The most-visited ಕನ್ನಡ Wikipedia articles, updated daily. Learn more...
ಅಂತರಜಾಲ (ಆಂಗ್ಲ: Internet ಇಂಟರ್ನೆಟ್) ಎನ್ನುವುದು ಕಂಪ್ಯೂಟರ್ ನೆಟ್ವರ್ಕ್ಗಳ (ಜಾಲಬಂಧಗಳ) ಒಂದು ನೆಟ್ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್ವರ್ಕ್ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. ಇಂಟರ್ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ತವ್ಯ ಎಂದರೆ ಸಾಮಾನ್ಯವಾಗಿ ಅಥವಾ ನಿರ್ದಿಷ್ಟ ಸಂದರ್ಭಗಳು ಉದ್ಭವಿಸಿದರೆ ಯಾವುದೋ ಕ್ರಿಯೆಯನ್ನು ನೆರವೇರಿಸಲು ಬದ್ಧತೆ ಅಥವಾ ನಿರೀಕ್ಷೆ. ಕರ್ತವ್ಯವು ನೈತಿಕತೆ ಅಥವಾ ನೀತಿಶಾಸ್ತ್ರದ ವ್ಯವಸ್ಥೆಯಿಂದ ಉದ್ಭವಿಸಬಹುದು, ವಿಶೇಷವಾಗಿ ಗೌರವ ಸಂಸ್ಕೃತಿಯಲ್ಲಿ. ಅನೇಕ ಕರ್ತವ್ಯಗಳು ಕಾನೂನಿನಿಂದ ಸೃಷ್ಟಿಯಾಗಿ ಅದರ ಮೇಲೆ ಆಧಾರಿತವಾಗಿರುತ್ತವೆ ಮತ್ತು ಅವನ್ನು ನೆರವೇರಿಸದಿರುವುದಕ್ಕೆ ಕ್ರೋಢೀಕೃತ ಶಿಕ್ಷೆ ಅಥವಾ ಬಾಧ್ಯತೆಯನ್ನು ಒಳಗೊಳ್ಳುತ್ತವೆ.
'ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ಕೃಷ್ಣ ಮತ್ತು ರಾಧೆ ಬಾಲ್ಯದಲ್ಲಿ ಸ್ನೇಹಿತರಾಗಿದ್ದರು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ರೈತನು ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು. ಕೃಷಿಯ ಕಾಲಮಾನ ನವಶಿಲಾಯುಗದಷ್ಟು ಹಿಂದಿನದ್ದು ಎಂದು ನಿರ್ಧರಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಆಪರೇಷನ್ ಸಿಂಧೂರ್ ಎನ್ನುವುದು ೨೦೨೫ರ ಮೇ ತಿಂಗಳಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಒಂದು ಸೇನಾ ಕಾರ್ಯಾಚರಣೆಯಾಗಿದೆ. ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ಈ ಕಾರ್ಯಾಚರಣೆಯನ್ನು ನಡೆಸಲಾಯಿತು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಮೂಗುತಿಯು ಮೂಗಿನ ಮೇಲೆ ಧರಿಸಲಾದ ಒಂದು ಆಭರಣ. ಪ್ರಾಚೀನ ಕಾಲದಿಂದ ಹೆಚ್ಚು ಸಾಮಾನ್ಯವಾಗಿ ಭಾರತೀಯ ಉಪಖಂಡದ ಮಹಿಳೆಯರೊಂದಿಗೆ ಸಂಬಂಧಿಸಲಾದ ಈ ಆಭರಣಗಳನ್ನು ಮೂಗಿನ ಹೊಳ್ಳೆಯ ಪಾರ್ಶ್ವದಲ್ಲಿನ ಒಂದು ಚುಚ್ಚುರಂಧ್ರದ ಮೂಲಕ ಲಗತ್ತಿಸಲಾಗುತ್ತದೆ. ಜಾಗತೀಕರಣ ಮತ್ತು ಭಾರತೀಯ ಫ಼್ಯಾಶನ್ ಹಾಗೂ ಸಂಸ್ಕೃತಿಯ ಹರಡುವಿಕೆಯ ಕಾರಣ, ಇತ್ತೀಚಿನ ದಶಕಗಳಲ್ಲಿ ಮೂಗಿನ ಹೊಳ್ಳೆಯನ್ನು ಚುಚ್ಚಿಸಿಕೊಳ್ಳುವುದು ವಿಶ್ವದಲ್ಲಿ ಜನಪ್ರಿಯವಾಗಿದೆ.
ಟೆಂಪ್ಲೇಟು:Philosophy-sidebar ಸೌಂದರ್ಯಶಾಸ್ತ್ರ ವು ( esthetics ಅಥವಾ æsthetics ಎಂಬ ರೀತಿಯಲ್ಲಿಯೂ ಬರೆಯಬಹುದಾಗಿದೆ) ತತ್ವಶಾಸ್ತ್ರದ ಭಾಗವಾಗಿದ್ದು ಸೌಂದರ್ಯದ ಲಕ್ಷಣ,ಕಲೆ,ಮತ್ತು ಸದಭಿರುಚಿ ಮತ್ತು ಸೃಷ್ಟಿ ಮತ್ತು ಸೌಂದರ್ಯದ ಶ್ಲಾಘನೆಯೊಂದಿಗೆ ವ್ಯವಹರಿಸುತ್ತದೆ. ಇದನ್ನು ವೈಜ್ಞಾನಿಕವಾಗಿ ಸಂವೇದನಾವಾಹಕ ಅಥವಾ ಸಂವೇದನೆಯ-ಭಾವನಾತ್ಮಕ ಮೌಲ್ಯಗಳ ಅಧ್ಯಯನ ಎಂದು ವ್ಯಾಖ್ಯಾನಿಸಲಾಗುತ್ತದೆ, ಕೆಲವೊಮ್ಮೆ ರಸಭಾವ ಮತ್ತು ಅಭಿರುಚಿಯ ತೀರ್ಪು ಎಂದು ಕರೆಯಲಾಗುತ್ತದೆ. ಹೆಚ್ಚು ವಿಶಾಲವಾಗಿ, ಕ್ಷೇತ್ರದಲ್ಲಿನ ಪರಿಣಿತರು ಸೌಂದರ್ಯಶಾಸ್ತ್ರವನ್ನು " ಕಲೆ,ಸಂಸ್ಕೃತಿ,ಮತ್ತು ನಿಸರ್ಗದ ಮೇಲಿನ ಕ್ಲಿಷ್ಟಕರ ಪ್ರತಿಫಲನ", ಎಂದು ವ್ಯಾಖ್ಯಾನಿಸುತ್ತಾರೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ದರ್ಶನ್ (ಜನನ ೧೬ ಫೆಬ್ರವರಿ ೧೯೭೭ ), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು ೧೯೯೦ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು. ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪ
ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪ ವಿಜಯನಗರ ಸಾಮ್ರಾಜ್ಯವು ಒಂದು ಕಾಲದಲ್ಲಿ ಇಡೀ ದಕ್ಷಿಣ ಭಾರತಕ್ಕೇ ಧಾರ್ಮಿಕ ರಕ್ಷಣೆಯನ್ನು ಕೊಟ್ಟ ಕರ್ನಾಟಕದ ರಾಜಮನೆತನ. ಎಲ್ಲ ಕಲೆಗಳಂತೆ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಯೂ ಈ ಕಾಲದಲ್ಲಿ ಪ್ರಾಮುಖ್ಯತೆಯನ್ನು ಪಡೆಯಿತು. ವಿಜಯನಗರ ಕಾಲದ ದೇವಾಲಯಗಳು ದಕ್ಷಿಣ ಭಾರತದ ತುಂಬೆಲ್ಲಾ ಹರಡಿಕೊಂಡಿವೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಎಲ್ಲೋರ ವು (ಮರಾಠಿ:वेरूळ) ಭಾರತದ ರಾಜ್ಯ ಮಹಾರಾಷ್ಟ್ರದ ಔರಂಗಾಬಾದ್ ನಗರದಿಂದ 30 km (19 mi) ನಷ್ಟು ದೂರಕ್ಕೆ ಇರುವ ರಾಷ್ಟ್ರಕೂಟ (ಕನ್ನಡ:ರಾಷ್ಟ್ರಕೂಟ) ಅರಸರಿಂದ ನಿರ್ಮಿಸಲ್ಪಟ್ಟ ಒಂದು ಪುರಾತತ್ವಶಾಸ್ತ್ರದ ಪ್ರದೇಶವಾಗಿದೆ. ಸ್ಮಾರಕ ಗುಹೆಗಳಿಗೆ ಜನಪ್ರಿಯವಾಗಿರುವ ಎಲ್ಲೋರವು ಪ್ರಪಂಚದ ಆಸ್ತಿಯ ತಾಣವಾಗಿದೆ. ಎಲ್ಲೋರವು ಭಾರತೀಯ ಕಲ್ಲಿನಿಂದ ಕೆತ್ತಿನ ವಾಸ್ತುಶಿಲ್ಪದ ಸಾಕ್ಷ್ಯರೂಪವಾಗಿದೆ.
ತಿಪ್ಪೇಸ್ವಾಮಿ.ಪಿ.ಆರ್(ಜನನ: ೧೨ ಆಗಸ್ಟ್ ೧೯೨೨ ಮರಣ: ಎಪ್ರಿಲ್ 7, 2000) ಚಿತ್ರದುರ್ಗ ಜಿಲ್ಲೆಯ ಹರ್ತಿಕೋಟೆಯಲ್ಲಿ ಜನ್ಮತಳೆದ ಪಿ.ಆರ್. ತಿಪ್ಪೇಸ್ವಾಮಿಯವರಿಂದ ಜಾನಪದ ಕ್ಷೇತ್ರಕ್ಕೆ ಅಸಾಮಾನ್ಯ ಕೊಡುಗೆ ಸಂದಿದೆ. ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಸ್ಥಾಪಿಸಲ್ಪಟ್ಟಿರುವ ಜಾನಪದ ವಸ್ತುಸಂಗ್ರಹಾಲಯದ ಕ್ಯುರೇಟರ್ ಆಗಿ 1977 ರಿಂದ 1983ರ ವರೆಗೆ ಹತ್ತು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ.ಇವರು ಧರ್ಮಸ್ಥಳದಲ್ಲಿರುವ ಮಂಜೂಷಾ ವಸ್ತುಸಂಗ್ರಹಾಲಯದ ಕ್ಯುರೇಟರ್ ಆಗಿ ಕೂಡಾ ಕಾರ್ಯನಿರ್ವಹಿಸಿದ್ದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.