The most-visited ಕನ್ನಡ Wikipedia articles, updated daily. Learn more...
ಟಂಕಸಾಲೆ ಯಾವುದೇ ಸರ್ಕಾರದಿಂದ ಅಂಗೀಕೃತವಾದ ಮಾದರಿಗಳನ್ನು ಅನುಸರಿಸಿ ಆ ಸರ್ಕಾರದ ಅಧಿಕೃತ ಆಜ್ಞೆಯ ಮೇರೆಗೆ ನಾಣ್ಯಗಳನ್ನು ಮುದ್ರಿಸುವ ಕರ್ಮಾಗಾರ (ಮಿಂಟ್). ಹಾಗೆ ಅಧಿಕೃತ ನಾಣ್ಯಗಳನ್ನು ಮುದ್ರಿಸಿದ ಮೊತ್ತಮೊದಲ ಟಂಕಸಾಲೆ ಸ್ಥಾಪನೆಗೊಂಡದ್ದು ಇಂದಿಗೆ ಸುಮಾರು ಇಪ್ಪತ್ತೇಳು ಶತಮಾನಗಳಷ್ಟು ಹಿಂದೆ ಮಾತ್ರ. ಇತಿಹಾಸಕಾಲದ ಆರಂಭಕಾಲದಲ್ಲಿ ವ್ಯಾಪಾರ ಕ್ಷೇತ್ರದಲ್ಲಿ ವಸ್ತುವಿನಿಮಯ ಪದ್ಧತಿಯೇ ಪ್ರಚಾರದಲ್ಲಿತ್ತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
'ಮಲಾಲ ಯೂಸಫ್ ಝಾಯಿ',(ಜ: ೧೨ ಜುಲೈ, ೧೯೯೭) ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ 'ಸ್ವಾತ್ ಜಿಲ್ಲೆ'ಯ ಮಿಂಗೋರಗ್ರಾಮದ ಒಂದು ಶಾಲೆಯ ವಿದ್ಯಾರ್ಥಿನಿ ಮತ್ತು ಶಿಕ್ಷಣ ಕಾರ್ಯಕರ್ತೆ. ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ತಾಲಿಬಾನ್ ಸಂಘಟನೆಯು ನಿಷೇಧಿಸಿರುವ 'ಸ್ವಾತ್ ಕಣಿವೆ'ಯಲ್ಲಿನ ಹುಡುಗಿಯರ ಶಿಕ್ಷಣ, ಮತ್ತು ಮಹಿಳಾ ಹಕ್ಕುಗಳಪರ ತನ್ನ ಕ್ರಿಯಾತ್ಮಕ ಹೋರಾಟಕ್ಕಾಗಿ ಅವಳು ಹೆಸರುವಾಸಿಯಾಗಿದ್ದಾಳೆ. ೨೦೧೩ರಲ್ಲಿ ಮಲಾಲ ಸಖರೊವ್ ಪ್ರೈಜ್ ಫಾರ್ ಫ್ರೀಡಮ್ ಆಫ್ ಥಾಟ್(ಯೋಚನೆಯ ಸ್ವಾತಂತ್ರ್ಯಕ್ಕೆ ಸಖರೊವ್ ಪ್ರಶಸ್ತಿ) ದೊರಕಿತು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಹಿಂದೂ ಧರ್ಮ ದಲ್ಲಿ, ಸೂರ್ಯದೇವ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] Error: {{Lang}}: text has italic markup (help); ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು, ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು, ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಬಿ.ಆರ್.ಲಕ್ಷ್ಮಣರಾವ್, ಅವರು ಕನ್ನಡದ ಪ್ರೇಮಕವಿ, ನವೋದಯ, ನವ್ಯ, ಬಂಡಾಯ ಮೊದಲಾದ ಯಾವ ಗುಂಪಿಗೂ ಸೇರದ ಕವಿ, ಭಾವಗೀತೆಗಳ ಕವಿ. ಲಕ್ಷ್ಮಣರಾಯರ 'ಅಮ್ಮ, ನಿನ್ನ ಎದೆಯಾಳದಲ್ಲಿ',‘ಸುಬ್ಭಾಭಟ್ಟರ ಮಗಳೇ’,‘ನಾ ಚಿಕ್ಕವನಾಗಿದ್ದಾಗ ಅಪ್ಪ ಹೇಳುತ್ತಿದ್ದರು',' ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರು' ಮುಂತಾದ ಕವಿತೆಗಳು ಜನಪ್ರಿಯವಾಗಿವೆ. ಈ ಪದ್ಯಗಳು, ಹಲವು ವೇಳೆ ಕೆ.ಎಸ್.ನ ಅವರ ‘ಶ್ಯಾನುಭೋಗರ ಮಗಳು’, ‘ರಾಯರು ಬಂದರು ಮಾವನ ಮನೆಗೆ’ ಪದ್ಯಗಳಿಗೆ ಸರಿಹೋಲಿಕೆಯಂತಿವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸೆಳೆಖಾನೆಯು ಅದರ ಒಳಗಿರುವ ವಸ್ತುಗಳನ್ನು ಪಡೆಯಲು ಸಮತಲವಾಗಿ ಸೆಳೆಯಬಲ್ಲ ರೀತಿಯಲ್ಲಿ ಪೀಠೋಪಕರಣದ ಒಂದು ಭಾಗದಲ್ಲಿ ಸರಿಹೊಂದುವ ಪೆಟ್ಟಿಗೆ ಆಕಾರದ ಒಂದು ಧಾರಕ. ಸೆಳೆಖಾನೆಗಳನ್ನು ವಿವಿಧ ವಸ್ತುಗಳನ್ನು ಬಳಸಿ ವಿವಿಧ ರೀತಿಗಳಲ್ಲಿ ನಿರ್ಮಿಸಬಹುದು. ಕಟ್ಟಿಗೆ ಮತ್ತು ವಿವಿಧ ಕಟ್ಟಿಗೆ ಸಂಯುಕ್ತಗಳು, ಲೋಹ ತಗಡು, ಮತ್ತು ಪ್ಲಾಸ್ಟಿಕ್ ಸಾಮಾನ್ಯವಾಗಿ ಸೆಳೆಖಾನೆಗಳು ಮತ್ತು ಸೆಳೆಖಾನೆಗಳನ್ನು ಹೊಂದಿರುವ ಪೀಠೋಪಕರಣಗಳನ್ನು ತಯಾರಿಸಲು ಬಳಸಲಾಗುವ ವಸ್ತುಗಳು.
ವಿಶೇಷ ಆರ್ಥಿಕ ವಲಯ (SEZ ) ಎಂಬುದೊಂದು ಭೌಗೋಳಿಕ ಪ್ರದೇಶವಾಗಿದ್ದು, ದೇಶವೊಂದರ ವಿಶಿಷ್ಟ ಅಥವಾ ರಾಷ್ಟ್ರೀಯ ಕಾನೂನುಗಳಿಗಿಂತ ಹೆಚ್ಚಿನ ರೀತಿಯಲ್ಲಿ ಮುಕ್ತ-ಮಾರುಕಟ್ಟೆ-ಉದ್ದೇಶಿತವಾಗಿರುವ ಆರ್ಥಿಕ ಮತ್ತು ಇತರ ಕಾನೂನುಗಳನ್ನು ಅದು ಹೊಂದಿರುತ್ತದೆ. ವಿಶೇಷ ಆರ್ಥಿಕ ವಲಯವೊಂದರ ಒಳಗೆ "ರಾಷ್ಟ್ರವ್ಯಾಪಿ" ಕಾನೂನುಗಳು ಸ್ಥಗಿತಗೊಳಿಸಲ್ಪಟ್ಟಿರಲು ಸಾಧ್ಯವಿದೆ. 'SEZ' ವರ್ಗವು ಹೆಚ್ಚು ನಿರ್ದಿಷ್ಟವಾಗಿರುವ ವಲಯದ ಬಗೆಗಳ ಒಂದು ವ್ಯಾಪಕ ಶ್ರೇಣಿಯನ್ನು ಒಳಗೊಳ್ಳುತ್ತದೆ; ಅಂದರೆ ಮುಕ್ತ ವ್ಯಾಪಾರದ ವಲಯಗಳು (ಫ್ರೀ ಟ್ರೇಡ್ ಜೋನ್ಸ್-FTZ), ರಫ್ತು ಸಂಸ್ಕರಣಾ ವಲಯಗಳು (ಎಕ್ಸ್ಪೋರ್ಟ್ ಪ್ರೊಸೆಸಿಂಗ್ ಜೋನ್ಸ್-EPZ), ಮುಕ್ತ ವಲಯಗಳು (ಫ್ರೀ ಜೋನ್ಸ್-FZ), ಕೈಗಾರಿಕಾ ವಸಾಹತುಗಳು (ಇಂಡಸ್ಟ್ರಿಯಲ್ ಎಸ್ಟೇಟ್ಸ್-IE), ಮುಕ್ತ ರೇವುಪಟ್ಟಣಗಳು, ನಗರ ಪ್ರದೇಶದ ಉದ್ದಿಮೆ ವಲಯಗಳು ಮತ್ತು ಇತರ ವಲಯಗಳು ಇದರಲ್ಲಿ ಸೇರಿಕೊಂಡಿರುತ್ತವೆ.
ಸುಮಾರು ನಾಲ್ಕು ಲಕ್ಷ ಪುಸ್ತಕಗಳನ್ನೂ, ನಾಣ್ಯ ಸಂಗ್ರಹ, ಅಂಚೆ ಚೀಟಿಗಳ ಸಂಗ್ರಹ, ಲಗ್ನಪತ್ರಿಕೆಗಳ ಸಂಗ್ರಹವನ್ನೂ ತನ್ನ ಒಡಲಿನಲ್ಲಿರಿಸಿಕೊಂಡಿರುವ ಮಂಡ್ಯದ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯಲ್ಲಿರುವ ಪುಸ್ತಕದ ಮನೆಯನ್ನು ಸಾರ್ವಜನಿಕರಿಗಾಗಿ, ಗ್ರಾಮೀಣ ಪ್ರದೇಶದ ಪುಸ್ತಕ ಪ್ರಿಯರಿಗಾಗಿ ನೀಡಿರುವ "ಎಂ. ಅಂಕೇಗೌಡ"ರು ಸಾಮಾನ್ಯರಲ್ಲಿ ಅಸಾಮಾನ್ಯರು. ಅಂಕೇಗೌಡರು ಪಾಂಡವಪುರ ತಾಲ್ಲೂಕಿನ ಚಿನಕುರಳಿಯಲ್ಲಿ ಹುಟ್ಟಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.