The most-visited ಕನ್ನಡ Wikipedia articles, updated daily. Learn more...
ಜನವರಿ ೩೦,೧೯೪೮ - ಭಾರತದೇಶದ ರಾಷ್ತ್ರಪಿತರೆನಿಸಿಕೊಂಡ ಮಹಾತ್ಮ ಗಾಂಧಿಯವರು ಮರಣ ಹೊಂದಿದ ದಿನ .ಈ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ. ಅಹಿಂಸೆ ಮತ್ತು ಶಾಂತಿ ಎಂಬ ಅಸ್ತ್ರದಿಂದಲೇ ಭಾರತಕ್ಕೆ ಸ್ವಾಂತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಾ ಗಾಂಧಿಯವರ ಮರಣ ದಿನವನ್ನು ಭಾರತದಾದ್ಯಂತ ಈ ಹುತಾತ್ಮರ ದಿನ ಎಂದು ಆಚರಿಸಲಾಗುತ್ತದೆ. ತಮ್ಮ ಬದುಕೇ ತಮ್ಮ ಸಂದೇಶ ಎಂದು ಬದುಕಿನ ಪ್ರತಿ ಗಳಿಗೆಯನ್ನು ಮೌಲ್ಯದ ಜೊತೆಯಲ್ಲೇ ಬದುಕಿದ, ಸತ್ಯಕ್ಕಾಗಿ ತಮ್ಮ ಜೀವನವನ್ನೇ ಪ್ರಯೋಗಕ್ಕೊಡ್ಡಿಕೊಂಡ ರಾಷ್ಟ್ರಪಿತ, ಮೋಹನದಾಸ ಕರಮಚಂದ ಗಾಂಧಿ ಹುಟ್ಟಿದ್ದು ಗುಜರಾತಿನ ಪೋರಬಂದರಿನಲ್ಲಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಚೆನ್ನಣ್ಣ ವಾಲೀಕಾರರು ಕವಿ, ವಿಮರ್ಶಕ, ಸಂಶೋಧಕ, ವಿದ್ವಾಂಸ, ನಾಟಕಗಾರ, ಅಧ್ಯಾಪಕ, ಪ್ರವಾಚಕ, ಕಾದಂಬರಿಗಾರ, ಪ್ರಾಧ್ಯಾಪಕರಾಗಿದ್ದು, ಇದುವರೆವಿಗೂ ಸುಮಾರು ಐವತ್ತಕ್ಕೂ ಹೆಚ್ಚು ಕೃತಿ ಪ್ರಕಟಿಸಿದ್ದಾರೆ.ಚೆನ್ನಣ್ಣ ವಾಲೀಕಾರ ಇವರು ಬರೆದ 1030 ಪುಟಗಳ ಬೃಹತ್ ಪ್ರಾಯೋಗಿಕ ಕಾವ್ಯ 'ವ್ಯೋಮಾವ್ಯೋಮ'. ಮೊದಲ ಪುಟದಿಂದ ಕೊನೆಯ ಪುಟದವರೆಗೆ ಒಂದೇ ವಾಕ್ಯ, ಎಲ್ಲೂ ಪೂರ್ಣವಿರಾಮ, ಅಲ್ಪವಿರಾಮ, ಪ್ರಶ್ನಾರ್ಥಕ ಇತ್ಯಾದಿ ಬಳಸದಿರುವುದು ಇದರ ವಿಶೇಷ ಪ್ರಯೋಗ. ಬಂಡಾಯ ಸಂಘಟನೆಯಲ್ಲಿ ಚೆನ್ನಣ್ಣ ಸಂಪೂರ್ಣವಾಗಿ ತೊಡಗಿಸಿಕೊಂಡವರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಭಾರತದಲ್ಲಿ ವಿಶ್ವವಿದ್ಯಾಲಯಗಳ ಸಮನ್ವಯತೆ ಮತ್ತು ಶಿಕ್ಷಣದ ಗುಣಮಟ್ಟ ನಿರ್ವಹಣೆಗಾಗಿ 1956ರಲ್ಲಿ ಕೇಂದ್ರ ಸರಕಾರದಿಂದ ಸ್ಥಾಪಿಸಲ್ಪಟ್ಟ ಒಂದು ಶಾಸನಬದ್ಧ ಸಂಸ್ಥೆಯಾಗಿದೆ. ಇದು ಭಾರತದಲ್ಲಿ ವಿಶ್ವವಿದ್ಯಾಲಯಗಳಿಗೆ ಮಾನ್ಯತೆ ನೀಡುತ್ತದೆ ಮತ್ತು ಅಂತಹ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ವಿಕಾಸಕ್ಕಾಗಿ ಧನ ಸಹಾಯ ಮಾಡುತ್ತದೆ. ಖ್ಯಾತ ಶಿಕ್ಷಣತಜ್ಞರಾದ ಪ್ರೊ.ವೇದ ಪ್ರಕಾಶ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅದ್ಯಕ್ಷರಾಗಿ ೧೮ ಜನೇವರಿ ೨೦೧೩ರಂದು ನೇಮಕಗೊಂಡಿದ್ದಾರೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಜಯದೇವಿತಾಯಿ ಲಿಗಾಡೆ -ಕನ್ನಡದ ಹಾಗುಮರಾಠಿ ಭಾಷೆಯ ಸಾಹಿತಿಗಳು, ಆಧ್ಯಾತ್ಮ ಚಿಂತನಕಾರರು. ಕುಟುಂಬವತ್ಸಲೆ, ಸಾಹಿತ್ಯಸಾಧಕಿ, ಸಮಾಜಸೇವಕಿ ಹೀಗೆ ತ್ರಿವೇಣಿ ಸಂಗಮವಾಗಿದ್ದ ಈ ಜಂಗಮತಾಯಿ ತಾಯ್ನುಡಿಯ ಸೇವೆಗಾಗಿ ಶ್ರಮಿಸಿ ದವರು. ಕನ್ನಡ ನುಡಿಗೆ, ಕನ್ನಡ ನಾಡಿಗೆ ತನ್ನನ್ನು ಅರ್ಪಿಸಿಕೊಂಡು ಅಜರಾಮರ ಕೀರ್ತಿಪಾತ್ರರಾದ ಶ್ರೀಮತಿ ಜಯದೇವಿ ತಾಯಿ ಲಿಗಾಡೆ ಅವರ ಜೀವನ ದರ್ಶನವೆಂದರೆ ಅದೊಂದು ಯಶೋಗಾಥೆ.
ಕರ್ನಾಟಕ ಜನಪದ ನೃತ್ಯ : ಹಾಡು, ಕಥೆಗಳಂತೆ ನೃತ್ಯವೂ ಜಾನಪದ ಸಂಪತ್ತಿನ ಒಂದು ಮುಖ್ಯ ಅಂಗ. ಕರ್ನಾಟಕದ ವಿವಿಧ ಭಾಗಗಳಲ್ಲಿ ಅನೇಕ ರೀತಿಯ ನೃತ್ಯವಿಧಾನಗಳು ಬಳಕೆಯಲ್ಲಿವೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ- ಈ ಪ್ರದೇಶಗಳಲ್ಲಿ ವೈಶಿಷ್ಟ್ಯ ಪಡೆದಿರುವ ನೃತ್ಯಗಳಲ್ಲಿ ಮುಖ್ಯವಾದವನ್ನು ಮಾತ್ರ ಇಲ್ಲಿ ಪರಿಗಣಿಸಲಾಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದಲ್ಲಿ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಸಮಾಜದಲ್ಲಿ ಹುಡುಗಿಯರು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಾರಂಭಿಸಿತು. "ಹೆಣ್ಣು ಮಗುವನ್ನು ಉಳಿಸಿ" ಪ್ರಚಾರ , ಮಕ್ಕಳ ಲಿಂಗ ಅನುಪಾತಗಳು ಮತ್ತು ಹೆಣ್ಣುಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸುವ ಕುರಿತು ಜಾಗೃತಿ ಅಭಿಯಾನಗಳನ್ನು ಒಳಗೊಂಡಂತೆ ಸಂಘಟಿತ ಕಾರ್ಯಕ್ರಮಗಳೊಂದಿಗೆ ದಿನವನ್ನು ಆಚರಿಸಲಾಗುತ್ತದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಮಳೆಬಿಲ್ಲು (ಅಥವಾ ಕಾಮನಬಿಲ್ಲು) ಎಂಬುದೊಂದು ದೃಗ್ವೈಜ್ಞಾನಿಕ ಮತ್ತು ಪವನಶಾಸ್ತ್ರದ ವಿದ್ಯಮಾನವಾಗಿದ್ದು, ಭೂಮಿಯ ವಾತಾವರಣದಲ್ಲಿನ ಸಣ್ಣಹನಿಗಳ ಮೇಲೆ ಸೂರ್ಯನು ಬೆಳಗಿದಾಗ ಆಕಾಶದಲ್ಲಿ ಬೆಳಕಿನ ಬಣ್ಣಗಳ ಪಟ್ಟಿಯೊಂದು ಕಾಣಿಸುವಂಥ ಪರಿಣಾಮವನ್ನು ಇದು ಉಂಟು ಮಾಡುತ್ತದೆ. ಒಂದು ಬಹುವರ್ಣದ ಬಿಲ್ಲಿನ ಸ್ವರೂಪವನ್ನು ತಳೆಯುವ ಇದು ತನ್ನ ಹೊರಗಿನ ಭಾಗದಲ್ಲಿ ಕೆಂಪು ಬಣ್ಣವನ್ನೂ ಒಳಗಿನ ವಿಭಾಗದಲ್ಲಿ ನೇರಿಳೆ ಬಣ್ಣವನ್ನೂ ಹೊಂದಿರುತ್ತದೆ. ಒಂದು ಅಖಂಡವಾಗಿರುವ ಬಣ್ಣಗಳ ರೋಹಿತವನ್ನು (ಬಣ್ಣಗಳ ಪಟ್ಟಿಯನ್ನು) ಒಂದು ಮಳೆಬಿಲ್ಲು ವ್ಯಾಪಿಸಿಕೊಳ್ಳುತ್ತದೆ; ಇದರ ವಿಶಿಷ್ಟ-ವಿಸ್ಪಷ್ಟ ಪಟ್ಟಿಗಳು ಮಾನವನ ವರ್ಣ ಕಲ್ಪನಾಚಿತ್ರದ ಒಂದು ಕಲಾಕೃತಿಯಂತೆ ಭಾಸವಾಗುತ್ತವೆ.
ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ಧಾರ್ಮಿಕ ಮತ್ತು ಸಾಮಾಜಿಕ ಸುಧಾರಕರು
ಧರ್ಮ ಸುಧಾರಣೆಯು ಈ ಸುಧಾರಕರ ಮುಖ್ಯುದ್ದೇಶವಾಗಿದ್ದರೂ, ಅವರಲ್ಲಿ ಯಾರೂ ಸಂಪೂರ್ಣವಾಗಿ ಧಾರ್ಮಿಕ ಸ್ವರೂಪದಲ್ಲಿರಲಿಲ್ಲ. ಅವರು ಆಕಾಂಕ್ಷೆಯಲ್ಲಿ ಮಾನವತಾವಾದಿಗಳಾಗಿದ್ದರು ಹಾಗೂ ಮೋಕ್ಷ ಮತ್ತು ಪಾರಮಾರ್ಥಿಕತೆಯನ್ನು ಕಾರ್ಯಸೂಚಿಯಾಗಿ ತಿರಸ್ಕರಿಸಿದ್ದರು. ಅದಲ್ಲದೆ ಅವರು ಲೌಕಿಕ ಅಸ್ತಿತ್ವದ ಮೇಲೆ ಕೇಂದ್ರೀಕರಿಸಿದರು.
ಕರ್ನಾಟಕ ರಾಜ್ಯ ಹೆದ್ದಾರಿಗಳ ಪಟ್ಟಿ
ರಾಜ್ಯ ಹೆದ್ದಾರಿಗಳು ರಾಜ್ಯದ ಪ್ರಮುಖ ಮಾರ್ಗಗಳಾಗಿದ್ದು, ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರ ಹಾಗೂ ಪಟ್ಟಣಗಳನ್ನು ಸಂಪರ್ಕಿಸುತ್ತವಲ್ಲದೆ, ರಾಜ್ಯದಲ್ಲಿನ ಮತ್ತು ನೆರೆಯ ರಾಜ್ಯಗಳಲ್ಲಿನ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸುತ್ತವೆ.