The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಫೆಬ್ರವರಿ 14, 2019 ರಂದು, ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ, ಭದ್ರತಾ ಸಿಬ್ಬಂದಿಯನ್ನು ಸಾಗಿಸುವ ವಾಹನಕ್ಕೆ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್ಪೊರದಲ್ಲಿ (ಅವಾಂತಿಪೋರಾ ಬಳಿ) ಆತ್ಮಹತ್ಯಾ ಬಾಂಬರ್ ವಾಹನದಿಂದ ದಾಳಿ ಮಾಡಲಾಯಿತು. ಈ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ ೪೦ ಮಂದಿ ಹುತಾತ್ಮರಾದರು. ದಾಳಿಯ ಜವಾಬ್ದಾರಿಯನ್ನು ಪಾಕಿಸ್ತಾನ ಮೂಲದ ಇಸ್ಲಾಮ್ ಉಗ್ರಗಾಮಿ ಗುಂಪು ಜೈಷ್–ಎ–ಮೊಹಮದ್ ಹೊತ್ತುಕೊಂಡಿದೆ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ದಿಕ್ಸೂಚಿ (compass)ದಿಕ್ಕನ್ನು ಸೂಚಿಸುವ ಉಪಕರಣ.ಪ್ರಾಚೀನ ಕಾಲದಿಂದಲೂ ನಾವಿಕರ ಸಂಗಾತಿಯಾದ ಸರಳ ಉಪಕರಣ.ಭಾರತದಲ್ಲಿ 'ಮತ್ಸ್ಯಯಂತ್ರ'ವೆಂದು ಉಪಯೋಗದಲ್ಲಿತ್ತು.ಹಿಂದಿನ ಕಾಲದಲ್ಲಿ ನೀರು ಅಥವಾ ಎಣ್ಣೆಯಲ್ಲಿ ಲೋಹದ ಮೀನನ್ನು ತೇಲಿ ಬಿಟ್ಟು ದಿಕ್ಕನ್ನು ಗುರುತಿಸುತ್ತಿದ್ದರು.ಹಲವಾರು ಬಾರಿ ರೂಪಾಂತರ ಹಾಗೂ ಅಭಿವೃದ್ಧಿಹೊಂದಿ ಈಗಿನ ರೂಪಕ್ಕೆ ಬಂದಿರುತ್ತದೆ.ಇದನ್ನು ಉತ್ತರಮುಖಿ ಎಂದೂ ಕರೆಯುತ್ತಾರೆ.
ಈ ಲೇಖನವು ಆತಿಥ್ಯ/ಅತಿಥಿ ಸತ್ಕಾರದ ಅರ್ಥ ನಿರೂಪಣೆಗೆ ಸಂಬಂಧಿಸಿದುದಾಗಿದೆ. ಹೋಟೆಲ್ ನಿರ್ವಹಣೆಯ ಶೈಕ್ಷಣಿಕ ಅಧ್ಯಯನಗಳಿಗಾಗಿ, ನೋಡಿ ಆತಿಥ್ಯ/ಅತಿಥಿ ಸತ್ಕಾರ ನಿರ್ವಹಣಾ ಅಧ್ಯಯನಗಳು ಹಾಗೂ ಆತಿಥ್ಯ/ಅತಿಥಿ ಸತ್ಕಾರ ಉದ್ಯಮ. ಆತಿಥ್ಯ/ಅತಿಥಿ ಸತ್ಕಾರ ವು ಓರ್ವ ಅತಿಥಿ ಹಾಗೂ ಆತಿಥೇಯರ ನಡುವಿನ ಒಂದು ಬಾಂಧವ್ಯ/ಸಂಬಂಧ, ಅಥವಾ ಅತಿಥಿ ಸತ್ಕಾರದ ನಡೆ ಅಥವಾ ಪ್ರವೃತ್ತಿಯಾಗಿರುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
'ಗುಣ ಸಾಗರಿ" ಚಿತ್ರದ ಯಶಸ್ಸಿನಿಂದ ಪುಳಕಿತಗೊಂಡ ಗುಬ್ಬಿವೀರಣ್ಣ (ಕರ್ನಾಟಕ ಗುಬ್ಬಿ ಫಿಲಂಸ್) 'ಬೇಡರ ಕಣ್ಣಪ್ಪ" ಚಿತ್ರ ತಯಾರಿಕೆಗೆ ಅಣಿಯಾಗುತ್ತಿದ್ದರು. ಚಿತ್ರದ ನಾಯಕ 'ಕಣ್ಣಪ್ಪ"ನ ಪಾತ್ರಕ್ಕೆ ಭಕ್ತಿ-ವಿನಯದ, ಗಟ್ಟಿ-ಮುಟ್ಟಾದ, ಸ್ಪುರದ್ರೂಪಿ ಯುವಕನನ್ನು ಹುಡುಕಿಕೊಡಲು ಸಿಂಹರಿಗೆ ಹೇಳಿದ್ದರಂತೆ. ಪಾತ್ರಧಾರಿಯ ಹುಡುಕಾಟದಲ್ಲಿದ್ದ ಸಿಂಹ ಅವರಿಗೆ ಬಸ್ಸಲ್ಲಿ ಸಿಕ್ಕ ರಾಜ್ ಮೇಲೆ ಮನಸ್ಸು ಹರಿಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು "ರಾಷ್ಟ್ರೀಯ ವಿಜ್ಞಾನ ದಿನ"ದ ಆಚರಣೆಯ ಉದ್ದೇಶವಾಗಿದೆ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.
ಜಗ್ಗಿ ವಾಸುದೇವ್ರವರು (ಸದ್ಗುರು) (ಜನನ ೩ ಸೆಪ್ಟೆಂಬರ್ ೧೯೫೭) ಒಬ್ಬ ಭಾರತೀಯ ಯೋಗಿ ಮತ್ತು ಅನುಭವಿ ಅಲ್ಲದೆ ಲೇಖಕರೂ ಆಗಿದ್ದಾರೆ. ಇವರು ಸ್ಥಾಪಿಸಿರುವ ’ಈಶ ಪ್ರತಿಷ್ಠಾನ’ ಸೇವಾಸಂಸ್ಥೆಯು ಲಾಭರಹಿತ ಹಾಗು ಜಾತ್ಯಾತೀತವಾಗಿದ್ದು, ಇದು ಭಾರತ, ಅಮೆರಿಕ, ಇಂಗ್ಲೆಂಡ್, ಲೆಬನಾನ್, ಸಿಂಗಪೂರ್, ಕೆನಡ, ಮಲೇಶಿಯ, ಉಗಾಂಡಾ, ಆಸ್ಟ್ರೇಲಿಯ ಮುಂತಾದ ದೇಶಗಳಲ್ಲಿ ಯೋಗಾಭ್ಯಾಸದ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದೆ. ಈಶ ಪ್ರತಿಷ್ಠಾನವು ಅನೇಕ ಸಮಾಜೋದ್ಧಾರಕ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಆದಿಯೋಗಿ ಪ್ರತಿಮೆಯು ೩೪-ಮೀಟರ್ ಎತ್ತರ (೧೧೨ ಅಡಿ), ೪೫-ಮೀಟರ್ ಉದ್ದ (೧೪೭ ಅಡಿ) ಮತ್ತು ೨೫-ಮೀಟರ್ ಅಗಲದ (೮೨ ಅಡಿ) ಶಿವನ ತಿರುನಾಮಮ್ ಹೊಂದಿರುವ ಉಕ್ಕಿನ ಪ್ರತಿಮೆಯಾಗಿದ್ದು, ತಮಿಳುನಾಡಿನ ಕೊಯಮತ್ತೂರಿನಲ್ಲಿದೆ. ಇದು ವಿಶ್ವದ "ಅತಿದೊಡ್ಡ ಬಸ್ಟ್ ಸ್ಕಲ್ಪ್ಚರ್" ಎಂದು ಗಿನ್ನೆಸ್ ವಿಶ್ವ ದಾಖಲೆಗಳಿಂದ ಗುರುತಿಸಲ್ಪಟ್ಟಿದೆ. ಇಶಾ ಫೌಂಡೇಶನ್ನ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ಸದ್ಗುರು ಜಗ್ಗಿ ವಾಸುದೇವ್ ವಿನ್ಯಾಸಗೊಳಿಸಿದ್ದಾರೆ.
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.
ಹಿಂದೂ ಧರ್ಮದಲ್ಲಿ, ಸಮುದ್ರಮಂಥನ ಅಥವಾ ಕ್ಷೀರಸಮುದ್ರವನ್ನು ಕಡೆದ ಘಟನೆ ಪುರಾಣಗಳಲ್ಲಿ ಒಂದು ಅತ್ಯಂತ ಪ್ರಸಿದ್ದ ಪ್ರಸಂಗ ಹಾಗೂ ಇದನ್ನು ಅತ್ಯಂತ ವೈಭವದಿಂದ ೧೨ ವರ್ಷಗಳಿಗೊಮ್ಮೆ ಕುಂಭ ಮೇಳ ಎಂಬ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಕಥೆಯು ಭಾಗವತ ಪುರಾಣ, ಮಹಾಭಾರತ ಹಾಗೂ ವಿಷ್ಣು ಪುರಾಣದಲ್ಲಿ ಕಂಡುಬರುತ್ತದೆ. ಹಾಗೂ ಇದನು ಪ್ರೀತಂ ಬಿ ಉ ಶಿಕಾರಿಪುರ ರವರು ಬರೆದಿದ್ದಾರೆ ಸಮುದ್ರಮಂಥನದ ಇತರ ಹೆಸರುಗಳು — ಸಮುದ್ರಮಂಥನಂ — ಮಂಥನಂ ಎಂದರೆ ಸಂಸ್ಕೃತದಲ್ಲಿ ಮಂಥನ ಅಥವಾ 'ಕಡೆಯುವುದು' ಎಂದರ್ಥ.
ಕೋಲಾರ ಜಿಲ್ಲೆ ಯ ಬಂಗಾರಪೇಟೆ ಗೆ ೧೨ ಕಿಲೋ ಮೀಟರ್ ದೂರದಲ್ಲಿರುವ ಕಮ್ಮಸಂದ್ರ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿ ಕೋಟಿಲಿಂಗಗಳ ನಾಡಾಗಿದೆ.೧೦೮ ಅಡಿಗಳ ಬೃಹತ್ ಶಿವಲಿಂಗ ಹಾಗೂ ೩೨ ಅಡಿ ಎತ್ತರದ ಅತಿ ದೊಡ್ಡ ಬಸವಣ್ಣನನನ್ನು ಹೊಂದಿದ ಇಲ್ಲಿ ಭಕ್ತರು ನಿತ್ಯವೂ ಶಿವಲಿಂಗ ಸ್ಥಾಪನೆ ಮಾಡುತ್ತಿದ್ದು, ಈ ಕ್ಷೇತ್ರದಲ್ಲಿ ಮುಂದಿನ ಕೆಲವು ದಶಕಗಳಲ್ಲಿ ಕೋಟಿ ಲಿಂಗ ಸ್ಥಾಪನೆಯಾಗುವ ಸಾಧ್ಯತೆ ಇದೆ. ತ್ರೇತಾಯುಗದ ಕಾಲದಿಂದಲೂ ಪವಿತ್ರ ಕ್ಷೇತ್ರವೆಂದೇ ಪರಿಗಣಿತವಾಗಿರುವ ಕಮ್ಮಸಂದ್ರದಲ್ಲಿ ಶ್ರೀಸಾಂಬಶಿವಮೂರ್ತಿ ಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ಕ್ಷೇತ್ರದಲ್ಲಿರುವ ವಿಶಾಲ ಪ್ರಕಾರದ ಮೊದಲ ಮುಖ್ಯದ್ವಾರದಲ್ಲಿ ಶಿವಲಿಂಗ ಮತ್ತು ಬಸವೇಶ್ವರರ ದರ್ಶನ ಪಡೆದು, ಎರಡನೇ ದ್ವಾರಕ್ಕೆ ಬಂದರೆ ಆಕಾಶ ಶಿವಲಿಂಗ ಮತ್ತು ಅನೇಕ ದೇವತೆಗಳ ದರ್ಶನವಾಗುತ್ತದೆ. ಮುಂದೆ ಸಾಗುತ್ತಿದ್ದಂತೆ ವಿಶಾಲ ಪ್ರಕಾರದಲ್ಲಿ ಭಕ್ತರು ಸ್ಥಾಪಿಸಿರುವ ಸಾವಿರಾರು ಶಿವಲಿಂಗಗಳನ್ನು ನೋಡಬಹುದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಜಿಪುಣನು (ಕೃಪಣ) ಹಣ ಅಥವಾ ಇತರ ಸ್ವತ್ತುಗಳನ್ನು ಕೂಡಿಡುವ ಸಲುವಾಗಿ ಖರ್ಚುಮಾಡಲು ಇಷ್ಟಪಡದಿರುವ ವ್ಯಕ್ತಿ, ಎಷ್ಟರ ಮಟ್ಟಿಗೆ ಎಂದರೆ ಮೂಲಭೂತ ಸೌಕರ್ಯಗಳು ಮತ್ತು ಕೆಲವು ಅಗತ್ಯಗಳನ್ನು ಕೂಡ ವರ್ಜಿಸುವನು. ಈ ಶಬ್ದವನ್ನು ಕೆಲವೊಮ್ಮೆ ವಿಶಾಲ ಅರ್ಥದಲ್ಲಿ ತಮ್ಮ ಹಣದ ಬಗ್ಗೆ ಜುಗ್ಗನಾಗಿರುವ ಯಾರನ್ನಾದರೂ ವರ್ಣಿಸಲು ಬಳಸಲಾಗುತ್ತದಾದರೂ, ಅಂತಹ ವರ್ತನೆಯ ಜೊತೆಗೆ ಉಳಿಸಿದ್ದರಲ್ಲಿ ಆನಂದಪಡದಿದ್ದರೆ, ಅದು ಸರಿಯಾದ ಅರ್ಥದಲ್ಲಿ ಜಿಪುಣತನವಲ್ಲ. ಒಂದು ಪ್ರಕಾರವಾಗಿ ಜಿಪುಣರು ದೀರ್ಘಕಾಲದಿಂದ ಜನಪ್ರಿಯ ಆಕರ್ಷಣೆಯ ವಸ್ತುವಾಗಿದ್ದಾರೆ ಮತ್ತು ಅನೇಕ ಸಂಸ್ಕೃತಿಗಳಲ್ಲಿ ಬರಹಗಾರರು ಹಾಗೂ ಕಲಾವಿದರಿಗೆ ಫಲಪ್ರದ ಮೂಲವಾಗಿದ್ದಾರೆ.
ದರ್ಶನ್ (ಜನನ ೧೬ ಫೆಬ್ರವರಿ ೧೯೭೭ ), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು ೧೯೯೦ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು. ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕ್ಯೋಟೋ ಶಿಷ್ಟಾಚಾರ ಇಂದು ವಿಶ್ವವು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಜಾಗತಿಕ ತಾಪಮಾನ ಹೊಂದಿದೆ. ಅನೇಕ ವಿಜ್ಞಾನಿಗಳು ಇಂಗಾಲದ ಡೈಆಕ್ಸೈಡ್ ಮತ್ತು ಇತರ ಹಸಿರುಮನೆ ಅನಿಲಗಳನ್ನು ನಮ್ಮ ಉತ್ಪಾದನೆ ವಾತಾವರಣ ಮೇಲೆ ಬಿಸಿ ಪರಿಣಾಮವನ್ನು ಹೊಂದಿದೆ, ಮತ್ತು ಈ ಮಾನವ ಜೀವನದ ತುಂಬಾ ಅಪಾಯಕಾರಿ ಎಂದು ನಂಬುತ್ತಾರೆ. ಈ ಪ್ರಬಂಧ ಜಾಗತಿಕ ತಾಪಮಾನ ಏರಿಕೆಯ ಸಮಸ್ಯೆಯನ್ನು ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸುವ ಕೆಲವು ರೀತಿಯಲ್ಲಿ ಸೂಚಿಸುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣದಲ್ಲಿನ ವ್ಯವಸ್ಥೆಯೂ ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ್ದಾಗಿದೆ,ಭೂಮಿಯ ಮೇಲಿನ ಜೀವಜಾಲಕ್ಕೆ ಇದು ಮಹತ್ವದ್ದಾಗಿದೆ. ವಾಯು ಮಾಲಿನ್ಯದ ದುಷ್ಪರೀಣಾಮದಿಂದ ಓಜೋನ ಪದರವು ಕ್ಷೀಣಿಸುತ್ತಿದೆ., ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.