The most-visited English Wikipedia articles, updated daily. Learn more...
ಜವಾಹರಲಾಲ್ ನೆಹರು (೧೪ ನವೆಂಬರ್ ೧೮೮೯ - ೨೭ ಮೇ ೧೯೬೪)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ ೧೯೪೭ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ ೧೯೬೪ ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ ೧೪ ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಮಕ್ಕಳ ದಿನಾಚರಣೆಯು ಮಕ್ಕಳ ಗೌರವಾರ್ಥವಾಗಿ ವಾರ್ಷಿಕವಾಗಿ ಆಚರಿಸಲಾಗುವ ಸ್ಮರಣಾರ್ಥ ದಿನಾಂಕವಾಗಿದೆ, ಅವರ ಆಚರಣೆಯ ದಿನಾಂಕವು ದೇಶದಿಂದ ಬದಲಾಗುತ್ತದೆ.೧೯೨೫ ರಲ್ಲಿ, ಜಿನೀವಾದಲ್ಲಿ ಮಕ್ಕಳ ಕಲ್ಯಾಣ ಕುರಿತ ವಿಶ್ವ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಮಕ್ಕಳ ದಿನವನ್ನು ಮೊದಲು ಘೋಷಿಸಲಾಯಿತು.೧೯೫೦ರಿಂದ, ಹೆಚ್ಚಿನ ಕಮ್ಯುನಿಸ್ಟ್ ಮತ್ತು ನಂತರದ ಕಮ್ಯುನಿಸ್ಟ್ ದೇಶಗಳಲ್ಲಿ ಇದನ್ನು ಜೂನ್ 1 ರಂದು ಆಚರಿಸಲಾಗುತ್ತದೆ. ವಿಶ್ವ ಮಕ್ಕಳ ದಿನವನ್ನು ನವೆಂಬರ್ ೨೦,೧೯೫೯ ರಂದು UN ಜನರಲ್ ಅಸೆಂಬ್ಲಿಯಿಂದ ಮಕ್ಕಳ ಹಕ್ಕುಗಳ ಘೋಷಣೆಯ ನೆನಪಿಗಾಗಿ ನವೆಂಬರ್ 20 ರಂದು ಆಚರಿಸಲಾಗುತ್ತದೆ ಕೆಲವು ದೇಶಗಳಲ್ಲಿ, ಇದು ಮಕ್ಕಳ ವಾರ ಮತ್ತು ಮಕ್ಕಳ ದಿನವಲ್ಲ. ಮಕ್ಕಳ ದಿನವು ಜೂನ್ ಎರಡನೇ ಭಾನುವಾರದಂದು ಜೂನ್ ೧೮೫೭ ರಲ್ಲಿ ಪ್ರಾರಂಭವಾಯಿತು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇನ್ನುಳಿದ ಉಪಯೋಗಕ್ಕಾಗಿ ನೋಡಿ ಮರೀಚಿಕೆ (ಅಸ್ಪಷ್ಟತೆ ನಿವಾರಣೆ) ಇದು ಪ್ರತಿಬಿಂಬ ಅಥವಾ ಮರೀಚಿಕೆಯು ನೈಸರ್ಗಿಕವಾಗಿ ಉಂಟಾಗುವ ದೃಷ್ಟಿಗೋಚರ ವಿದ್ಯಮಾನ,ಇಲ್ಲಿ ಬೆಳಕಿನ ಕಿರಣಗಳು ಒರೆಯಾಗಿ ಅಲ್ಲಿನ ವಸ್ತುವಿನ ಅಥವಾ ಆಕಾಶದ ಪ್ರತಿಬಿಂಬನ್ನು ಪ್ರತಿಫಲಿಸುತ್ತದೆ ಈ ಪದವು ಫ್ರೆಂಚ್ (ಮಿರೇಜ್ )ಪ್ರತಿಬಿಂಬ ಭಾಷೆ ಮೂಲಕ ಇಂಗ್ಲಿಷ್ ಗೆ,ಲ್ಯಾಟಿನ್ ನ ಮಿರೆರ್ ,ಅಂದರೆ "ಅದರೆಡೆ ನೋಡು,ವಿಸ್ಮಯಗೊಳ್ಳು"ಎನ್ನುವದರ ಮೂಲಕ ಬಂದಿದೆ. ಇದೇ ಶಬ್ದಕ್ಕೆ ಸಮನಾದುದೆಂದರೆ ಮಿರರ್ ಮತ್ತು "ಬಣ್ಣಿಸು" ಇದಕ್ಕೆ ವ್ಯತಿರಿಕ್ತವಾಗಿ ಒಂದು ಭ್ರಮೆ ಅಥವಾ ಭ್ರಾಂತಿ,ಇದ್ದರೆ ಪ್ರತಿಬಿಂಬದಲ್ಲಿ ಒಂದು ನಿಜವಾದ ವಸ್ತುವಿನ ದೃಷ್ಟಿಗೋಚರವಾದುದನ್ನು ಕ್ಯಾಮೆರಾದಲ್ಲಿ ಸೆರೆಹಿಡಿದದ್ದು,ಹೀಗೆ ಬೆಳಕಿನ ಕಿರಣಗಳು ನಿಜವಾದುದರ ಮೇಲೆ ಪ್ರತಿಫಲಿಸಿ ಅಲ್ಲಿರುವವನ ಭ್ರಮೆಯ ಚಿತ್ರಣವನ್ನು ಮೂಡುವಂತೆ ಮಾಡುತ್ತವೆ. ಯಾವ ಪ್ರತಿರೊಪವು ಅಲ್ಲಿನ ಸ್ಥಳಿಯತೆಯನ್ನು ಪ್ರತಿನಿಧಿಸುತ್ತದೆಯೋ ಅದು ಮನುಷ್ಯರ ಮನಸ್ಸಿನ ಕನ್ನಡಿಯ ಸ್ವರೂಪ ಎನ್ನಬಹುದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ರಾಮಾಯಣ: ಭಾಗ 1 ಮುಂಬರುವ ಭಾರತೀಯ ಹಿಂದಿ ಭಾಷೆಯ ಮಹಾಕಾವ್ಯ ಪೌರಾಣಿಕ ಚಿತ್ರ ಆಗಿದ್ದು, ಇದನ್ನು ನಿತೇಶ್ ತಿವಾರಿ ನಿರ್ದೇಶಿಸಿದ್ದಾರೆ, ಅವರು ಶ್ರೀಧರ್ ರಾಘವನ್ ಅವರೊಂದಿಗೆ ಸಹ-ಚಿತ್ರಕಥೆಯನ್ನು ಬರೆದಿದ್ದಾರೆ. ನಮಿತ್ ಮಲ್ಹೋತ್ರಾ ನಿರ್ಮಿಸಿದ ಈ ಚಿತ್ರವು ವಾಲ್ಮೀಕಿಯವರ ರಾಮಾಯಣ ಮಹಾಕಾವ್ಯವನ್ನು ಆಧರಿಸಿದೆ, ಇದು ರಾಜಕುಮಾರ ರಾಮನ ಜೀವನ ಮತ್ತು ಪರೀಕ್ಷೆಗಳನ್ನು ವಿವರಿಸುತ್ತದೆ. ಇದು ಎರಡು ಭಾಗಗಳ ಚಿತ್ರದ ಮೊದಲನೆಯದು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಸ್ವರೂಪಾ ರಾಣಿ ನೆಹರು (೧೮೬೮ - ೧೦ ಜನವರಿ ೧೯೩೮) ಒಬ್ಬ ಭಾರತೀಯ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ನ್ಯಾಯವಾದಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನಾಯಕರಾಗಿದ್ದ ಮೋತಿಲಾಲ್ ನೆಹರು ಅವರ ಪತ್ನಿ ಮತ್ತು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ತಾಯಿ. ಅವರು ೧೯೨೦-೩೦ರ ದಶಕದಲ್ಲಿ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಬ್ರಿಟಿಷ್ ರಾಜ್ ಮತ್ತು ಅದರ ಉಪ್ಪಿನ ಕಾನೂನುಗಳ ವಿರುದ್ಧ ನಾಗರಿಕ ಅಸಹಕಾರದ ಪ್ರತಿಪಾದಕಿಯಾಗಿ ಪ್ರಮುಖ ಪಾತ್ರ ವಹಿಸಿದರು ಮತ್ತು ಮಹಿಳೆಯರಿಗೆ ಉಪ್ಪು ತಯಾರಿಸಲು ಪ್ರೋತ್ಸಾಹಿಸಿದರು.
ಕಾರ್ತಿಕೇಯನು ಹಿಂದೂಗಳಲ್ಲಿ ಜನಪ್ರಿಯನಾಗಿರುವ ಒಬ್ಬ ಹಿಂದೂ ದೇವತೆ, ಮತ್ತು ವಿಶೇಷವಾಗಿ ದಕ್ಷಿಣ ಭಾರತ, ಸಿಂಗಾಪುರ, ಶ್ರೀಲಂಕಾ, ಮಲೇಷ್ಯಾ ಹಾಗೂ ಮಾರಿಷಸ್‌ಗಳಲ್ಲಿ ಪ್ರಸಿದ್ಧವಾದ ದೇವರು. ಆದರೆ ಶ್ರೀಲಂಕಾದಲ್ಲಿ, ಹಿಂದೂಗಳು ಮತ್ತು ಬೌದ್ಧ ಧರ್ಮೀಯರು ಇಬ್ಬರೂ ಕಾರ್ತಿಕೇಯನಿಗೆ ಮುಡುಪಾಗಿರುವ ಮತ್ತು ದೇಶದ ದಕ್ಷಿಣದಲ್ಲಿರುವ ಒಂದು ಅತ್ಯಂತ ಪವಿತ್ರ ಬೌದ್ಧ ಮತ್ತು ಹಿಂದೂ ಕ್ಷೇತ್ರವಾದ ಕತರಗಾಮಾ ದೇವಸ್ಥಾನವನ್ನು ಪೂಜ್ಯಭಾವದಿಂದ ಕಾಣುತ್ತಾರೆ. ಹಾಗೆಯೆ ಮಲೇಷ್ಯಾದ ಪಿನಾಂಗ್, ಕ್ವಾಲಾಲಂಪೂರ್‌ನ ಚೀನೀ ಜನರೂ ಸಹ ಮುರುಗನ್‌ನನ್ನು ಥೈಪುಸಮ್‌ನ ಅವಧಿಯಲ್ಲಿ ಪೂಜಿಸುತ್ತಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಶ್ರೀಮತಿ ಮಾಲತಿ ಪಟ್ಟಣಶೆಟ್ಟಿ ಇವರು ಕನ್ನಡ ಸಾಹಿತ್ಯಕ್ಕೆ ಬಹುಮುಖ ಸೇವೆ ಸಲ್ಲಿಸುತ್ತಿರುವ ಲೇಖಕಿ. ೧೯೪೦ ಡಿಸೆಂಬರ ೨೬ರಂದು ಇವರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಜನಿಸಿದರು. ಆಂಗ್ಲ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಮಾಲತಿಯವರು ಬೆಳಗಾವಿಯ ರಾಣಿ ಪಾರ್ವತಿದೇವಿ ಕಾಲೇಜಿನಲ್ಲಿ ಮೂರು ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿ,ಆನಂತರ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾಲೇಜಿನಲ್ಲಿ ೩೧ ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ಹಾಗು ವಿಭಾಗ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಹಣಕಾಸು ವ್ಯವಸ್ಥೆ (ಹಣಕಾಸು ವ್ಯಾಪ್ತಿಯಲ್ಲಿ) ಸಾಲದಾತರು, ಹೂಡಿಕೆದಾರರು ಮತ್ತು ಸಾಲಗಾರರ ನಡುವೆ ಹಣದ ವಿನಿಮಯವನ್ನು ಅನುಮತಿಸುವ ಒಂದು ವ್ಯವಸ್ಥೆಯಾಗಿದೆ. ಹಣಕಾಸು ವ್ಯವಸ್ಥೆಗಳು ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತವೆ. ಹೂಡಿಕೆದಾರರು ಮತ್ತು ಠೇವಣಿದಾರರ ನಡುವೆ ಪರಿಣಾಮಕಾರಿ ಮತ್ತು ನಿಯಮಿತ ಸಂಪರ್ಕವನ್ನು ಒದಗಿಸಲು ಉದ್ದೇಶಿಸಿರುವ ಸಂಕೀರ್ಣ, ನಿಕಟವಾದ ಸಂಬಂಧಿತ ಸೇವೆಗಳು, ಮಾರುಕಟ್ಟೆಗಳು ಮತ್ತು ಸಂಸ್ಥೆಗಳಿವೆ.
ಬ್ಯಾಂಕಿಂಗ್ ವಲಯದ ಸುಧಾರಣೆ ಭಾರತದಲ್ಲಿನ ಬ್ಯಾಕಿಂಗ್ ವಲಯದ ಸುಧಾರಣಿಯು ೧೯೯೧ರಲ್ಲಿ ಜಾರಿಗೊಳಿಸಲಾದ ವ್ಯಾಪಕ ಆರ್ಥಿಕ ಸುಧರಣಿಗಳ ಒಂದು ಭಾಗಯಯಿತು.ನರಸಿ೦ಮ್ ಸಮಿತಿಯು ೧೯೯೧ ಮತ್ತು ೧೯೯೮ರಲ್ಲಿ ಸಲ್ಲಿಸಿದ ಎರಡು ವರದಿಗಳು ಕಳೆದ ಕೆಲವು ವರ್ಷಗಳ ಬ್ಯಾಕಿಂಗ್ ವಲಯದ ಸುಧಾರಾಣೆಳ ಮೀಲೆ ಭರೀ ಪ್ರಭಾವ ಬೀರಿವೆ. ಈ ಹಿಂದೆ ಬ್ಯಾಂಕಿಂಗ್ ವಲಯದ ಕಾರ್ಯದಕತೆ ಮತ್ತು ಲಾಭ ಗಳಿಕೆಯು ಭಾರೀ ಹಾನಿಗೊಳಗಾಗಿತ್ತು.ಇದರಿಂದಾಗಿ ಬ್ಯಾಕಿಂಗ್ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆ ತರಬೆಕಾದ ಅನಿವಾರ್ಯ ಸ್ಥಿತಿ ನಿರ್ಮಾನವಾಗಿತ್ತು.ಈ ಕಾರಣದಿ೦ದಾಗಿ ಸರ್ಕಾರವು ಬ್ಯಾಕಿಂಗ್ ವಲಯದಲ್ಲಿ ಸ್ಪರ್ದೆಯನ್ನು ಹೆಚ್ಚಿಸುವ ಗುರಿಯೊ೦ದಿಗೆ ಈವ್ಯಪಕ ಮರುಸ೦ಘಟನೆ ಮತ್ತು ಸುಧಾರಣೆ ಕೈಹಾಕಿತು.ಈ ಉದ್ದೆಶಕ್ಕಾಗಿ ಸರ್ಕಾರವು ಆಗಸ್ಟ್ ೧೪,೧೯೯೧ರಲ್ಲಿ ಎ೦.ನರಸಿ೦ಮ್ ಆಧ್ಯ ಕ್ಷತೆಯ ಒಂಬತ್ತು ಸದಸ್ಯ ಸಮಿತಿಯನ್ನು ನೇಮಿಸಿತು.ಈ ಸಮಿತಿಯು ೧೯೯೧ರ ನವೆಂಬರ್ನಲ್ಲಿ ತನ್ನ ಅಂತಿಮ ವರದಿಯನ್ನು ನೇಮಿಸಿತು.ಈ ಸಮಿತಿಯು ೧೯೯೧ರ ನವೆಂಬರ್ನಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಿತು.ಮತ್ತೊಮ್ಮೆ ೧೯೯೮ರಲ್ಲಿ ಸರ್ಕಾರವು ಎ೦.ನರಸಿಹಮ್ ಆಧ್ಯ ಕ್ಷತೆಯ ಇನ್ನೊ೦ದು ಬ್ಯಾಕಿಂಗ್ ವಲಯದ ಸುಧಾರಣಾ ಸಮಿತಿಯನ್ನು ರಚಿಸಿತು.ಈ ಸಮಿತಿಯು ಏಪ್ರಿಲ್ ೧೯೯೮ರಲ್ಲಿ ತನ್ನ ವರದಿಯನ್ನು ಸಲ್ಲಿಸಿತು.ಈ ಎರಡು ವರದಿಗಳು ಚರಿತ್ರರ್ಹ ದಾಖಲಾತಿಗಳಾಗಿದ್ದು ಬ್ಯಾಕಿಂಗ್ ವಲಯದ ಸುಧಾರಣೆಯಲ್ಲಿ ಮಹತ್ವದ ಪಾತ್ರವಹಿಸಿವೆ.
ಬಾನು ಮುಷ್ತಾಕ್ (1948 ರಲ್ಲಿ ಜನನ) ಭಾರತದ ದಕ್ಷಿಣ ರಾಜ್ಯವಾದ ಕರ್ನಾಟಕದ ಒಬ್ಬ ಕಾರ್ಯಕರ್ತೆ, ವಕೀಲೆ ಮತ್ತು ಬರಹಗಾರ್ತಿ. ಇವರು ಕನ್ನಡ ಭಾಷೆಯಲ್ಲಿ ಬರೆಯುತ್ತಾರೆ ಮತ್ತು ಅವರ ಕೃತಿಗಳು ಉರ್ದು, ಹಿಂದಿ, ತಮಿಳು, ಮಲಯಾಳಂ ಮತ್ತು ಇತ್ತೀಚೆಗೆ ಆಂಗ್ಲ ಭಾಷೆಗಳಲ್ಲಿಯೂ ಪ್ರಕಟವಾಗಿವೆ. ೨೦೨೫ ರಲ್ಲಿ, ದೀಪಾ ಭಸ್ತಿ ಅವರಿಂದ ಆಂಗ್ಲ ಭಾಷೆಗೆ ಅನುವಾದಿಸಲ್ಪಟ್ಟ ಸಣ್ಣ ಕಥಾಸಂಕಲನ, ಹಾರ್ಟ್ ಲ್ಯಾಂಪ್, ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಶಂಕರ ಬೈಚಬಾಳ ಜನನ- ವಿಜಯಪುರ ಜಿಲ್ಲೆಯ ಮಸಬಿನಾಳದಲ್ಲಿ೧೯೬೬ ಜನಿಸಿದ ಇವರು ಹಲವು ಪುಸ್ತಕಗಳನ್ನು ಬರೆದಿದ್ದಾರೆ ಬೀದಿನಾಟದಲ್ಲಿ ಹಲವು ಸಲ ನಿರ್ದೇಶನ ಮಾಡಿದ್ದಾರೆ ಮೌನ ಕ್ರಾಂತಿ ದಾರಾವಾಹಿಯ ಸಹ ನಿರ್ದೇಶಕರಾಗಿದ್ದರ ಕೆಂಪು ಹುಡುಗಿ ಕಪ್ಪು ಕಾಲ್ಮರಿ ಪ್ರಸಿದ್ಧ ಕಥೆಯಾಗಿದೆ ಭೂಮಿ ತೂಕದ ಜಕ್ಕವ್ವ ಶ್ರೇಷ್ಟ ಪುಸ್ತಕವಾಗಿದೆ ಮಸಬಿನಾಳದ ಪಶುವಾದಿಗಳು ಚಿಂತನ ಗ್ರಂಥವಾಗಿದೆ ಇತಿಹಾಸ ಸತ್ಯವಲ್ಲ ಮುಜಾಹಿದ್ದೀನ್ ಕಾವ್ಯವಾಗಿವೆ ಕನ್ನಡದ ಪ್ರಸಿದ್ಧ ಲೇಖಕರು ಸಾಹಿತಿಗಳು ಇವರು ಕರ್ನಾಟಕದ ಶ್ರೇಷ್ಟ್ ಜಾನಪದ ವಿದ್ವಾಂಶರಲ್ಲಿ ಭಾರತ ಸಿಂಹಾಸನರಶ್ಮಿಅನುವಾದದ ಕೃತಿಯಾಗಿದೆ ಮಸಬಿನಾಳ ಒಂದು ಸಾಂಸ್ಕೃತಿಕ ಅಧ್ಯಯನ ಗ್ರಂಥ ಕರ್ನಾಟಕದಿಂದ ಕಠ್ಮಂಡು ಪ್ರವಾಸ ಕಥನ ಇದೆ ಭೀಮಾ ನದಿ ಬತ್ತುತ್ತಿದೆ ಏಕೆ?? ಹೋರಾಟ ರಾಷ್ಟ್ರ ಮಾತೆ ಚನ್ನಮ್ಮ ಯಾಕಲ್ಲ !!?? ಪ್ರಶ್ನೆ .