The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಎಚ್.ಎಸ್.ವೆಂಕಟೇಶಮೂರ್ತಿ (೨೩ ಜೂನ್ ೧೯೪೪ - ೩೦ ಮೇ ೨೦೨೫), ಇವರು ಕನ್ನಡದ ಕವಿ ಮತ್ತು ಬರಹಗಾರರು. ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ ತಮ್ಮ ಕೊಡುಗೆಯನ್ನು ಕೊಟ್ಟು ಕನ್ನಡ ಸಾಹಿತ್ಯ ಕ್ಷೇತ್ರವನ್ನು, ಹಳೆಯ ಸಂಪ್ರದಾಯದಲ್ಲಿ ಕೃಷಿಮಾಡಿ, ಆಧುನಿಕ ಸಾಹಿತ್ಯದ ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹತ್ವದ ಲೇಖಕರಲ್ಲೊಬ್ಬರು. ಇವರು ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು.
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ, ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
ಅಹಲ್ಯಾಬಾಯಿ ಹೋಳ್ಕರ್ (31 ಮೇ 1725–13 ಆಗಸ್ಟ್ 1795), ಈಕೆ ಮರಾಠಾ ಸಾಮ್ರಾಜ್ಯದಲ್ಲಿದ್ದ ಮಾಲ್ವ ಪ್ರಾಂತ್ಯದ ರಾಣಿ. ಮಹೇಶ್ವರವನ್ನು (ಈಗಿನ ಮಧ್ಯಪ್ರದೇಶದಲ್ಲಿದೆ) ರಾಜಧಾನಿಯನ್ನಾಗಿ ಮಾಡಿಕೊಂಡು ಹೋಳ್ಕರ್ ಮನೆತನದವಳು. ಭಾರತೀಯರ ಮನದಾಳದಲ್ಲಿ ಸ್ಥಿರಸ್ಥಾಯಿಯಾಗಿ ಉಳಿದಿರುವ ಈಕೆ, ಉತ್ತಮ ಆಡಳಿತ, ಸಾಮಜಿಕ ಕಲ್ಯಾಣಗಳು, ಜನಾನುರಾಗಿ ಕಾರ್ಯ, ಮತ್ತು ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗಳಿಂದಾಗಿ ಭಾರತೀಯರ ಮನೆ ಮಾತಾಗಿದ್ದಾರೆ.
ಭಾರತ ಗಣರಾಜ್ಯದಲ್ಲಿ ಮಾತನಾಡುವ ಭಾಷೆಗಳು ಹಲವಾರು ಭಾಷಾ ಕುಟುಂಬಗಳಿಗೆ ಸೇರಿದ್ದು, ಪ್ರಮುಖವಾದವುಗಳು 78.05% ಭಾರತೀಯರು ಮಾತನಾಡುವ ಇಂಡೋ-ಆರ್ಯನ್ ಭಾಷೆಗಳು ಮತ್ತು 19.64% ಭಾರತೀಯರು ಮಾತನಾಡುವ ದ್ರಾವಿಡ ಭಾಷೆಗಳು, ಇವೆರಡೂ ಕುಟುಂಬಗಳು ಕೆಲವೊಮ್ಮೆ ಒಟ್ಟಿಗೆ ಇರುತ್ತವೆ. ಇವುಗಳನ್ನು ಭಾರತೀಯ ಭಾಷೆಗಳು ಎಂದು ಕರೆಯಲಾಗುತ್ತದೆ. ಜನಸಂಖ್ಯೆಯ ಉಳಿದ 2.31% ಜನರು ಮಾತನಾಡುವ ಭಾಷೆಗಳು ಆಸ್ಟ್ರೋಯಾಸಿಯಾಟಿಕ್, ಸಿನೋ-ಟಿಬೆಟಿಯನ್, ತೈ-ಕಡೈ ಮತ್ತು ಕೆಲವು ಇತರ ಸಣ್ಣ ಭಾಷಾ ಕುಟುಂಬಗಳು ಮತ್ತು ಪ್ರತ್ಯೇಕತೆಗಳಿಗೆ ಸೇರಿವೆ.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆ (LOC) ಇರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಭಾರತದಲ್ಲಿ ಈ ಸಂಘರ್ಷವನ್ನು ಆಪರೇಷನ್ ವಿಜಯ್ ಎಂದೂ ಉಲ್ಲೇಖಿಸಲಾಗುತ್ತದೆ, ಇದು ಈ ಪ್ರದೇಶದಲ್ಲಿನ ಭಾರತೀಯ ಸೇನಾ ಕಾರ್ಯಾಚರಣೆಯ ಸಂಕೇತನಾಮವಾಗಿದೆ. ಭಾರತೀಯ ವಾಯುಪಡೆಯು ಭಾರತೀಯ ಸೇನೆಯೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಸೇನೆ ಮತ್ತು ಅರೆಸೇನಾ ಪಡೆಗಳನ್ನು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಖಾಲಿಯಾದ ಭಾರತೀಯ ಸ್ಥಾನಗಳಿಂದ ಹೊರಹಾಕಿತು, ಇದನ್ನು ಆಪರೇಷನ್ ಸಫೇದ್ ಸಾಗರ್ (ಬಿಳಿ ಸಾಗರ) ಎಂದು ಹೆಸರಿಸಲಾಯಿತು.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಜಿಪುಣನು (ಕೃಪಣ) ಹಣ ಅಥವಾ ಇತರ ಸ್ವತ್ತುಗಳನ್ನು ಕೂಡಿಡುವ ಸಲುವಾಗಿ ಖರ್ಚುಮಾಡಲು ಇಷ್ಟಪಡದಿರುವ ವ್ಯಕ್ತಿ, ಎಷ್ಟರ ಮಟ್ಟಿಗೆ ಎಂದರೆ ಮೂಲಭೂತ ಸೌಕರ್ಯಗಳು ಮತ್ತು ಕೆಲವು ಅಗತ್ಯಗಳನ್ನು ಕೂಡ ವರ್ಜಿಸುವನು. ಈ ಶಬ್ದವನ್ನು ಕೆಲವೊಮ್ಮೆ ವಿಶಾಲ ಅರ್ಥದಲ್ಲಿ ತಮ್ಮ ಹಣದ ಬಗ್ಗೆ ಜುಗ್ಗನಾಗಿರುವ ಯಾರನ್ನಾದರೂ ವರ್ಣಿಸಲು ಬಳಸಲಾಗುತ್ತದಾದರೂ, ಅಂತಹ ವರ್ತನೆಯ ಜೊತೆಗೆ ಉಳಿಸಿದ್ದರಲ್ಲಿ ಆನಂದಪಡದಿದ್ದರೆ, ಅದು ಸರಿಯಾದ ಅರ್ಥದಲ್ಲಿ ಜಿಪುಣತನವಲ್ಲ. ಒಂದು ಪ್ರಕಾರವಾಗಿ ಜಿಪುಣರು ದೀರ್ಘಕಾಲದಿಂದ ಜನಪ್ರಿಯ ಆಕರ್ಷಣೆಯ ವಸ್ತುವಾಗಿದ್ದಾರೆ ಮತ್ತು ಅನೇಕ ಸಂಸ್ಕೃತಿಗಳಲ್ಲಿ ಬರಹಗಾರರು ಹಾಗೂ ಕಲಾವಿದರಿಗೆ ಫಲಪ್ರದ ಮೂಲವಾಗಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ವಿಜ್ಞಾನದ ಇತಿಹಾಸ ಎಂದರೆ ನೈಸರ್ಗಿಕ ವಿಶ್ವವನ್ನು ಮನುಷ್ಯರು ಅರ್ಥಮಾಡಿಕೊಳ್ಳುವಿಕೆಯ ಐತಿಹಾಸಿಕ ಬೆಳವಣಿಗೆಯ ಅಧ್ಯಯನ ಎನ್ನಬಹುದು. 20ನೇ ಶತಮಾನದ ಕೊನೆಯವರೆಗೆ ವಿಜ್ಞಾನದ ಇತಿಹಾಸ, ವಿಶೇಷವಾಗಿ ಭೌತಿಕ ಮತ್ತು ಜೀವಶಾಸ್ತ್ರೀಯ ವಿಜ್ಞಾನಗಳು ತಪ್ಪು ಸಿದ್ಧಾಂತಗಳ ಮೇಲೆ ನೈಜ ಸಿದ್ಧಾಂತಗಳ ವಿಜಯವನ್ನು ಸಾರುವ ನಿರೂಪಣೆಗಳ ಹಾಗೆ ಕಾಣಲಾಗುತ್ತಿತ್ತು. ವಿಜ್ಞಾನವು ನಾಗರಿಕತೆಯ ಪ್ರಗತಿಯ ಒಂದು ಬಹುಮುಖ್ಯ ಆಯಾಮವೆಂದೇ ಚಿತ್ರಿತವಾಗಿದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
"ಪೂರಕ ಔಷಧ " ಹಾಗೂ "ಪೂರಕ ಮತ್ತು ಪರ್ಯಾಯ ಔಷಧ " ಎಂಬ ಶೀರ್ಷಿಕೆಗಳು ಇಲ್ಲಿಗೆ ಪುನರ್ನಿರ್ದೇಶಿಸುತ್ತವೆ.' ಪಾಶ್ಚಾತ್ಯ ಸಂಸ್ಕೃತಿಯಲ್ಲಿ, ಪರ್ಯಾಯ ಔಷಧ ಎಂಬ ವಿವಾದಾತ್ಮಕ ಪರಿಭಾಷೆಯು ಯಾವುದೇ ಶಮನಕಾರಿ ಚಿಕಿತ್ಸಾ ಪರಿಪಾಠಕ್ಕೆ ಅನ್ವಯಿಸುವಂಥದ್ದಾಗಿದ್ದು, "ಅದು ಸಾಂಪ್ರದಾಯಿಕ ಔಷಧದ ವ್ಯಾಪ್ತಿಯೊಳಗಡೆ ಬರುವಂಥದ್ದಾಗಿರುವುದಿಲ್ಲ" ಅಥವಾ "ಪರಿಣಾಮಕಾರಿಯಾಗಿದೆ ಎಂಬುದಾಗಿ ಸುಸಂಗತವಾಗಿ ತೋರಿಸಲ್ಪಟ್ಟಿರುವಂಥದ್ದಾಗಿರುವುದಿಲ್ಲ." ಇದು ಅನೇಕವೇಳೆ ಕುರುಹು ಆಧರಿತ ಔಷಧಕ್ಕೆ ವ್ಯತಿರಿಕ್ತವಾದುದಾಗಿರುತ್ತದೆ ಮತ್ತು ಕೇವಲ ಒಂದು ವೈಜ್ಞಾನಿಕ ಆಧಾರಕ್ಕಿಂತ ಹೆಚ್ಚಾಗಿ ಒಂದು ಐತಿಹಾಸಿಕ ಅಥವಾ ಸಾಂಸ್ಕೃತಿಕ ಆಧಾರದೊಂದಿಗಿನ ಚಿಕಿತ್ಸಾ ಕ್ರಮಗಳನ್ನು ಒಳಗೊಳ್ಳುತ್ತದೆ. ಆದಾಗ್ಯೂ, ಇಂಥ ಚಿಕಿತ್ಸಾ ಪರಿಪಾಠಗಳು ಮೋಸಗೊಳಿಸುವ ಪರಿಪಾಠಗಳು ಎಂಬ ಅಭಿಪ್ರಾಯವನ್ನು ಹೊಂದಿರುವ ಸಂದೇಹವಾದಿಗಳಿಂದ ಪರ್ಯಾಯ ಔಷಧ ಎಂಬ ಪರಿಭಾಷೆಯು ಟೀಕಿಸಲ್ಪಟ್ಟಿದೆ. ರಿಚರ್ಡ್ ಡಾಕಿನ್ಸ್ ಎಂಬಾತ ಈ ಕುರಿತಾಗಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾ, "ಪರ್ಯಾಯ ಔಷಧ ಎಂಬುದು ಯಾವುದೂ ಇಲ್ಲ.
ಆಸಿಟಿಲ್ಸ್ಯಾಲಿಸಿಲಿಕ್ ಆಮ್ಲ (pronounced /əˌsɛtɪlsælɪˌsɪlɪk ˈæsɪd/ ಸಂಕ್ಷಿಪ್ತ ರೂಪದಲ್ಲಿ ASA ) ಎಂದೂ ಕರೆಲ್ಪಡುವ ಆಸ್ಪಿರಿನ್ (USAN) ಒಂದು ಸ್ಯಾಲಿಸಿಲೇಟ್(=ಸ್ಯಾಲಿಸಿಲಿಕ್ ಆಮ್ಲದಿಂದ ಉತ್ಪನ್ನವಾದುದು) ಔಷಧ. ಸಣ್ಣಪುಟ್ಟ ನೋವು ವೇದನೆಗಳಿಂದ ಮುಕ್ತಿ ಪಡೆಯಲು ನೋವು ಶಾಮಕವನ್ನಾಗಿಯೂ, [[ಜ್ವರ ನಿವಾರಕವನ್ನಾಗಿಯೂ|ಜ್ವರ ನಿವಾರಕವನ್ನಾಗಿಯೂ]] ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ. ಉರಿ ಶಮನದ ಔಷಧವಾಗಿಯೂ ಇದನ್ನು ಬಳಸುವುದುಂಟು.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ವಿಶ್ವ ಪರಿಸರ ದಿನವನ್ನು ( ಡಬ್ಲ್ಯೂಇಡಿ ) ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುತ್ತದೆ. ಇದು ಅನೇಕ ಸರ್ಕಾರೇತರ ಸಂಸ್ಥೆಗಳು, ವ್ಯವಹಾರಗಳು, ಸರ್ಕಾರಿ ಘಟಕಗಳಿಂದ ಬೆಂಬಲಿತವಾಗಿದೆ ಮತ್ತು ಪರಿಸರವನ್ನು ಬೆಂಬಲಿಸುವ ಪ್ರಾಥಮಿಕ ವಿಶ್ವಸಂಸ್ಥೆಯ ಎಲ್ಲರಿಗೂ ತಲುಪುವ ಜಾಗೃತಿ ದಿನವನ್ನು ಪ್ರತಿನಿಧಿಸುತ್ತದೆ. ಮೊದಲ ಬಾರಿಗೆ 1973 ರಲ್ಲಿ ಆಯೋಜಿಸಲಾಯಿತು, ಇದು ಸಮುದ್ರ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ೩೧ ಮೆ ಯಂದು ಆಚರಿಸಲಾಗುತ್ತದೆ ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು ೧೯೮೭ರ ಇಸವಿಯಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಸರ್ವರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು..೧೯೮೭ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸ೦ಸ್ಥೆಯು ತ೦ಬಾಕು ರಹಿತ ದಿನದ ಆಚರಗೆಯ ಬಗ್ಗೆ ಅದಿನೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸ೦ಸ್ಥೆಯು ಆರೋಗ್ಯದ ದೃಷ್ಟಿಯಿ೦ದ ತ೦ಬಾಕು ನಿಷೇಧ ಬಗ್ಗೆ ಚಿ೦ತನೆಯನ್ನು ಕೈಗೊ೦ಡಿತು.ತ೦ಬಾಕು ಸೇವನೆಯಿ೦ದ ಪ್ರತಿ ವರ್ಷ ಪ್ರಪ೦ಚದಾದ್ಯ೦ತ ಆರು ಮಿಲಿಯ೦ನ್ ಅಷ್ಟು ಜನರು ಮರಣ ಹೊ೦ದುತಿದ್ದಾರೆ. ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ.ಆದುದರಿ೦ದ ಸರ್ಕಾರ ಮನುಷ್ಯನ ಭವಿಶ್ಯದ ಬಗ್ಗೆ ಚಿ೦ತಿಸಿ ತ೦ಬಾಕು ನಿಷೇಧವನ್ನು ಮಾಡುತ್ತಾರೆ.ಭಾರತ ದೇಶದಲ್ಲಿ ಕ್ಯಾನ್ಸರ್ ಹೆತ್ತ ಸೊಸೈಟಿ ರೆಡ್ ಕ್ರಾಸ್ ಸ೦ಸ್ಥೆ,ಯೆನ್ ಜಿ ಒ,ಮು೦ತಾದ ಸ೦ಸ್ಥೆಗಳು ತ೦ಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸ ಗಳನ್ನು,ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ.ಹಾಗೆಯೇ ತ೦ಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸ೦ಸ್ಥೆ ತ೦ಬಾಕು ನಿಯ೦ತ್ರಣ ತೆರೆದಿದೆ. ಇದರ ಮುಖ್ಯ ಉದ್ದೇಶವೆ೦ದರೆ ಒ೦ದು ಸ೦ಪೂರ್ಣ ದಿನ ಅ೦ದು ಘ೦ಟೆಗಳ ಕಾಲ ಯಾವುದೇ ರೀತಿಯ ತ೦ಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.
ಆಧುನಿಕ ಭಾರತದಲ್ಲಿ ಇತಿಹಾಸಪೂರ್ವ ಕಾಲದಿಂದಲೂ ಕರ್ನಾಟಕ ಕರ್ನಾಟಕ ಕರ್ನಾಟಕ ಕರ್ನಾಟಕ ಕರ್ನಾಟಕ ಪ್ರದೇಶವು ಸತತವಾಗಿ ಮಾನವನ ನೆಲೆಯಾಗಿದೆ. ತಮಿಳು ಜನರ ನಾಗರಿಕತೆ ವಿಶ್ವದಲ್ಲೇ ಅತೀ ಪ್ರಾಚೀನವಾದ ನಾಗರೀಕತೆಗಳಲ್ಲಿ ಒಂದೆಂದು ಪರಿಗಣಿಸ ಲಾಗಿದೆ. ಇತಿಹಾಸದುದ್ದಕ್ಕೂ, ಪೂರ್ವ ಪ್ರಾಚೀನ ಶಿಲಾಯುಗದಿಂದ ಹಿಡಿದು ಆಧುನಿಕ ಕಾಲದವರೆಗೆ, ಈ ಪ್ರದೇಶವು ವಿವಿಧ ಬಾಹ್ಯ ಸಂಸ್ಕೃತಿಗಳ ಜತೆಯಲ್ಲಿ ಬೆಳೆದಿದೆ.
ಚೆನ್ನಕೇಶವ ದೇವಾಲಯವನ್ನು, ಕೇಶವ ಅಥವಾ ಬೇಲೂರಿನ ವಿಜಯನಾರಾಯಣ ದೇವಾಲಯ ಎಂದೂ ಕರೆಯಲಾಗುತ್ತದೆ. ಇದು ಭಾರತದ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ೧೨ ನೇ ಶತಮಾನದ ಹಿಂದೂ ದೇವಾಲಯವಾಗಿದೆ. ಇದು ೧೧೧೭ ಸಿ ಇ ನಲ್ಲಿ ರಾಜ ವಿಷ್ಣುವರ್ಧನನಿಂದ ನಿಯೋಜಿಸಲ್ಪಟ್ಟಿತು, ಬೇಲೂರಿನಲ್ಲಿ ಯಗಚಿ ನದಿಯ ದಡದಲ್ಲಿ ವೇಲಾಪುರ ಎಂದೂ ಕರೆಯಲ್ಪಡುತ್ತದೆ, ಇದು ಆರಂಭಿಕ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.
ಅರ್ಥ ಶಾಸ್ತ್ರದಲ್ಲಿ, ಹಣದುಬ್ಬರ ವೆಂದರೆ ಆರ್ಥಿಕತೆಯ ಕಾಲಾವಧಿಯಲ್ಲಿ ಸರಕುಗಳ ಹಾಗೂ ಸೇವೆಗಳ ಸಾಮಾನ್ಯ ಬೆಲೆಗಳ ಮಟ್ಟದ ಏರಿಕೆ. ಬೆಲೆ ಏರಿಕೆಯಾದಾಗ, ಚಲಾವಣೆಯ ಪ್ರತಿ ಘಟಕವೂ ಕಡಿಮೆ ಪ್ರಮಾಣದಲ್ಲಿ ಸರಕುಗಳನ್ನು-ಸೇವೆಗಳನ್ನು ಕೊಂಡುಕೊಳ್ಳುತ್ತದೆ; ಹಾಗಾಗಿ ಹಣದುಬ್ಬರವೆಂದರೆ ಹಣದ ಕೊಂಡುಕೊಳ್ಳುವ ಸಾಮರ್ಥ್ಯದಲ್ಲಿನ ಕೊರೆತಯೂ ಹೌದು - ವಿನಿಮಯ ಮತ್ತು ಆರ್ಥಿಕತೆಯ ಲೆಕ್ಕದ ಘಟಕದ ಆಂತರಿಕ ಮಾಧ್ಯಮದಲ್ಲಿ ನೈಜ ಮೌಲ್ಯದ ನಷ್ಟವೂ ಆಗುತ್ತದೆ. ಹಣದುಬ್ಬರದ ಪ್ರಮಾಣವೇ ಬೆಲೆ ಏರಿಕೆಯ ಮುಖ್ಯ ಪ್ರಮಾಣವಾಗಿದ್ದು, ಕಾಲಾವಧಿಯಲ್ಲಿ ಹಣದುಬ್ಬರದ ದರ, ಸಾಮಾನ್ಯ ಬೆಲೆಯ ಸೂಚ್ಯಂಕಲ್ಲಿ ವಾರ್ಷಿಕ ಶೇಕಡಾವಾರು ಬದಲಾವಣೆ (ಗ್ರಾಹಕ ಬೆಲೆ ಸೂಚ್ಯಂಕ ಎಂದೂ ಹೇಳಲಾಗಿದೆ).
"ಪಂಚತಂತ್ರ ಕಥೆಗಳ ಮೂಲ ಭಾರತ".ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ( ಸಂಸ್ಕೃತ:पञ्चतन्त्र' )ಐದು ಮೂಲತತ್ವಗಳು'ಕ್ರಿಸ್ತ ಪೂರ್ವ 3ನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕಮಲ್ ಹಾಸನ್ (ಜನನ: ನವೆಂಬರ್ ೭, ೧೯೫೪), ಒಬ್ಬ ಭಾರತೀಯ ಚಿತ್ರನಟ,ರಾಜಕಾರಣಿ, ಚಿತ್ರಕಥೆ ರಚನೆಕಾರ ಮತ್ತು ನಿರ್ಮಾಪಕ. ಭಾರತೀಯ ಚಲನಚಿತ್ರರಂಗದಲ್ಲಿ ಪ್ರಮುಖ ಮೆಥಡ್ ಆಕ್ಟರ್ ಗಳಲ್ಲೊಬ್ಬರು ಎಂದು ಪರಿಗಣಿಸಲ್ಪಡುವ ಒಬ್ಬ ಮಹಾನ್ ತಾರೆ. ಕಮಲ್ ಹಾಸನ್ ರವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು ಫಿಲ್ಮ್ ಫೇರ್ ಪ್ರಶಸ್ತಿ ಗಳನ್ನೊಳಗೊಂಡ ಹಲವಾರು ಭಾರತೀಯ ಚಲನಚಿತ್ರ ಪ್ರಶಸ್ತಿಗಳನ್ನು ಗಳಿಸುವುದರ ಮೂಲಕ ಚಿರಪರಿಚಿತರು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಬಾನು ಮುಷ್ತಾಕ್ (1948 ರಲ್ಲಿ ಜನನ) ಭಾರತದ ದಕ್ಷಿಣ ರಾಜ್ಯವಾದ ಕರ್ನಾಟಕದ ಒಬ್ಬ ಕಾರ್ಯಕರ್ತೆ, ವಕೀಲೆ ಮತ್ತು ಬರಹಗಾರ್ತಿ. ಇವರು ಕನ್ನಡ ಭಾಷೆಯಲ್ಲಿ ಬರೆಯುತ್ತಾರೆ ಮತ್ತು ಅವರ ಕೃತಿಗಳು ಉರ್ದು, ಹಿಂದಿ, ತಮಿಳು, ಮಲಯಾಳಂ ಮತ್ತು ಇತ್ತೀಚೆಗೆ ಆಂಗ್ಲ ಭಾಷೆಗಳಲ್ಲಿಯೂ ಪ್ರಕಟವಾಗಿವೆ. ೨೦೨೫ ರಲ್ಲಿ, ದೀಪಾ ಭಸ್ತಿ ಅವರಿಂದ ಆಂಗ್ಲ ಭಾಷೆಗೆ ಅನುವಾದಿಸಲ್ಪಟ್ಟ ಸಣ್ಣ ಕಥಾಸಂಕಲನ, ಹಾರ್ಟ್ ಲ್ಯಾಂಪ್, ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ವಾಣಿ ಜಯರಾಂ (ಜನನ ಕಲೈವಾಣಿ, ೩೦ ನವೆಂಬರ್ ೧೯೪೫ - ೪ ಫೆಬ್ರವರಿ ೨೦೨೩) ಇವರು ಭಾರತೀಯ ಚಿತ್ರರಂಗದಲ್ಲಿ ಹಿನ್ನೆಲೆ ಗಾಯಕಿಯಾಗಿದ್ದು, ಇವರನ್ನು ಪ್ರೀತಿಯಿಂದ "ಆಧುನಿಕ ಭಾರತದ ಮೀರಾ" ಎಂದು ಕರೆಯಲಾಗುತ್ತದೆ. ವಾಣಿ ಅವರ ವೃತ್ತಿಜೀವನವು ೧೯೭೧ ರಲ್ಲಿ, ಪ್ರಾರಂಭವಾಯಿತು ಮತ್ತು ಐದು ದಶಕಗಳಿಗೂ ಹೆಚ್ಚು ಕಾಲ ವ್ಯಾಪಿಸಿತು. ಅವರು ೨೦,೦೦೦ ಕ್ಕೂ ಹೆಚ್ಚು ಹಾಡುಗಳನ್ನು ರೆಕಾರ್ಡ್ ಮಾಡುವ ಒಂದು ಸಾವಿರಕ್ಕೂ ಹೆಚ್ಚು ಭಾರತೀಯ ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕಿಯಾಗಿದ್ದಾರೆ.
ಆಂಧ್ರ ಪ್ರದೇಶ (ತೆಲುಗು:ఆంధ్ర ప్రదేశ్) (, ಭಾಷಾಂತರ: ಆಂಧ್ರದ ಪ್ರಾಂತ್ಯ, ಸಂಕ್ಷಿಪ್ತವಾಗಿ ಎ.ಪಿ. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದ ಆಧಾರದಲ್ಲಿ ಭಾರತದ ರಾಜ್ಯಗಳ ವಿಸ್ತೀರ್ಣದಲ್ಲಿ ಎಂಟನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯ ಆಧಾರದಲ್ಲಿ ಭಾರತದ ರಾಜ್ಯಗಳ ಜನಸಂಖ್ಯೆಯಲ್ಲಿ ಹತ್ತನೇ ಅತಿ ದೊಡ್ಡ ರಾಜ್ಯವಾಗಿದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ ೧೮ ಹಾಗೂ ಹುಡುಗರಿಗೆ ೨೧ ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಯು (IMF ) ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು, ತನ್ನ ಸದಸ್ಯ ರಾಷ್ಟ್ರಗಳ ಬೃಹದಾರ್ಥಿಕ ಕಾರ್ಯನೀತಿಗಳು, ಅದರಲ್ಲಿಯೂ ಮುಖ್ಯವಾಗಿ ವಿನಿಮಯ ದರಗಳು ಹಾಗೂ ಬಾಕಿಇರುವ ಹಣಸಂದಾಯಗಳ ಮೇಲೆ ಪರಿಣಾಮ ಬೀರುವಂತಹ ಜಾಗತಿಕ ವಿತ್ತೀಯ ವ್ಯವಸ್ಥೆಯನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ವಿನಿಮಯ ದರಗಳನ್ನು ಸಬಲಗೊಳಿಸಿ ಅಭಿವೃದ್ಧಿಯನ್ನು ಮತ್ತಷ್ಟು ಸುಲಭ ಮಾಡುವ ಗುರಿಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಥಾಪಿಸಲಾಗಿರುವ ಸಂಸ್ಥೆಯಾಗಿದೆ. ಹಲವು ಬಡ ರಾಷ್ಟಗಳಿಗೆ ಹೆಚ್ಚಿನ ಮಟ್ಟದ ಹತೋಟಿಯೊಂದಿಗೆ ಅಗತ್ಯ ಇರುವಷ್ಟು ಸಾಲವನ್ನು ನೀಡುತ್ತಿದೆ.
ಗಣಿತಶಾಸ್ತ್ರದಲ್ಲಿ, ಅವಿಭಾಜ್ಯ ಸಂಖ್ಯೆ ಯು ಒಂದು ಸ್ವಾಭಾವಿಕ ಸಂಖ್ಯೆಯಾಗಿದ್ದು,ಕೇವಲ ೧ ಮತ್ತು ಅದೇ ಸಂಖ್ಯೆ ಮಾತ್ರವೇ ಇದರ ಅಪವರ್ತನಗಳಾಗಿರುತ್ತವೆ :ಮೊದಲ ಇಪ್ಪತ್ತೈದು ಅವಿಭಾಜ್ಯ ಸಂಖ್ಯೆಗಳು ಇಂತಿವೆ: ೨, ೩, ೫, ೭, ೧೧, ೧೩, ೧೭, ೧೯, ೨೩, ೨೯, ೩೧, ೩೭, ೪೧, ೪೩, ೪೭, ೫೩, ೫೯, ೬೧, ೬೭, ೭೧, ೭೩, ೭೯, ೮೩, ೮೯, ೯೭. ಕ್ರಿಸ್ತ ಪೂರ್ವ ೩೦೦ರ ಆಸುಪಾಸಿನಲ್ಲಿ ಯೂಕ್ಲಿಡ್ನಿಂದ ಪ್ರಮಾಣೀಕರಿಸಿದ ಹಾಗೆ ಅವಿಭಾಜ್ಯ ಸಂಖ್ಯೆಗಳ ಒಂದು ಅಪರಿಮಿತತೆ ಅಸ್ತಿತ್ವದಲ್ಲಿದೆ. ಸಂಖ್ಯೆ ೧ ವ್ಯಾಖ್ಯಾನದ ಪ್ರಕಾರ ಒಂದು ಅವಿಭಾಜ್ಯ ಸಂಖ್ಯೆಯಲ್ಲ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಮೆರಿಕಸ್ ಅಥವಾ ಅಮೆರಿಕ ವು,ಸ್ಪ್ಯಾನಿಷ್: Américaಪೋರ್ಚುಗೀಸ್:AméricaFrench: AmériqueDutch: [Amerika] Error: {{Lang}}: text has italic markup (help) ಪಶ್ಚಿಮ ಗೋಳಾರ್ಧದಲ್ಲಿರುವ ಭೂಪ್ರದೇಶ. ಅದು ಉತ್ತರ ಅಮೆರಿಕ, ದಕ್ಷಿಣ ಅಮೆರಿಕ ಖಂಡಗಳು, ದ್ವೀಪ ಪ್ರದೇಶಗಳು ಮತ್ತು ಪ್ರಾಂತ್ಯಗಳನ್ನು ಒಳಗೊಂಡ ಹೊಸ ಜಗತ್ತಾಗಿ ರೂಪುಗೊಂಡಿದೆ. ಅಮೆರಿಕ ಎಂಬ ಪದವು ಆಂಗ್ಲಭಾಷೆಯಲ್ಲಿ ವಿಭಿನ್ನಾರ್ಥ ನೀಡುತ್ತದೆಯಾದರೂ, ಅಮೆರಿಕ ಸಂಯುಕ್ತ ಸಂಸ್ಥಾನವನ್ನು ಈ ಪದದಿಂದ ಹೆಚ್ಚಾಗಿ ಮತ್ತು ಸಾಮಾನ್ಯವಾಗಿ ಪ್ರಬೋಧಿಸುತ್ತಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮಣ್ಣು ಒಂದು ಸ್ವಾಭಾವಿಕ ವಸ್ತು. ಇದರಲ್ಲಿ ಖನಿಜಾಂಶವುಳ್ಳ ವಿವಿಧ ಗಾತ್ರದ ಅನೇಕ ಪದರುಗಳಿವೆ(ಸಾಯಿಲ್ ಹಾರಿಜಾನ್ಸ್), ಇದು ತನ್ನ ಮೂಲ ವಸ್ತುವಿಗಿಂತ ಮೇಲ್ಮೈಯಲ್ಲಿ ಭೌತಿಕವಾಗಿ, ರಾಸಾಯನಿಕವಾಗಿ, ಮತ್ತು ಖನಿಜಾಂಶಗಳ ಇರುವಿಕೆಯಲ್ಲಿ ವ್ಯತ್ಯಾಸ ತೋರುತ್ತದೆ. ಇದು ರಾಸಾಯನಿಕವಾಗಿ ಹಾಗು ಪರಿಸರದ ಕ್ರಿಯೆಗಳಿಂದಾಗಿ ಮುರಿದ ಬಂಡೆಗಳಿಂದ ಅಥವಾ ಕೊಚ್ಚಿಹೋದ ಅನೇಕ ಮಾರ್ಪಾಡುಗಳನ್ನೊಳಗೊಂಡ, ಹವಾ ಪರಿಣಾಮಗಳಿಂದ,ಮತ್ತು ಭೂಸವೆತಗಳಿಂದ ರೂಪುಗೊಂಡಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಬ್ಯಾಬಿಲೋನ್ (ಗ್ರೀಕ್ Βαβυλών ನ, ಅಕೇಡಿಯನ್ ಭಾಷೆಯಿಂದ: ಬ್ಯಾಬಿಲಿ, ಬ್ಯಾಬಿಲಾ ) ಪ್ರಾಚೀನ ಮೆಸಪಟೋಮಿಯ ನಾಗರಿಕತೆಯಲ್ಲಿದ್ದಂತಹ ನಗರ-ರಾಜ್ಯ ವಾಗಿದೆ. ಇದರ ಅವಶೇಷಗಳನ್ನು ಈಗಿನ ಅಲ್ ಹಿಲ್ಲಾಹ, ಬ್ಯಾಬಿಲ್ ಪ್ರಾಂತ್ಯ, ಇರಾಕ್,ಬಾಗ್ದಾದ್ ನ ದಕ್ಷಿಣಕ್ಕೆ ಸುಮಾರು 85 ಕಿಲೋಮೀಟರ್ (55 mi) ದೂರದಲ್ಲಿರುವ ಪ್ರದೇಶಗಳಲ್ಲಿ ಕಾಣಬಹುದು. ಪುರಾತನ ನಗರವೆಂದು ಪ್ರಖ್ಯಾತವಾಗಿರುವ ಇಂದಿನ ಬ್ಯಾಬಿಲೋನ್ ನಗರದಲ್ಲಿ ಉಳಿದುಕೊಂಡಿರುವುದೇನೆಂದರೆ ದಿಣ್ಣೆಗಳು, ಅಥವಾ ಪ್ರಾಚೀನ ವಸತಿ ಅವಶೇಷಗಳಿಂದಾದ ಕೃತಕ ಗುಡ್ಡಗಳು,ಹಾಗು ಮುರಿದು ಬಿದ್ದಿರುವ ಮಣ್ಣಿನ ಇಟ್ಟಿಗೆಗಳಿಂದ ಕಟ್ಟಲಾದ ಕಟ್ಟಡಗಳು ಹಾಗು ಟೈಗ್ರಿಸ್ ಮತ್ತು ಯೂಫ್ರೆಟೀಸ್ ನದಿಗಳ ಮಧ್ಯದಲ್ಲಿರುವ ಫಲವತ್ತಾದ ಮೆಸಪಟೋಮಿಯನ್ ಬಯಲಿನಲ್ಲಿರುವ ಭಗ್ನಾವಶೇಷಗಳು.
ಸೆಲ್ ಬೈಯಲಾಜಿಯಲ್ಲಿ (ಜೀವಕೋಶಗಳ ಜೀವವಿಜ್ಞಾನ ಶಾಸ್ತ್ರ) ಮೈಟಕಾಂಡ್ರಿಯನ್ (ಬಹುವಚನ: ಮೈಟ್ರೊಕಾಂಡ್ರಿಯ )- ತಂತುಮಯ ಸಂಯೋಜಕ ಅಂಗಾಂಶಗಳ ಮೆಂಬರೇನ್ಗಳಿಂದ ಮುಚ್ಚಲ್ಪಟ್ಟಿರುವ ಒಂದು ಅಂಗಕ(ಆರ್ಗನೆಲ್) ಆಗಿದ್ದು, ಇದು ಬಹಳಷ್ಟು ಯೂಕರಿಯಾಟಿಕ್ ಜೀವಕೋಶಗಳಲ್ಲಿ ಸಿಗುತ್ತದೆ. ಈ ಅಂಗಕಗಳ ವ್ಯಾಸ 0.5 ರಿಂದ 10 ಮೈಕ್ರೊಮಿಟರ್ (μm) ಗಳಷ್ಟಿರುತ್ತದೆ. ಮೈಟಕಾಂಡ್ರಿಯಗಳನ್ನು ಕೆಲವೊಮ್ಮೆ "ಸೆಲುಲಾರ್ ಪವರ್ ಪ್ಲಾಂಟ್ಸ್" (ಜೀವಕೋಶದ ಶಕ್ತಿಯ ಮೂಲ) ಎಂದು ಕೆರೆಯಲಾಗುತ್ತದೆ, ಏಕೆಂದರೆ ಇದು ಜೀವಕೋಶಗಳು ಪೂರೈಸುವ ಕೆಮಿಕಲ್ ಎನರ್ಜಿಯ (ರಸಾಯನಿಕ ಶಕ್ತಿ) ಮೂಲವಾದ ಅಡಿನೊಸೀನ್ ಟ್ರೈಫಾಸ್ಫೇಟ್ (ATP), ಅನ್ನು ಉತ್ಪಾದಿಸುತ್ತದೆ.
ಭಾರತೀಯ ಧರ್ಮಗಳು, ದಕ್ಷಿಣ ಏಷ್ಯಾದ ಧರ್ಮಗಳು ಅಥವಾ ಧರ್ಮ ಧರ್ಮಗಳು ಪ್ರಪಂಚದ ಅನೇಕ ಧರ್ಮಗಳ ಮೂಲವಾಗಿ ಭಾರತೀಯ ಉಪಖಂಡದಲ್ಲಿ ಹುಟ್ಟಿಕೊಂಡ ಧರ್ಮಗಳು ಮತ್ತು ಧರ್ಮವನ್ನು ಆಧರಿಸಿವೆ. ಭಾರತೀಯ ಉಪಖಂಡದಲ್ಲಿ, ಹಿಂದೂ ( ಶೈವ ಧರ್ಮ, ವೈಷ್ಣವ ಧರ್ಮ, ಚಾಕ್ತಂ ), ಜೈನ ಧರ್ಮ, ಬೌದ್ಧ ಧರ್ಮ, ಸಿಖ್ ಧರ್ಮ, ಅಯ್ಯವಾಝಿ ವಿವಿಧ ಕಾಲಘಟ್ಟಗಳಲ್ಲಿ ಧರ್ಮಗಳು ಕಾಣಿಸಿಕೊಂಡು ಪ್ರಪಂಚದಾದ್ಯಂತ ಕಾಲಾನಂತರದಲ್ಲಿ ಹರಡಿತು. ಸಾಮಾನ್ಯವಾಗಿ ಇವೆಲ್ಲವೂ ಅನೇಕ ಧರ್ಮಗಳು ಮತ್ತು ಪಂಗಡಗಳೊಂದಿಗೆ ಒಂದೇ ಧರ್ಮವೆಂದು ಪರಿಗಣಿಸಲಾಗುತ್ತದೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಭತ್ತದ ಪದವು ಸಸ್ಯಕ್ಕೂ ಹಾಗೂ ಸಸ್ಯದ ಕಾಳಿಗೂ ಅನ್ವಯಿಸುತ್ತದೆ. ಭತ್ತಕ್ಕೆ ಕನ್ನಡದಲ್ಲಿ ನೆಲ್ಲು ಎಂದು ಸಹ ಇಂಗ್ಲೀಶ್ನಲ್ಲಿ ಪ್ಯಾಡಿ ಬಳಕೆಯಲ್ಲಿದ್ದಾಗ್ಯೂ ರೈಸ್ ಎನ್ನುವ ಪದವನ್ನು ಭತ್ತ (ಕೆಲವೊಮ್ಮೆ ಅನ್ಮಿಲ್ಡ್ ರೈಸ್), ಅಕ್ಕಿ ಹಾಗೂ ಅನ್ನಕ್ಕೂ ಬಳಸಲಾಗುತ್ತದೆ. ಏಷಿಯಾದ ಭತ್ತದ ವೈಜ್ಞಾನಿಕ ಹೆಸರು ಒರಿಜ ಸಟಿವ ಮತ್ತು ಆಫ್ರಿಕಾದ ಬತ್ತದ ವೈಜ್ಞಾನಿಕ ಹೆಸರು ಒರಿಜ ಗ್ಲಾಬಿರ್ರಿಮ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.