The most-visited ಕನ್ನಡ Wikipedia articles, updated daily. Learn more...
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣದಲ್ಲಿನ ವ್ಯವಸ್ಥೆಯೂ ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ್ದಾಗಿದೆ,ಭೂಮಿಯ ಮೇಲಿನ ಜೀವಜಾಲಕ್ಕೆ ಇದು ಮಹತ್ವದ್ದಾಗಿದೆ. ವಾಯು ಮಾಲಿನ್ಯದ ದುಷ್ಪರೀಣಾಮದಿಂದ ಓಜೋನ ಪದರವು ಕ್ಷೀಣಿಸುತ್ತಿದೆ., ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕರ್ನಾಟಕ ಮಿಲ್ಕ್ ಫೆಡರೇಶನ್, ಕೆಎಂಎಫ್) ಸಹಕಾರಿ ತತ್ವಗಳ ಮೇಲೆ ಕಾರ್ಯನಿರ್ವಹಿಸುವ ಹಾಲು ಉತ್ಪಾದಕರ ಸಂಘದ ಒಕ್ಕೂಟವಾಗಿದೆ. ನಂದಿನಿ ಬ್ರಾಂಡ್ ಮೂಲಕ ಸಂಸ್ಕರಿಸಿದ ಹಾಲು, ಮೊಸರು, ಪೇಡಾ, ಪನ್ನೀರ್, ಮೈಸೂರ್ ಪಾಕ್, ಬರ್ಫಿ, ಸುವಾಸಿತ ಹಾಲು, ಐಸ್ ಕ್ರೀಮ್,ಹಾಲಿನ ಪುಡಿ ಮತ್ತು ಹಾಲಿನ ಮುಂತಾದ ಉತ್ಪನ್ನಗಳನ್ನು ಮಾರಾಟ ಮಾಡುತ್ತದೆ. ಭಾರತದಲ್ಲಿ ಡೈರಿ ಸಹಕಾರ ಸಂಘಗಳಲ್ಲಿ ಇದು ಎರಡನೇ ದೊಡ್ಡ ಡೈರಿ ಸಹಕಾರಿಯಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವುದಾಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಾಶವಾಗುತ್ತಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ವರಾಹಾವತಾರ ಹಂದಿಯ ರೂಪದಲ್ಲಿ ಹಿಂದೂ ದೇವತೆ ವಿಷ್ಣುವಿನ ಅವತಾರ, ಮತ್ತು ಇದು ಕೂರ್ಮಾವತಾರದ ನಂತರ ಹಾಗು ನರಸಿಂಹಾವತಾರದ ಮೊದಲು ಬರುತ್ತದೆ. ವರಾಹಾವತಾರವನ್ನು ದಶಾವತಾರಗಳಲ್ಲಿ ಮೂರನೆಯದಾಗಿ ಪಟ್ಟಿಮಾಡಲಾಗುತ್ತದೆ. ದೈತ್ಯ ಹಿರಣ್ಯಾಕ್ಷನು ಭೂಮಿಯನ್ನು (ಭೂದೇವಿಯಾಗಿ ಮೂರ್ತೀಕರಿಸಲಾಗಿದೆ) ಕದ್ದು ಆಕೆಯನ್ನು ಆದಿಸ್ವರೂಪದ ನೀರಿನಲ್ಲಿ ಬಚ್ಚಿಟ್ಟಾಗ, ವಿಷ್ಣು ಆಕೆಯನ್ನು ಕಾಪಾಡಲು ವರಾಹನಾಗಿ ಕಾಣಿಸಿಕೊಂಡನು.
ದರ್ಶನ್ (ಜನನ ೧೬ ಫೆಬ್ರವರಿ ೧೯೭೭ ), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು ೧೯೯೦ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು. ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ ೧೮ ಹಾಗೂ ಹುಡುಗರಿಗೆ ೨೧ ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.
ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ. ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು. ಅಭಿಮನ್ಯುವಿಗೆ ಸೌಭದ್ರ ಎಂಬ ಇನ್ನೊಂದು ಹೆಸರಿದೆ.
ಬಾವಲಿಗಳು ಮುಂಗಾಲುಗಳು ಜಾಲ ರೆಕ್ಕೆಗಳನ್ನು ರಚಿಸುವ, ಮತ್ತು ಇದರಿಂದ ಇವು ಸಹಜವಾಗಿ ನಿಜವಾದ ಮತ್ತು ಅವಿಶ್ರಾಂತವಾದ ಹಾರಾಟವನ್ನು ನಡೆಸಬಲ್ಲ ಏಕೈಕ ಸಸ್ತನಿಯಾಗಿರುವ ಕೈರಾಪ್ಟರಾ ಗಣದ ಸಸ್ತನಿಗಳು. ತದ್ವಿರುದ್ಧವಾಗಿ, ಹಾರುವಳಿಲುಗಳು, ತೇಲುವ ಪಾಸಮ್ಗಳು, ಮತ್ತು ಕಲೂಗೊಗಳಂತಹ, ಹಾರುತ್ತವೆ ಎಂದು ಹೇಳಲಾಗುವ ಇತರ ಸಸ್ತನಿಗಳು, ಕೇವಲ ಅಲ್ಪ ದೂರದವರೆಗೆ ತೇಲಬಲ್ಲವು. ಬಾವಲಿಗಳು ಪಕ್ಷಿಗಳಂತೆ ತಮ್ಮ ಇಡಿ ಮುಂಗಾಲುಗಳನ್ನು ಬಡಿಯುವುದಿಲ್ಲ, ಬದಲಾಗಿ ತಮ್ಮ ಹೊರ ಹರಡಿಕೊಂಡ, ಅತಿ ಉದ್ದನೆಯ ಮತ್ತು ತೆಳು ಪೊರೆಯಿಂದ ಅಥವಾ ಪಟೇಜಿಯಮ್ನಿಂದ ಆವೃತವಾಗಿರುವ ಬೆರಳುಗಳನ್ನು ಬಡಿಯುತ್ತವೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು "ರಾಷ್ಟ್ರೀಯ ವಿಜ್ಞಾನ ದಿನ"ದ ಆಚರಣೆಯ ಉದ್ದೇಶವಾಗಿದೆ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಖಳನಾಯಕ ಅಥವಾ ಖಳನಾಯಕಿ ಪೀಠಿಕೆ ಖಳನಾಯಕ (ಕೆಲವೊಮ್ಮೆ ನಾಯಕ-ವಿರೋಧಿ ಎಂದು ಉಚ್ಚರಿಸಲಾಗುತ್ತದೆ) ಅಥವಾ ಖಳನಾಯಕಿ ಕಥೆಯಲ್ಲಿ ಮುಖ್ಯ ಪಾತ್ರವಾಗಿದ್ದು, ಅವರು ಸಾಂಪ್ರದಾಯಿಕ ವೀರರ ಗುಣಗಳು ಮತ್ತು ಆದರ್ಶವಾದ, ಧೈರ್ಯ ಮತ್ತು ನೈತಿಕತೆಯಂತಹ ಗುಣಲಕ್ಷಣಗಳನ್ನು ಹೊಂದಿರುವುದಿಲ್ಲ. ಖಳನಾಯಕಗಳು ಕೆಲವೊಮ್ಮೆ ಹೆಚ್ಚಿನ ಪ್ರೇಕ್ಷಕರು ನೈತಿಕವಾಗಿ ಸರಿ ಎಂದು ಪರಿಗಣಿಸುವ ಕ್ರಿಯೆಗಳನ್ನು ಮಾಡಬಹುದು, ಹಾಗೆ ಮಾಡಲು ಅವರ ಕಾರಣಗಳು ಪ್ರೇಕ್ಷಕರ ನೈತಿಕತೆಗೆ ಹೊಂದಿಕೆಯಾಗುವುದಿಲ್ಲ. ಒಬ್ಬ ಖಳನಾಯಕ ವಿಶಿಷ್ಟವಾಗಿ " ಡಾರ್ಕ್ ಟ್ರಯಾಡ್ " ವ್ಯಕ್ತಿತ್ವದ ಲಕ್ಷಣಗಳಲ್ಲಿ ಒಂದನ್ನು ಪ್ರದರ್ಶಿಸುತ್ತಾನೆ, ಇದರಲ್ಲಿ ಸೇರಿವೆನಾರ್ಸಿಸಿಸಮ್, ಮನೋರೋಗ ಮತ್ತು ಮ್ಯಾಕಿಯಾವೆಲಿಯನಿಸಂ.