The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬಿಗ್ ಬಾಸ್ ಕನ್ನಡ 12 ಒಂದು ಭಾರತೀಯ ಕನ್ನಡ ಭಾಷೆಯ ರಿಯಾಲಿಟಿ ಟೆಲಿವಿಷನ್ ಗೇಮ್ ಶೋ ನ ಸರಣಿ ಆಗಿದೆ. ಕಿಚ್ಚ ಸುದೀಪ್ ಸತತ ಹನ್ನೆರಡನೇ ಬಾರಿಗೆ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ . ಎಕ್ಸ್ಪೆಟ್ ದ ಅನ್ ಎಕ್ಸ್ಪೆಕೆಟ್ಡ್ ಕಾರ್ಯಕ್ರಮವು ಬನಿಜಯ್ ಅವರ ನಿಯಂತ್ರಣದಲ್ಲಿ ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಿಸುತ್ತಿರುವ ಈ ರಿಯಾಲಿಟಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರದ ಜೊತೆಗೆ ಜಿಯೋಹಾಟ್ಸ್ಟಾರ್ನಲ್ಲಿ 28 ಸೆಪ್ಟೆಂಬರ್ 2025ರಿಂದ ಪ್ರಸಾರವಾಗುತ್ತಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಚಿಕಾಗೊದಲ್ಲಿ ವಿವೇಕಾನಂದರು ಮಾಡಿದ ಭಾಷಣ
೧೮೯೩ ಸೆಪ್ಟೆಂಬರ್ ೧೧ರಂದು ಚಿಕಾಗೊ ಸರ್ವಧರ್ಮ ಸಮ್ಮೇಲನದಲ್ಲಿ ನೀಡಿದ ಉಪನ್ಯಾಸ ಅಮೆರಿಕದ ಸಹೋದರಿಯರೆ ಮತ್ತು ಸಹೋದರರೆ, ನಮಗೆ ನೀವು ನೀಡಿರುವ ಆತ್ಮೀಯವಾದ ಸ್ವಾಗತಕ್ಕೆ ವಂದನೆಗಳು ಸಲ್ಲಿಸಲು ಪ್ರಯತ್ನಿಸುರುವ ಈ ಸಮಯದಲ್ಲಿ ನನ್ನ ಹೃದಯ ಅವರ್ಣನೀಯ ಆನಂದದಿಂದ ತುಂಬಿ ತುಳುಕುತ್ತಿದೆ. ಪ್ರಪಂಚದ ಅತ್ಯಂತ ಪ್ರಾಚೀನವಾದ ಸಂನ್ಯಾಸಿಗಳ ಸಂಘದ ಪರವಾಗಿ ನಿಮಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ವಿವಿಧ ಧರ್ಮಗಳ ಮಾತೆಯ ಪರವಾಗಿ ನಿಮಗೆ ವಂದನೆಗಳು ಅರ್ಪಿಸುತ್ತೇನೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
೧.ಭೂಮಿಯ ಉತ್ತರ ಗೋಲಾರ್ಧದ ಅತಿ ಉದ್ದದ ದಿನ ಹಾಗೂ ಅತಿ ಸಣ್ಣ ರಾತ್ರಿ ಅಥವಾ ದಕ್ಷಿಣ ಗೋಲಾರ್ಧದ ಅತಿ ಚಿಕ್ಕ ದಿನ ಹಾಗೂ ಅತಿ ಉದ್ದದ ರಾತ್ರಿ ಪ್ರಮಾಣದ ಕಾಲವನ್ನು ಹೊಂದಿದ ದಿನ. ಭೂಮಿಯ ಮಕರಸಂಕ್ರಾಂತಿವೃತ್ತದ ಮೇಲೆ ಸೂರ್ಯನು ನೇರವಾಗಿ ಪ್ರಕಾಶಿಸಲಾರಂಭಿಸುವ ಕಾಲ; ಪ್ರತಿ ವರ್ಷ ಡಿಸೆಂಬರ್ ೨೨ರ ಸುಮಾರಿಗೆ ಉತ್ತರಾಯಣವಾಗುತ್ತದೆ. (ಬಲಗಡೆಯ ಚಿತ್ರ ಇದಕ್ಕೆ ವಿರುದ್ಧವಾದ ಜೂನ್ ೨೨ ರ ದಕ್ಷಿಣಾಯನವನ್ನು ತೋರುತ್ತಿದೆ.) ೨.ಹಿಂದೂ ಪಂಚಾಂಗದ ಪ್ರಕಾರ ಪ್ರತಿ ಸಂವತ್ಸರ(ವರ್ಷ)ವನ್ನು ಸೂರ್ಯನ ಸಂಚಲನವನ್ನು ಅನುಸರಿಸಿ,ಎರಡು ಅಯನಗಳಾಗಿ ವಿಂಗಡಿಸಲಾಗಿದೆ.(೧)ಉತ್ತರಾಯಣ.(೨)ದಕ್ಷಿಣಾಯನ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಆದಿ ಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ
ಆದಿ ಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ (ಜನನ : ಜನವರಿ, ೧೮, ೧೯೪೫-ಮರಣ : ಜನವರಿ, ೧೩, ೨೦೧೩) 'ಬಾನಂದೂರಿ'ನ ಚಿಕ್ಕ ಲಿಂಗೇಗೌಡ, ಹಾಗೂ ಮೋಟಮ್ಮ ನವರ ೬ ಮಕ್ಕಳಲ್ಲಿ ಒಬ್ಬರಾಗಿ ಜನಿಸಿದರು. ಗಂಗಾಧರಯ್ಯನವರಿಗೆ, ಮೂರು ಜನ ಸೋದರಿಯರು, ಮತ್ತು ೨ ಜನ ಸಹೋದರರು ಇದ್ದಾರೆ. ಆದಿ ಚುಂಚನಗಿರಿ ಮಠದ ಹೆಸರಿನಲ್ಲಿ ಶಾಲೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ವಿಶ್ವ ಧರ್ಮಗಳ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು
ಟೆಂಪ್ಲೇಟು:Infobox historical event ಸ್ವಾಮಿ ವಿವೇಕಾನಂದರು ವಿಶ್ವ ಧರ್ಮಗಳ ಸಂಸತ್ತಿನಲ್ಲಿ (1893) ಭಾರತ ಮತ್ತು ಹಿಂದೂ ಧರ್ಮವನ್ನು ಪ್ರತಿನಿಧಿಸಿದರು. ಇದು ವಿಶ್ವದ ಮೊದಲ ಧರ್ಮ ಸಂಸತ್ತು ಮತ್ತು ಇದನ್ನು 1893 ರ ಸೆಪ್ಟೆಂಬರ್ 11 ರಿಂದ 27 ರವರೆಗೆ ನಡೆಸಲಾಯಿತು. ಪ್ರಪಂಚದಾದ್ಯಂತದ ಪ್ರತಿನಿಧಿಗಳು ಈ ಸಂಸತ್ತಿನಲ್ಲಿ ಸೇರಿದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.