The most-visited English Wikipedia articles, updated daily. Learn more...
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ರಾಜ್ಯ ಪುನರ್ವಿಂಗಡಣಾ ಕಾಯ್ದೆಯ ಅನ್ವಯ ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ.ಬೇಂದ್ರೆಯವರು 20ನೇ ಶತಮಾನದ ಶ್ರೇಷ್ಠ ಕನ್ನಡ ಗೀತಕವಿಗಳಲ್ಲಿ ಒಬ್ಬರೆಂದು ಸಾಮಾನ್ಯವಾಗಿ ಪರಿಗಣಿಸಲ್ಪಟ್ಟಿದ್ದಾರೆ. ಸುಮಾರು 70 ವರ್ಷಗಳ ಕಾಲ (1914–1981) ಸಾಗಿದ ಅವರ ಕಾವ್ಯಯಾನದಲ್ಲಿ, ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದ ಸಾಧನೆಯನ್ನು ಕಾವ್ಯೋದ್ಯೋಗ ಅಥವಾ 'ಕಾವ್ಯದ ಮಹಾಯೋಗ' ಎಂದು ಕರೆದಿದ್ದರು.೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು.1968ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರತಾಪ್ ಸಿಂಹ ಕನ್ನಡದ ಜನಪ್ರಿಯ ಅಂಕಣಕಾರರು ಹಾಗೂ ಪತ್ರಿಕೋದ್ಯಮಿ. ಸಕಲೇಶಪುರದಲ್ಲಿ ಜನಿಸಿರುವ ಇವರು ತಮ್ಮ ಪದವಿ ಪುರ್ವ ಶಿಕ್ಷಣವನ್ನು ಚಿಕ್ಕಮಗಳೂರುನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್ ಡಿ ಎಮ್ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿಯನ್ನು ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಮ್ ಐ ಸಿ ಇ ಮಂಗಳೂರಿಂದ ಕಂಪ್ಯೂಟರ್ ಅಪ್ಲಿಕೇಷನ್ ಡಿಪ್ಲೋಮಾ ಮಾಡಿದ್ದರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ರಾಮಾಯಣ: ಭಾಗ 1 ಮುಂಬರುವ ಭಾರತೀಯ ಹಿಂದಿ ಭಾಷೆಯ ಮಹಾಕಾವ್ಯ ಪೌರಾಣಿಕ ಚಿತ್ರ ಆಗಿದ್ದು, ಇದನ್ನು ನಿತೇಶ್ ತಿವಾರಿ ನಿರ್ದೇಶಿಸಿದ್ದಾರೆ, ಅವರು ಶ್ರೀಧರ್ ರಾಘವನ್ ಅವರೊಂದಿಗೆ ಸಹ-ಚಿತ್ರಕಥೆಯನ್ನು ಬರೆದಿದ್ದಾರೆ. ನಮಿತ್ ಮಲ್ಹೋತ್ರಾ ನಿರ್ಮಿಸಿದ ಈ ಚಿತ್ರವು ವಾಲ್ಮೀಕಿಯವರ ರಾಮಾಯಣ ಮಹಾಕಾವ್ಯವನ್ನು ಆಧರಿಸಿದೆ, ಇದು ರಾಜಕುಮಾರ ರಾಮನ ಜೀವನ ಮತ್ತು ಪರೀಕ್ಷೆಗಳನ್ನು ವಿವರಿಸುತ್ತದೆ. ಇದು ಎರಡು ಭಾಗಗಳ ಚಿತ್ರದ ಮೊದಲನೆಯದು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಅಯ್ಯಪ್ಪನನ್ನು ಧರ್ಮಶಾಸ್ತಾ ಮತ್ತು ಮಣಿಕಂಠ ಎಂದೂ ಕರೆಯುತ್ತಾರೆ, ದಕ್ಷಿಣ ಭಾರತದಲ್ಲಿ ಜನಪ್ರಿಯವಾಗಿರುವ ಹಿಂದೂ ದೇವತೆ, ಅವನನ್ನು ಸಾಕಾರವಾಗಿ ಪರಿಗಣಿಸಲಾಗಿದೆ. ಧರ್ಮ, ಸತ್ಯ ಮತ್ತು ಸದಾಚಾರ ಮತ್ತು ಕೆಟ್ಟದ್ದನ್ನು ತೊಡೆದುಹಾಕಲು ಆಗಾಗ್ಗೆ ಕರೆಯುತ್ತಾರೆ. ಅಯ್ಯಪ್ಪನ ಮೇಲಿನ ಭಕ್ತಿಯು ದಕ್ಷಿಣ ಭಾರತದಲ್ಲಿ ಮೊದಲು ಪ್ರಚಲಿತದಲ್ಲಿದ್ದರೂ, ಅವನ ಜನಪ್ರಿಯತೆಯು ೨೦ ನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರ ಹೆಚ್ಚಾಯಿತು ಹಿಂದೂ ಧರ್ಮಶಾಸ್ತ್ರದ ಪ್ರಕಾರ, ಅವನು ಹರಿಹರ (ವಿಷ್ಣು ಮೋಹಿನಿ, ಮತ್ತು ಶಿವನ ಮಗ).
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಬ್ಯಾಂಕಿಂಗ್ ವಲಯದ ಸುಧಾರಣೆ ಭಾರತದಲ್ಲಿನ ಬ್ಯಾಕಿಂಗ್ ವಲಯದ ಸುಧಾರಣಿಯು ೧೯೯೧ರಲ್ಲಿ ಜಾರಿಗೊಳಿಸಲಾದ ವ್ಯಾಪಕ ಆರ್ಥಿಕ ಸುಧರಣಿಗಳ ಒಂದು ಭಾಗಯಯಿತು.ನರಸಿ೦ಮ್ ಸಮಿತಿಯು ೧೯೯೧ ಮತ್ತು ೧೯೯೮ರಲ್ಲಿ ಸಲ್ಲಿಸಿದ ಎರಡು ವರದಿಗಳು ಕಳೆದ ಕೆಲವು ವರ್ಷಗಳ ಬ್ಯಾಕಿಂಗ್ ವಲಯದ ಸುಧಾರಾಣೆಳ ಮೀಲೆ ಭರೀ ಪ್ರಭಾವ ಬೀರಿವೆ. ಈ ಹಿಂದೆ ಬ್ಯಾಂಕಿಂಗ್ ವಲಯದ ಕಾರ್ಯದಕತೆ ಮತ್ತು ಲಾಭ ಗಳಿಕೆಯು ಭಾರೀ ಹಾನಿಗೊಳಗಾಗಿತ್ತು.ಇದರಿಂದಾಗಿ ಬ್ಯಾಕಿಂಗ್ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆ ತರಬೆಕಾದ ಅನಿವಾರ್ಯ ಸ್ಥಿತಿ ನಿರ್ಮಾನವಾಗಿತ್ತು.ಈ ಕಾರಣದಿ೦ದಾಗಿ ಸರ್ಕಾರವು ಬ್ಯಾಕಿಂಗ್ ವಲಯದಲ್ಲಿ ಸ್ಪರ್ದೆಯನ್ನು ಹೆಚ್ಚಿಸುವ ಗುರಿಯೊ೦ದಿಗೆ ಈವ್ಯಪಕ ಮರುಸ೦ಘಟನೆ ಮತ್ತು ಸುಧಾರಣೆ ಕೈಹಾಕಿತು.ಈ ಉದ್ದೆಶಕ್ಕಾಗಿ ಸರ್ಕಾರವು ಆಗಸ್ಟ್ ೧೪,೧೯೯೧ರಲ್ಲಿ ಎ೦.ನರಸಿ೦ಮ್ ಆಧ್ಯ ಕ್ಷತೆಯ ಒಂಬತ್ತು ಸದಸ್ಯ ಸಮಿತಿಯನ್ನು ನೇಮಿಸಿತು.ಈ ಸಮಿತಿಯು ೧೯೯೧ರ ನವೆಂಬರ್ನಲ್ಲಿ ತನ್ನ ಅಂತಿಮ ವರದಿಯನ್ನು ನೇಮಿಸಿತು.ಈ ಸಮಿತಿಯು ೧೯೯೧ರ ನವೆಂಬರ್ನಲ್ಲಿ ತನ್ನ ಅಂತಿಮ ವರದಿಯನ್ನು ಸಲ್ಲಿಸಿತು.ಮತ್ತೊಮ್ಮೆ ೧೯೯೮ರಲ್ಲಿ ಸರ್ಕಾರವು ಎ೦.ನರಸಿಹಮ್ ಆಧ್ಯ ಕ್ಷತೆಯ ಇನ್ನೊ೦ದು ಬ್ಯಾಕಿಂಗ್ ವಲಯದ ಸುಧಾರಣಾ ಸಮಿತಿಯನ್ನು ರಚಿಸಿತು.ಈ ಸಮಿತಿಯು ಏಪ್ರಿಲ್ ೧೯೯೮ರಲ್ಲಿ ತನ್ನ ವರದಿಯನ್ನು ಸಲ್ಲಿಸಿತು.ಈ ಎರಡು ವರದಿಗಳು ಚರಿತ್ರರ್ಹ ದಾಖಲಾತಿಗಳಾಗಿದ್ದು ಬ್ಯಾಕಿಂಗ್ ವಲಯದ ಸುಧಾರಣೆಯಲ್ಲಿ ಮಹತ್ವದ ಪಾತ್ರವಹಿಸಿವೆ.
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜವಾಹರಲಾಲ್ ನೆಹರು (೧೪ ನವೆಂಬರ್ ೧೮೮೯ - ೨೭ ಮೇ ೧೯೬೪)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ ೧೯೪೭ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ ೧೯೬೪ ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.ಗಿರೀಶ್ ರಘುನಾಥ್ ಕರ್ಣಾಡ್ ಅವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗಿದ್ದು, ಮುಖ್ಯವಾಗಿ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಮರಾಠಿ ಚಲನಚಿತ್ರಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. 1960ರ ದಶಕದಲ್ಲಿ ನಾಟಕಕಾರರಾಗಿ ಅವರು ಗಳಿಸಿದ ಖ್ಯಾತಿಯು ಕನ್ನಡದಲ್ಲಿ ಆಧುನಿಕ ಭಾರತೀಯ ನಾಟಕ ಸಾಹಿತ್ಯದ ಬೆಳವಣಿಗೆಗೆ ಹೊಸ ಆಯಾಮ ನೀಡಿತು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ ೧೪ ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯು ೦೧ ಜುಲೈ, ೨೦೧೭ ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮಧ್ಯರಾತ್ರಿ ೧೨ ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, ೨೦೧೪ ಎಂದು ಪ್ರಸ್ತಾಪಿಸಿದೆ.
ತುಳಸಿ (ಒಸಿಮಮ್ ಬೆಸಿಲಿಕಂ )(pronounced /ˈbæzəl/ಅಥವಾ/ˈbeɪzəl/), ಲಾಮಿಯಾಸಿಯೆ(ಪುದೀನ ಸಸ್ಯಗಳು) ಸಸ್ಯ ಜಾತಿಯ, ಎಳೆಯದಾದ, ಬಹಳ ಕಡಿಮೆ ಎತ್ತರದಲ್ಲಿ ಬೆಳೆಯುವ ಸಸ್ಯವಾಗಿದೆ. ತುಳಸಿ ನಳಪಾಕಕ್ಕೆ ಯೋಗ್ಯ ಸಸ್ಯವಾಗಿದ್ದು ಇಟಾಲಿಯನ್ ಪಾಕದಲ್ಲಿ ಪ್ರಮುಖವಾಗಿ ಬಳಸಲ್ಪಡುತ್ತದೆ. ಜೊತೆಗೆ ಇದು ತೈವಾನ್ ನಂತಹ ಈಶಾನ್ಯ ಏಷಿಯಾ ಹಾಗು ಥೈಲ್ಯಾಂಡ್, ವಿಯೆಟ್ನಾಂ, ಕಾಂಬೋಡಿಯ, ಹಾಗು ಲಾವೋಸ್ ನಂತಹ ಆಗ್ನೇಯ ಏಷಿಯಾದ ಪಾಕಪದ್ದತಿಗಳಲ್ಲಿ ಒಂದು ಪ್ರಮುಖ ಪಾತ್ರ ವಹಿಸುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಕರ್ನಾಟಕ ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಆಯೋಗಗಳನ್ನು ರಚಿಸಿದೆ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಹಿಂದುಳಿದ ವರ್ಗಗಳೆಂಬ ಪರಿಕಲ್ಪನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು. ಅದುವರೆಗೂ ಬ್ರಿಟಿಷರ ನೇರ ಅಧೀನದ ಪ್ರಾಂತಗಳಲ್ಲಿ ಮತ್ತು ಸಂಸ್ಥಾನಗಳಲ್ಲಿ ಸರ್ಕಾರಿ ನೌಕರಿಗಳನ್ನು ವಿವೇಚನೆಯ ಮತ್ತು ಅರ್ಹತೆಯ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿತ್ತು.
ಗಾದೆ (proverb) (Latin: proverbium ಎಂಬುದರಿಂದ) ಅಥವಾ ನೀತಿವಚನ ಎಂಬುದು ಸಾಮಾನ್ಯ ಜ್ಞಾನ ಅಥವಾ ಅನುಭವದ ಆಧಾರದ ಮೇಲೆ ಗ್ರಹಿಸಲಾದ ಸತ್ಯವನ್ನು ವ್ಯಕ್ತಪಡಿಸುವ ಸರಳ, ಸಾಂಪ್ರದಾಯಿಕ ನುಡಿಗಟ್ಟು.ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಗಾದೆಗಳು ಸಾಮಾನ್ಯವಾಗಿ ರೂಪಕಾತ್ಮಕವಾಗಿದ್ದು ಸೂತ್ರಬದ್ಧ ಭಾಷೆಯ ಉದಾಹರಣೆಯಾಗಿವೆ. ಗಾದೆಗಳಂಥ ಮತ್ತು ಮೌಖಿಕ ಪರಂಪರೆಯಿಂದ ಪ್ರಸಾರವಾಗುವ ಸಾಂಪ್ರದಾಯಿಕ ನುಡಿಗಟ್ಟಿನ ಒಂದು ಪ್ರಕಾರವೇ ಗಾದೆಯ ನುಡಿಗಟ್ಟು (proverbial phrase) ಅಥವಾ ಗಾದೆಯ ಅಭಿವ್ಯಕ್ತಿ (proverbial expression).
ಕುಚ ಮೈಥುನ ಕುಚ ಮೈಥುನವು ಲೈಂಗಿಕ ಚಟುವಟಿಕೆಯಾಗಿದ್ದು, ಇದು ಮೈಥುನಪೂರ್ವ ಕ್ರಿಯೆಯಾಗಿ ಅಥವಾ ವೇದಿಸದ ಲೈಂಗಿಕತೆಯ ರೂಪದಲ್ಲಿ ನಡೆಸಲ್ಪಡುತ್ತದೆ. ಇದು ಮಹಿಳೆಯ ಕುಚಗಳಿಂದ ಪುರುಷನ ತುಣ್ಣಿವನ್ನು ಮತ್ತು ಪುರುಷನ ಶಿಶ್ನದಿಂದ ಮಹಿಳೆಯ ಕುಚಗಳನ್ನು ಉತ್ತೇಜಿಸುವ ಪ್ರಕ್ರಿಯೆಯಾಗಿದೆ. ಇದು ಮಹಿಳೆಯ ಕುಚಗಳ ನಡುವೆ ಶಿಶ್ನವನ್ನು ಇರಿಸುವುದು ಮತ್ತು ಲೈಂಗಿಕ ವೇಧನವನ್ನು ಅನುಕರಿಸಿ ಲೈಂಗಿಕ ಆನಂದವನ್ನು ಉಂಟುಮಾಡಲು ಶಿಶ್ನವನ್ನು ಮೇಲಕ್ಕೂ ಕೆಳಕ್ಕೂ ಚಲಿಸುವುದನ್ನು ಒಳಗೊಂಡಿರುತ್ತದೆ.
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮಾನವ ಶಿಶ್ನವು ಪುರುಷರಿಗೆ ಮೂತ್ರ ವಿಸರ್ಜಿಸಲು ಮತ್ತು ಸ್ಖಲಿಸಲು ಸಹಕರಿಸುವ ಬಾಹ್ಯ ಲೈಂಗಿಕ ಅವಯವವಾಗಿದೆ. ವೃಷಣಗಳು ಮತ್ತು ಇತರ ಅನುಬಂಧ ರಚನೆಗಳೊಂದಿಗೆ ಶಿಶ್ನವು ಪುರುಷ ಪ್ರತ್ಯುತ್ಪಾದನಾ ವ್ಯವಸ್ಥೆಯ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುತ್ತದೆ. ಶಿಶ್ನದ ಮುಖ್ಯ ಭಾಗಗಳು ಮೂಲ, ದೇಹ, ಶಿಶ್ನದ ಎಪಿಥೀಲಿಯಂ, ಶಾಫ್ಟ್ ಚರ್ಮ ಸೇರಿದಂತೆ ಮತ್ತು ಗ್ಲಾನ್ಸ್ ಅನ್ನು ಆವರಿಸುವ ಮುಂದೊಗಲು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.