The most-visited ಕನ್ನಡ Wikipedia articles, updated daily. Learn more...
ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕರ್ನಾಟಕ ಜನಪದ ನೃತ್ಯ : ಹಾಡು, ಕಥೆಗಳಂತೆ ನೃತ್ಯವೂ ಜಾನಪದ ಸಂಪತ್ತಿನ ಒಂದು ಮುಖ್ಯ ಅಂಗ. ಕರ್ನಾಟಕದ ವಿವಿಧ ಭಾಗಗಳಲ್ಲಿ ಅನೇಕ ರೀತಿಯ ನೃತ್ಯವಿಧಾನಗಳು ಬಳಕೆಯಲ್ಲಿವೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ- ಈ ಪ್ರದೇಶಗಳಲ್ಲಿ ವೈಶಿಷ್ಟ್ಯ ಪಡೆದಿರುವ ನೃತ್ಯಗಳಲ್ಲಿ ಮುಖ್ಯವಾದವನ್ನು ಮಾತ್ರ ಇಲ್ಲಿ ಪರಿಗಣಿಸಲಾಗಿದೆ.
ಚುಕ್ಕಾಣಿಗನು ಒಂದು ಹಡಗು, ಹಾಯಿದೋಣಿ, ಜಲಾಂತರ್ಗಾಮಿ ನೌಕೆ, ಇತರ ಬಗೆಯ ಕಡಲ ನೌಕೆ, ಅಥವಾ ಬಾಹ್ಯಾಕಾಶ ನೌಕೆಯನ್ನು ನಿಯಂತ್ರಿಸುವ ಒಬ್ಬ ವ್ಯಕ್ತಿ. ಸಣ್ಣ ನೌಕೆಗಳಲ್ಲಿ, ವಿಶೇಷವಾಗಿ ಖಾಸಗಿ ಒಡೆತನದ ವಾಣಿಜ್ಯಿಕವಲ್ಲದ ನೌಕೆಗಳಲ್ಲಿ, ನೌಕಾಧಿಪತಿ ಮತ್ತು ಚುಕ್ಕಾಣಿಗನ ಕಾರ್ಯಗಳನ್ನು ಒಬ್ಬ ವ್ಯಕ್ತಿಯಲ್ಲಿ ಸಂಯೋಜಿಸಬಹುದು. ಹೆಚ್ಚು ದೊಡ್ಡ ನೌಕೆಗಳಲ್ಲಿ, ಪಹರೆಯ ಪ್ರತ್ಯೇಕ ಅಧಿಕಾರಿಯಿರುತ್ತಾನೆ.
ಚಿಕ್ಕಕಾಲ್ಯ ನಾರಾಯಣಪ್ಪ ಅಶ್ವತ್ಥನಾರಾಯಣ (ಜನನ 2 ಫೆಬ್ರವರಿ 1969) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಅವರು 20 ಆಗಸ್ಟ್ 2019 ರಿಂದ 13 ಮೇ 2023 ರವರೆಗೆ ಕರ್ನಾಟಕ ಸರ್ಕಾರದಲ್ಲಿ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾಗಿದ್ದರು. ಅವರು 2019ರ ಆಗಸ್ಟ್ 20ರಿಂದ 2021ರ ಜುಲೈ 26ರವರೆಗೆ ಕರ್ನಾಟಕದ 8ನೇ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು ಮಲ್ಲೇಶ್ವರಂ ಕ್ಷೇತ್ರ ಭಾರತೀಯ ಜನತಾ ಪಕ್ಷ (ಬಿಜೆಪಿ) ಪ್ರತಿನಿಧಿಸುವ ಕರ್ನಾಟಕ ವಿಧಾನಸಭೆ ಸದಸ್ಯರಾಗಿದ್ದಾರೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು. ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ.
ಆಂಧ್ರ ಪ್ರದೇಶ (ತೆಲುಗು:ఆంధ్ర ప్రదేశ్) (, ಭಾಷಾಂತರ: ಆಂಧ್ರದ ಪ್ರಾಂತ್ಯ, ಸಂಕ್ಷಿಪ್ತವಾಗಿ ಎ.ಪಿ. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದ ಆಧಾರದಲ್ಲಿ ಭಾರತದ ರಾಜ್ಯಗಳ ವಿಸ್ತೀರ್ಣದಲ್ಲಿ ಎಂಟನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯ ಆಧಾರದಲ್ಲಿ ಭಾರತದ ರಾಜ್ಯಗಳ ಜನಸಂಖ್ಯೆಯಲ್ಲಿ ಹತ್ತನೇ ಅತಿ ದೊಡ್ಡ ರಾಜ್ಯವಾಗಿದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕಬ್ಬಿಣ ಮತ್ತು ಪ್ಲಾಟಿನಂ ಲೋಹಗಳ ಹೊರತು ಸಾಮಾನ್ಯವಾಗಿ ಇತರ ಎಲ್ಲಾ ಲೋಹಗಳು ಪಾದರಸದಲ್ಲಿ ವಿಲೀನವಾಗುತ್ತವೆ. ಇಂಥ ಲೋಹ ಸಂಯೋಜನೆಗೆ (ಮಿಶ್ರಲೋಹ) ಅಮಾಲ್ಗಂ ಎಂದು ಹೆಸರು. ಲೋಹ ಮತ್ತು ಪಾದರಸದ ಸಂಪರ್ಕಮಾತ್ರದಿಂದ, ಅವೆರಡನ್ನೂ ದುರ್ಬಲ ಆಮ್ಲದಲ್ಲಿಟ್ಟಾಗ, ಲೋಹಲವಣದ ದ್ರಾವಣಕ್ಕೆ ಪಾದರಸವನ್ನು ಸೇರಿಸಿದಾಗ ಅಥವಾ ಅದನ್ನು ಪಾದರಸದ ಕ್ಯಾಥೋಡಿನ ನೆರವಿನಿಂದ ವಿದ್ಯುದ್ವಿಭಜನೆಗೆ ಒಳಪಡಿಸಿದಾಗ ಅಮಾಲ್ಗಂಗಳು ಫಲಿಸುತ್ತವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸುಗಂಧ ದ್ರವ್ಯವು ಮಾನವ ಶರೀರ, ಪ್ರಾಣಿಗಳು, ಆಹಾರ, ವಸ್ತುಗಳು, ಇರುಜಾಗಗಳಿಗೆ ಒಂದು ಆಹ್ಲಾದಕರ ವಾಸನೆಯನ್ನು ಕೊಡಲು ಬಳಸಲಾಗುವ ಪರಿಮಳಯುಕ್ತ ಸಾರಭೂತ ತೈಲಗಳು ಅಥವಾ ಪರಿಮಳ ಸಂಯುಕ್ತಗಳು, ಸ್ಥಿರಕಾರಕಗಳು ಹಾಗೂ ದ್ರಾವಕಗಳ ಒಂದು ಮಿಶ್ರಣ. ಸುಗಂಧ ದ್ರವ್ಯಗಳು, ಪ್ರಾಚೀನ ಪಥ್ಯಗಳ ಮೂಲಕ ಅಥವಾ ಪುರಾತತ್ವ ಉತ್ಖನನಗಳಿಂದ, ಕೆಲವು ಅತ್ಯಂತ ಮುಂಚಿನ ಮಾನವ ನಾಗರಿಕತೆಗಳಲ್ಲಿ ಅಸ್ತಿತ್ವದಲ್ಲಿದ್ದವೆಂದು ತಿಳಿದುಬಂದಿದೆ. ಆಧುನಿಕ ಸುಗಂಧದ್ರವ್ಯ ತಯಾರಿಕೆಯು ಹಿಂದೆ ಕೇವಲ ನೈಸರ್ಗಿಕ ಪರಿಮಳಕಾರಕಗಳಿಂದ ಮಾತ್ರ ಪಡೆಯಲಾಗದ ವಾಸನೆಗಳಿರುವ ಸುಗಂಧ ದ್ರವ್ಯಗಳ ಸಂಯೋಜನೆಗೆ ಅವಕಾಶ ನೀಡಿದ ವನಿಲಿನ್ ಅಥವಾ ಕೂಮರಿನ್ ಅಂತಹ ಪರಿಮಳ ಸಂಯುಕ್ತಗಳ ವಾಣಿಜ್ಯ ಸಂಶ್ಲೇಷಣೆಯೊಂದಿಗೆ ೧೯ನೆಯ ಶತಮಾನದ ಉತ್ತರಾರ್ಧದಲ್ಲಿ ಆರಂಭಗೊಂಡಿತು.
ಜನವರಿ ೩೦,೧೯೪೮ - ಭಾರತದೇಶದ ರಾಷ್ತ್ರಪಿತರೆನಿಸಿಕೊಂಡ ಮಹಾತ್ಮ ಗಾಂಧಿಯವರು ಮರಣ ಹೊಂದಿದ ದಿನ .ಈ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ. ಅಹಿಂಸೆ ಮತ್ತು ಶಾಂತಿ ಎಂಬ ಅಸ್ತ್ರದಿಂದಲೇ ಭಾರತಕ್ಕೆ ಸ್ವಾಂತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಾ ಗಾಂಧಿಯವರ ಮರಣ ದಿನವನ್ನು ಭಾರತದಾದ್ಯಂತ ಈ ಹುತಾತ್ಮರ ದಿನ ಎಂದು ಆಚರಿಸಲಾಗುತ್ತದೆ. ತಮ್ಮ ಬದುಕೇ ತಮ್ಮ ಸಂದೇಶ ಎಂದು ಬದುಕಿನ ಪ್ರತಿ ಗಳಿಗೆಯನ್ನು ಮೌಲ್ಯದ ಜೊತೆಯಲ್ಲೇ ಬದುಕಿದ, ಸತ್ಯಕ್ಕಾಗಿ ತಮ್ಮ ಜೀವನವನ್ನೇ ಪ್ರಯೋಗಕ್ಕೊಡ್ಡಿಕೊಂಡ ರಾಷ್ಟ್ರಪಿತ, ಮೋಹನದಾಸ ಕರಮಚಂದ ಗಾಂಧಿ ಹುಟ್ಟಿದ್ದು ಗುಜರಾತಿನ ಪೋರಬಂದರಿನಲ್ಲಿ.
ಮೌನೇಶ್ವರರ ಅವತಾರ ಮತ್ತು ಜೀವನ ಅಂದಿನ ಗುಲಬರ್ಗಾ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವರಗೋನಾಳ(ದೇವರ ಗೋನಾಲ) ಎಂಬ ಗ್ರಾಮದ ಪಂಚಾಳ ಅಥವಾ ವಿಶ್ವಕರ್ಮ ಕುಲದಂಪತಿಗಳಾದ ಶೇಷಪ್ಪ ಆಚಾರ್ಯ ಮತ್ತು ಶೇಷಮ್ಮರೆಂಬ (ಇವರಿಗೆ ಹಾವಪ್ಪ ಮತ್ತು ಹಾವಕ್ಕ ಎಂದು ಕರೆಯಲಾಗುತ್ತಿತ್ತು) ದಂಪತಿಗಳಿದ್ದರು. ಅವರಿಗೆ ಬಹಳಕಾಲ ಮಕ್ಕಳಾಗಿರಲಿಲ್ಲ. ಶೀಲೆ ಶೇಷಮ್ಮಳು ಆ ಊರಿನ ಆದಿಲಿಂಗೇಶ್ವರ ದೈವಕ್ಕೆ 12 ವರ್ಷಗಳ ಕಾಲ ದಿನನಿತ್ಯವೂ ಬೆಳಗ್ಗೆ ಪೂಜೆಗೈದು ಬರುತ್ತಿದ್ದಳು.
ಸಿನಮಾವು ಪ್ರತ್ಯೇಕವಾದ ಚಲನಚಿತ್ರಗಳು, ಒಂದು ಕಲಾ ಪ್ರಕಾರವಾಗಿ ಚಲನಚಿತ್ರದ ಕಾರ್ಯಕ್ಷೇತ್ರ, ಮತ್ತು ಚಿತ್ರೋದ್ಯಮವನ್ನು ಒಳಗೊಳ್ಳುತ್ತದೆ. ವಿಶ್ವದ ಚಿತ್ರಗಳನ್ನು ಕ್ಯಾಮೆರಾದಿಂದ ಮುದ್ರಿಸಿ, ಅಥವಾ ಅನಿಮೇಶನ್ ತಂತ್ರಗಳು ಅಥವಾ ಸ್ಪೆಶಲ್ ಇಫೆಕ್ಟ್ಗಳನ್ನು ಬಳಸಿ ಚಿತ್ರಗಳನ್ನು ಸೃಷ್ಟಿಸಿ ಚಲನಚಿತ್ರಗಳನ್ನು ನಿರ್ಮಿಸಲಾಗುತ್ತದೆ. ಚಿತ್ರ, ಚಲನಚಿತ್ರ, ನಾಟಕೀಯ ಚಿತ್ರ ಅಥವಾ ಫೋಟೊಪ್ಲೇ ಎಂದೂ ಸಹ ಕರೆಯಲ್ಪಡುವ ಒಂದು ಚಿತ್ರ, ಪರದೆಯ ಮೇಲೆ ತೋರಿಸುವಾಗ, ಚಲಿಸುವ ಚಿತ್ರಗಳ ಭ್ರಮೆಯನ್ನು ಸೃಷ್ಟಿಸುವ ಚಿತ್ರಗಳ ಒಂದು ಸರಣಿಯಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಚಿರತೆಯು (ಪಾಂತೇರಾ ಪಾರ್ದೂಸ್) ಆಫ಼್ರಿಕಾ ಹಾಗು ಉಷ್ಣವಲಯ ಏಷ್ಯಾದ ಕೆಲವು ಭಾಗಗಳು, ಸೈಬೀರಿಯಾ, ದಕ್ಷಿಣ ಹಾಗು ಪಶ್ಚಿಮ ಏಷ್ಯಾದಿಂದ ಆಫ಼್ರಿಕಾದ ಉಪ ಸಹಾರಾ ಪ್ರದೇಶಗಳ ಬಹುಪಾಲು ಉದ್ದಗಲದವರೆಗಿನ ವ್ಯಾಪಕ ವ್ಯಾಪ್ತಿಯ ಫ಼ೆಲಿಡೈ ಕುಟುಂಬದ ಒಂದು ಸದಸ್ಯ. ಅವಾಸಸ್ಥಾನದ ನಷ್ಟ ಹಾಗು ಛಿದ್ರೀಕರಣ, ಮತ್ತು ವ್ಯಾಪಾರ ಹಾಗು ಕೀಟ ನಿಯಂತ್ರಣಕ್ಕಾಗಿ ಬೇಟೆಯ ಕಾರಣ ಅದು ಅದರ ವ್ಯಾಪ್ತಿಕ್ಷೇತ್ರದ ಹೆಚ್ಚಿನ ಭಾಗಗಳಲ್ಲಿ ಇಳಿಮುಖವಾಗುತ್ತಿರುವುದರಿಂದ ಅದನ್ನು ಐಯುಸಿಎನ್ ಕೆಂಪು ಪಟ್ಟಿಯಲ್ಲಿ ಬೆದರಿಕೆ ಹತ್ತಿರ ಎಂದು ಪಟ್ಟಿಮಾಡಲಾಗಿದೆ. ಹಾಂಗ್ ಕಾಂಗ್, ಸಿಂಗಪೋರ್, ಕುವೇಟ್, ಸಿರಿಯಾದ ಅರಬ್ ಗಣರಾಜ್ಯ, ಲಿಬ್ಯಾ ಮತ್ತು ಟುನೀಶದಲ್ಲಿ ಅದು ಪ್ರಾದೇಶಿಕವಾಗಿ ನಿರ್ನಾಮವಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಭಾರತದಲ್ಲಿ ವಿಶ್ವವಿದ್ಯಾಲಯಗಳ ಸಮನ್ವಯತೆ ಮತ್ತು ಶಿಕ್ಷಣದ ಗುಣಮಟ್ಟ ನಿರ್ವಹಣೆಗಾಗಿ 1956ರಲ್ಲಿ ಕೇಂದ್ರ ಸರಕಾರದಿಂದ ಸ್ಥಾಪಿಸಲ್ಪಟ್ಟ ಒಂದು ಶಾಸನಬದ್ಧ ಸಂಸ್ಥೆಯಾಗಿದೆ. ಇದು ಭಾರತದಲ್ಲಿ ವಿಶ್ವವಿದ್ಯಾಲಯಗಳಿಗೆ ಮಾನ್ಯತೆ ನೀಡುತ್ತದೆ ಮತ್ತು ಅಂತಹ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ವಿಕಾಸಕ್ಕಾಗಿ ಧನ ಸಹಾಯ ಮಾಡುತ್ತದೆ. ಖ್ಯಾತ ಶಿಕ್ಷಣತಜ್ಞರಾದ ಪ್ರೊ.ವೇದ ಪ್ರಕಾಶ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅದ್ಯಕ್ಷರಾಗಿ ೧೮ ಜನೇವರಿ ೨೦೧೩ರಂದು ನೇಮಕಗೊಂಡಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನ
ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಸ್ಥಾನವು ಕರ್ನಾಟಕದ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಯಾದಪುರ ಗ್ರಾಮದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯವಾಗಿದೆ. ಯಾದಪುರವು ಅರಸಿಕೆರೆಯಿಂದ ೮ ಕಿಲೋ ಮೀಟರ್ ದೂರದಲ್ಲಿದೆ. ಈ ದೇವಾಲಯವು ಬೆಟ್ಟದ ಮೇಲಿದ್ದು ಶಿವನಿಗೆ ಸಮರ್ಪಿತವಾಗಿದೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಪೆಂಗ್ವಿನ್ಗಳು (ಗಣ ಸ್ಫೆನಿಸಿಫೋರ್ಮ್ಸ್, ವಂಶ ಸ್ಫೆನಿಸಿಡೇ ) ದಕ್ಷಿಣಾರ್ಧ ಗೋಳದಲ್ಲಿ, ಅದರಲ್ಲೂ ವಿಶೇಷವಾಗಿ ಅಂಟಾರ್ಟಿಕಾದಲ್ಲಿ ಹೆಚ್ಚೂಕಮ್ಮಿ ಪ್ರತ್ಯೇಕವಾಗಿ ಜೀವಿಸುತ್ತಿರುವ ಜಲಜೀವಿ, ಹಾರಲಾರದ ಪಕ್ಷಿಗಳ ಒಂದು ಗುಂಪಾಗಿದೆ. ನೀರಿನಲ್ಲಿನ ಜೀವನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ರೀತಿಯಲ್ಲಿ ಹೊಂದಿಕೊಂಡಿರುವ ಪೆಂಗ್ವಿನ್ಗಳು, ವಿರುದ್ಧಛಾಯೆಯ ಕಪ್ಪು ಮತ್ತು ಬಿಳಿ ಪುಕ್ಕಗಳನ್ನು ಹೊಂದಿರುತ್ತವೆ, ಮತ್ತು ಅವುಗಳ ರೆಕ್ಕೆಗಳು ಈಜುಗೈಗಳಾಗಿ ಮಾರ್ಪಟ್ಟಿವೆ. ಬಹುಪಾಲು ಪೆಂಗ್ವಿನ್ಗಳು ಪುಟ್ಟ ಕಡಲಕಳೆ ಚಿಪ್ಪುಜೀವಿಗಳು, ಮೀನು, ಸ್ಕ್ವಿಡ್, ಮತ್ತು ನೀರೊಳಗೆ ಈಜುವಾಗ ಹಿಡಿದ ಕಡಲಜೀವದ ಇತರ ಸ್ವರೂಪಗಳನ್ನು ತಿನ್ನುತ್ತವೆ.
ಮಹರ್ಷಿಗಳು ಕಂಡರುಹಿದ ನಾಟ್ಯಕಲೆ ಇತ್ತೀಚಿನ ದಿನಗಳಲ್ಲಿ ನಾಟ್ಯವು ಹಲವು ಬಗೆಗಳಲ್ಲಿ ಬೆಳೆದು ಬಂದಿದೆ. ನಾಟ್ಯರಂಗಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸುವುದು ಹಿಂದಿನ ಕಾಲದಲ್ಲಿ ನಟರ ವಾಡಿಕೆಯಾದರೆ, ಇದನ್ನು ಪ್ರದರ್ಶಿಸಲು ಇಂದು ಕಲಾ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣಗಳು ಹೊಸದಾಗಿ ಸೇರ್ಪಡೆಯಾಗಿವೆ. ಇಂದಿನ ನಾಟ್ಯಕಲಾ ಪ್ರದರ್ಶನದ ಮೂಲ ಉದ್ದೇಶವು ಬಹುಮಟ್ಟಿಗೆ ಮನೋರಂಜನೆ, ಕಲಾಪ್ರದರ್ಶನ, ಕೀರ್ತಿ ಸಂಪಾದನೆ ಹಾಗೂ ಧನ ಸಂಪಾದನೆಯೇ ಆಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.