The most-visited ಕನ್ನಡ Wikipedia articles, updated daily. Learn more...
ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಆಂಧ್ರ ಪ್ರದೇಶ (ತೆಲುಗು:ఆంధ్ర ప్రదేశ్) (, ಭಾಷಾಂತರ: ಆಂಧ್ರದ ಪ್ರಾಂತ್ಯ, ಸಂಕ್ಷಿಪ್ತವಾಗಿ ಎ.ಪಿ. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದ ಆಧಾರದಲ್ಲಿ ಭಾರತದ ರಾಜ್ಯಗಳ ವಿಸ್ತೀರ್ಣದಲ್ಲಿ ಎಂಟನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯ ಆಧಾರದಲ್ಲಿ ಭಾರತದ ರಾಜ್ಯಗಳ ಜನಸಂಖ್ಯೆಯಲ್ಲಿ ಹತ್ತನೇ ಅತಿ ದೊಡ್ಡ ರಾಜ್ಯವಾಗಿದೆ.
ಆಧುನಿಕ ಭಾರತದಲ್ಲಿ ಇತಿಹಾಸಪೂರ್ವ ಕಾಲದಿಂದಲೂ ಕರ್ನಾಟಕ ಕರ್ನಾಟಕ ಕರ್ನಾಟಕ ಕರ್ನಾಟಕ ಕರ್ನಾಟಕ ಪ್ರದೇಶವು ಸತತವಾಗಿ ಮಾನವನ ನೆಲೆಯಾಗಿದೆ. ತಮಿಳು ಜನರ ನಾಗರಿಕತೆ ವಿಶ್ವದಲ್ಲೇ ಅತೀ ಪ್ರಾಚೀನವಾದ ನಾಗರೀಕತೆಗಳಲ್ಲಿ ಒಂದೆಂದು ಪರಿಗಣಿಸ ಲಾಗಿದೆ. ಇತಿಹಾಸದುದ್ದಕ್ಕೂ, ಪೂರ್ವ ಪ್ರಾಚೀನ ಶಿಲಾಯುಗದಿಂದ ಹಿಡಿದು ಆಧುನಿಕ ಕಾಲದವರೆಗೆ, ಈ ಪ್ರದೇಶವು ವಿವಿಧ ಬಾಹ್ಯ ಸಂಸ್ಕೃತಿಗಳ ಜತೆಯಲ್ಲಿ ಬೆಳೆದಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮಹರ್ಷಿಗಳು ಕಂಡರುಹಿದ ನಾಟ್ಯಕಲೆ ಇತ್ತೀಚಿನ ದಿನಗಳಲ್ಲಿ ನಾಟ್ಯವು ಹಲವು ಬಗೆಗಳಲ್ಲಿ ಬೆಳೆದು ಬಂದಿದೆ. ನಾಟ್ಯರಂಗಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸುವುದು ಹಿಂದಿನ ಕಾಲದಲ್ಲಿ ನಟರ ವಾಡಿಕೆಯಾದರೆ, ಇದನ್ನು ಪ್ರದರ್ಶಿಸಲು ಇಂದು ಕಲಾ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣಗಳು ಹೊಸದಾಗಿ ಸೇರ್ಪಡೆಯಾಗಿವೆ. ಇಂದಿನ ನಾಟ್ಯಕಲಾ ಪ್ರದರ್ಶನದ ಮೂಲ ಉದ್ದೇಶವು ಬಹುಮಟ್ಟಿಗೆ ಮನೋರಂಜನೆ, ಕಲಾಪ್ರದರ್ಶನ, ಕೀರ್ತಿ ಸಂಪಾದನೆ ಹಾಗೂ ಧನ ಸಂಪಾದನೆಯೇ ಆಗಿದೆ.
ಕರ್ನಾಟಕ ಜನಪದ ನೃತ್ಯ : ಹಾಡು, ಕಥೆಗಳಂತೆ ನೃತ್ಯವೂ ಜಾನಪದ ಸಂಪತ್ತಿನ ಒಂದು ಮುಖ್ಯ ಅಂಗ. ಕರ್ನಾಟಕದ ವಿವಿಧ ಭಾಗಗಳಲ್ಲಿ ಅನೇಕ ರೀತಿಯ ನೃತ್ಯವಿಧಾನಗಳು ಬಳಕೆಯಲ್ಲಿವೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ- ಈ ಪ್ರದೇಶಗಳಲ್ಲಿ ವೈಶಿಷ್ಟ್ಯ ಪಡೆದಿರುವ ನೃತ್ಯಗಳಲ್ಲಿ ಮುಖ್ಯವಾದವನ್ನು ಮಾತ್ರ ಇಲ್ಲಿ ಪರಿಗಣಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಟಿವಿಎಸ್ ಮೋಟಾರ್ ಕಂಪನಿ ನಿಯಮಿತ (ಪುಟ್ಟದಾಗಿ ಟಿವಿಎಸ್) ತಮಿಳುನಾಡಿನ ಚೆನ್ನೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಮೋಟಾರ್ಸೈಕಲ್ ತಯಾರಕ ಸಂಸ್ಥೆ. ಇದು ಭಾರತದ ಮೂರನೇ ಅತಿದೊಡ್ಡ ಮೋಟಾರ್ಸೈಕಲ್ ತಯಾರಕ ಕಂಪನಿ ಮಾತ್ರವಲ್ಲ, ವಿಶ್ವದ ೬೦ ದೇಶಗಳಿಗೆ ದ್ವಿಚಕ್ರ ವಾಹನಗಳನ್ನು ರಫ್ತು ಮಾಡುವ ಭಾರತದ ಎರಡನೇ ಅತಿ ದೊಡ್ಡ ದ್ವಿಚಕ್ರ ವಾಹನ ರಫ್ತುದಾರ ಸಹ ಹೌದು. ಗಾತ್ರ ಮತ್ತು ವಹಿವಾಟಿನ ದೃಷ್ಟಿಯಿಂದ ನೋಡುವುದಾದರೆ ಟಿವಿಎಸ್ ಸಮೂಹ ಸಂಸ್ಥೆಗಳಲ್ಲಿಯೇ TVS ಮೋಟಾರ್ ಕಂಪನಿ, ಅತಿದೊಡ್ಡ ಕಂಪನಿಯಾಗಿದೆ.
ಮಹಾರಾಷ್ಟ್ರ ಭಾರತದ ಪಶ್ಚಿಮದ ರಾಜ್ಯಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರವು ಜನಸಂಖ್ಯೆಯಲ್ಲಿ ಭಾರತದ ಎರಡನೆಯ ಅತಿ ದೊಡ್ಡ ರಾಜ್ಯವಾಗಿದೆ ಮತ್ತು ವಿಸ್ತೀರ್ಣದಲ್ಲಿ ಮೂರನೆಯ ಅತಿ ದೊಡ್ಡ ರಾಜ್ಯವಾಗಿದೆ. ಮಹಾರಾಷ್ಟ್ರವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ ಗುಜರಾತ್ ಹಾಗೂ ದಾದ್ರಾ ಮತ್ತು ನಗರ ಹವೇಲಿಯಿಂದ, ಈಶಾನ್ಯದಲ್ಲಿ ಮಧ್ಯಪ್ರದೇಶದಿಂದ, ಪೂರ್ವದಲ್ಲಿ ಛತ್ತೀಸಘಡದಿಂದ, ದಕ್ಷಿಣದಲ್ಲಿ ಕರ್ನಾಟಕದಿಂದ, ಆಗ್ನೇಯದಲ್ಲಿ ತೆಲಂಗಾಣದಿಂದ ಹಾಗೂ ನೈಋತ್ಯದಲ್ಲಿ ಗೋವಾದಿಂದ ಸುತ್ತುವರಿಯಲ್ಪಟ್ಟಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ನಿರ್ಮಲಾ ಸೀತಾರಾಮನ್ ಭಾರತೀಯ ರಾಜಕಾರಣಿ, ಅವರು ಪ್ರಸ್ತುತ ಭಾರತದ ಹಣಕಾಸು ಮಂತ್ರಿಯಾಗಿ ಸೇವೆ ಸಲ್ಲಿಸುತಿದ್ದಾರೆ. ಸೀತಾರಾಮನ್ ಅವರು ಹಣಕಾಸು ಮತ್ತು ಮಿನಿಸ್ಟ್ರಿ ಆಫ್ ಫೈನಾನ್ಸ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಿಯ ಅಡಿಯಲ್ಲಿ ಸ್ವತಂತ್ರ ಹೊಂದಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತದ ಸಂಸತ್ತು ಭಾರತದ ಗಣರಾಜ್ಯದ ಒಕ್ಕೂಟ ಸರ್ಕಾರದ ಎರಡು ಶಾಸನಸಭೆಗಳುಳ್ಳ (ಉಭಯ ಸದನಿಕ) ಸರ್ವೋಚ್ಚ ವಿಧಾಯಕ ಘಟಕವಾಗಿದೆ. ಭಾರತದ ರಾಷ್ಟ್ರಪತಿಯವರ ಕಚೇರಿ, "ರಾಜ್ಯಸಭಾ" ಎಂದು ಕರೆಯಲ್ಪಡುವ ರಾಜ್ಯಗಳ ಪರಿಷತ್ತು ಆಗಿರುವ ಒಂದು ಮೇಲ್ಮನೆ, ಮತ್ತು "ಲೋಕಸಭಾ" ಎಂದು ಕರೆಯಲ್ಪಡುವ ಪ್ರಜಾಪ್ರತಿನಿಧಿಗಳ ಸಭೆಯಾಗಿರುವ ಒಂದು ಕೆಳಮನೆಯನ್ನು ಇದು ಒಳಗೊಂಡಿದೆ. ನವದೆಹಲಿಯಲ್ಲಿನ ಸಂಸದ್ ಭವನದಲ್ಲಿರುವ (ಇದನ್ನು ಸಾಮಾನ್ಯವಾಗಿ ಸಂಸದ್ ಮಾರ್ಗ ಎಂದು ಕರೆಯಲಾಗುತ್ತದೆ) ಪ್ರತ್ಯೇಕ ಶಾಸನಸಭೆಗಳಲ್ಲಿ ಎರಡೂ ಸದನಗಳು ಸಭೆ ಸೇರುತ್ತವೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಒಂದು ವ್ಯವಸ್ಥಿತ ಹಂತವನ್ನು ತಲುಪಿದ ಮಾನವನ ಸಮಾಜ ಅಥವಾ ಸಂಸ್ಕೃತಿಯನ್ನು ನಾಗರೀಕತೆ ಎಂದು ಬಣ್ಣಿಸಲಾಗುತ್ತದೆ. ಸಾಮಾನ್ಯವಾಗಿ ಎಲ್ಲಾ ನಾಗರೀಕತೆಗಳೂ ಬೇಸಾಯವನ್ನು ಮಾಡುವಂತಹವಾಗಿ, ಜನರಲ್ಲಿ ಕಸುಬುಗಳ ವರ್ಗೀಕರಣವಿದ್ದು, ನಗರಗಳನ್ನು ಸ್ಥಾಪಿಸುವಷ್ಟು ಜನಸಂಖ್ಯೆಯನ್ನು ಹೊಂದಿರುತ್ತವೆ.ನಗರಾಭಿವೃದ್ಧಿ, ಸಾಮಾಜಿಕ ಶ್ರೇಣೀಕರಣದ, ಸಾಂಕೇತಿಕ ಸಂವಹನ,ಇವುಗಳು ನಾಗರೀಕತೆಯ ಗುಣಲಕ್ಷಣಗಳು.ನಾಗರಿಕತೆಯನ್ನು ಜನರಿರುವ ವಸಾಹತುಗಳ ವ್ಯವಸ್ಥೆಯಾಗಿ ವಿಂಗಡಿಸಬಹುದು.ನಾಗರೀಕತೆಯಿಂದ ಬರಿಯೆ ಸ್ಥಳದ ವ್ಯವಸ್ಥೆ ಬದಲಾಗದು, ಸ್ಥಳದ ವ್ಯವಸ್ಥೆ ಬದಲಾವಣೆಯೊಂದಿಗೆ ಆಯಾ ನೆಲದಲ್ಲಿ ವಾಸಿಸುತ್ತಿರುವ ಜನರ ಮನಸ್ಥಿತಿ ಸಹ ಬದಲಾಗುತ್ತದೆ.ನಾಗರೀಕತೆ'ಯೊಂದಿಗೆ ಜನರ ತಿಳುವಳಿಕೆ ಹೆಚ್ಚಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಬಜೆಟ್ ಎಂದರೆ ಒಂದು ನಿರ್ದಿಷ್ಟ ಕಾಲಾವಧಿಗಾಗಿ, ಸಾಮಾನ್ಯವಾಗಿ ಒಂದು ವರ್ಷಕ್ಕಾಗಿ ಒಂದು ಹಣಕಾಸು ಯೋಜನೆ. ಇದು ಯೋಜಿತ ಮಾರಾಟದ ಪರಿಮಾಣಗಳು ಹಾಗೂ ಆದಾಯಗಳು, ಸಂಪನ್ಮೂಲ ಪ್ರಮಾಣಗಳು, ವೆಚ್ಚಗಳು ಮತ್ತು ಖರ್ಚುಗಳು, ಆಸ್ತಿಗಳು, ಹೊಣೆಗಳು ಮತ್ತು ನಗದು ಹರಿವುಗಳನ್ನೂ ಒಳಗೊಳ್ಳಬಹುದು. ಅಳೆಯಬಹುದಾದಂಥ ಪದಗಳಲ್ಲಿ ಚಟುವಟಿಕೆಗಳು ಅಥವಾ ಘಟನೆಗಳ ಕಾರ್ಯತಂತ್ರ ಯೋಜನೆಗಳನ್ನು ವ್ಯಕ್ತಪಡಿಸಲು ಕಂಪನಿಗಳು, ಸರ್ಕಾರಗಳು, ಕುಟುಂಬಗಳು ಮತ್ತು ಇತರ ಸಂಸ್ಥೆಗಳು ಇದನ್ನು ಬಳಸುತ್ತವೆ.
ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯು (ಅಥವಾ ಈಸ್ಟ್ ಇಂಡಿಯಾ ಕಂಪನಿ) ಪ್ರಾರಂಭದಲ್ಲಿ ಈಸ್ಟ್ ಇಂಡೀಸ್ನೊಂದಿಗೆ ವ್ಯಾಪಾರವನ್ನು ತೊಡಗಿಸಲು ರಚಿತವಾಗಿದ್ದ ಮುಂಚಿನ ಒಂದು ಇಂಗ್ಲಂಡ್ನ ಸಂಯುಕ್ತ ಬಂಡವಾಳ ಕಂಪನಿಯಾಗಿತ್ತು (ಜಾಯಿಂಟ್ ಸ್ಟಾಕ್ ಕಂಪನಿ), ಆದರೆ ಕೊನೆಗೆ ಮುಖ್ಯವಾಗಿ ಭಾರತೀಯ ಉಪಖಂಡ ಮತ್ತು ಚೀನಾಗಳೊಂದಿಗೆ ವ್ಯಾಪಾರ ಮಾಡುವ ಕಂಪನಿಯಾಯಿತು. ಇದೇ ತರಹ ರಚಿತವಾಗಿದ್ದ ಹಲವಾರು ಐರೋಪ್ಯ ಈಸ್ಟ್ ಇಂಡಿಯಾ ಕಂಪನಿಗಳ ಪೈಕಿ ಅತ್ಯಂತ ಹಳೆಯದಾದ ಇದಕ್ಕೆ ೩೧ ಡಿಸಂಬರ ೧೬೦೦ರಂದು ಮೊದಲನೆಯ ಇಲಿಜಬತ್ಳಿಂದ ಗವರ್ನರ್ ಅಂಡ್ ಕಂಪನಿ ಆಫ್ ಮರ್ಚಂಟ್ಸ್ ಆಫ್ ಲಂಡನ್ ಟ್ರೇಡಿಂಗ್ ಇಂಟು ದಿ ಈಸ್ಟ್ ಇಂಡೀಸ್ ಹೆಸರಿನಲ್ಲಿ ಒಂದು ಇಂಗ್ಲಂಡ್ನ ರಾಜವಂಶದ ಸನ್ನದು ಅನುದಾನವಾಗಿ ದೊರೆಯಿತು. ೧೭ನೆಯ ಶತಮಾನದ ಕೊನೆಯಲ್ಲಿ ಇಂಗ್ಲಂಡ್ನ ಒಂದು ಪ್ರತಿಸ್ಪರ್ಧಿ ಕಂಪನಿಯು ಇದರ ಏಕಸ್ವಾಮ್ಯದ ಬಗ್ಗೆ ಆಕ್ಷೇಪಿಸಿದ ನಂತರ, ಎರಡೂ ಕಂಪನಿಗಳನ್ನು ವಿಲೀನಗೊಳಿಸಿ ಯುನೈಟಡ್ ಕಂಪನಿ ಆಫ್ ಮರ್ಚಂಟ್ಸ್ ಆಫ್ ಇಂಗ್ಲಂಡ್ ಟ್ರೇಡಿಂಗ್ ಟು ದಿ ಈಸ್ಟ್ ಇಂಡೀಸ್, ಸಾಮಾನ್ಯವಾಗಿ ಆನರಬಲ್ ಈಸ್ಟ್ ಇಂಡಿಯಾ ಕಂಪನಿ ಎಂದು ಹೇಳಲಾದ ಮತ್ತು ಎಚ್ಇಐಸಿ ಎಂದು ಸಂಕ್ಷೇಪಿಸಲಾದ ಕಂಪನಿಯನ್ನು ರಚಿಸಲಾಯಿತು; ಕಂಪನಿಯನ್ನು ಆಡುಮಾತಿನಲ್ಲಿ ಜಾನ್ ಕಂಪನಿ ಎಂದು ಮತ್ತು ಭಾರತದಲ್ಲಿ ಕಂಪನಿ ಬಹಾದುರ್ ಎಂದು ನಿರ್ದೇಶಿಸಲಾಗುತ್ತಿತ್ತು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣದಲ್ಲಿನ ವ್ಯವಸ್ಥೆಯೂ ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ್ದಾಗಿದೆ,ಭೂಮಿಯ ಮೇಲಿನ ಜೀವಜಾಲಕ್ಕೆ ಇದು ಮಹತ್ವದ್ದಾಗಿದೆ. ವಾಯು ಮಾಲಿನ್ಯದ ದುಷ್ಪರೀಣಾಮದಿಂದ ಓಜೋನ ಪದರವು ಕ್ಷೀಣಿಸುತ್ತಿದೆ., ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (೨೦೦೫)
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2005 ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ರಾಷ್ಟ್ರೀಯ ಮಂಡಳಿ NCERT ಯಲ್ಲಿ 1975, 1988, 2000 ಮತ್ತು 2005 ರಲ್ಲಿ ಪ್ರಕಟವಾದ ನಾಲ್ಕು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟುಗಳು ಒಂದಾಗಿದೆ. ಫ್ರೇಮ್ವರ್ಕ್ ಭಾರತದಲ್ಲಿ ಶಾಲಾ ಶಿಕ್ಷಣ ಕಾರ್ಯಕ್ರಮಗಳಲ್ಲಿ, ಪಠ್ಯಕ್ರಮ ಪಠ್ಯಪುಸ್ತಕಗಳು ಮತ್ತು ಬೋಧನಾ ಅಭ್ಯಾಸಗಳನ್ನು ತಯಾರಿಸುವ ಚೌಕಟ್ಟನ್ನು ಒದಗಿಸುತ್ತದೆ. NCF2005 ದಾಖಲೆ ಹೊರೆ ಮತ್ತು ನ್ಯಾಷನಲ್ ಪಾಲಿಸಿ ಆಫ್ ಎಜುಕೇಶನ್ 1986-1992 ಮತ್ತು ಕೇಂದ್ರೀಕೃತ ಗುಂಪು ಚರ್ಚೆಯಂತಹ ಶಿಕ್ಷಣದ ಬಗ್ಗೆ ಹಿಂದಿನ ಸರ್ಕಾರದ ವರದಿಗಳಿಂದ ತನ್ನ ನೀತಿಯನ್ನು ಆಧರಿಸಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಅಂತರರಾಷ್ಟ್ರೀಯ ವ್ಯಾಪಾರವನ್ನು ಮೇಲ್ವಿಚಾರಣೆ ಮಾಡುವ ಹಾಗೂ ಉದಾರೀಕರಣಗೊಳಿಸುವ ಆಶಯ ಹೊಂದಿರುವ ಒಂದು ಅಂತರರಾಷ್ಟ್ರೀಯ ವ್ಯಾಪಾರ ಸಂಸ್ಥೆ. ೧೯೪೮ರಿಂದ ಜಾರಿಯಲ್ಲಿದ್ದ ಸುಂಕಗಳು ಮತ್ತು ವ್ಯಾಪಾರದ ಮೇಲಿನ ಸಾಮಾನ್ಯ ಒಪ್ಪಂದವನ್ನು ಸ್ಥಾನಾಪನ್ನಗೊಳಿಸಿ, ಮರ್ರಾಕೇಶ್ ಒಪ್ಪಂದದನ್ವಯ ಜನವರಿ ೧,೧೯೯೫ರಿಂದ ಸಂಸ್ಥೆಯು ಅಧಿಕೃತವಾಗಿ ಕಾಯಾ೯ರಂಭಿಸಿತು.
ಮಹಾರಾಷ್ಟ್ರ ಭಾರತದ ಪಶ್ಚಿಮ ಭಾಗದಲ್ಲಿ ಒಂದು ರಾಜ್ಯವಾಗಿದ್ದು, ಭಾರತದ ಎರಡನೆಯ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಮತ್ತು ವಿಸ್ತೀರ್ಣದಲ್ಲಿ ಮೂರನೇ ಅತಿದೊಡ್ಡ ರಾಜ್ಯವಾಗಿದೆ. ಇಂದಿನ ರಾಜ್ಯವು ೧೯೬೦ ರಲ್ಲಿ ರಚನೆಯಾದರೂ, ಸುಮಾರು ೪ ಶತಮಾನಗಳಷ್ಟು ಸುದೀರ್ಘ ಇತಿಹಾಸವನ್ನು ಹೊಂದಿದೆ. ಕ್ರಿಸ್ತಪೂರ್ವ ೪ ನೇ ಶತಮಾನದಿಂದ ೮೭೫ ರವರೆಗೂ ಮಹಾರಾಷ್ಟ್ರಿ ಪ್ರಾಕೃತ ಮತ್ತು ಅದರ ಅಪಾಬ್ರ್ರಾಷ್ಗಳು ಈ ಪ್ರದೇಶದ ಪ್ರಬಲ ಭಾಷೆಗಳಾಗಿದ್ದವು.
ಅಣ್ಣಾಮಲೈಯಾರ್ ದೇವಸ್ಥಾನ ( ಅರುಣಾಚಲೇಶ್ವರ ದೇವಸ್ಥಾನ ಎಂದೂ ಕರೆಯುತ್ತಾರೆ) ಭಾರತದ ತಮಿಳುನಾಡಿನ ತಿರುವಣ್ಣಾಮಲೈ ಪಟ್ಟಣದಲ್ಲಿರುವ ಅರುಣಾಚಲ ಬೆಟ್ಟದ ತಳದಲ್ಲಿರುವ ಶಿವ ದೇವರಿಗೆ ಅರ್ಪಿತವಾದ ಹಿಂದೂ ದೇವಾಲಯವಾಗಿದೆ. ಪಂಚ ಭೂತ ಸ್ಥಲಗಳು ಮತ್ತು ನಿರ್ದಿಷ್ಟವಾಗಿ ಬೆಂಕಿಯ ಅಂಶ ಅಥವಾ ಅಗ್ನಿಯ ಅಂಶಗಳಿಗೆ ಸಂಬಂಧಿಸಿದ ದೇವಾಲಯಗಳಲ್ಲಿ ಒಂದಾದ ಶೈವ ಧರ್ಮದ ಹಿಂದೂ ಪಂಥಕ್ಕೆ ಇದು ಮಹತ್ವದ್ದಾಗಿದೆ. ಶಿವನನ್ನು ಅರುಣಾಚಲೇಶ್ವರ ಅಥವಾ ಅಣ್ಣಾಮಲೈಯರ್ ಎಂದು ಪೂಜಿಸಲಾಗುತ್ತದೆ ಮತ್ತು ಲಿಂಗದಿಂದ ಪ್ರತಿನಿಧಿಸಲಾಗುತ್ತದೆ, ಅವನ ವಿಗ್ರಹವನ್ನು ಅಗ್ನಿ ಲಿಂಗ ಎಂದು ಕರೆಯಲಾಗುತ್ತದೆ.