The most-visited English Wikipedia articles, updated daily. Learn more...
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜವಾಹರಲಾಲ್ ನೆಹರು (೧೪ ನವೆಂಬರ್ ೧೮೮೯ - ೨೭ ಮೇ ೧೯೬೪)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ ೧೯೪೭ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ ೧೯೬೪ ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ರಾಮಾಯಣ: ಭಾಗ 1 ಮುಂಬರುವ ಭಾರತೀಯ ಹಿಂದಿ ಭಾಷೆಯ ಮಹಾಕಾವ್ಯ ಪೌರಾಣಿಕ ಚಿತ್ರ ಆಗಿದ್ದು, ಇದನ್ನು ನಿತೇಶ್ ತಿವಾರಿ ನಿರ್ದೇಶಿಸಿದ್ದಾರೆ, ಅವರು ಶ್ರೀಧರ್ ರಾಘವನ್ ಅವರೊಂದಿಗೆ ಸಹ-ಚಿತ್ರಕಥೆಯನ್ನು ಬರೆದಿದ್ದಾರೆ. ನಮಿತ್ ಮಲ್ಹೋತ್ರಾ ನಿರ್ಮಿಸಿದ ಈ ಚಿತ್ರವು ವಾಲ್ಮೀಕಿಯವರ ರಾಮಾಯಣ ಮಹಾಕಾವ್ಯವನ್ನು ಆಧರಿಸಿದೆ, ಇದು ರಾಜಕುಮಾರ ರಾಮನ ಜೀವನ ಮತ್ತು ಪರೀಕ್ಷೆಗಳನ್ನು ವಿವರಿಸುತ್ತದೆ. ಇದು ಎರಡು ಭಾಗಗಳ ಚಿತ್ರದ ಮೊದಲನೆಯದು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ ೧೪ ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮಾನವ ಜಾತಿಯ ಉತ್ಪತ್ತಿಯನ್ನು ವಿವರಿಸುವ ಜೀವ ವಿಕಾಸದ ಭಾಗವೇ ಮಾನವನ ವಿಕಾಸ. ಹಲವಾರು ಶತಮಾನಗಳಿಂದ ಹಲವಾರು ಮಾನವ ಮತ್ತಿತರ ವಾನರ ಜಾತಿಗಳಲ್ಲಿನ ಹೋಲಿಕೆಗಳನ್ನು ಗಮನಿಸಿದ್ದು ಹಾಗೂ ಜೀವ ವಿಕಾಸದ ಬಗ್ಗೆ ಯೋಚಿಸಿದ್ದಾದರೂ ಈ ವಾದವನ್ನು ನಿಶ್ಚಿತವಾಗಿ ಹಾಗೂ ವಿಸ್ತಾರವಾಗಿ ೧೮೫೯ರಲ್ಲಿ ಬಣ್ಣಿಸಿದವರು ಚಾರ್ಲ್ಸ್ ಡಾರ್ವಿನ್ರವರು. ಇದರನಂತರ ಮಾನವನ ಪೂರ್ವಜರ ಪರಿಶೋಧನೆಗೆ ಹೆಚ್ಚು ಒತ್ತು ಸಿಕ್ಕಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಹನ್ನೆರಡನೆಯ ಶತಮಾನದ ಶರಣ ಸಮೂಹದಲ್ಲಿ ಅಗ್ರಗಣ್ಯವಾದ ಹೆಸರುಗಳಲ್ಲಿ, ಚನ್ನಬಸವಣ್ಣನವರದು ಬಹು ಪ್ರಮುಖವಾದುದು. ಇವರ ಜೀವಿತ ಕಾಲಾವಧಿ ತೀರಾ ಕಡಿಮೆ ; ಚನ್ನಬಸವಣ್ಣನವರು ಬದುಕಿದ್ದುದು ಕೇವಲ ಇಪ್ಪತ್ತುನಾಲ್ಕು ವರ್ಷಗಳು ಮಾತ್ರ. ಹನ್ನೆರಡನೆ ಯ ಶತಮಾನದ ಯುಗಪುರುಷನೂ; ಸಾಮಾಜಿಕ ಬದಲಾವಣೆಗಳ ಹರಿಕಾರನೂ ; ಅಸಮಾನತೆಯ ವಿರುದ್ದ ದನಿಯೆತ್ತಿ,ವ್ಯವಸ್ಠೆಯ ಆಕ್ರೋಶಕ್ಕೆ ಗುರಿಯಾದ, ಬಸವಣ್ಣನವರ ಸೋದರಳಿಯ ಚನ್ನಬಸವಣ್ಣ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ರೀಮತಿ ಮಾಲತಿ ಪಟ್ಟಣಶೆಟ್ಟಿ ಇವರು ಕನ್ನಡ ಸಾಹಿತ್ಯಕ್ಕೆ ಬಹುಮುಖ ಸೇವೆ ಸಲ್ಲಿಸುತ್ತಿರುವ ಲೇಖಕಿ. ೧೯೪೦ ಡಿಸೆಂಬರ ೨೬ರಂದು ಇವರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಜನಿಸಿದರು. ಆಂಗ್ಲ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಮಾಲತಿಯವರು ಬೆಳಗಾವಿಯ ರಾಣಿ ಪಾರ್ವತಿದೇವಿ ಕಾಲೇಜಿನಲ್ಲಿ ಮೂರು ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿ,ಆನಂತರ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾಲೇಜಿನಲ್ಲಿ ೩೧ ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ಹಾಗು ವಿಭಾಗ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO – Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪ
ವಿಜಯನಗರದ ಕಲೆ ಮತ್ತು ವಾಸ್ತುಶಿಲ್ಪ ವಿಜಯನಗರ ಸಾಮ್ರಾಜ್ಯವು ಒಂದು ಕಾಲದಲ್ಲಿ ಇಡೀ ದಕ್ಷಿಣ ಭಾರತಕ್ಕೇ ಧಾರ್ಮಿಕ ರಕ್ಷಣೆಯನ್ನು ಕೊಟ್ಟ ಕರ್ನಾಟಕದ ರಾಜಮನೆತನ. ಎಲ್ಲ ಕಲೆಗಳಂತೆ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಯೂ ಈ ಕಾಲದಲ್ಲಿ ಪ್ರಾಮುಖ್ಯತೆಯನ್ನು ಪಡೆಯಿತು. ವಿಜಯನಗರ ಕಾಲದ ದೇವಾಲಯಗಳು ದಕ್ಷಿಣ ಭಾರತದ ತುಂಬೆಲ್ಲಾ ಹರಡಿಕೊಂಡಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.