The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕವಚ ಯುದ್ಧ ಪ್ರಸಂಗಗಳಲ್ಲಿ ಶತ್ರುವಿನ ಹೊಡೆತದಿಂದ ದೇಹಕ್ಕೆ ರಕ್ಷಣೆ ಒದಗಿಸಲು ಯೋಧ ಧರಿಸುವ ವಿಶಿಷ್ಟ ರಚನೆ (ಆರ್ಮರ್). ಪೂರ್ವ ಕಾಲದಲ್ಲಿ ಯುದ್ಧಗಳೆಂದರೆ ವ್ಯಕ್ತಿಗಳು ಪರಸ್ಪರವಾಗಿ ಭರ್ಜಿ ಕತ್ತಿ ಕೊಡಲಿ ಮುಂತಾದ ಆಯುಧಗಳನ್ನು ಹಿಡಿದು ಹೋರಾಡುತ್ತಿದ್ದ ಪ್ರಸಂಗಗಳಾಗಿದ್ದುವು. ಆದ್ದರಿಂದ ಪ್ರತಿಯೊಬ್ಬ ಯೋಧನೂ ಪ್ರತಿಸ್ಪರ್ಧಿಯ ಏಟುಗಳನ್ನು ತಡೆಯಲು ಸಹಾಯಕವಾಗುವಂತೆ ತನ್ನ ತಲೆ, ಕತ್ತು, ಎದೆ ಇತ್ಯಾದಿ ಅಂಗಗಳನ್ನು ಇನ್ನೂ ಸ್ವಲ್ಪ ಕಾಲಾನಂತರ ತನ್ನ ಸಮಸ್ತಾಂಗಗಳನ್ನೂ ತಕ್ಕ ಹೊದಿಕೆಗಳಿಂದ ಮರೆ ಮಾಡಿಕೊಳ್ಳುತ್ತಿದ್ದ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಅಟ್ಲಾಂಟಿಕ್ ಮಹಾಸಾಗರ ಭೂಮಿಯ ಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು "ರಾಷ್ಟ್ರೀಯ ವಿಜ್ಞಾನ ದಿನ"ದ ಆಚರಣೆಯ ಉದ್ದೇಶವಾಗಿದೆ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು. ಅಭಿಮನ್ಯುವಿಗೆ ಸೌಭದ್ರ ಎಂಬ ಇನ್ನೊಂದು ಹೆಸರಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣದಲ್ಲಿನ ವ್ಯವಸ್ಥೆಯೂ ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ್ದಾಗಿದೆ,ಭೂಮಿಯ ಮೇಲಿನ ಜೀವಜಾಲಕ್ಕೆ ಇದು ಮಹತ್ವದ್ದಾಗಿದೆ. ವಾಯು ಮಾಲಿನ್ಯದ ದುಷ್ಪರೀಣಾಮದಿಂದ ಓಜೋನ ಪದರವು ಕ್ಷೀಣಿಸುತ್ತಿದೆ., ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ತವರ ಲೇಪನವು ಮೆತು ಕಬ್ಬಿಣ ಅಥವಾ ಉಕ್ಕಿನ ತಗಡುಗಳನ್ನು ತವರದಿಂದ ತೆಳುವಾಗಿ ಲೇಪಿಸುವ ಪ್ರಕ್ರಿಯೆ, ಮತ್ತು ಸೃಷ್ಟಿಯಾದ ಉತ್ಪನ್ನವನ್ನು ಟಿನ್ಪ್ಲೇಟ್ ಎಂದು ಕರೆಯಲಾಗುತ್ತದೆ. ಇದನ್ನು ಬಹುತೇಕ ವೇಳೆ ತುಕ್ಕನ್ನು ತಡೆಗಟ್ಟಲು ಬಳಸಲಾಗುತ್ತದೆ, ಆದರೆ ಸಾಮಾನ್ಯವಾಗಿ ವಿದ್ಯುತ್ ವಾಹಕಗಳಾಗಿ ಬಳಸಲಾದ ಕಟ್ಟುಳ್ಳ ತಂತಿಗಳ ತುದಿಗಳಿಗೆ ಕೂಡ ಲೇಪಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಉತ್ಕರ್ಷಣವನ್ನು ತಡೆಗಟ್ಟುವುದು (ವಿದ್ಯುತ್ ಪ್ರತಿರೋಧವನ್ನು ಹೆಚ್ಚಿಸುತ್ತದೆ), ಮತ್ತು ಟ್ವಿಸ್ಟ್ ಆನ್ಗಳು, ಬಂಧಕ ತುಂಡುಗಳು, ಅಥವಾ ಅಂತ್ಯದ ತುಂಡುಗಳಂತಹ ವಿವಿಧ ತಂತಿ ಸಂಬಂಧಕಗಳಲ್ಲಿ ಬಳಸಲಾದಾಗ ಎಳೆಬಿಡುವುದನ್ನು ಅಥವಾ ತಂತಿಗಳ ಹೆಣಿಗೆ ಬಿಚ್ಚುವುದನ್ನು ತಡೆಯುವುದು ಏಕೆಂದರೆ ಬಿಚ್ಚಿಕೊಂಡ ಎಳೆಗಳು ಮಾರ್ಗಸಂಕೋಚವನ್ನು ಉಂಟುಮಾಡಬಹುದು.
ಕುದ್ರೋಳಿ ಗಣೇಶ್ ( ಜನನ-ಎಪ್ರಿಲ್ 1, 1972 ) ಕರ್ನಾಟಕದ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಕುದ್ರೋಳಿಯಲ್ಲಿ ಜನಿಸಿದರು. ಭಾರತೀಯ ಜಾದೂ ರಂಗದಲ್ಲಿ ವಿಶಿಷ್ಟವಾದ ಸ್ಥಾನ ಕುದ್ರೋಳಿ ಗಣೇಶ್ ರವರದ್ದು.ಜಾದೂ ಕಲೆಗೆ ನವರಸಪೂರ್ಣತೆಯನ್ನು ತುಂಬಿ ಭಾರತೀಯ ಜಾದೂವಿಗೆ ವಿಶ್ವಮಾನ್ಯತೆ ತಂದುಕೊಟ್ಟವರು. ಕಳೆದ 26 ವರ್ಷಗಳಲ್ಲಿ ಆಸ್ಟ್ರೇಲಿಯಾ, ಕೀನ್ಯಾ, ದುಬೈ, ಅಬುದಾಬಿ, ಸೌದಿ ಅರೇಬಿಯಾ, ಕತಾರ್, ಮಸ್ಕತ್, ಕುವೈಟ್, ರಾಸ್ ಅಲ್ ಖೈಮಾ, ಶಾರ್ಜಾ, ಬಹರೈನ್ ಮುಂತಾದ ವಿದೇಶದಲ್ಲಿ ಹಾಗೂ ಭಾರತದ ವಿವಿಧೆಡೆ ಸುಮಾರು 2300 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕುದ್ರೋಳಿ ಗಣೇಶ್ ನೀಡಿದ್ದಾರೆ.