The most-visited ಕನ್ನಡ Wikipedia articles, updated daily. Learn more...
ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ...
ಶಿವಕುಮಾರ ಸ್ವಾಮಿ (ಜನನ- ಶಿವಣ್ಣ, ೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. ಹಿಂದೂಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಲಾಲ್ಬಾಗ್,ಕೆಂಪು ತೋಟ, ಅಥವಾ ಲಾಲ್ಬಾಗ್ ಸಸ್ಯೋದ್ಯಾನ, ವರ್ಣರಂಜಿತ ಫಲ-ಪುಷ್ಪ-ಹಣ್ಣು-ಕಾಯಿಗಳಿಗೆ ಪ್ರಸಿದ್ಧವಾದ ಸಸ್ಯೋದ್ಯಾನ, ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿದೆ. ಈ ಉದ್ಯಾನವನವನ್ನು ನಿರ್ಮಿಸಲು ಮೈಸೂರಿನ ಆಡಳಿತ ನಡೆಸುತ್ತಿದ್ದ ಹೈದರಾಲಿ ಸೂಚಿಸಿದ್ದನು. ಪ್ರಸಿದ್ಧ ಗಾಜಿನ ಮನೆಯನ್ನು ಹೊಂದಿದ್ದು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಸಮಯದಲ್ಲಿ ಫಲ ಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು. ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮನುಷ್ಯನ ಮತ್ತು ಪ್ರಾಣಿಗಳ ದೇಹದ ಬೆಳೆವಣಿಗೆಗೆ ಅತ್ಯಾವಶ್ಯಕವಾದ ಪಿಷ್ಟಪದಾರ್ಥಗಳು, ನೈಟ್ರೊಜನ್, ಮೇದಸ್ಸು, ಜೀವಸತ್ವಗಳು, ಲವಣ, ಕ್ಯಾಲ್ಸಿಯಂ, ಫಾಸ್ಫರಸ್ ಮುಂತಾದ ಪೋಷಕಾಂಶಗಳನ್ನು ಒದಗಿಸುವ, ತಿನ್ನಲು ಯೋಗ್ಯವಾದ ಸಸ್ಯಗಳು. ಈ ಸಸ್ಯಗಳ ಕಾಯಿ ಹಣ್ಣುಗಳನ್ನೋ ನೇರವಾಗಿ ಅವುಗಳ ಸೊಪ್ಪನ್ನೋ ಗೆಡ್ಡೆ ಬೇರು ದಿಂಡುಗಳನ್ನೋ ಬಳಸುವುದು ರೂಢಿ. ಈ ಎಲ್ಲ ಅಂಶಗಳೂ ಒಂದೇ ಜಾತಿಯ ಸಸ್ಯ ಅಥವಾ ಸಸ್ಯಭಾಗದಲ್ಲಿ ಕೂಡಿರುವುದಿಲ್ಲ.
ನೇಗಿಲು ಬೀಜ ಬಿತ್ತುವ ಅಥವಾ ಸಸ್ಯ ನೆಡುವ ತಯಾರಿಕೆಯಲ್ಲಿ ಮಣ್ಣನ್ನು ಸಡಿಲಗೊಳಿಸಲು ಅಥವಾ ತಿರುಗಿಸುವ ಸಲುವಾಗಿ ಮಣ್ಣಿನ ಆರಂಭಿಕ ಸಾಗುವಳಿಗಾಗಿ ಕೃಷಿಯಲ್ಲಿ ಬಳಸಲಾದ ಒಂದು ಉಪಕರಣ ಅಥವಾ ಕೃಷಿ ಸಾಮಗ್ರಿ. ಸಾಂಪ್ರದಾಯಿಕವಾಗಿ ನೇಗಿಲುಗಳನ್ನು ಕುದುರೆಗಳು ಅಥವಾ ದನಗಳಂತಹ ಕೆಲಸದ ಪ್ರಾಣಿಗಳು ಎಳೆಯುತ್ತಿದ್ದವು, ಆದರೆ ಆಧುನಿಕ ಕಾಲದಲ್ಲಿ ಟ್ರ್ಯಾಕ್ಟರ್ಗಳು ಎಳೆಯುತ್ತವೆ. ನೇಗಿಲನ್ನು ಕಟ್ಟಿಗೆ, ಕಬ್ಬಿಣ ಅಥವಾ ಉಕ್ಕಿನಿಂದ ತಯಾರಿಸಬಹುದು.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭತ್ತದ ಪದವು ಸಸ್ಯಕ್ಕೂ ಹಾಗೂ ಸಸ್ಯದ ಕಾಳಿಗೂ ಅನ್ವಯಿಸುತ್ತದೆ. ಭತ್ತಕ್ಕೆ ಕನ್ನಡದಲ್ಲಿ ನೆಲ್ಲು ಎಂದು ಸಹ ಇಂಗ್ಲೀಶ್ನಲ್ಲಿ ಪ್ಯಾಡಿ ಬಳಕೆಯಲ್ಲಿದ್ದಾಗ್ಯೂ ರೈಸ್ ಎನ್ನುವ ಪದವನ್ನು ಭತ್ತ (ಕೆಲವೊಮ್ಮೆ ಅನ್ಮಿಲ್ಡ್ ರೈಸ್), ಅಕ್ಕಿ ಹಾಗೂ ಅನ್ನಕ್ಕೂ ಬಳಸಲಾಗುತ್ತದೆ. ಏಷಿಯಾದ ಭತ್ತದ ವೈಜ್ಞಾನಿಕ ಹೆಸರು ಒರಿಜ ಸಟಿವ ಮತ್ತು ಆಫ್ರಿಕಾದ ಬತ್ತದ ವೈಜ್ಞಾನಿಕ ಹೆಸರು ಒರಿಜ ಗ್ಲಾಬಿರ್ರಿಮ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
"'ಜೆಹಾಂಗೀರ್ ಆರ್ಟ್ ಗ್ಯಾಲರಿ"', ಮುಂಬಯಿನ ಒಂದು ಪ್ರತಿಷ್ಠಿತ ವರ್ಣಚಿತ್ರ, ಕಲಾಕಾರರ, ಶಿಲ್ಪ ಕಲಾವಿದರ, ಕಲಾರಸಿಕರ, ಹಾಗೂ ಪ್ರತಿಭಾವಂತ, ಉದಯೋನ್ಮುಖ ಕಲಾವಿದರು ತಮ್ಮ ಕಲಾಕೃತಿಗಳನ್ನು ಇಲ್ಲಿ ಪ್ರದರ್ಶಿಸಬಹುದು. ಹಳದಿ ಬಣ್ಣದ ಕಲ್ಲುಗಳಿಂದ ನಿರ್ಮಾಣಮಾಡಿರುವ, ಸಮರ್ಪಕವಾಗಿ, ಅಚ್ಚುಕಟ್ಟಾಗಿ, ಸಜಾವಟ್ಟಾಗಿರುವ, ಈಗಾಗಲೇ ಪ್ರಸಿದ್ಧಿಪಡೆದ ಕಲಾನಿಪುಣರಿಗೆ, ಹಾಗೂ ಚಿತ್ರಕಲೆಯಲ್ಲಿ ಹೆಚ್ಚಿನದನ್ನು ಸಾಧಿಸಿ, ಅದನ್ನು ಕಲಾ-ರಸಿಕರಿಗೆ, ತೋರಿಸಬಯಸುವವರಿಗೆ, "ಕಲಾಕ್ಯಾನ್ ವಾಸ್," ನ್ನು ಮಾರಾಟಮಾಡುವರಿಗೆ, "ಕಲಾಕಾಶಿ" ಎಂದು ಹೆಸರು ಗಳಿಸಿದೆ.