The most-visited ಕನ್ನಡ Wikipedia articles, updated daily. Learn more...
ಬಿಗ್ ಬಾಸ್ ಕನ್ನಡ 12 ಒಂದು ಭಾರತೀಯ ಕನ್ನಡ ಭಾಷೆಯ ರಿಯಾಲಿಟಿ ಟೆಲಿವಿಷನ್ ಗೇಮ್ ಶೋ ನ ಸರಣಿ ಆಗಿದೆ. ಕಿಚ್ಚ ಸುದೀಪ್ ಸತತ ಹನ್ನೆರಡನೇ ಬಾರಿಗೆ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ . ಎಕ್ಸ್ಪೆಟ್ ದ ಅನ್ ಎಕ್ಸ್ಪೆಕೆಟ್ಡ್ ಕಾರ್ಯಕ್ರಮವು ಬನಿಜಯ್ ಅವರ ನಿಯಂತ್ರಣದಲ್ಲಿ ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಿಸುತ್ತಿರುವ ಈ ರಿಯಾಲಿಟಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರದ ಜೊತೆಗೆ ಜಿಯೋಹಾಟ್ಸ್ಟಾರ್ನಲ್ಲಿ 28 ಸೆಪ್ಟೆಂಬರ್ 2025ರಿಂದ ಪ್ರಸಾರವಾಗುತ್ತಿದೆ.
ಅತಿ ಸಾಮಾನ್ಯವಾಗಿ, ಪರಿಶೀಲನೆಯು ಸಂಘಟಿತ ಪರೀಕ್ಷೆ ಅಥವಾ ವಿಧ್ಯುಕ್ತ ಮೌಲ್ಯಮಾಪನ ಅಭ್ಯಾಸ. ಶಿಲ್ಪಶಾಸ್ತ್ರದ ಚಟುವಟಿಕೆಗಳಲ್ಲಿ ಪರಿಶೀಲನೆಯು ಒಂದು ವಸ್ತು ಅಥವಾ ಚಟುವಟಿಕೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಗುಣಲಕ್ಷಣಗಳಿಗೆ ಅನ್ವಯಿಸಲಾದ ಮಾಪನಗಳು, ಪರೀಕ್ಷೆಗಳು, ಮತ್ತು ಮಾಪಕಗಳನ್ನು ಒಳಗೊಳ್ಳುತ್ತದೆ. ವಸ್ತು ಅಥವಾ ಚಟುವಟಿಕೆ ಈ ಗುರಿಗಳಿಗೆ ಅನುಗುಣವಾಗಿ ಇದೆಯೇ ಎಂದು ನಿರ್ಧರಿಸಲು ಫಲಿತಾಂಶಗಳನ್ನು ಸಾಮಾನ್ಯವಾಗಿ ನಿರ್ದಿಷ್ಟಪಡಿಸಿದ ಅವಶ್ಯಕತೆಗಳು ಮತ್ತು ಮಾನದಂಡಗಳಿಗೆ ಹೋಲಿಸಲಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
೧.ಭೂಮಿಯ ಉತ್ತರ ಗೋಲಾರ್ಧದ ಅತಿ ಉದ್ದದ ದಿನ ಹಾಗೂ ಅತಿ ಸಣ್ಣ ರಾತ್ರಿ ಅಥವಾ ದಕ್ಷಿಣ ಗೋಲಾರ್ಧದ ಅತಿ ಚಿಕ್ಕ ದಿನ ಹಾಗೂ ಅತಿ ಉದ್ದದ ರಾತ್ರಿ ಪ್ರಮಾಣದ ಕಾಲವನ್ನು ಹೊಂದಿದ ದಿನ. ಭೂಮಿಯ ಮಕರಸಂಕ್ರಾಂತಿವೃತ್ತದ ಮೇಲೆ ಸೂರ್ಯನು ನೇರವಾಗಿ ಪ್ರಕಾಶಿಸಲಾರಂಭಿಸುವ ಕಾಲ; ಪ್ರತಿ ವರ್ಷ ಡಿಸೆಂಬರ್ ೨೨ರ ಸುಮಾರಿಗೆ ಉತ್ತರಾಯಣವಾಗುತ್ತದೆ. (ಬಲಗಡೆಯ ಚಿತ್ರ ಇದಕ್ಕೆ ವಿರುದ್ಧವಾದ ಜೂನ್ ೨೨ ರ ದಕ್ಷಿಣಾಯನವನ್ನು ತೋರುತ್ತಿದೆ.) ೨.ಹಿಂದೂ ಪಂಚಾಂಗದ ಪ್ರಕಾರ ಪ್ರತಿ ಸಂವತ್ಸರ(ವರ್ಷ)ವನ್ನು ಸೂರ್ಯನ ಸಂಚಲನವನ್ನು ಅನುಸರಿಸಿ,ಎರಡು ಅಯನಗಳಾಗಿ ವಿಂಗಡಿಸಲಾಗಿದೆ.(೧)ಉತ್ತರಾಯಣ.(೨)ದಕ್ಷಿಣಾಯನ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಅಯ್ಯಪ್ಪನನ್ನು ಧರ್ಮಶಾಸ್ತಾ ಮತ್ತು ಮಣಿಕಂಠ ಎಂದೂ ಕರೆಯುತ್ತಾರೆ, ದಕ್ಷಿಣ ಭಾರತದಲ್ಲಿ ಜನಪ್ರಿಯವಾಗಿರುವ ಹಿಂದೂ ದೇವತೆ, ಅವನನ್ನು ಸಾಕಾರವಾಗಿ ಪರಿಗಣಿಸಲಾಗಿದೆ. ಧರ್ಮ, ಸತ್ಯ ಮತ್ತು ಸದಾಚಾರ ಮತ್ತು ಕೆಟ್ಟದ್ದನ್ನು ತೊಡೆದುಹಾಕಲು ಆಗಾಗ್ಗೆ ಕರೆಯುತ್ತಾರೆ. ಅಯ್ಯಪ್ಪನ ಮೇಲಿನ ಭಕ್ತಿಯು ದಕ್ಷಿಣ ಭಾರತದಲ್ಲಿ ಮೊದಲು ಪ್ರಚಲಿತದಲ್ಲಿದ್ದರೂ, ಅವನ ಜನಪ್ರಿಯತೆಯು ೨೦ ನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರ ಹೆಚ್ಚಾಯಿತು ಹಿಂದೂ ಧರ್ಮಶಾಸ್ತ್ರದ ಪ್ರಕಾರ, ಅವನು ಹರಿಹರ (ವಿಷ್ಣು ಮೋಹಿನಿ, ಮತ್ತು ಶಿವನ ಮಗ).
ಆಭರಣಗಳು ಮನುಷ್ಯನ ಅಲಂಕರಣ ಸಾಧನಗಳಲ್ಲಿ ಒಂದು (ತೊಡುಗೆ); ಅಂಗರಾಗಗಳು (ನೋಡಿ- ಅಂಗರಾಗಗಳು,-ಅಂಗರಾಗಶಾಸ್ತ್ರ) ಮತ್ತು ಉಡುಗೆ ಉಳಿದ ಎರಡು ಸಾಧನಗಳು. ಇವು ವೈಯಕ್ತಿಕ ಶೃಂಗಾರಕ್ಕೆ ಧರಿಸಲಾಗುವ ಬ್ರೋಚುಗಳು, ಉಂಗುರಗಳು, ಕಂಠಹಾರಗಳು, ಕಿವಿಯೋಲೆಗಳು, ಲೋಲಕಗಳು ಮತ್ತು ಕಂಕಣಗಳಂತಹ ಸಣ್ಣ ಅಲಂಕಾರಿಕ ವಸ್ತುಗಳನ್ನು ಒಳಗೊಂಡಿರುತ್ತವೆ. ರತ್ನಾಭರಣಗಳನ್ನು ಮೈ ಮೇಲೆ ಧರಿಸಬಹುದು ಅಥವಾ ಬಟ್ಟೆಗಳಿಗೆ ಲಗತ್ತಿಸಬಹುದು, ಮತ್ತು ಈ ಪದವು ಬಾಳಿಕೆ ಬರುವ ವಸ್ತುಗಳಿಗೆ ಸೀಮಿತವಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಉಡುಗೊರೆಯು ಪಾವತಿಯ ಅಥವಾ ಆದಾಯದ ನಿರೀಕ್ಷೆಯಿಲ್ಲದೆ ಯಾರಿಗಾದರೂ ನೀಡಲಾದ ವಸ್ತು ಆಗಿದೆ.ಒಂದು ವಸ್ತು ಉಡುಗೊರೆಯಾಗಿಲ್ಲ, ಆ ವಸ್ತುವನ್ನು ಸ್ವತಃ ಈಗಾಗಲೇ ಯಾರಿಗೆ ನೀಡಲಾಗಿದೆಯೋ ಅವರ ಒಡೆತನದಲ್ಲಿರುತ್ತದೆ.ಕೊಡುಗೆ ನೀಡುವಿಕೆಯು ಪರಸ್ಪರ ಸಂಬಂಧದ ನಿರೀಕ್ಷೆಯನ್ನು ಒಳಗೊಂಡಿರಬಹುದು, ಉಡುಗೊರೆಯಾಗಿ ಮುಕ್ತವಾಗಿರಬೇಕು. ಅನೇಕ ದೇಶಗಳಲ್ಲಿ, ಹಣ, ಸರಕುಗಳು ಇತ್ಯಾದಿಗಳನ್ನು ಪರಸ್ಪರ ವಿನಿಮಯ ಮಾಡುವ ಕ್ರಿಯೆ ಸಾಮಾಜಿಕ ಸಂಬಂಧಗಳನ್ನು ಉಳಿಸಿಕೊಳ್ಳಬಹುದು ಮತ್ತು ಸಾಮಾಜಿಕ ಒಗ್ಗಟ್ಟುಗೆ ಕೊಡುಗೆ ನೀಡಬಹುದು. ಉಡುಗೊರೆ ಆರ್ಥಿಕತೆಯ ಕಲ್ಪನೆಗೆ ಕೊಡುಗೆ ನೀಡುವ ಆರ್ಥಿಕತೆಯ ಅರ್ಥಶಾಸ್ತ್ರಜ್ಞರು ವಿವರಿಸಿದ್ದಾರೆ.ಉಡುಗೊರೆಯನ್ನು ಇತರ ಸಂತೋಷದ ಅಥವಾ ಕಡಿಮೆ ದುಃಖ ಮಾಡುತ್ತದೆ ಎಂದು ಉಲ್ಲೇಖಿಸಬಹುದು, ವಿಶೇಷವಾಗಿ ಕ್ಷಮೆ ಮತ್ತು ದಯೆ ಸೇರಿದಂತೆ ಪರವಾಗಿ ನೀಡಲಾಗುತ್ತದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸಾಲಿಗ್ರಾಮ'ಎಂಬುವುದು ಒಂದು ಶಿಲೆ ಭೂಮಿಯ ಮೇಲೆ ಕೋಟ್ಯಾಂತರ ವರ್ಷಗಳ ಹಿಂದಿನಿಂದಲೇ ಸಾಲಿಗ್ರಾಮ ಇದೆ. ಪದ್ಮಪುರಾಣದಲ್ಲಿ ಸಾಲಿಗ್ರಾಮ ಶಿಲೆಯ ಬಗ್ಗೆ ಶಿವನು ಈ ರೀತಿ ಹೇಳಿದ್ದಾನೆ. "ಮಹಾಲಿಂಗ ಕೋಟಿಭಿಃ ದೃಷ್ಟಿ ಯದ್ ಫಲಂ ಪೂಜತಿ ಸಾಲಿಗ್ರಾಮ ಶಿಲಾಯಂತು ಏಕಸ್ಯಂ ಇವ ತದ್ಭವೇದ್" ಶಿವನನ್ನು ಲಿಂಗದ ರೂಪದಲ್ಲಿ ಪೂಜಿಸುವುದು ಸಾಮಾನ್ಯ.ಜತೆಗೆ ಪ್ರಪಂಚಾದ್ಯಂತ ಶಿವ ದೇಗುಲಗಳೂ ಇವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಬಿಗ್ ಬಾಸ್ ಕನ್ನಡ ಸೀಸನ್ 11 ಒಂದು ಭಾರತೀಯ ಕನ್ನಡ ಭಾಷೆಯ ರಿಯಾಲಿಟಿ ಟೆಲಿವಿಷನ್ ಗೇಮ್ ಶೋ ಆಗಿದೆ. ಬಿಗ್ ಬಾಸ್ ಕನ್ನಡದ ಹನ್ನೋಂದನೇ ಸೀಸನ್ 29 ಸೆಪ್ಟಂಬರ್ 2024 ರಂದು ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಥಮ ಪ್ರದರ್ಶನ ಕಂಡಿತು. ಬನಿಜಯ್ ಅವರ ನಿಯಂತ್ರಣದಲ್ಲಿ ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಿಸುತ್ತಿರುವ ಈ ರಿಯಾಲಿಟಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರದ ಜೊತೆಗೆ ಜಿಯೋಸಿನಿಮಾದಲ್ಲಿ ಪ್ರಸಾರವಾಗುತ್ತಿತ್ತು .
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ...
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.