The most-visited ಕನ್ನಡ Wikipedia articles, updated daily. Learn more...
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ, ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕೆಲ ಪರಿಸ್ಥಿತಿಗಳಲ್ಲಿ ಒಂದು ದೇಶದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಹೆಸರು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಇಮ್ಮಡಿ ಪುಲಿಕೇಶಿ ಮಹಾರಾಜರು, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವರ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ ೧೮ ಹಾಗೂ ಹುಡುಗರಿಗೆ ೨೧ ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಪಡಿತರ ಎಂದರೆ ವಿರಳವಾಗಿರುವ ಯಾವುದೇ ವಸ್ತು ಅಥವಾ ಸೇವೆಯು ಒಂದು ಸಮಾಜದಲ್ಲಿ ಅಥವಾ ದೇಶದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಗೂ ಯಥೋಚಿತವಾಗಿ ಸಲ್ಲಬೇಕಾದಷ್ಟು ಸಲ್ಲುವಂತೆ ಕೈಗೊಳ್ಳಲಾಗುವ ಕ್ರಮ (ರೇಷನಿಂಗ್). ಒಂದನೆಯ ಮಹಾಯುದ್ಧದ ಕಾಲದಲ್ಲಿ ಅನೇಕದೇಶಗಳಲ್ಲಿ ಈ ಪದ್ಧತಿಯನ್ನು ವ್ಯಾಪಕವಾಗಿ ಜಾರಿಗೆ ತರಲಾಯಿತು. ಎರಡನೆಯ ಮಹಾಯುದ್ಧದ ಕಾಲದಲ್ಲಿ ಜನರ ಜೀವನಾವಶ್ಯಕ ವಸ್ತುಗಳ ಸರಬರಾಜನ್ನು ನಿಯಂತ್ರಿಸಿ ಅವರು ಅಭಾವದಿಂದ ತೊಂದರೆಗೆ ಒಳಗಾಗದಂತೆ ಈ ಕ್ರಮ ತೆಗೆದುಕೊಳ್ಳಲಾಯಿತು.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಪ್ರಖ್ಯಾತವಾಗಿರುವ ಕಪ್ಪತಗುಡ್ಡ, ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ. ಖನಿಜ, ನೈಸರ್ಗಿಕ ಸಂಪತ್ತು ಹೊಂದಿದೆ.ಈ ಪ್ರದೇಶವನ್ನು ಇತ್ತೀಚೆಗೆ ಕರ್ನಾಟಕ ಸರ್ಕಾರವು ವನ್ಯಜೀವಿ ಅಭಯಾರಣ್ಯವಾಗಿ ಘೋಷಿಸಿದೆ.ಒಟ್ಟಾಗಿ 17,872 ಹೆಕ್ಟೇರ್ ಇರುವ ಕಪ್ಪತಗುಡ್ಡ ಅರಣ್ಯ ಪ್ರದೇಶವು ಗದಗ ತಾಲೂಕಿನಲ್ಲಿ 401.811 ಹೆಕ್ಟೇರ್, ಮುಂಡರಗಿ ತಾಲೂಕಿನಲ್ಲಿ 15,433.673 ಹೆಕ್ಟೇರ್, ಮತ್ತು ಶಿರಹಟ್ಟಿ ತಾಲೂಕಿನಲ್ಲಿ 2016 ಹೆಕ್ಟೇರ್ಗಳಷ್ಟು ಪ್ರದೇಶವನ್ನು ಹಂಚಿಕೊಂಡಿದೆ.ಇದರಲ್ಲಿ 89.92 ಹೆಕ್ಟೇರ್ ಔಷಧೀಯ ಸಸ್ಯಗಳ ಸಂಗ್ರಹಣೆಗೆ ಮಾತ್ರ ಮೀಸಲಿಡಲಾಗಿದೆ. ಈ ಪ್ರದೇಶವನ್ನು ನೂರಾರು ವರ್ಷಗಳಿಂದ ಔಷಧೀಯ ಸಸ್ಯಗಳ ವಾಸಸ್ಥಾನ ಎಂದು ಕರೆಯಲಾಗಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಭಾರತೀಯ ಬಹುರಾಷ್ಟ್ರೀಯ, ಸಾರ್ವಜನಿಕ ವಲಯದ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಶಾಸನಬದ್ಧ ಸಂಸ್ಥೆಯಾಗಿದೆ. ಇದು ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸರ್ಕಾರಿ ನಿಗಮದ ಶಾಸನಬದ್ಧ ಸಂಸ್ಥೆಯಾಗಿದೆ. ೨೦೧೯ ರ ವಿಶ್ವದ ಅತಿದೊಡ್ಡ ಸಂಸ್ಥೆಗಳ ಫಾರ್ಚೂನ್ ಗ್ಲೋಬಲ್ ೫೦೦ ಪಟ್ಟಿಯಲ್ಲಿ ಎಸ್ಬಿಐ ೨೩೬ ನೇ ಸ್ಥಾನದಲ್ಲಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ. ನಿಜವಾಗಿ ನೋಡಿದರೆ ಗಂಡು ಮತ್ತು ಹೆಣ್ಣು ಕೂಡಿ ಸೃಷ್ಟಿಕಾರ್ಯದಲ್ಲಿ ತೊಡಗುವುದು ಲೈಂಗಿಕ ಕ್ರಿಯೆಯ ಮೂಲಕವೇ ಮತ್ತು ಮಗುವಿಗೆ ಜನ್ಮ ಕೊಡಲು ಸಾಧ್ಯವಾಗುವುದು ಲೈಂಗಿಕ ಕ್ರಿಯೆ ನಡೆಸಿದರೆ ಮಾತ್ರ.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PMKSN, ಅನುವಾದ: ಪ್ರಧಾನಮಂತ್ರಿಗಳ ರೈತ ಗೌರವ ನಿಧಿ) ಭಾರತ ಸರ್ಕಾರದ ಉಪಕ್ರಮವಾಗಿದ್ದು, ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ವರ್ಷಕ್ಕೆ ₹೬೦೦೦(₹೬,೩೦೦ ಅಥವಾ ೨೦೨೦ ರಲ್ಲಿ US$೭೯ ಗೆ ಸಮಾನ) ನೀಡುತ್ತದೆ. ೧ ಫೆಬ್ರವರಿ ೨೦೧೯ ರಂದು ಭಾರತದ ೨೦೧೯ರ ಮಧ್ಯಂತರ ಯೂನಿಯನ್ ಬಜೆಟ್ನಲ್ಲಿ ಪಿಯೂಷ್ ಗೋಯಲ್ ಅವರು ಈ ಉಪಕ್ರಮವನ್ನು ಘೋಷಿಸಿದರು . ಈ ಯೋಜನೆಗೆ ವಾರ್ಷಿಕ ₹೭೫,೦೦೦ ಕೋಟಿ (₹೭೯೦ ಶತಕೋಟಿ ಅಥವಾ ೨೦೨೦ ರಲ್ಲಿ US$೯.೯ ಶತಕೋಟಿಗೆ ಸಮಾನ) ವೆಚ್ಚವಾಗಿದೆ ಮತ್ತು ಡಿಸೆಂಬರ್ ೨೦೧೮ರಿಂದ ಜಾರಿಗೆ ಬಂದಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜಾತ್ಯತೀತತೆ ("ಲೌಕಿಕ", "ಒಂದು ಪೀಳಿಗೆಯ", "ತಾತ್ಕಾಲಿಕ" ಅಥವಾ ಸುಮಾರು 100 ವರ್ಷಗಳ ಅವಧಿಯ ಅರ್ಥವಿರುವ ಲ್ಯಾಟಿನ್ ಸೈಕುಲಮ್ನಿಂದ ಬಂದ "ಜಾತ್ಯತೀತ" ಪದದಿಂದ ಬಂದಿದೆ)ನಿಂದ ಪ್ರತ್ಯೇಕವಾಗಿರುವ ಸ್ಥಿತಿ ಧರ್ಮ, ಅಥವಾ ಯಾವುದೇ ನಿರ್ದಿಷ್ಟ ಧರ್ಮದೊಂದಿಗೆ ಅಥವಾ ವಿರುದ್ಧವಾಗಿ ಪ್ರತ್ಯೇಕವಾಗಿ ಸಂಬಂಧ ಹೊಂದಿಲ್ಲ. [3] ಐತಿಹಾಸಿಕವಾಗಿ, ಜಾತ್ಯತೀತ ಪದವು ಧರ್ಮಕ್ಕೆ ಸಂಬಂಧಿಸಿಲ್ಲ ಅಥವಾ ಸಂಬಂಧ ಹೊಂದಿಲ್ಲ, ಆದರೆ ಇದು ಲ್ಯಾಟಿನ್ ಭಾಷೆಯಲ್ಲಿ ಸ್ವತಂತ್ರವಾದ ಪದವಾಗಿದ್ದು, ಇದು ಯಾವುದೇ ಪ್ರಾಪಂಚಿಕ ಪ್ರಯತ್ನಗಳಿಗೆ ಸಂಬಂಧಿಸಿದೆ. [4] ಆದಾಗ್ಯೂ, ಹೊಸ ಕೊಯೆನ್ ಗ್ರೀಕ್ ನುಡಿಗಟ್ಟು εἰς τοὺς αἰῶνας τῶν αἰώνων (eis toùs aionas ton aiṓnōn) ನ ವಲ್ಗೇಟ್ ಅನುವಾದದಲ್ಲಿ (ಸಿರ್ಕಾ 410) ಹೊಸ ಒಡಂಬಡಿಕೆಯಲ್ಲಿ ಕಂಡುಬರುವಂತೆ, ಸೈಕುಲಾ ಸಕುಲೋರಮ್ (ಸೈಕುಲಾರಮ್ ಸಾಕುಲಮ್ನ ಆನುವಂಶಿಕ ಬಹುವಚನ).
ಭಾರತದ ಧಾರ್ಮಿಕ ಮತ್ತು ಸಾಮಾಜಿಕ ಸುಧಾರಕರು
ಧರ್ಮ ಸುಧಾರಣೆಯು ಈ ಸುಧಾರಕರ ಮುಖ್ಯುದ್ದೇಶವಾಗಿದ್ದರೂ, ಅವರಲ್ಲಿ ಯಾರೂ ಸಂಪೂರ್ಣವಾಗಿ ಧಾರ್ಮಿಕ ಸ್ವರೂಪದಲ್ಲಿರಲಿಲ್ಲ. ಅವರು ಆಕಾಂಕ್ಷೆಯಲ್ಲಿ ಮಾನವತಾವಾದಿಗಳಾಗಿದ್ದರು ಹಾಗೂ ಮೋಕ್ಷ ಮತ್ತು ಪಾರಮಾರ್ಥಿಕತೆಯನ್ನು ಕಾರ್ಯಸೂಚಿಯಾಗಿ ತಿರಸ್ಕರಿಸಿದ್ದರು. ಅದಲ್ಲದೆ ಅವರು ಲೌಕಿಕ ಅಸ್ತಿತ್ವದ ಮೇಲೆ ಕೇಂದ್ರೀಕರಿಸಿದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ಅಥವಾ ಕೆ-ಸಿಇಟಿ ) ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದೆ. ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತದೆ, ಇದು ಕರ್ನಾಟಕದ ಉನ್ನತ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ಇದು ಕರ್ನಾಟಕ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣ ಸಮಯದ ಎಂಜಿನಿಯರಿಂಗ್, ತಂತ್ರಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ, ಕೃಷಿ ಶಿಕ್ಷಣ (ಕೃಷಿ ವಿಜ್ಞಾನ) ಮತ್ತು ಪಶುವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾದ ಆಫ್ಲೈನ್ ಪರೀಕ್ಷೆಯಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.