The most-visited English Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಇತಿಹಾಸವು ಪೂರ್ವಕಾಲದ ಪಳುಯುಳಿಕೆಗಳು, ಶಾಸನಗಳು, ಸ್ಮಾರಕಶಿಲ್ಪಗಳು,ಸ್ಥಳಿಯ ಹಾಗೂ ವಿದೇಶಿಯ ದಾಖಲೆಗಳು ಕರ್ನಾಟಕದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಾರುತ್ತದೆ. ಪೂರ್ವಕಾಲದ ರಾಜರ ಶಾಸನಗಳು ಮತ್ತು ಕಟ್ಟಡಗಳು ಇಂದಿನ ಐತಿಹಾಸಿಕ ಸ್ಥಳಗಳಾಗಿ ಮಾರ್ಪಟ್ಟಿದೆ. ಮಯೂರ ವರ್ಮ / ಮಯೂರಶರ್ಮ - ಕದಂಬ ರಾಜವಂಶದ ಸ್ಥಾಪಕ ಮತ್ತು ಈಡಿಗ ಸಂಪರ್ಕ ಇತಿಹಾಸ ಮತ್ತು ಕಾಲ:* ಸ್ಥಾಪಕರು ಮಯೂರಶರ್ಮ, ನಂತರ ಮಯೂರವರ್ಮ ಎಂದು ಕರೆಯಲ್ಪಟ್ಟರು - ಕ್ರಿ.ಶ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪ
ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪ ವಿಜಯನಗರ ಸಾಮ್ರಾಜ್ಯವು ಒಂದು ಕಾಲದಲ್ಲಿ ಇಡೀ ದಕ್ಷಿಣ ಭಾರತಕ್ಕೇ ಧಾರ್ಮಿಕ ರಕ್ಷಣೆಯನ್ನು ಕೊಟ್ಟ ಕರ್ನಾಟಕದ ರಾಜಮನೆತನ. ಎಲ್ಲ ಕಲೆಗಳಂತೆ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಯೂ ಈ ಕಾಲದಲ್ಲಿ ಪ್ರಾಮುಖ್ಯತೆಯನ್ನು ಪಡೆಯಿತು. ವಿಜಯನಗರ ಕಾಲದ ದೇವಾಲಯಗಳು ದಕ್ಷಿಣ ಭಾರತದ ತುಂಬೆಲ್ಲಾ ಹರಡಿಕೊಂಡಿವೆ.
ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ OLY (ಜನನ 24 ನವೆಂಬರ್ 1982) ಒಬ್ಬ ಭಾರತೀಯ ಹವ್ಯಾಸಿ ಬಾಕ್ಸರ್, ರಾಜಕಾರಣಿ ಮತ್ತು ಹಾಲಿ ಸಂಸತ್ತಿನ ಸದಸ್ಯ, ರಾಜ್ಯಸಭೆ. ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಗೆದ್ದ ಏಕೈಕ ಮಹಿಳೆ, ಮೊದಲ ಏಳು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಪ್ರತಿಯೊಂದರಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಮತ್ತು ಎಂಟು ವಿಶ್ವ ಚಾಂಪಿಯನ್‌ಶಿಪ್ ಪದಕಗಳನ್ನು ಗೆದ್ದ ಏಕೈಕ ಬಾಕ್ಸರ್ (ಪುರುಷ ಅಥವಾ ಮಹಿಳೆ). ಮ್ಯಾಗ್ನಿಫಿಸೆಂಟ್ ಮೇರಿ ಎಂಬ ಅಡ್ಡಹೆಸರು ಹೊಂದಿರುವ ಅವರು 2012 ರ ಬೇಸಿಗೆ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಾಕ್ಸರ್, ಫ್ಲೈವೇಟ್ (51 ಕೆಜಿ) ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ..ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ (ಹವ್ಯಾಸಿ) (AIBA) ಯಿಂದ ಅವರು ವಿಶ್ವದ ನಂ.
ಬಾನು ಮುಷ್ತಾಕ್ (1948 ರಲ್ಲಿ ಜನನ) ಭಾರತದ ದಕ್ಷಿಣ ರಾಜ್ಯವಾದ ಕರ್ನಾಟಕದ ಒಬ್ಬ ಕಾರ್ಯಕರ್ತೆ, ವಕೀಲೆ ಮತ್ತು ಬರಹಗಾರ್ತಿ. ಇವರು ಕನ್ನಡ ಭಾಷೆಯಲ್ಲಿ ಬರೆಯುತ್ತಾರೆ ಮತ್ತು ಅವರ ಕೃತಿಗಳು ಉರ್ದು, ಹಿಂದಿ, ತಮಿಳು, ಮಲಯಾಳಂ ಮತ್ತು ಇತ್ತೀಚೆಗೆ ಆಂಗ್ಲ ಭಾಷೆಗಳಲ್ಲಿಯೂ ಪ್ರಕಟವಾಗಿವೆ. ೨೦೨೫ ರಲ್ಲಿ, ದೀಪಾ ಭಸ್ತಿ ಅವರಿಂದ ಆಂಗ್ಲ ಭಾಷೆಗೆ ಅನುವಾದಿಸಲ್ಪಟ್ಟ ಸಣ್ಣ ಕಥಾಸಂಕಲನ, ಹಾರ್ಟ್ ಲ್ಯಾಂಪ್, ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಬ್ಯಾಂಕಿಂಗ್ ವಲಯದ ಸುಧಾರಣೆ ಭಾರತದಲ್ಲಿನ ಬ್ಯಾಕಿಂಗ್ ವಲಯದ ಸುಧಾರಣಿಯು ೧೯೯೧ರಲ್ಲಿ ಜಾರಿಗೊಳಿಸಲಾದ ವ್ಯಾಪಕ ಆರ್ಥಿಕ ಸುಧರಣಿಗಳ ಒಂದು ಭಾಗಯಯಿತು.ನರಸಿ೦ಮ್ ಸಮಿತಿಯು ೧೯೯೧ ಮತ್ತು ೧೯೯೮ರಲ್ಲಿ ಸಲ್ಲಿಸಿದ ಎರಡು ವರದಿಗಳು ಕಳೆದ ಕೆಲವು ವರ್ಷಗಳ ಬ್ಯಾಕಿಂಗ್ ವಲಯದ ಸುಧಾರಾಣೆಳ ಮೀಲೆ ಭರೀ ಪ್ರಭಾವ ಬೀರಿವೆ. ಈ ಹಿಂದೆ ಬ್ಯಾಂಕಿಂಗ್ ವಲಯದ ಕಾರ್ಯದಕತೆ ಮತ್ತು ಲಾಭ ಗಳಿಕೆಯು ಭಾರೀ ಹಾನಿಗೊಳಗಾಗಿತ್ತು.ಇದರಿಂದಾಗಿ ಬ್ಯಾಕಿಂಗ್ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆ ತರಬೆಕಾದ ಅನಿವಾರ್ಯ ಸ್ಥಿತಿ ನಿರ್ಮಾನವಾಗಿತ್ತು.ಈ ಕಾರಣದಿ೦ದಾಗಿ ಸರ್ಕಾರವು ಬ್ಯಾಕಿಂಗ್ ವಲಯದಲ್ಲಿ ಸ್ಪರ್ದೆಯನ್ನು ಹೆಚ್ಚಿಸುವ ಗುರಿಯೊ೦ದಿಗೆ ಈವ್ಯಪಕ ಮರುಸ೦ಘಟನೆ ಮತ್ತು ಸುಧಾರಣೆ ಕೈಹಾಕಿತು.ಈ ಉದ್ದೆಶಕ್ಕಾಗಿ ಸರ್ಕಾರವು ಆಗಸ್ಟ್ ೧೪,೧೯೯೧ರಲ್ಲಿ ಎ೦.ನರಸಿ೦ಮ್ ಆಧ್ಯ ಕ್ಷತೆಯ ಒಂಬತ್ತು ಸದಸ್ಯ ಸಮಿತಿಯನ್ನು ನೇಮಿಸಿತು.ಈ ಸಮಿತಿಯು ೧೯೯೧ರ ನವೆಂಬರ್ನಲ್ಲಿ ತನ್ನ ಅಂತಿಮ ವರದಿಯನ್ನು ನೇಮಿಸಿತು.ಈ ಸಮಿತಿಯು ೧೯೯೧ರ ನವೆಂಬರ್ನಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಿತು.ಮತ್ತೊಮ್ಮೆ ೧೯೯೮ರಲ್ಲಿ ಸರ್ಕಾರವು ಎ೦.ನರಸಿಹಮ್ ಆಧ್ಯ ಕ್ಷತೆಯ ಇನ್ನೊ೦ದು ಬ್ಯಾಕಿಂಗ್ ವಲಯದ ಸುಧಾರಣಾ ಸಮಿತಿಯನ್ನು ರಚಿಸಿತು.ಈ ಸಮಿತಿಯು ಏಪ್ರಿಲ್ ೧೯೯೮ರಲ್ಲಿ ತನ್ನ ವರದಿಯನ್ನು ಸಲ್ಲಿಸಿತು.ಈ ಎರಡು ವರದಿಗಳು ಚರಿತ್ರರ್ಹ ದಾಖಲಾತಿಗಳಾಗಿದ್ದು ಬ್ಯಾಕಿಂಗ್ ವಲಯದ ಸುಧಾರಣೆಯಲ್ಲಿ ಮಹತ್ವದ ಪಾತ್ರವಹಿಸಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಎಂದರೆ ಮತ್ತೊಂದು ದೇಶದಲ್ಲಿ ಆಸ್ತಿ ಖರೀದಿಯನ್ನು ಸೂಚಿಸುತ್ತದೆ, ಇದು ಹೂಡಿಕೆದಾರನಿಗೆ ಆ ಆಸ್ತಿಯ ಮೇಲೆ ನೇರ ನಿಯಂತ್ರಣವನ್ನು ನೀಡುತ್ತದೆ (ಉದಾಹರಣೆಗೆ, ಭೂಮಿ ಮತ್ತು ಕಟ್ಟಡ ಖರೀದಿ). ಮತ್ತೊಂದು ರೀತಿಯಲ್ಲಿ ಹೇಳುವುದಾದರೆ, ಇದು ಮತ್ತೊಂದು ದೇಶದಲ್ಲಿರುವ ಸಂಸ್ಥೆಯು ಒಂದು ದೇಶದ ವ್ಯವಹಾರ, ಅನಿವಾಸಿ ಆಸ್ತಿ ಅಥವಾ ಕಾರ್ಖಾನೆಗಳಂತಹ ಉತ್ಪಾದಕ ಆಸ್ತಿಗಳ ಮೇಲೆ ನಿಯಂತ್ರಣದ ಹಕ್ಕು ಹೊಂದುವ ಹೂಡಿಕೆಯಾಗುತ್ತದೆ. ಇದು ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆ ಅಥವಾ ವಿದೇಶಿ ಪರೋಕ್ಷ ಹೂಡಿಕೆಗಳಿಂದ ನೇರ ನಿಯಂತ್ರಣದ ಕಲ್ಪನೆಯ ಮೂಲಕ ವಿಭಜಿಸಲ್ಪಟ್ಟಿದೆ.
ಮದರ್ ತೆರೇಸಾಸುಮಾರು ೪೫ ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. ೧೯೭೦ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಒಂದು ಆಸ್ಪತ್ರೆ ಎಂದರೆ ಇದೊಂದು ರೋಗಿಗಳಿಗೆ ಆರೋಗ್ಯ ರಕ್ಷಣೆ, ಗುಣಮಾಡುವ ಚಿಕಿತ್ಸೆ ಒದಗಿಸುವ ತಾಣವಾಗಿದೆ.ಇದಕ್ಕಾಗಿ ವಿಶೇಷ ವೈದ್ಯಕೀಯ ಸಿಬ್ಬಂದಿಯು ಮೇಲಿಂದ ಮೇಲೆ ರೋಗಿಗಳ ಸ್ಥಿತಿಗತಿಯನ್ನು ನಿಗಾವಹಿಸುತ್ತದೆ.ಬಹುಕಾಲದ ಕಾಯಿಲೆಗಳಿಗೆ ಅಲ್ಲಿಯೇ ಔಷಧೋಪಚಾರವನ್ನು ಒದಗಿಸುತ್ತದೆ. ಇಂದು ಆಸ್ಪತ್ರೆಗಳು ಬಹುತೇಕವಾಗಿ ಖಾಸಗಿಯವರಿಂದ ಹಣಕಾಸಿನ ನೆರವಿನಡಿಯಲ್ಲಿ ನಡೆಯುತ್ತಿವೆ,ಲಾಭಕ್ಕಾಗಿ ಇಲ್ಲವೆ ಲಾಭರಹಿತ ಆರೋಗ್ಯ ಸಂಘಟನೆಗಳ ಮೂಲಕ ಆರೋಗ್ಯ ವಿಮೆ ಕಂಪನಿಗಳು ಅಥವಾ ದತ್ತಿಸಂಸ್ಥೆಗಳು ಅಲ್ಲದೇ ನೇರವಾದ ದತ್ತಿ ನಿಧಿ ಕೊಡುಗೆಗಳಿಂದ ನಡೆಸಲ್ಪಡುತ್ತವೆ. ಇತಿಹಾಸದುದ್ದಕ್ಕೂ ಆಸ್ಪತ್ರೆಗಳನ್ನು ಧಾರ್ಮಿಕಸಂಸ್ಥೆಗಳು ಹಣಕಾಸು ನೀಡುವುದು ಅದರ ಸ್ಥಾಪನೆ ಮಾಡುವುದು ಮತ್ತುಅದನ್ನು ರಕ್ಷಿಸಿ ಸಾರ್ವಜನಿಕರಿಗೆ ಸೌಕರ್ಯಕ್ಕಾಗಿ ಅವರಲ್ಲದೇ ವ್ಯಕ್ತಿಗಳ ಸಹಾಯದ ಮೂಲಕ ನಡೆಸುತ್ತಾರೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.