The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಫ್ಲಾರೆನ್ಸ್ ನೈಟಿಂಗೇಲ್ - "ಲೇಡಿ ವಿತ್ ದಿ ಲ್ಯಾಂಪ್" ಎಂದೇ ಪ್ರಖ್ಯಾತರಾಗಿದ್ದ ಮಹಿಳೆ.ಜನನ ಇಟಲಿಯಲ್ಲಿ ೧೮೨೦ರ ಮೇ ೧೨ ರಂದು.ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ,ತಮ್ಮ ೧೭ನೇ ವಯಸ್ಸಿನಲ್ಲೇ ನರ್ಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು.ಸಮಾಜದಲ್ಲಿ ಹಿಂದುಳಿದ ಹಾಗೂ ಬಡಜನರಿಗೆ ವೈದ್ಯಕೀಯ ನೆರವು ದೊರೆಯಬೇಕೆಂಬುದೇ ಇವರ ಧ್ಯೇಯವಾಗಿತ್ತು.೧೮೫೪ರ ಅಕ್ಟೋಬರ್ ೨೧ರಂದು ತಮ್ಮ ೩೮ ನರ್ಸ್ ತಂಡದೊಂದಿಗೆ ಕ್ರಿಮಿಯನ್ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಶುಶ್ರೂಷೆ ಮಾಡಿದರು.ಮಿಲಿಟರಿ ಆಸ್ಪತ್ರೆಗಳ ಹಾಗೂ ಇತರ ಆಸ್ಪತ್ರೆಗಳ ಸುಧಾರಣೆಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿದಳು. ಇದಕ್ಕಾಗಿ ತನ್ನ ಜೀವಮಾನವನ್ನೇ ಮುಡಿಪಾಗಿಟ್ಟಳು. ಇಂದಿಗೂ ಈಕೆ ರೂಪಿಸಿದ ಸುಧಾರಣಾ ಕ್ರಮಗಳನ್ನು ಜಗತ್ತಿನ ಎಲ್ಲ ಆಸ್ಪತ್ರೆಗಳೂ ಒಂದಲ್ಲ ಒಂದು ರೀತಿಯಲ್ಲಿ ಅನುಸರಿಸುತ್ತಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಕನ್ನಡದಲ್ಲಿ ಸಂಯುಕ್ತ ಅರಬ್ ಅಮೀರತ್ ಸಂಸ್ಥಾನವು ಅಥವಾ ಸಂಯುಕ್ತ ಅರಬ್ ಅಮೀರತ್ತುಗಳು (ಆಂಗ್ಲದಲ್ಲಿ United Arab Emirates (UAE); ಯುನೈಟೆಡ್ ಆ್ಯರಬ್ ಎಮಿರೇಟ್ಸ್) ವಾಯವ್ಯ ಏಷ್ಯೆಯ ಮಧ್ಯಪ್ರಾಚ್ಯದಲ್ಲಿ ಏಳು ಸ್ವಯಾಡಳಿತ ಎಮಿರ್ ಪ್ರಭುತ್ವ ಸಂಸ್ಥಾನಗಳ ಒಕ್ಕೂಟವಾಗಿರುವ ರಾಷ್ಟ್ರ. ಅರಬ್ಬಿಯಲ್ಲಿ ಈ ದೇಶವನ್ನು ಅಲಿಮಾರಾತ್ ಅಲರಬೀಯ ಅಲ್ಮುತ್ತಹಿದ; الإمارات العربية المتحدة ಎಂದು ಕರೆಯಲಾಗುತ್ತದೆ. ಯು.ಎ.ಇ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಐತಿಹಾಸಿಕವಾಗಿ ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜಪ್ರಭುತ್ವಕ್ಕೆ ಸೇರಿದೆ. ೧೯೪೭ರಲ್ಲಿ ಭಾರತ ವಿಭಜನೆಯಾದ ಕೂಡಲೇ, ಜಮ್ಮು ಮತ್ತು ಕಾಶ್ಮೀರದ ಅಂದಿನ ಮಹಾರಾಜರಾದ ಹರಿ ಸಿಂಗ್ ಅವರು ಭಾರತದ ಪ್ರವೇಶ ಸಾಧನಕ್ಕೆ ಸಹಿ ಹಾಕಿದರು; ಆ ಮೂಲಕ ಭಾರತೀಯ ಒಕ್ಕೂಟಕ್ಕೆ ಸೇರಲು ಒಪ್ಪಿಕೊಂಡರು. ಆದ್ದರಿಂದ, ಪಿಒಕೆ ಕಾನೂನುಬದ್ಧವಾಗಿ ಭಾರತದ ಅಂತರ್ಗತ ಭಾಗವಾಗಿದೆ.
ಸುದೀಪ ಅಥವಾ ಕಿಚ್ಚ ಸುದೀಪ (ಜನನ ೨ ಸೆಪ್ಟೆಂಬರ್ ೧೯೭೩) ಒಬ್ಬ ಭಾರತೀಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಕಥೆ,ಚಿತ್ರಕಥೆಗಾರ,ವಿತರಕ,ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ, ಇವರು ಮುಖ್ಯವಾಗಿ ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ, ಜೊತೆಗೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಯ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತ್ರಗಳಾದ ಸ್ಪರ್ಶ (2000), ಹುಚ್ಚ (2001), ನಂದಿ (2002), ಕಿಚ್ಚ (2003), ಸ್ವಾತಿ ಮುತ್ತು (2003), ಮೈ ಆಟೋಗ್ರಾಫ್ (2006), ನಂ 73 ಶಾಂತಿ ನಿವಾಸ (2007), ಮುಸ್ಸಂಜೆ ಮಾತು (2008), ವೀರ ಮದಕರಿ (2009), ಜಸ್ಟ್ ಮಾತ್ ಮಾತಲ್ಲಿ (2010), ಕೆಂಪೇಗೌಡ (2011), ತೆಲುಗು-ತಮಿಳು ದ್ವಿಭಾಷಾ ಚಿತ್ರ ಈಗ (2012) ಮತ್ತು ಹಿಂದಿ ಚಲನಚಿತ್ರ ದಬಾಂಗ್ 3 (2019) ಇವರ ಪ್ರಮುಖ ಚಿತ್ರಗಳು. ಹುಚ್ಚ, ನಂದಿ ಮತ್ತು ಸ್ವಾತಿ ಮುತ್ತು ಚಿತ್ರಗಳಿಗಾಗಿ ಸತತ ಮೂರು ವರ್ಷಗಳ ಕಾಲ ಕನ್ನಡದ ಅತ್ಯುತ್ತಮ ನಟನೆಗಾಗಿ ಫಿಲ್ಮ್ಫೇರ್ ಪ್ರಶಸ್ತಿ ಪಡೆದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ದಾಖಲೆಗಳ ವರ್ಗಾವಣೆಗೆ 1993ರಲ್ಲಿ ಅಡೋಬ್ ಸಿಸ್ಟಮ್ಸ್ ಅವರಿಂದ ಪೋರ್ಟೆಬಲ್ ಡಾಕ್ಯುಮೆಂಟ್ ಫಾರ್ಮ್ಯಾಟ್ (ಪಿಡಿಎಫ್ ) ಎಂಬ ಫೈಲ್ ಮಾದರಿ ನಿರ್ಮಾಣವಾಗಿದೆ. ಪ್ರತಿಯೊಂದು ಪಿಡಿಎಫ್ ಪೈಲ್ 2 ಆಯಾಮದ ಡಾಕ್ಯುಮೆಂಟ್ಗಳನ್ನು ನೋಡಲು ಬಳಸಲಾಗಿದ್ದು, ಅವು ಯಾವುದೇ ಅಪ್ಲಿಕೇಶನ್ ಸಾಫ್ಟ್ವೇರ್, ಹಾರ್ಡ್ವೇರ್ ಅಥವಾ ಆಪರೇಟಿಂಗ್ ಸಿಸ್ಟಮ್ ಆಗಿದ್ದರೂ ಕೂಡಾ ನೋಡಲು ಸಾಧ್ಯವಾಗುವಂತೆ ರೂಪಿಸಲಾಗಿದೆ. ಪ್ರತಿಯೊಂದು ಪಿಡಿಎಫ್ ಫೈಲ್, ನಿರ್ದಿಷ್ಟಪಡಿಸಿದ 2ಡಿ ಡಾಕ್ಯುಮೆಂಟ್ ಪುಟ ವಿನ್ಯಾಸವನ್ನು ಹೊಂದಿದ್ದು ಅದು ಪಠ್ಯ, ಅಕ್ಷರ ವಿನ್ಯಾಸ, ಚಿತ್ರಗಳು ಮತ್ತು ದಾಖಲೆಯನ್ನು ರಚಿಸುವ 2ಡಿ ವೆಕ್ಟರ್ ಗ್ರಾಫಿಕ್ಸ್ ಡಾಕ್ಯುಮೆಂಟ್ನ ಸಂಪೂರ್ಣ ವಿವರಣೆಯನ್ನು ಒಳಗೊಂಡಿರುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತ-ಪಾಕಿಸ್ತಾನ ಯುದ್ಧಗಳು ಮತ್ತು ಸಂಘರ್ಷಗಳು
1947 ರಲ್ಲಿ ಬ್ರಿಟಿಷರು ಭಾರತವನ್ನು ವಿಭಜಿಸಿದ ನಂತರ ಮತ್ತು ಭಾರತ ಮತ್ತು ಪಾಕಿಸ್ತಾನದ ರಾಷ್ಟ್ರಗಳು ರಚನೆಯಾದ ನಂತರ, ಈ ಎರಡು ದೇಶಗಳು ಹಲವಾರು ಯುದ್ಧಗಳು, ಘರ್ಷಣೆಗಳು ಮತ್ತು ಸೇನೆ ಬಿಕ್ಕಟ್ಟುಗಳುಂಟಾಗಿವೆ. 1971 ರಲ್ಲಿ ಭಾರತ & ಪಾಕಿಸ್ತಾನ ನೇರ ಯುದ್ಧ ಮಾಡಿದ್ದನ್ನು ಹೊರತುಪಡಿಸಿದರೆ(ಇದು ಬಾಂಗ್ಲಾದೇಶ ವಿಮೋಚನಾ ಯುದ್ಧದಿಂದ ಉಂಟಾದ ಯುದ್ಧದ ನೇರ ಪರಿಣಾಮ), ಮಿಕ್ಕೇಲ್ಲವೂ ಕಾಶ್ಮೀರ ಮತ್ತು ಅದರ ಗಡಿಯಾಚೆಗಿನ ಭಯೋತ್ಪಾದನೆಯ ಕುರಿತು ದೀರ್ಘಕಾಲದ ವಿವಾದಗಳಿಂದಾದವು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ಭಾರತದ ಟೆರಿಟೋರಿಯಲ್ ಆರ್ಮಿ (ಟಿಎ) ಅರೆಕಾಲಿಕ ಸ್ವಯಂಸೇವಕರ ಸಹಾಯಕ ಮಿಲಿಟರಿ ಸಂಸ್ಥೆಯಾಗಿದ್ದು, ಅದು ಭಾರತೀಯ ಸೇನೆಗೆ ಬೆಂಬಲ ಸೇವೆಯನ್ನು ಒದಗಿಸುತ್ತದೆ. ಇದು ಅಧಿಕಾರಿಗಳು, ಜೂನಿಯರ್ ಕಮಿಷನ್ಡ್ ಅಧಿಕಾರಿಗಳು, ನಾನ್-ಕಮಿಷನ್ಡ್ ಅಧಿಕಾರಿಗಳು ಮತ್ತು ಭಾರತೀಯ ಸೇನೆಯಂತೆಯೇ ಶ್ರೇಣಿಯನ್ನು ಹೊಂದಿರುವ ಇತರ ಸಿಬ್ಬಂದಿಗಳನ್ನು ಒಳಗೊಂಡಿದೆ. ಅವರು ನಾಗರಿಕ ಉದ್ಯೋಗಗಳನ್ನು ಹೊಂದಿದ್ದಾರೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಬೌದ್ಧ ಧರ್ಮ ಎಂದರೆ ಪ್ರಪಂಚದ ಅನೇಕ ಧರ್ಮಗಳಲ್ಲಿ 4 ನೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಸತ್ಯ ಮತ್ತು ವಿಜ್ಞಾನಕ್ಕೆ ಹತ್ತಿರವಾದ ಹಾಗೂ ಯಾರಿಗೂ ನಿಷ್ಠೂರವಾಗದ ವಾಸ್ತವ ವಾದವನ್ನು ಕ್ರಿ.ಪೂ. 566 ವರ್ಷಗಳ ಮುಂಚಿತವಾಗಿ ಭಾರತ ದಲ್ಲಿ ಜನನವಾಗಿ 98 ವರ್ಷಗಳ ಕಾಲ ಜೀವಿಸಿದ್ದ ಸಿದ್ದಾರ್ಥ ಗೌತಮ ಬುದ್ದನ ಬೋಧನೆಗಳ ಮೇಲೆ ಆಧಾರಿತವಾಗಿ ಬೆಳೆದು ಬಂದಿರುವ ಭಾರತೀಯ ಧರ್ಮ. ಸಾಖ್ಯರ ರಾಜಧಾನಿಯಾದ ಕಪಿಲವಸ್ತುವಿನ ರಾಜ ಶುದ್ದೋಧನ ಹಾಗೂ ಮಹಾಮಾಯೆ ಎನ್ನುವವರ ಮಗನಾದ ರಾಜಕುಮಾರ ಸಿದ್ಧಾರ್ಥ ನು ಕಠಿಣ ಪರಿಶ್ರಮ ಮೂಲಕ ಜ್ಞಾನ ವನ್ನು ಪಡೆದು ಬುದ್ಧನಾಗಿ 98 ವರ್ಷಗಳ ಕಾಲ ಧರ್ಮೋಪದೇಶ ಮಾಡುತ್ತಾ ನಿರ್ವಾಣ ಹೊಂದಿದ ಕಾರಣ ಗೌತಮ ಬುದ್ಧ ನೆಂಬ ಹೆಸರೂ ಇದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಹೊಯ್ಸಳೇಶ್ವರ ದೇವಸ್ಥಾನವನ್ನು ಸರಳವಾಗಿ ಹಳೇಬೀಡು ದೇವಸ್ಥಾನ ಎಂದೂ ಕರೆಯುತ್ತಾರೆ, ಇದು 12 ನೇ ಶತಮಾನದ ಹಿಂದೂ ದೇವಾಲಯವಾಗಿದ್ದು ಅದು ಶಿವನಿಗೆ ಸಮರ್ಪಿತವಾಗಿದೆ. ಇದು ಹಳೆಬೀಡು, ಭಾರತದ ಕರ್ನಾಟಕ ರಾಜ್ಯದ ಪಟ್ಟಣ ಮತ್ತು ಹೊಯ್ಸಳ ಸಾಮ್ರಾಜ್ಯದ ಹಿಂದಿನ ರಾಜಧಾನಿಯಲ್ಲಿನ ಅತಿದೊಡ್ಡ ಸ್ಮಾರಕವಾಗಿದೆ. ಈ ದೇವಾಲಯವನ್ನು ದೊಡ್ಡ ಮಾನವ ನಿರ್ಮಿತ ಸರೋವರದ ದಡದಲ್ಲಿ ನಿರ್ಮಿಸಲಾಗಿದೆ ಮತ್ತು ಹೊಯ್ಸಳ ಸಾಮ್ರಾಜ್ಯದ ರಾಜ ವಿಷ್ಣುವರ್ಧನ ಪ್ರಾಯೋಜಿಸಿದ್ದಾನೆ.
ತಂತ್ರಜ್ಞಾನವು ಒಂದು ಜೀವಜಾತಿಯಿಂದ ಉಪಕರಣಗಳು ಹಾಗೂ ಕುಶಲಕರ್ಮಗಳ ಬಳಕೆ ಮತ್ತು ಜ್ಞಾನಕ್ಕೆ ಸಂಬಂಧಿಸಿರುವ, ಮತ್ತು ಒಂದು ಜೀವಜಾತಿಯ ಪರಿಸರವನ್ನು ನಿಯಂತ್ರಿಸಲು ಹಾಗೂ ಅದಕ್ಕೆ ಹೊಂದಿಕೊಳ್ಳಲು ಜೀವಜಾತಿಯ ಸಾಮರ್ಥ್ಯದ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆಂಬುದನ್ನು ತಿಳಿಸುವ ಒಂದು ವಿಶಾಲವಾದ ಪರಿಕಲ್ಪನೆಯಾಗಿದೆ. ಆದರೆ, ಒಂದು ನಿಖರವಾದ ವ್ಯಾಖ್ಯಾನ ಸಾಧ್ಯವಿಲ್ಲ; "ತಂತ್ರಜ್ಞಾನವು" ಮಾನವಕುಲಕ್ಕೆ ಉಪಯುಕ್ತವಾಗಿರುವ ಯಂತ್ರಗಳು, ಯಂತ್ರಾಂಶ ಅಥವಾ ಗೃಹೋಪಕರಣಗಳಂತಹ ಭೌತಿಕ ವಸ್ತುಗಳನ್ನು ನಿರ್ದೇಶಿಸಬಹುದು, ಆದರೆ, ವ್ಯವಸ್ಥೆಗಳು, ಸಂಘಟನೆಯ ವಿಧಾನಗಳು, ಮತ್ತು ತಂತ್ರಗಳ ಸಹಿತ ಹೆಚ್ಚು ವಿಶಾಲವಾದ ವಿಷಯಗಳನ್ನೂ ಒಳಗೊಳ್ಳಬಹುದು. ಒಂದು ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ, ಒಂದು ಸಮಸ್ಯೆಗೆ ಮೊದಲೇ ಅಸ್ತಿತ್ವದಲ್ಲಿರುವ ಪರಿಹಾರ ಸುಧಾರಿಸಲು ಒಂದು ಗುರಿಯನ್ನು ಸಾಧಿಸಲು, ಒಂದು ಅನ್ವಯಿಕ ಇನ್ಪುಟ್ ಔಟ್ಪುಟ್ ಸಂಬಂಧಿಸಿದಂತೆ ನಿರ್ವಹಿಸಲು ಅಥವಾ ಒಂದು ನಿರ್ದಿಷ್ಟ ಕಾರ್ಯ ನಿರ್ವಹಿಸಲು, ಇದು ಯಂತ್ರಗಳು, ಮಾರ್ಪಾಡುಗಳನ್ನು, ವ್ಯವಸ್ಥೆಗಳು, ಕಾರ್ಯವಿಧಾನಗಳು ಸೇರಿದಂತೆ ಉಪಕರಣಗಳ,ಜ್ಞಾನದ ಸಂಗ್ರಹ ಎಂದು ಉಲ್ಲೇಖಿಸಬಹುದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ರೇಷ್ಮೆಯು ರೇಷ್ಮೆ ಹುಳುಗಳು ಉತ್ಪಾದಿಸುವ ಒಂದು ಪ್ರೊಟೀನ್ ನಾರು. ರೇಷ್ಮೆ ಬಟ್ಟೆಗಳನ್ನುಟ್ಟ ಹೆಂಗೆಳೆಯರ, ಮಕ್ಕಳ, ಮತ್ತು ಎಲ್ಲ ವಯೋಮಾನದ ಜನರ ಸಂಭ್ರಮಗಳನ್ನು ನೋಡುವುದು ಕಣ್ಣಿಗೆ ಹಬ್ಬ. ಆಕರ್ಷಕ ಮೈಮಾಟವಿರುವವರಿಗೆ, ಮತ್ತಷ್ಟು ನಿಖಾರತೆಗಳನ್ನು ಕೊಡುವ ದಟ್ಟ ಬಣ್ಣಗಳ, ಹೊಳಪಿನ, ವೈವಿಧ್ಯಮಯ ಸಂಗಮಗಳ ನಿಧಿಯಾದ, ರೇಷ್ಮೆ ಉಡುಪಿಗೆ ಕಾಲ, ದೇಶ ಹಾಗೂ ವಯಸ್ಸಿನ ಪರಿಮಿತಿಯಿಲ್ಲ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.