವೇಳೆ ಗಮನಿಸಲ್ಪಡುವುದಿಲ್ಲ, ಏಕೆಂದರೆ ವಾಡಿಕೆಯ ಕಾರ್ಯಗಳನ್ನು ಕೈಗೊಂಡಾಗ ಒಬ್ಬ ವ್ಯಕ್ತಿಯು ಆತ್ಮ ವಿಶ್ಲೇಷಣೆಯಲ್ಲಿ ತೊಡಗಿಕೊಳ್ಳುವ ಅಗತ್ಯವಿಲ್ಲ. ರೂಢಿಗಳು ಕೆಲವೊಮ್ಮೆ ಕಡ್ಡಾಯವಾಗಿರುತ್ತವೆ.
ಎಚ್-೨ ಪ್ರದೇಶ ಅ೦ತರಿಕ್ಷದಲ್ಲಿ ಹೊಳೆಯುತ್ತಿರುವ ನೂರಾರು ಜ್ಯೋತಿರ್ವರ್ಷಗಳಷ್ಟುಗಳಷ್ಟು ಅಗಲವಾದ ಅನಿಲ ಮೋಡ; ಹೊಸ ನಕ್ಷತ್ರಗಳು ರೂಪುಗೊಳ್ಳುತ್ತಿರುವ ಪ್ರದೇಶ. ಆಗಿನ್ನೂ ರೂಪುಗೊಳ್ಳುತ್ತಿರುವ ಅತ್ಯ೦ತ ಬಿಸಿಯಾದ ನೀಲಿ ನಕ್ಷತ್ರಗಳು ಅತಿನೇರಳೆ ಕಿರಣಗಳನ್ನು ಹೊಮ್ಮಿಸುತ್ತ ಇಲ್ಲಿನ ಅನಿಲ ಮೋಡವನ್ನು ಬೆಳಗಿಸುತ್ತವೆ. ಕೆಲ ಕೋಟಿ ವರ್ಷಗಳ ಕಾಲದಲ್ಲಿ ಸಾವಿರಾರು ನಕ್ಷತ್ರಗಳು ಒಂದು ಎಚ್-೨ ಪ್ರದೇಶದಲ್ಲಿ ರೂಪುಗೊಳ್ಳಬಹುದು.
ಐ.ಎನ್.ಎಸ್. ಅರಿಹಂತ್ (ಐ.ಎನ್.ಎಸ್.- ಇಂಡಿಯನ್ ನೇವಲ್ ಶಿಪ್/ಇಂಡಿಯನ್ ನೇವಲ್ ಸಬ್-ಮೆರೈನ್ - ಭಾರತೀಯ ನೌಕಾ ಹಡಗು/ಭಾರತೀಯ ನೌಕಾ ಜಲಾಂತರ್ಗಾಮಿ ಹಡಗು) ಭಾರತದ ಅಣು ಶಕ್ತಿ ಚಾಲಿತ ಜಲಾಂತರ್ಗಾಮಿ ನೌಕೆಗಳ ಅರಿಹಂತ್ ವರ್ಗದ ಪ್ರಮುಖ ನೌಕೆಯಾಗಿದೆ. ೬,೦೦೦ ಟನ್ನುಗಳಷ್ಟು ತೂಗುವ ಈ ನೌಕೆಯನ್ನು ಅಡ್ವಾನ್ಸ್ಡ್ ಟೆಕ್ನಾಲಜಿ ವೆಸಲ್ (ಸುಧಾರಿತ ತಂತ್ರಜ್ಞಾನ ನೌಕೆ) ಎಂಬ ಯೋಜನೆಯ ಸಮನ್ವಯ ಸುಮಾರು ೨.೯ ಬಿಲಿಯನ್ ಯು.ಎಸ್.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಈ ಲೇಖನದಲ್ಲಿ ನರ್ಮದಾ ನದಿಯ ದಕ್ಷಿಣ ಭಾಗದ ಭಾರತೀಯ ಪರ್ಯಾಯದ್ವೀಪದಲ್ಲಿರುವ ದಕ್ಷಿಣ ಭಾರತದಲ್ಲಿ ಕಂಡು ಬರುವ ಪಕ್ಷಿಗಳ ಹೆಸರನ್ನು ಪಟ್ಟಿ ಮಾಡಲಾಗಿದೆ. ಆಂಧ್ರಪ್ರದೇಶದ ರೋಲ್ಲಪಾಡು, ಕರ್ನಾಟಕದ ನಾಗರಹೊಳೆ (ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ) ಮತ್ತು ಬಂಡೀಪುರ, ಕೇರಳದ ರಾಜಾಮಲೈ (ಎರವೀಕುಲಮ್ ರಾಷ್ಟ್ರೀಯ ಉದ್ಯಾನವನ) ಮತ್ತು ಪೆರಿಯಾರ್ ರಾಷ್ಟ್ರೀಯ ಉದ್ಯಾನವನ, ಮಧುಮಲೈ ರಾಷ್ಟ್ರೀಯ ಉದ್ಯಾನವನ, ಉದಕಮಂಡಲಮ್, ಅಣ್ಣಾಮಲೈನ ಇಂದಿರಾಗಾಂಧಿ ವನ್ಯಮೃಗ ಸಂರಕ್ಷಣಾ ವನ, ತಮಿಳುನಾಡಿನ ವೇದಾಂತಂಗಳ್ ಮತ್ತು ಕೋಡಿಕ್ಕರೈ ಗಳು ದಕ್ಷಿಣ ಭಾರತದ ಪಕ್ಷಿವೀಕ್ಷಣಾ ಸ್ಥಳಗಳೆಂದು ಹೆಸರುವಾಸಿಯಾಗಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕುದುರೆಯು (ಎಕೂಸ್ ಫ಼ೆರೂಸ್ ಕಬಾಲೂಸ್) ಎಕೂಸ್ ಫ಼ೆರೂಸ್ ಅಥವಾ ಕಾಡು ಕುದುರೆಯ ಎರಡು ಅಸ್ತಿತ್ವದಲ್ಲಿರುವ ಉಪಪ್ರಜಾತಿಗಳ ಪೈಕಿ ಒಂದು. ಅದು ಜೀವಿವರ್ಗೀಕರಣ ಕುಟುಂಬ ಎಕ್ವಿಡೈಗೆ ಸೇರಿದ ಒಂದು ಬೆಸ ಕಾಲ್ಬೆರಳುಗಳಿರುವ ಗೊರಸುಳ್ಳ ಸಸ್ತನಿ. ಕುದುರೆಯು ಕಳೆದ ೪೫ ರಿಂದ ೫೫ ಮಿಲಿಯ ವರ್ಷಗಳಲ್ಲಿ ಚಿಕ್ಕ ಬಹು ಕಾಲ್ಬರೆಳುಗಳುಳ್ಳ ಪ್ರಾಣಿಯಿಂದ ಇಂದಿನ ದೊಡ್ಡ, ಒಂಟಿ ಕಾಲ್ಬೆರಳಿನ ಪ್ರಾಣಿಯಾಗಿ ವಿಕಾಸಗೊಂಡಿದೆ.
ಭೂಗೋಳ ಶಾಸ್ತ್ರದಲ್ಲಿ, ಸಾಮಾನ್ಯವಾಗಿ ದಡ ಶಬ್ದವು ಒಂದು ಜಲಸಮೂಹದ ಪಕ್ಕದಲ್ಲಿರುವ ನೆಲವನ್ನು ಸೂಚಿಸುತ್ತದೆ. ಕೆಳಗೆ ಹೇಳಿದಂತೆ, ಭೂಗೋಳ ಶಾಸ್ತ್ರದ ಭಿನ್ನ ಕ್ಷೇತ್ರಗಳಲ್ಲಿ ಭಿನ್ನ ರಚನೆಗಳನ್ನು ದಡಗಳೆಂದು ಸೂಚಿಸಲಾಗುತ್ತದೆ. ಸರೋವರ ವಿಜ್ಞಾನದಲ್ಲಿ (ಒಳನಾಡಿನ ನೀರಿನ ಅಧ್ಯಯನ), ಹೊಳೆಯ ದಡ ಅಥವಾ ನದಿಯ ದಡ ಎಂದರೆ ಒಂದು ನದಿ, ಹಳ್ಳ, ಅಥವಾ ಹೊಳೆಯ ಪಕ್ಕದಲ್ಲಿರುವ ಭೂಭಾಗ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಪಾಂಡವರು ಮಹಾಭಾರತದ ಮಹಾಕಾವ್ಯದ ಪ್ರಮುಖ ಪಾತ್ರಗಳಾದ ಯುಧಿಷ್ಠಿರ, ಭೀಮ, ಅರ್ಜುನ, ನಕುಲ ಮತ್ತು ಸಹದೇವ ಎಂಬ ಐದು ಸಹೋದರರನ್ನು ಉಲ್ಲೇಖಿಸಲಾಗಿದೆ. ಅವರನ್ನು ಕುರು ರಾಜ ಪಾಂಡುವಿನ ಪುತ್ರರೆಂದು ಪರಿಗಣಿಸಲಾಗುತ್ತಿತ್ತು, ಆದರೆ ಪಾಂಡುವಿನ ಮಕ್ಕಳನ್ನು ಹೊಂದಲು ಅಸಮರ್ಥತೆಯಿಂದಾಗಿ ಕುಂತಿ-ಮಾದ್ರಿಯರು ಬೇರೆ ಬೇರೆ ದೇವರುಗಳಿಂದ ಪಾಂಡವರನ್ನು ಪಡೆದರು. ಪಾಂಡವರು ದ್ರೌಪದಿ ಎಂಬ ಹೆಂಡತಿಯನ್ನು ಹಂಚಿಕೊಂಡರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಣಯ ಅಥವಾ ದಾಂಪತ್ಯ ಎಂದೂ ಕರೆಯಲ್ಪಡುವ ಮದುವೆಯು ಸಾಮಾಜಿಕವಾಗಿ ಅಥವಾ ಶಾಸ್ತ್ರೋಕ್ತವಾಗಿ ಗುರುತಿಸಲ್ಪಟ್ಟ ಸಂಗಾತಿಗಳ ನಡುವಿನ ಒಕ್ಕೂಟ ಅಥವಾ ಕಾನೂನಾತ್ಮಕ ಒಪ್ಪಂದ. ಇದು ಅವರಿಬ್ಬರ ನಡುವಿನ, ಅವರ ಹಾಗೂ ಅವರ ಮಕ್ಕಳಿನ ನಡುವಿನ, ಮತ್ತು ಅವರ ಹಾಗೂ ಅವರ ಸಂಬಂಧಿಕರ ನಡುವಿನ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಸ್ಥಾಪಿಸುತ್ತದೆ. ಭಿನ್ನ ಸಂಸ್ಕೃತಿಗಳ ಪ್ರಕಾರ ಮದುವೆಯ ವ್ಯಾಖ್ಯಾನವು ಬದಲಾಗುತ್ತದೆ, ಆದರೆ ಪ್ರಧಾನವಾಗಿ ಅದು ಅಂತರವ್ಯಕ್ತೀಯ ಸಂಬಂಧಗಳು, ಸಾಮಾನ್ಯವಾಗಿ ಲೈಂಗಿಕ ಸಂಬಂಧಗಳನ್ನು ಅಂಗೀಕರಿಸುವ ಸಂಪ್ರದಾಯವಾಗಿದೆ.
ಸಂಜಯ ಮೆಮೋರಿಯಲ್ ಪಾಲಿಟೆಕ್ನಿಕ್(ಸಂಮೇಪಾ), 'ಎಸ್ಸೆಂಪಿ' ಎಂದು ಚಿಕ್ಕದಾಗಿ ಇಂಗ್ಲೀಷ್ ಬಾಷೆಯಲ್ಲಿ ಕರೆಯಲ್ಪಡುವ, ತಾಂತ್ರಿಕ ಶಿಕ್ಷಣದಲ್ಲಿ ಮೂರು ವರ್ಷದ ಡಿಪ್ಲಮೋವನ್ನು ನೀಡುವ ಮತ್ತು ಸಹವಿದ್ಯಾಬ್ಯಾಸದ ಒಂದು ಖಾಸಗಿ ವಿದ್ಯಾಲಯವಾಗಿದೆ. ಸಂಮೇಪಾ ನವದೆಹಲಿಯ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಜೊತೆಗೆ ಸಂಯೋಜನೆ ಆಗಿರುವುದಲ್ಲದೆ, ಕರ್ನಾಟಕ ರಾಜ್ಯ ಸರ್ಕಾರದಿಂದ ಐದರಲ್ಲಿ ನಾಲ್ಕು ವಿಭಾಗಗಳು ವೇತಾನುದಾನವನ್ನು ಕೂಡ ಪಡೆಯುತ್ತಲಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ರೂಢಿ ಲೇಖನಕ್ಕಾಗಿ ಇಲ್ಲಿ ನೋಡಿ. ಅಭ್ಯಾಸವು ಒಂದು ವರ್ತನೆಯನ್ನು ಮತ್ತೆ ಮತ್ತೆ ಪೂರ್ವತಯಾರಿ ಮಾಡುವ ಕ್ರಿಯೆ, ಅಥವಾ ಸುಧಾರಿಸಲು ಅಥವಾ ಪಾರಂಗತನಾಗುವ ಉದ್ದೇಶಕ್ಕಾಗಿ ಒಂದು ಚಟುವಟಿಕೆಯಲ್ಲಿ ಮತ್ತೆ ಮತ್ತೆ ತೊಡಗಿಸಿಕೊಳ್ಳುವುದು, "ಅಭ್ಯಾಸದಿಂದ ಪರಿಪೂರ್ಣತೆ ಸಿದ್ಧಿಸುತ್ತದೆ" ಈ ನುಡಿಗಟ್ಟಿನಲ್ಲಿರುವಂತೆ. ಕ್ರೀಡಾ ತಂಡಗಳು ನಿಜವಾದ ಪಂದ್ಯಗಳಿಗೆ ಸಿದ್ಧವಾಗಲು ಅಭ್ಯಾಸ ಮಾಡುತ್ತವೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಫೆವಾ ಸರೋವರವು Phewa Lake ನೇಪಾಳದ ಸಿಹಿನೀರಿನ ಸರೋವರವಾಗಿದೆ, ಇದು ಪೊಖಾರಾ ಕಣಿವೆಯ ದಕ್ಷಿಣದಲ್ಲಿ ನೆಲೆಗೊಂಡಿದೆ.ಇದು ಹರಿಯುವ ನಿರಾಗಿದ್ದರೂ ಸಹ ಇದರ ನೀರಿನ ಮೀಸಲನ್ನು ಅಣೆಕಟ್ಟು ನಿಯಂತ್ರಿಸುವುದರಿಂದ ಇದನ್ನು ಅರೆ ನೈಸರ್ಗಿಕ ಸಿಹಿ ನೀರಿನ ಸರೋವರವನ್ನಾಗಿ ವಿಂಗಡಿಸಲಾಗಿದೆ. ಗಂಡಕಿ ವಲಯದಲ್ಲಿನ ಬೆಗ್ನಾಸ್ ಸರೋವರದ ನಂತರ ಇದು ನೇಪಾಳದ ಎರಡನೇ ಅತಿ ದೊಡ್ಡ ಸರೋವರವಾಗಿದೆ.ಫೆವಾ ಸರೋವರವು ೭೪೨ಮೀ(೨೪೩೪ ಅಡಿ) ಎತ್ತರದಲ್ಲಿದೆ ಮತ್ತು ಪೂರ್ವದಿಂದ ಪಶ್ಚಿಮಕ್ಕೆ ೫.೨೩ ಕಿಮಿ (೨.೦ ಚದರ ಮೈಲಿ) ನಷ್ಟು ಪ್ರದೇಶವನ್ನು ಒಳಗೊಂಡಿದೆ. ಇದು ೮.೬ ಮೀ (೨೮ ಅಡಿ) ಸರಾಸರಿ ಆಳ ಮತ್ತು ೨೪ ಮೀ (೭೯ ಅಡಿ) ಗರಿಷ್ಠ ಆಳವನ್ನು ಹೊಂದಿದೆ.ಸರೋವರದ ಗರಿಷ್ಠ ನೀರಿನ ಸಾಮರ್ಥ್ಯವು ಸರಿಸುಮಾರು ೪೩.000.000 ಘನ ಮೀಟರ್ ಆಗಿದೆ.
ಮಂಗಳಮುಖಿ ಎಂದರೆ ಹೆಣ್ಣು ಅಲ್ಲದ ಗಂಡು ಅಲ್ಲದ ಒಂದು ವ್ಯಕ್ತಿಯ ಮನಃಸ್ಥಿತಿ. 'ತೃತೀಯ ಲಿಂಗ' ಅಥವಾ 'ಮಂಗಳಮುಖಿ' ಎನ್ನುವ ಪರಿಭಾಷೆಗಳು ಇತ್ತೀಚೆಗೆ ಅಧಿಕೃತವಾಗಿ ಮತ್ತು ಹೆಚ್ಚಾಗಿ ಬಳಕೆಯಾಗುತ್ತಿವೆ. ಈ ಪದಗಳ ಬಳಕೆಗಿಂತ ಮುಂಚೆ ಇಂತಹ ವರನ್ನು ನಪುಂಸಕ, ಚಕ್ಕ, ಕೋಜಾ, ಹಿಜ್ರಾ, ಚನ್ನಪಟ್ಟಣ, ದ್ವಿಲಿಂಗಿ, ಶಿಖಂಡಿ ಮುಂತಾದ ಪದಗಳು ಬಳಕೆಯಾಗುತ್ತಿದ್ದವು.ಇದು ಇಂದಿನ ದಿನಗಳಲ್ಲಿ ಆಕ್ಷೇಪಾರ್ಹ ಪದಗಳು.
ದಿ ಪ್ರಿನ್ಸಿಪಲ್ಸ್ ಆಫ್ ಬ್ಯಾಂಕಿಂಗ್
ದಿ ಪ್ರಿನ್ಸಿಪಲ್ಸ್ ಆಫ್ ಬ್ಯಾಂಕಿಂಗ್ ಎಂಬುದು ಬಾಂಗ್ಲಾದೇಶ ಮೂಲದ ಆಂಗ್ಲ ಬ್ಯಾಂಕಿಂಗ್ ವೃತ್ತಿಗಾರ ಮತ್ತು ಶಿಕ್ಷಣತಜ್ಞ ಮೂರದ್ ಚೌಧರಿ ಬರೆದ ೨೦೧೨ ರ ಕಾಲ್ಪನಿಕವಲ್ಲದ ಪುಸ್ತಕವಾಗಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸುನೀತಾ ವಿಲಿಯಮ್ಸ್ (ಜನನ ಸೆಪ್ಟೆಂಬರ್ 19, 1965) ಅವರು ಅಮೇರಿಕದಲ್ಲಿ ನೌಕಾದಳದಲ್ಲಿ ಅಧಿಕಾರಿ ಹಾಗೂ ನಾಸಾದಲ್ಲಿ ಗಗನಯಾತ್ರಿಯಾಗಿದ್ದಾರೆ. ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಏರ್ಪಡಿಸಿದ್ದ ಎಕ್ಸ್ಪೆಡಿಷನ್ 14ರ ಯಾನದಲ್ಲಿಯ ಗಗನ ಯಾತ್ರಿಗಳಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಲಾಗಿತ್ತು. ನಂತರ ಎಕ್ಪ್ಪೆಡಿಷನ್ 15ರಲ್ಲೂ ಕೂಡ ಅವರನ್ನು ಬಳಸಿಕೊಳ್ಳಲಾಯ್ತು.
ಧಫಧದಫಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.